ಫೋಟೋ ಗ್ಯಾಲರಿ ಆಪರೇಷನ್​ ಸಿಂಧೂರ ಐಪಿಎಲ್​ ಅಕ್ಷಯ ತೃತೀಯ ಫ್ಯಾಷನ್​ ವಿದೇಶ ಧಾರ್ಮಿಕ ಕ್ರೈಂ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Dinesh Gundu Rao: ರಾಜ್ಯ ಸರ್ಕಾರದಿಂದಲೇ ಇನ್ಮುಂದೆ 108 ಆಂಬ್ಯುಲೆನ್ಸ್ ನಿರ್ವಹಣೆ: ದಿನೇಶ್ ಗುಂಡೂರಾವ್

Dinesh Gundu Rao: 108 ಆಂಬ್ಯುಲೆನ್ಸ್‌ಗಳನ್ನು ಇಲ್ಲಿಯವರೆಗೆ ಖಾಸಗಿ ಏಜನ್ಸಿಗಳು ನಿರ್ವಹಿಸುತ್ತಿದ್ದವು. ಈ ವ್ಯವಸ್ಥೆಯಲ್ಲಿ ಸಾಕಷ್ಟು ಸಮಸ್ಯೆಗಳಿದ್ದವು. ಹೀಗಾಗಿ ಇನ್ಮುಂದೆ ರಾಜ್ಯ ಸರ್ಕಾರವೇ 108 ಆಂಬ್ಯುಲೆನ್ಸ್‌ಗಳ ನಿರ್ವಹಣೆಗೆ ಸಕಲ ಸಿದ್ಧತೆಗಳನ್ನು ಮಾಡಿಕೊಂಡಿದ್ದು, ಈಗಾಗಲೇ ಚಾಮರಾಜನಗರ ಜಿಲ್ಲೆಯಲ್ಲಿ ಪ್ರಾಯೋಗಿಕ ಕಾರ್ಯಾಚರಣೆ ಯಶಸ್ವಿಯಾಗಿ ನಡೆಸಲಾಗಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.

ಸರ್ಕಾರದಿಂದಲೇ ಇನ್ಮುಂದೆ 108 ಆಂಬ್ಯುಲೆನ್ಸ್ ನಿರ್ವಹಣೆ

Profile Siddalinga Swamy May 14, 2025 6:52 PM

ಬೆಂಗಳೂರು: 108 ಆಂಬ್ಯುಲೆನ್ಸ್‌ಗಳ (108 Ambulance) ನಿರ್ವಹಣೆಯನ್ನು ಖಾಸಗಿ ಏಜೆನ್ಸಿಗಳ ಹಿಡಿತದಿಂದ ತಪ್ಪಿಸಿ ರಾಜ್ಯ ಸರ್ಕಾರ ತನ್ನ ಹಿಡಿತಕ್ಕೆ ತೆಗೆದುಕೊಳ್ಳಲಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ (Dinesh Gundu Rao)‌ ಹೇಳಿದರು. ಬೆಂಗಳೂರಿನಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 108 ಆಂಬ್ಯುಲೆನ್ಸ್‌ಗಳನ್ನು ಇಲ್ಲಿಯವರೆಗೆ ಖಾಸಗಿ ಏಜೆನ್ಸಿಗಳು ನಿರ್ವಹಿಸುತ್ತಿದ್ದವು. ಈ ವ್ಯವಸ್ಥೆಯಲ್ಲಿ ಸಾಕಷ್ಟು ಸಮಸ್ಯೆಗಳಿದ್ದವು. ಹೀಗಾಗಿ ಇನ್ಮುಂದೆ ರಾಜ್ಯ ಸರ್ಕಾರವೇ 108 ಆಂಬ್ಯುಲೆನ್ಸ್‌ಗಳ ನಿರ್ವಹಣೆಗೆ ಸಕಲ ಸಿದ್ಧತೆಗಳನ್ನು ಮಾಡಿಕೊಂಡಿದ್ದು, ಈಗಾಗಲೇ ಚಾಮರಾಜನಗರ ಜಿಲ್ಲೆಯಲ್ಲಿ ಪ್ರಾಯೋಗಿಕ ಕಾರ್ಯಾಚರಣೆ ಯಶಸ್ವಿಯಾಗಿ ನಡೆಸಲಾಗಿದೆ ಎಂದು ತಿಳಿಸಿದರು.

108 ಆಂಬ್ಯುಲೆನ್ಸ್‌ಗಳ ಸೇವೆ ಸಾರ್ವಜನಿಕರ ಆರೋಗ್ಯ ರಕ್ಷಣೆಯಲ್ಲಿ ಬಹು ಮುಖ್ಯವಾದದ್ದು. ಖಾಸಗಿ ಏಜನ್ಸಿಯಿಂದ ಇದರ ನಿರ್ವಹಣೆ ಸಮರ್ಪಕವಾಗಿ ನಡೆಯುತ್ತಿರಲಿಲ್ಲ. ಸರ್ಕಾರದಿಂದ ಏಜೆನ್ಸಿಗೆ ಹಣ ಪಾವತಿಯಾದರೂ, ಆಂಬ್ಯುಲೆನ್ಸ್ ಸಿಬ್ಬಂದಿಗಳಿಗೆ ಸರಿಯಾದ ಸಮಯಕ್ಕೆ ವೇತನ ಪಾವತಿಯಾಗುತ್ತಿರಲಿಲ್ಲ. ಸರ್ಕಾರ ಹಲವು ಬಾರಿ ಮಧ್ಯಪ್ರವೇಶಿಸಿ ಆಂಬ್ಯುಲೆನ್ಸ್ ಡ್ರೈವರ್‌ಗಳ ಸಮಸ್ಯೆಯನ್ನ ಬಗೆಹರಿಸಬೇಕಾಗಿತ್ತು.‌ ಸರ್ಕಾರವೇ ನಿರ್ವಹಣೆ ಮಾಡುವುದರಿಂದ ಇನ್ಮುಂದೆ ಈ ಎಲ್ಲ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಬಹುದು ಎಂದು ಸಚಿವ ದಿನೇಶ್ ಗುಂಡೂರಾವ್ ಹೇಳಿದರು.

108 ಆಂಬ್ಯುಲೆನ್ಸ್‌ಗಳ ಮಾಲೀಕತ್ವ ಸರ್ಕಾರದ ಬಳಿ ಇದೆ. ಆಂಬ್ಯುಲೆನ್ಸ್‌ಗಳಿಗೆ ಡೀಸೆಲ್, ಪೆಟ್ರೋಲ್‌ನಿಂದ ಹಿಡಿದು ವಾಹನ ಚಾಲಕರ ವೇತನವನ್ನು ಕೂಡ ಸರ್ಕಾರವೇ ನೀಡುತ್ತಿತ್ತು. ಕೇವಲ ಒಂದು ಕಮಾಂಡ್ ಸೆಂಟರ್ ಮೂಲಕ ಖಾಸಗಿ ಏಜೆನ್ಸಿಯವರು ನಿರ್ವಹಣೆ ಮಾಡುತ್ತಿದ್ದರು. ಏಜೆನ್ಸಿಯ ಬದಲು ಆರೋಗ್ಯ ಇಲಾಖೆಯೇ ನಡೆಸಿದರೆ ಸರ್ಕಾರದ ಬೊಕ್ಕಸಕ್ಕೂ ನೂರಾರು ಕೋಟಿ ಹಣ ಉಳಿತಾಯವಾಗಲಿದೆ. ಅಲ್ಲದೇ ವ್ಯವಸ್ಥೆಯಲ್ಲೂ ಸುಧಾರಣೆ ತರಬಹುದು ಎಂಬ ಕಾರಣಕ್ಕೆ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಈಗಾಗಲೇ ಚಾಮರಾಜನಗರ ಜಿಲ್ಲೆಯಲ್ಲಿ ಪ್ರಾಯೋಗಿಕವಾಗಿ 108 ಆಂಬ್ಯುಲೆನ್ಸ್ ನಿರ್ವಹಣೆಯನ್ನು ಆರೋಗ್ಯ ಇಲಾಖೆ ಯಶಸ್ವಿಯಾಗಿ ನಡೆಸಿದೆ. ಮುಂದಿನ ತಿಂಗಳಲ್ಲಿ ರಾಜ್ಯದ ಎಲ್ಲ ಸ್ಟೇಟ್ ಆಂಬ್ಯುಲೆನ್ಸ್‌ಗಳನ್ನ ಇಲಾಖೆ ತನ್ನ ನಿರ್ವಹಣೆಯ ವ್ಯಾಪ್ತಿಗೆ ತೆಗೆದುಕೊಳ್ಳಲಿದೆ. ಇದಾದ ಬಳಿಕ ಮೂರು ತಿಂಗಳ ಒಳಗಾಗಿ 108 ಆಂಬ್ಯುಲೆನ್ಸ್‌ಗಳನ್ನು ಆರೋಗ್ಯ ಇಲಾಖೆ ತನ್ನ ಕಮಾಂಡ್ ಕಂಟ್ರೋಲ್ ಸೆಂಟರ್ ವ್ಯಾಪ್ತಿಗೆ ತೆಗೆದುಕೊಂಡು ನಿರ್ವಹಣೆ ಕಾರ್ಯ ಕೈಗೆತ್ತಿಕೊಳ್ಳಲಿದೆ ಎಂದರು.

ಈ ಸುದ್ದಿಯನ್ನೂ ಓದಿ | DISHA Meeting: ಕೇಂದ್ರದ ಯೋಜನೆಗಳಿಗೆ ಬಾರದ ಹಣ: ದಿಶಾ ಸಭೆಯಲ್ಲಿ ಸಿಎಂ ಅಸಮಾಧಾನ

ಬೆಂಗಳೂರಿನಲ್ಲಿ ಒಂದು ಕಮಾಂಡ್ ಸೆಂಟರ್ ಹಾಗೂ ಪ್ರತಿ ಜಿಲ್ಲೆಗಳಲ್ಲೂ ಪ್ರತ್ಯೇಕ ಕಮಾಂಡ್ ಸೆಂಟರ್‌ಗಳನ್ನ ರಚಿಸಲಾಗುವುದು ಎಂದು ಸಚಿವ ದಿನೇಶ್ ಗುಂಡೂರಾವ್ ತಿಳಿಸಿದರು.