ಎಸ್​ ಎಲ್​ ಭೈರಪ್ಪ ನಿಧನ ಫೋಟೋ ಗ್ಯಾಲರಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

DK Shivakumar: ಕಾವೇರಿ ಆರತಿಗೆ ರೈತರ ವಿರೋಧವಿಲ್ಲ: ಡಿ.ಕೆ. ಶಿವಕುಮಾರ್

DK Shivakumar: ಕೆಆರ್‌ಎಸ್‌ನಲ್ಲಿ ಈ ಬಾರಿ ಸಾಂಕೇತಿಕವಾಗಿ ಹಮ್ಮಿಕೊಂಡಿರುವ ಕಾವೇರಿ ಆರತಿ ಕಾರ್ಯಕ್ರಮದ ಸಿದ್ಧತೆ ಪರಿಶೀಲನೆ ಮಾಡಿದ್ದೇನೆ. ನಾವು ದೊಡ್ಡದಾಗಿ ಮಾಡಬೇಕು ಎಂದುಕೊಂಡಿದ್ದ ಜಾಗದಲ್ಲಿ ಈ ಬಾರಿ ಕಾರ್ಯಕ್ರಮ ಮಾಡುತ್ತಿಲ್ಲ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.

ಕಾವೇರಿ ಆರತಿಗೆ ರೈತರ ವಿರೋಧವಿಲ್ಲ: ಡಿ.ಕೆ. ಶಿವಕುಮಾರ್

ಡಿಸಿಎಂ ಡಿ.ಕೆ. ಶಿವಕುಮಾರ್. -

Profile Siddalinga Swamy Sep 24, 2025 10:48 PM

ಮೈಸೂರು: ರೈತರ ಒಳಿತಿಗಾಗಿ ಕಾವೇರಿ ಮಾತೆಯನ್ನು ಪೂಜಿಸಿ, ಪಾರ್ಥಿಸುವ ಕಾವೇರಿ ಆರತಿ (Cauvery Aarti) ಕಾರ್ಯಕ್ರಮಕ್ಕೆ ರೈತರ ವಿರೋಧವಿಲ್ಲ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (DK Shivakumar) ಸ್ಪಷ್ಟಪಡಿಸಿದರು. ಮೈಸೂರಿನ ವಿಮಾನ ನಿಲ್ದಾಣದಲ್ಲಿ ಬುಧವಾರ ಮಾಧ್ಯಮಗಳ ಜತೆ ಅವರು ಮಾತನಾಡಿದರು. ಕಾವೇರಿ ಆರತಿಗೆ ರೈತರ ವಿರೋಧವಿದೆ ಎಂದು ಕೇಳಿದಾಗ, ʼರೈತರ ವಿರೋಧ ಇದೆ ಎಂದು ಯಾರು ಹೇಳಿದರು? ಪೂಜೆ ಮಾಡಲು ಯಾರಾದರೂ ವಿರೋಧ ಮಾಡುತ್ತಾರಾ? ನೀವು ವಿರೋಧ ಮಾಡಬಹುದುʼ ಎಂದು ತಿಳಿಸಿದರು.

ಕೆಆರ್‌ಎಸ್‌ನಲ್ಲಿ ಈ ಬಾರಿ ಸಾಂಕೇತಿಕವಾಗಿ ಹಮ್ಮಿಕೊಂಡಿರುವ ಕಾವೇರಿ ಆರತಿ ಕಾರ್ಯಕ್ರಮದ ಸಿದ್ಧತೆ ಪರಿಶೀಲನೆ ಮಾಡಿದ್ದೇನೆ. ನಾವು ದೊಡ್ಡದಾಗಿ ಮಾಡಬೇಕು ಎಂದುಕೊಂಡಿದ್ದ ಜಾಗದಲ್ಲಿ ಈ ಬಾರಿ ಕಾರ್ಯಕ್ರಮ ಮಾಡುತ್ತಿಲ್ಲ ಎಂದು ಅವರು ತಿಳಿಸಿದರು.

ನೇರ, ನಿಷ್ಠುರ ನಡೆಯ ಕ್ರಾಂತಿಕಾರಿ ಸಾಹಿತಿ ಎಸ್.ಎಲ್. ಬೈರಪ್ಪ

ʼಎಸ್.ಎಲ್. ಬೈರಪ್ಪ ಅವರು ಕ್ರಾಂತಿಕಾರಿ ಸಾಹಿತಿಗಳು. ಯಾರಿಗೂ ಹೆದರದೆ ನೇರ, ನಿಷ್ಠುರವಾಗಿ ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸುತ್ತಿದ್ದರು. ಈ ಹಿಂದೆ ಕನಕಪುರದಲ್ಲಿ ನಡೆದಿದ್ದ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿದ್ದರು. ಸಾಹಿತ್ಯ ಲೋಕಕ್ಕೆ ಮಾತ್ರವಲ್ಲ ಎಲ್ಲಾ ರಂಗದ ವ್ಯಕ್ತಿಗಳಿಗೂ ಮಾರ್ಗದರ್ಶನ ನೀಡುವಂತಹ ವ್ಯಕ್ತಿತ್ವ ಇವರದ್ದಾಗಿತ್ತು. ತಮ್ಮಪಾಡಿಗೆ ಕೆಲಸ ಮಾಡುತ್ತಾ ಹೋದವರು. ಇಡೀ ಸಾಹಿತ್ಯ ಕ್ಷೇತ್ರದಲ್ಲಿ ಎಸ್.ಎಲ್. ಬೈರಪ್ಪ ಅವರ ಹೆಸರು ಶಾಶ್ವತವಾಗಿ ಉಳಿದುಕೊಂಡಿದೆʼ ಎಂದರು.

ʼಬೈರಪ್ಪ ಅವರ ಆತ್ಮಕ್ಕೆ ಶಾಂತಿ ದೊರಕಲಿ. ಕರ್ನಾಟಕ ಸರ್ಕಾರ ಹಾಗೂ ಕಾಂಗ್ರೆಸ್ ಪಕ್ಷ ಅವರ ನಿಧನಕ್ಕೆ ಕಂಬನಿ ಮಿಡಿಯುತ್ತದೆ. ಅವರ ಕುಟುಂಬ ವರ್ಗ ‌ಸೇರಿದಂತೆ ಅಭಿಮಾನಿಗಳಿಗೆ ದುಃಖವನ್ನು ತಡೆದುಕೊಳ್ಳುವ ಶಕ್ತಿ ದೊರಕಲಿ ಎಂದು ಪ್ರಾರ್ಥಿಸುತ್ತೇನೆʼ ಎಂದು ಅವರು ತಿಳಿಸಿದರು.

ಈ ಸುದ್ದಿಯನ್ನೂ ಓದಿ | 116 ಮಂದಿಗೆ ಅನುಕಂಪದ ಆಧಾರದಲ್ಲಿ ಸರ್ಕಾರಿ ಉದ್ಯೋಗ; ನೇಮಕಾತಿ ಆದೇಶ ಪತ್ರ ವಿತರಣೆ

ಸರ್ಕಾರದಿಂದ ವಿಶೇಷ ಗೌರವ ನೀಡಲಾಗುವುದೇ ಎಂದು ಕೇಳಿದಾಗ, ʼಈ ವಿಚಾರವಾಗಿ ನಾನು ಏಕಾಏಕಿ ತೀರ್ಮಾನ ಮಾಡಲು ಆಗುವುದಿಲ್ಲ. ಸಂಪುಟ ಸಹೋದ್ಯೋಗಿಗಳ ಜತೆ ಚರ್ಚಿಸಿ ತೀರ್ಮಾನ ಮಾಡಬೇಕು. ಹೀಗಾಗಿ ಮುಖ್ಯಮಂತ್ರಿಗಳು ಈ ವಿಚಾರವಾಗಿ ತೀರ್ಮಾನ ಮಾಡುತ್ತಾರೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್‌ ತಿಳಿಸಿದರು.