ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

Yogesh Gowda murder case: ಯೋಗೇಶ್‌ ಗೌಡ ನೆನೆದು ಅಕ್ಕ ಕಣ್ಣೀರು; ಕೋರ್ಟ್‌ ತೀರ್ಪಿನ ಬಗ್ಗೆ ಹೇಳಿದ್ದೇನು?

ಧಾರವಾಡದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿರುವ ಯೋಗೇಶ್‌ ಗೌಡ ಸಹೋದರಿ ಅಕ್ಕಮಹಾದೇವಿ ಅವರು, ನಮಗೆ ಕಾನೂನಿನ ಮೇಲೆ ಭರವಸೆ ಇತ್ತು. ಕೋರ್ಟ್‌ ತೀರ್ಪಿನಿಂದ ನಮಗೆ ಖುಷಿಯಾಗಿದೆ, ಪ್ರಕರಣದಲ್ಲಿ ಸಾಕ್ಷ್ಯ ನಾಶಕ್ಕೆ ಯತ್ನಿಸಿದ ಪೊಲೀಸ್‌ ಅಧಿಕಾರಿ ಚನ್ನಕೇಶವ ಟಿಂಕರಿಕರ್‌ಗೂ ಜೀವಾವಧಿ ಶಿಕ್ಷೆಯಾಗಬೇಕಿತ್ತು ಎಂದು ಹೇಳಿದ್ದಾರೆ.

ಕೋರ್ಟ್‌ ತೀರ್ಪಿನ ಬಳಿಕ ಯೋಗೇಶ್‌ ಗೌಡ ನೆನೆದು ಅಕ್ಕ ಕಣ್ಣೀರು

ಯೋಗೇಶ್‌ ಗೌಡ ಸಹೋದರಿ ಅಕ್ಕಮಹಾದೇವಿ. -

Prabhakara R
Prabhakara R Apr 17, 2026 6:02 PM

ಧಾರವಾಡ: ಸಹೋದರ ಯೋಗೇಶ್‌ ಗೌಡ ಕೊಲೆ ಪ್ರಕರಣದ ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ಆಗಿರುವ ಬಗ್ಗೆ ಸಹೋದರಿ ಅಕ್ಕಮಹಾದೇವಿ ಪ್ರತಿಕ್ರಿಯಿಸಿದ್ದಾರೆ. ಈ ವೇಳೆ ತಮ್ಮನನ್ನು ನೆನೆದು ಕಣ್ಣೀರು ಹಾಕಿರುವ ಅವರು, ನಮಗೆ ಬಹಳ ಅನ್ಯಾಯ ಮಾಡಿದ್ದಾರೆ. ನಮಗೆ ಕಾನೂನಿನ ಮೇಲೆ ಭರವಸೆ ಇತ್ತು. 16 ಅಪರಾಧಿಗಳಿಗೆ ಶಿಕ್ಷೆಯಾಗುವಂತೆ ಮಾಡಿದ ಸಿಬಿಐ ಅಧಿಕಾರಿಗಳು, ವಕೀಲರಿಗೆ ಧನ್ಯವಾದ ತಿಳಿಸುತ್ತೇನೆ ಎಂದು ತಿಳಿಸಿದ್ದಾರೆ.

ಧಾರವಾಡದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿರುವ ಅವರು, ಕೋರ್ಟ್‌ ತೀರ್ಪಿನಿಂದ ನಮಗೆ ಖುಷಿಯಾಗಿದೆ, ಪ್ರಕರಣದಲ್ಲಿ ಸಾಕ್ಷ್ಯ ನಾಶಕ್ಕೆ ಯತ್ನಿಸಿದ ಪೊಲೀಸ್‌ ಅಧಿಕಾರಿ ಚನ್ನಕೇಶವ ಟಿಂಕರಿಕರ್‌ಗೆ 7 ವರ್ಷ ಜೈಲು ಶಿಕ್ಷೆ ವಿಧಿಸಲಾಗಿದೆ. ಆತನಿಗೂ ಜೀವಾವಧಿ ಶಿಕ್ಷೆಯಾಗಬೇಕಿತ್ತು ಎಂದು ಹೇಳಿದ್ದಾರೆ.

ಯೋಗೇಶ್‌ ಗೌಡ ಮಕ್ಕಳಿಗೆ 16 ಲಕ್ಷ ರೂಪಾಯಿ ಪರಿಹಾರ

ಯೋಗೇಶ್‌ ಗೌಡ ಕೊಲೆ ಪ್ರಕರಣದಲ್ಲಿ ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ಸೇರಿದಂತೆ ಎಲ್ಲಾ ಅಪರಾಧಿಗಳಿಗೆ ನ್ಯಾಯಾಲಯವು ಜೀವಾವಧಿ ಶಿಕ್ಷೆ ವಿಧಿಸಿ ಆದೇಶಿಸಿದೆ. ಕೇಸ್‌ನ 19ನೇ ಅಪರಾಧಿಯಾಗಿರುವ ಇನ್ಸ್‌ಪೆಕ್ಟರ್‌ ಚೆನ್ನಕೇಶವ ಟಿಂಗರಿಕ‌ರ್ ಎಂಬುವವರಿಗೆ 7 ವರ್ಷಗಳ ಜೈಲು ಶಿಕ್ಷೆಯನ್ನು ನೀಡಲಾಗಿದೆ.

ಇನ್ನು ಯೋಗೇಶ್ ಗೌಡ ಅವರ ಮಕ್ಕಳಿಗೆ ಪರಿಹಾರವಾಗಿ 16 ಲಕ್ಷ ರೂಪಾಯಿಗಳನ್ನು ನೀಡುವಂತೆ ನ್ಯಾಯಾಲಯ ಕಟ್ಟುನಿಟ್ಟಿನ ಸೂಚನೆ ನೀಡಿದೆ. ತಂದೆಯನ್ನು ಕಳೆದುಕೊಂಡ ಮಕ್ಕಳ ಭವಿಷ್ಯ ಮತ್ತು ವಿದ್ಯಾಭ್ಯಾಸದ ದೃಷ್ಟಿಯಿಂದ ಈ ಪರಿಹಾರದ ಮೊತ್ತವನ್ನು ಅಪರಾಧಿಗಳ ಕಡೆಯಿಂದ ಪಾವತಿಸಲು ಆದೇಶಿಸಲಾಗಿದೆ.

ಯೋಗೀಶ್‌ ಗೌಡ ಕೊಲೆ ಪ್ರಕರಣದಲ್ಲಿ ಕಾಂಗ್ರೆಸ್ ಶಾಸಕ ವಿನಯ್‌ ಕುಲಕರ್ಣಿ ಸೇರಿ 16 ಮಂದಿಗೆ ಜೀವಾವಧಿ ಶಿಕ್ಷೆ

2016ರಲ್ಲಿ ಧಾರವಾಡದ ಜಿಮ್‌ನಲ್ಲಿ ಯೋಗೇಶ್ ಗೌಡ ಅವರನ್ನು ಭೀಕರವಾಗಿ ಹತ್ಯೆ ಮಾಡಲಾಗಿತ್ತು. ಪ್ರಕರಣವು ಆರಂಭದಲ್ಲಿ ಸ್ಥಳೀಯ ಪೊಲೀಸರಿಂದ ತನಿಖೆ ನಡೆಸಲ್ಪಟ್ಟಿದ್ದರೂ, ನಂತರ ಕುಟುಂಬಸ್ಥರ ಒತ್ತಾಯದ ಮೇರೆಗೆ ಸಿಬಿಐಗೆ ವರ್ಗಾವಣೆಗೊಂಡಿತ್ತು. ಸಿಬಿಐ ಅಧಿಕಾರಿಗಳು ಸಲ್ಲಿಸಿದ ಚಾರ್ಜ್‌ಶೀಟ್ ಮತ್ತು ಪ್ರಬಲ ಸಾಕ್ಷ್ಯಧಾರಗಳನ್ನು ಕೂಲಂಕಷವಾಗಿ ಪರಿಶೀಲಿಸಿದ ಜನಪ್ರತಿನಿಧಿಗಳ ವಿಶೇಷ ಕೋರ್ಟ್, ಈಗ ಈ ಕಠಿಣ ಶಿಕ್ಷೆಯನ್ನು ಘೋಷಿಸಿದೆ. ಈ ತೀರ್ಪು ವಿನಯ್ ಕುಲಕರ್ಣಿ ಅವರ ರಾಜಕೀಯ ಭವಿಷ್ಯಕ್ಕೆ ಭಾರಿ ಹಿನ್ನೆಡೆಯುಂಟು ಮಾಡಿದೆ.