ವಿದೇಶ ಧಾರ್ಮಿಕ ವಿಶ್ವವಾಣಿ ಕ್ಲಬ್‌ ಹೌಸ್‌ ರಾಜಕೀಯ ಸಂಪಾದಕೀಯ ಕ್ರೈಂ ಫ್ಯಾಷನ್‌ ಲೋಕ ಉದ್ಯೋಗ

DK Shivakumar: ಡಿ.ಕೆ.ಶಿವಕುಮಾರ್‌ ವಿರುದ್ಧ 2000 ಕೋಟಿ ಭ್ರಷ್ಟಾಚಾರ ಆರೋಪ; ಸಿಬಿಐಗೆ ಮುನಿರತ್ನ ದೂರು

DK Shivakumar: ಬೆಂಗಳೂರು ನಗರಕ್ಕೆ ಈಗಾಗಲೇ ಸುಮಾರು 2000 ಕೋಟಿಗಳ ಅನುದಾನವನ್ನು ಹಂಚಿಕೆ ಮಾಡಲು ಉದ್ದೇಶಿಸಲಾಗಿದೆ. ಇದರಲ್ಲಿ ಭಾರಿ ಭ್ರಷ್ಟಾಚಾರ ನಡೆದಿದೆ. ನಗರಕ್ಕೆ ನೀಡುವ ಅನುದಾನಕ್ಕೆ ಸಂಬಂಧಪಟ್ಟಂತೆ ಹೊರ ರಾಜ್ಯದ ಗುತ್ತಿಗೆದಾರರಿಗೆ ಟೆಂಡರ್ ನೀಡಲು ತಯಾರಿ ನಡೆದಿದೆ ಎಂದು ಶಾಸಕ ಮುನಿರತ್ನ ಆರೋಪಿಸಿದ್ದಾರೆ.

ಡಿಕೆಶಿ ವಿರುದ್ಧ 2000 ಕೋಟಿ ಭ್ರಷ್ಟಾಚಾರ ಆರೋಪ; ಸಿಬಿಐಗೆ ಮುನಿರತ್ನ ದೂರು

Profile Prabhakara R Feb 21, 2025 8:09 PM

ಬೆಂಗಳೂರು: ಡಿಸಿಎಂ ಡಿಕೆ ಶಿವಕುಮಾರ್ ಅವರು ವಿರುದ್ಧ 2000 ಕೋಟಿ ಭ್ರಷ್ಟಾಚಾರ ಆರೋಪ ಕೇಳಿಬಂದಿದೆ. ಆರ್‌ಆರ್‌ ನಗರ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನ ಅವರು ಡಿ.ಕೆ.ಶಿವಕುಮಾರ್ ಅವರ ವಿರುದ್ಧ ಗಂಭೀರ ಆರೋಪ ಮಾಡಿದ್ದು, ಡಿಸಿಎಂ ಡಿ.ಕೆ. ಶಿವಕುಮಾರ್ ವಿರುದ್ಧ ತನಿಖೆ ನಡೆಸುವಂತೆ ತನಿಖಾ ಸಂಸ್ಥೆಗಳಿಗೆ ದೂರು ನೀಡಿದ್ದಾರೆ. ಭ್ರಷ್ಟಾಚಾರ ಸಂಬಂಧ ಮುನಿರತ್ನ ಅವರು ಸಿಬಿಐ, ಲೋಕಾಯುಕ್ತ ಹಾಗೂ ಇಡಿಗೆ ದೂರು ಸಲ್ಲಿಸಿದ್ದಾರೆ. ಬೆಂಗಳೂರು ನಗರಾಭಿವೃದ್ಧಿ ಇಲಾಖೆಯಲ್ಲಿ 2000 ಕೋಟಿ ಭ್ರಷ್ಟಾಚಾರವಾಗಿದೆ. ಈ ಭ್ರಷ್ಟಾಚಾರದ ಕರ್ಮಕಾಂಡಕ್ಕೆ ರೂವಾರಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹಾಗೂ ಪಾಲಿಕೆಯ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ರೂವಾರಿಗಳು ಎಂದು ಬಿಜೆಪಿ ಶಾಸಕ ಮುನಿರತ್ನ ಆರೋಪಿಸಿದ್ದಾರೆ.

ಬೆಂಗಳೂರು ನಗರಕ್ಕೆ ಈಗಾಗಲೇ ಸುಮಾರು 2000 ಕೋಟಿಗಳ ಅನುದಾನವನ್ನು ಹಂಚಿಕೆ ಮಾಡಲು ಉದ್ದೇಶಿಸಲಾಗಿದೆ. ಅದರಲ್ಲಿ ವಿಶ್ವಬ್ಯಾಂಕಿನಿಂದ ಸಾಲದ ರೂಪದಲ್ಲಿ ಪಡೆದಂತಹ ಸುಮಾರು 1700 ಕೋಟಿ ರೂಪಾಯಿ, ಹಾಗೂ ಸಾರ್ವಜನಿಕರ ತೆರಿಗೆ ಹಣ 300 ಕೋಟಿ ರೂಪಾಯಿ ಅನುದಾನವಾಗಿದೆ. ಮಹದೇವಪುರ ಕ್ಷೇತ್ರಕ್ಕೆ 540 ಕೋಟಿ ರೂ., ಯಶವಂತಪುರ ಕ್ಷೇತ್ರ 232 ಕೋಟಿ ರೂ., ರಾಜರಾಜೇಶ್ವರಿನಗರ ಕ್ಷೇತ್ರ 226 ಕೋಟಿ ರೂ., ಈಸ್ಟ್ ವೆಸ್ಟ್ ಮತ್ತು ಸೌತ್ ವಿಭಾಗಗಳಿಗೆ 215 ಕೋಟಿ, ದಾಸರಹಳ್ಳಿ ಕ್ಷೇತ್ರ 208 ಕೋಟಿ ರೂ., ಬೆಂಗಳೂರು ದಕ್ಷಿಣ ಕ್ಷೇತ್ರ 205 ಕೋಟಿ ರೂ., ಬ್ಯಾಟರಾಯನಪುರ ಕ್ಷೇತ್ರ 112 ಕೋಟಿ ರೂ., ಯಲಹಂಕ ಕ್ಷೇತ್ರಕ್ಕೆ 81 ಕೋಟಿ ರೂಪಾಯಿ ಅನುದಾನ ನೀಡಲು ಚರ್ಚೆ ನಡೆದಿದೆ. ಆದರೆ, ಇದರಲ್ಲಿ ಭಾರಿ ಭ್ರಷ್ಟಾಚಾರ ನಡೆದಿದೆ ಎಂದು ಮುನಿರತ್ನ ಆರೋಪಿಸಿದ್ದಾರೆ.

ಯಶವಂತಪುರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಗೆ ಬಿ.ಬಿ.ಎಂ.ಪಿ ವ್ಯಾಪ್ತಿಯ ಕೇವಲ 5 ವಾರ್ಡ್‌ ಗಳಿದ್ದರೂ ಸುಮಾರು 232 ಕೋಟಿಗಳನ್ನು ಹಂಚಿಕೆ ಮಾಡಲಾಗಿದೆ. ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷದ ಸ್ಟಾರ್ ಚಂದ್ರು ಗುತ್ತಿಗೆದಾರರಾಗಿದ್ದು, ಅವರ ಮಾಲೀಕತ್ವದ ಸ್ಟಾರ್ ಬಿಲ್ಡರ್ಸ್‌ಗೆ ಉದ್ದೇಶಿತ ಯಶವಂತಪುರ ವಿಧಾನಸಭಾ ಕ್ಷೇತ್ರಕ್ಕೆ 232 ಕೋಟಿಗಳ ಅನುದಾನ ಹಂಚಿಕೆ ಮಾಡಲು ಚರ್ಚೆ ನಡೆದಿರುತ್ತದೆ ಎಂದು ಆರೋಪಿಸಿದ್ದಾರೆ.

ಹೊರ ರಾಜ್ಯದವರಿಗೆ ಟೆಂಡರ್?

ನಗರಕ್ಕೆ ನೀಡುವ ಅನುದಾನಕ್ಕೆ ಸಂಬಂಧಪಟ್ಟಂತೆ ಹೊರ ರಾಜ್ಯದ ಗುತ್ತಿಗೆದಾರರಿಗೆ ಟೆಂಡರ್ ನೀಡಲು ತಯಾರಿ ನಡೆದಿದೆ. ಸುಮಾರು ಶೇ 15 ರಷ್ಟು ಕಮಿಷನ್ ಹಣದ ಮುಂಗಡವನ್ನು ಗುತ್ತಿಗೆದಾರರಿಗೆ ನೀಡಲಾಗಿದೆ. ಈಗಾಗಲೇ ಕರ್ನಾಟಕ ಯೂತ್ ಕಾಂಗ್ರೆಸ್ ಅಧ್ಯಕ್ಷರಾದ ಮಂಜುನಾಥ್ ಗೌಡ ಅವರ ಮೂಲಕ ಚರ್ಚಿಸಿ ಮಂಗಡ ಹಣವನ್ನು ಸಂದಾಯ ಮಾಡಲಾಗಿದೆ. ಆಂಧ್ರ ಪ್ರದೇಶ ಹಾಗೂ ತೆಲಂಗಾಣ ಮುಖ್ಯಮಂತ್ರಿಗಳ ಸಂಬಂಧಿಕರಿಗೆ ಟೆಂಡರ್ ನೀಡಲು ತಯಾರಿ ನಡೆದಿದೆ ಎಂದು ಆರೋಪಿಸಿದ್ದಾರೆ. ಇನ್ನು ಚಂದ್ರಬಾಬು ನಾಯ್ಡು ಅವರ ಸರ್ಕಾರದಲ್ಲಿ ಶಾಸಕರಾಗಿರುವ ಮತ್ತು ಸಂಬಂಧಿಯೊಬ್ಬರ ಜೆ.ಎಂ.ಸಿ ಕನ್‌ಸ್ಟ್ರಕ್ಷನ್ಸ್ ಹೆಸರಿಗೆ ಹಾಗೂ ಅವರ ಜೊತೆಯಲ್ಲಿರುವ ಆಂಧ್ರ ಪ್ರದೇಶದ ಗುತ್ತಿಗೆದಾರರಿಗೆ 1768 ಕೋಟಿ ರೂಪಾಯಿಗಳ ಪ್ಯಾಕೆಜ್‌ನ ಕಾರ್ಯಾದೇಶವನ್ನು ನೀಡಲು ಉದ್ದೇಶಿಸಲಾಗಿದೆ. ಅಲ್ಲದೇ ಗುತ್ತಿಗೆದಾರ ಆರ್.ಎನ್.ಶೆಟ್ಟಿ ಜೊತೆಯಲ್ಲಿ ಸಹ ಈಗಾಗಲೇ ಮಾತುಕತೆ ನಡೆಸಿದ್ದಾರೆ. ಇದಕ್ಕೆ ಸಂಬಂಧಪಟ್ಟ ಸುಮಾರು ಶೇ 15 ರಷ್ಟು ಕಮಿಷನ್ ಹಣದ ಮುಂಗಡವನ್ನು ತಲುಪಿಸಲಾಗಿದೆ ಎಂದು ಆರೋಪಿಸಿದ್ದಾರೆ.

ಈ ಸುದ್ದಿಯನ್ನೂ ಓದಿ | Ballari News: ಬಿ. ‌ನಾಗೇಂದ್ರಗೆ ಸಚಿವ ಸ್ಥಾನಕ್ಕಾಗಿ ರಥೋತ್ಸವದಲ್ಲಿ ಹರಕೆ ಹೊತ್ತ ಅಭಿಮಾನಿಗಳು

ಈ ಭ್ರಷ್ಟಾಚಾರದ ಕರ್ಮಕಾಂಡಕ್ಕೆ ರೂವಾರಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹಾಗೂ ಪಾಲಿಕೆಯ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್. ತುಷಾರ್ ಗಿರಿನಾಥ್ ರಾಜ್ಯ ಗುತ್ತಿಗೆದಾರರಿಗೆ ನೇರವಾಗಿ ಟೆಂಡರ್ ಪ್ರಕ್ರಿಯೆಯಲ್ಲಿ ಭಾಗವಹಿಸದಂತೆ ಬಾಹ್ಯ ಒತ್ತಡ ಹಾಕಿ ಮೌಖಿಕವಾಗಿ ಸೂಚಿಸಿದ್ದಾರೆ ಎಂದು ಆರೋಪಿಸಿದ್ದಾರೆ.