ವಕ್ಫ್​ ತಿದ್ದುಪಡಿ ಮಸೂದೆ ಐಪಿಎಲ್​ ಸುನಿತಾ ವಿಲಿಯಮ್ಸ್​ ಫ್ಯಾಷನ್​ ವಿದೇಶ ಧಾರ್ಮಿಕ ಕ್ರೈಂ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

DK Shivakumar: ಕುಮಾರಸ್ವಾಮಿ ತಮ್ಮ ಅನುಕೂಲಕ್ಕೆ ತಕ್ಕಂತೆ ಮಾತನಾಡುತ್ತಾರೆ: ಡಿ.ಕೆ.ಶಿವಕುಮಾರ್

DK Shivakumar: ಇದು ಜಾತಿಗಣತಿಯೋ ಅಥವಾ ದ್ವೇಷ ಗಣತಿಯೋ ಎಂದು ಕೇಂದ್ರ ಸಚಿವ ಕುಮಾರಸ್ವಾಮಿ ಅವರು ಮಾಡಿರುವ ಟ್ವೀಟ್ ಕುರಿತು ಪ್ರತಿಕ್ರಿಯಿಸಿರುವ ಡಿಸಿಎಂ ಡಿ.ಕೆ. ಶಿವಕುಮಾರ್‌, ʼಅವರು ಬಹಳ ದೊಡ್ಡವರು. ದೊಡ್ಡ ಮಾತುಗಳನ್ನು ಆಡುತ್ತಾರೆ. ಅವರು ತಮ್ಮ ಅನುಕೂಲಕ್ಕೆ ತಕ್ಕಂತೆ ಮಾತನಾಡುತ್ತಾರೆ. ನಮ್ಮ ಪಕ್ಷ ತನ್ನದೇ ಆದ ತತ್ವ ಸಿದ್ಧಾಂತಗಳನ್ನು ಹೊಂದಿದ್ದು, ಪಕ್ಷದಲ್ಲಿ ಅನೇಕ ತೀರ್ಮಾನ ಮಾಡಲಾಗಿದ್ದು, ಕಾನೂನಿನಲ್ಲಿ ಯಾರು ಯಾವ ಕೆಲಸ ಮಾಡಬೇಕು ಎಂದು ಇದೆ. ಅದನ್ನು ಗಮನದಲ್ಲಿಟ್ಟುಕೊಂಡು ಮುಂದಿನ ದಿನಗಳಲ್ಲಿ ನಮ್ಮ ಸರ್ಕಾರ ಅನೇಕ ತೀರ್ಮಾನ ಮಾಡಲಿದೆ ಎಂದು ತಿರುಗೇಟು ನೀಡಿದ್ದಾರೆ.

ಕುಮಾರಸ್ವಾಮಿ ತಮ್ಮ ಅನುಕೂಲಕ್ಕೆ ತಕ್ಕಂತೆ ಮಾತನಾಡುತ್ತಾರೆ: ಡಿಕೆಶಿ

Profile Siddalinga Swamy Apr 15, 2025 8:57 PM

ಬೆಂಗಳೂರು: ಸರ್ವರಿಗೂ ಸಮಬಾಳು, ಸಮಪಾಲು ಎಂಬ ಬಸವಣ್ಣನವರ ಆಚಾರ ವಿಚಾರ ನಮ್ಮ ಪಕ್ಷದಲ್ಲಿ ಬೆರೆತಿದೆ. ನಾವು ಸಂವಿಧಾನದಲ್ಲಿ ನಂಬಿಕೆ ಇಟ್ಟುಕೊಂಡಿದ್ದೇವೆ. ಯಾರಿಗೆ ನ್ಯಾಯ ಒದಗಿಸಿಕೊಡಬೇಕೋ ಅವರಿಗೆ ನ್ಯಾಯ ಒದಗಿಸಿಕೊಡಲಾಗುವುದು ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (DK Shivakumar)‌ ತಿಳಿಸಿದ್ದಾರೆ. ಮಂಗಳವಾರ ಇಲ್ಲಿನ ಮಹಾಲಕ್ಷ್ಮಿ ಲೇಔಟ್‌ನಲ್ಲಿ ಮಾಧ್ಯಮಗಳ ಜತೆ ಅವರು ಮಾತನಾಡಿದರು.

ಇದು ಜಾತಿಗಣತಿಯೋ ಅಥವಾ ದ್ವೇಷ ಗಣತಿಯೋ ಎಂದು ಕೇಂದ್ರ ಸಚಿವ ಕುಮಾರಸ್ವಾಮಿ ಅವರು ಮಾಡಿರುವ ಟ್ವೀಟ್ ಬಗ್ಗೆ ಕೇಳಿದಾಗ, ʼಅವರು ಬಹಳ ದೊಡ್ಡವರು. ದೊಡ್ಡ ಮಾತುಗಳನ್ನು ಆಡುತ್ತಾರೆ. ಅವರು ತಮ್ಮ ಅನುಕೂಲಕ್ಕೆ ತಕ್ಕಂತೆ ಮಾತನಾಡುತ್ತಾರೆ. ನಮ್ಮ ಪಕ್ಷ ತನ್ನದೇ ಆದ ತತ್ವ ಸಿದ್ಧಾಂತಗಳನ್ನು ಹೊಂದಿದ್ದು, ಪಕ್ಷದಲ್ಲಿ ಅನೇಕ ತೀರ್ಮಾನ ಮಾಡಲಾಗಿದ್ದು, ಕಾನೂನಿನಲ್ಲಿ ಯಾರು ಯಾವ ಕೆಲಸ ಮಾಡಬೇಕು ಎಂದು ಇದೆ. ಅದನ್ನು ಗಮನದಲ್ಲಿಟ್ಟುಕೊಂಡು ಮುಂದಿನ ದಿನಗಳಲ್ಲಿ ನಮ್ಮ ಸರ್ಕಾರ ಅನೇಕ ತೀರ್ಮಾನ ಮಾಡಲಿದೆ ಎಂದು ತಿರುಗೇಟು ನೀಡಿದರು.

ಈ ಸುದ್ದಿಯನ್ನೂ ಓದಿ | Karnataka Rain: ರೈತರಿಗೆ ಗುಡ್‌ ನ್ಯೂಸ್‌; ಈ ಬಾರಿ ಮುಂಗಾರಿನಲ್ಲಿ ವಾಡಿಕೆಗಿಂತ ಅಧಿಕ ಮಳೆ!

ನಾನು ಪಂಡಿತನೂ ಅಲ್ಲ, ಸರ್ವಜ್ಞನೂ ಅಲ್ಲ

ಒಕ್ಕಲಿಗ ಶಾಸಕರ ಸಭೆ ಬಗ್ಗೆ ಕೇಳಿದಾಗ, ʼನಾನು ಈ ಸಮಾಜದ ಪ್ರತಿನಿಧಿಯಾಗಿ, ಸಚಿವ ಸಂಪುಟ ಸಭೆಯಲ್ಲಿ ನಮ್ಮ ವಿಚಾರವನ್ನು ಹೇಗೆ ಮಂಡಿಸಬೇಕು, ಯಾವ ರೀತಿ ಸಲಹೆ ನೀಡಬೇಕು ಎಂದು ಚರ್ಚೆ ಮಾಡಬೇಕಲ್ಲವೇ? ಏಕಾಏಕಿ ನಾನೊಬ್ಬನೇ ಸರ್ವಜ್ಞನಲ್ಲ. ದೊಡ್ಡ ಪಂಡಿತನೂ ಅಲ್ಲ. ನಾನು ಹಳ್ಳಿಯಿಂದ ಬಂದು ಬೆಂಗಳೂರು ಸೇರಿರುವವನು. ಹಿರಿಯರು, ಸ್ನೇಹಿತರು, ಶಾಸಕರ ಅನುಭವ, ತಮ್ಮ ಕ್ಷೇತ್ರಗಳಲ್ಲಿ ಜನ ಏನು ಹೇಳುತ್ತಿದ್ದಾರೆ, ಮಾಧ್ಯಮಗಳು ನೀಡಿರುವ ವರದಿ ಎಲ್ಲವನ್ನು ಚರ್ಚೆ ಮಾಡಿ ಅವಲೋಕಿಸಿ ಚರ್ಚೆ ಮಾಡಬೇಕಿದೆ. ನಾನು ಈ ವಿಚಾರವನ್ನು ಮಾಧ್ಯಮಗಳ ಮುಂದೆ ಮಾತನಾಡುವವನಲ್ಲʼ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್‌ ತಿಳಿಸಿದರು.