Dharwad Student Murder: ಧಾರವಾಡದಲ್ಲಿ ಪ್ಯಾರಾಮೆಡಿಕಲ್ ವಿದ್ಯಾರ್ಥಿನಿಯ ಭೀಕರ ಹತ್ಯೆ
ಧಾರವಾಡದ ಗಾಂಧಿ ಚೌಕ್ ನಿವಾಸಿಯಾದ ವಿದ್ಯಾರ್ಥಿಯನ್ನು ಕೊಲೆ ಮಾಡಲಾಗಿದೆ. ಮನೆಯಿಂದ ಲ್ಯಾಬ್‌ಗೆ ಹೋಗಿ ಬರುವುದಾಗಿ ಹೇಳಿ ತೆರಳಿದ್ದ ಯುವತಿ, ರಾತ್ರಿಯಾದರೂ ಮನೆಗೆ ಹಿಂದಿರುಗಿರಲಿಲ್ಲ. ಇದರಿಂದ ಆತಂಕಗೊಂಡ ಕುಟುಂಬಸ್ಥರು ಹುಡುಕಾಟ ನಡೆಸುತ್ತಿದ್ದರು. ಆದರೆ, ಇಂದು ಯುವತಿ ಶವವಾಗಿ ಪತ್ತೆಯಾಗಿದ್ದಾಳೆ.
ಧಾರವಾಡದಲ್ಲಿ ಕೊಲೆಯಾದ ವಿದ್ಯಾರ್ಥಿನಿ ಝಕಿಯಾ ಮುಲ್ಲಾ. -
ಧಾರವಾಡ, ಜ.21: ಧಾರವಾಡದಲ್ಲಿ ಯುವತಿಯೊಬ್ಬಳ ಭೀಕರ ಹತ್ಯೆ (Dharwad Student Murder) ನಡೆದಿದೆ. 19 ವರ್ಷದ ಪ್ಯಾರಾಮೆಡಿಕಲ್ ವಿದ್ಯಾರ್ಥಿನಿಯನ್ನು ದುಷ್ಕರ್ಮಿಗಳು ಹತ್ಯೆ ಮಾಡಿ ನಗರದ ಹೊರವಲಯದಲ್ಲಿ ಎಸೆದು ಪರಾರಿಯಾಗಿರುವ ಘಟನೆ ಜಿಲ್ಲೆಯ ಜನರನ್ನು ಬೆಚ್ಚಿಬೀಳಿಸಿದೆ.
ಧಾರವಾಡದ ಗಾಂಧಿ ಚೌಕ್ ನಿವಾಸಿಯಾಗಿದ್ದ ಝಕಿಯಾ ಮುಲ್ಲಾ (19) ಕೊಲೆಯಾದ ದುರ್ದೈವಿ. ಪ್ಯಾರಾಮೆಡಿಕಲ್ ಶಿಕ್ಷಣ ಮುಗಿಸಿದ್ದ ಝಕಿಯಾ, ಉದ್ಯೋಗಕ್ಕಾಗಿ ಹುಡುಕಾಟ ನಡೆಸುತ್ತಿದ್ದಳು. ಮಂಗಳವಾರ ಸಂಜೆ ಮನೆಯಿಂದ ಲ್ಯಾಬ್‌ಗೆ ಹೋಗಿ ಬರುವುದಾಗಿ ಹೇಳಿ ತೆರಳಿದ್ದ ಯುವತಿ, ರಾತ್ರಿಯಾದರೂ ಮನೆಗೆ ಹಿಂದಿರುಗಿರಲಿಲ್ಲ. ಇದರಿಂದ ಆತಂಕಗೊಂಡ ಕುಟುಂಬಸ್ಥರು ಹುಡುಕಾಟ ನಡೆಸುತ್ತಿದ್ದರು.
ಇಂದು ಮುಂಜಾನೆ ಮನಸೂರು ರಸ್ತೆಯ ಶಾಸಕ ವಿನಯ್ ಕುಲಕರ್ಣಿ ಅವರ ವಿನಯ್ ಡೈರಿ ಸಮೀಪ ಯುವತಿಯ ಶವ ಪತ್ತೆಯಾಗಿದೆ. ಬೇರೆ ಯಾವುದೋ ಸ್ಥಳದಲ್ಲಿ ಯುವತಿಯನ್ನು ಬರ್ಬರವಾಗಿ ಕೊಲೆ ಮಾಡಿ, ನಂತರ ಸಾಕ್ಷ್ಯ ನಾಶಪಡಿಸುವ ಉದ್ದೇಶದಿಂದ ಇಲ್ಲಿಗೆ ತಂದು ಶವವನ್ನು ಬಿಸಾಡಿ ಹೋಗಿರುವ ಶಂಕೆ ವ್ಯಕ್ತವಾಗಿದೆ. ಸ್ಥಳಕ್ಕೆ ಧಾರವಾಡ ಗ್ರಾಮೀಣ ಹಾಗೂ ವಿದ್ಯಾಗಿರಿ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.
ಮಗಳು ಕೊಲೆಯಾದ ಸುದ್ದಿ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ಧಾವಿಸಿದ ಪೋಷಕರು ಮತ್ತು ಸಂಬಂಧಿಕರ ಆಕ್ರಂದನ ಮುಗಿಲು ಮುಟ್ಟಿದೆ. ಹಂತಕರನ್ನು ಕೂಡಲೇ ಬಂಧಿಸಿ ಕಠಿಣ ಶಿಕ್ಷೆ ವಿಧಿಸಬೇಕು ಎಂದು ಒತ್ತಾಯಿಸಿದ್ದಾರೆ. ಪೊಲೀಸರು ಶವವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದು, ಯುವತಿಯ ಮೊಬೈಲ್ ಕರೆಗಳ ಆಧಾರದ ಮೇಲೆ ತನಿಖೆ ಚುರುಕುಗೊಳಿಸಿದ್ದಾರೆ. ಹತ್ಯೆಗೆ ಕಾರಣವೇನು ಎಂಬುವುದು ತನಿಖೆಯಿಂದ ತಿಳಿದುಬರಬೇಕಿದೆ.
ಬೆಂಗಳೂರು ರೌಡಿಶೀಟರ್ ಹತ್ಯೆ ಪ್ರಕರಣ; 8 ಆರೋಪಿಗಳ ಬಂಧನ
ಬೆಂಗಳೂರು: ಹಳೇ ವೈಷಮ್ಯದ ಹಿನ್ನೆಲೆ ರೌಡಿಶೀಟರ್‌ನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿದ್ದ ಪ್ರಕರಣದಲ್ಲಿ ಎಂಟು ಮಂದಿ ಆರೋಪಿಗಳನ್ನು ಬಂಡೇಪಾಳ್ಯ ಠಾಣೆ ಪೊಲೀಸರು ಬಂಧಿಸಿದ್ದಾರೆ. ಜನವರಿ 12ರಂದು ಹೊಸ ರೋಡ್ ನಿವಾಸಿ ಶಬ್ಬೀರ್ (29) ಕೊಲೆಯಾಗಿತ್ತು. ಕೇಸ್‌ಗೆ ಸಂಬಂಧಿಸಿ ಮಂಗಮ್ಮನಪಾಳ್ಯ ನಿವಾಸಿಗಳಾದ ನೂರುಲ್ಲಾ (33), ನದೀಮ್ (34), ಸಲ್ಮಾನ್ ಖಾನ್ (27), ಮೊಹಮ್ಮದ್ ಅಲಿ (29), ಸೈಯದ್ ಇಸ್ಮಾಯಿಲ್ (30), ಮೊಹಮ್ಮದ್ ಸಿದ್ದಿಕ್ (30), ಸೈಯದ್ ಕಲೀಮ್ (32) ಹಾಗೂ ಉಮೇಜ್ ರೆಹಮಾನ್ (26) ಎಂಬುವವರನ್ನು ಪೊಲೀಸರು ಬಂಧಿಸಿದ್ದಾರೆ.
ಮಹಿಳೆಯರ ಒಳ ಉಡುಪು ಕದ್ದು ಧರಿಸಿ ವಿಕೃತಿ ಮೆರೆಯುತ್ತಿದ್ದ ಸೈಕೋ ವ್ಯಕ್ತಿಯ ಬಂಧನ
ಜನವರಿ 12ರಂದು ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಾಗಿದ್ದ ಸಂಬಂಧಿಯೊಬ್ಬರನ್ನು ನೋಡಿಕೊಂಡು ರಾತ್ರಿ ಸ್ನೇಹಿತರ ಜತೆ ಆಟೋದಲ್ಲಿ ಶಬ್ಬೀರ್ ಮನೆಗೆ ಹೋಗುತ್ತಿದ್ದ. ಅದೇ ವೇಳೆ ಆರೋಪಿಗಳ ಗುಂಪು ಆಟೋ ನಿಲ್ಲಿಸಿ ಶಬ್ಬಿರ್ ಕಣ್ಣಿಗೆ ಕಾರದ ಪುಡಿ ಎರಚಿ ಭೀಕರವಾಗಿ ಹಲ್ಲೆ ನಡೆಸಿ, ಹತ್ಯೆಗೈದು ಪರಾರಿಯಾಗಿತ್ತು. ಪ್ರಕರಣ ದಾಖಲಿಸಿಕೊಂಡಿದ್ದ ಪೊಲೀಸರು ತನಿಖೆ ಕೈಗೊಂಡು ಎಂಟು ಆರೋಪಿಗಳನ್ನು ಬಂಧಿಸಿದ್ದಾರೆ.