ಫೋಟೋ ಗ್ಯಾಲರಿ ಗುಜರಾತ್​ ವಿಮಾನ ಪತನ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

DK Shivakumar: ವಿಧಾನ ಪರಿಷತ್ ಸದಸ್ಯರ ನೇತೃತ್ವದಲ್ಲಿ 'ಕೆರೆ ಅಧ್ಯಯನ ಸಮಿತಿ': ಡಿ.ಕೆ.ಶಿವಕುಮಾರ್

DK Shivakumar: ಬೆಂಗಳೂರು ನಗರದ ಕೆರೆಗಳ ಒತ್ತುವರಿ ಸೇರಿದಂತೆ ಕೆರೆ ಮಾಲಿನ್ಯದ ಬಗ್ಗೆ ಅಧ್ಯಯನ ನಡೆಸಲು ವಿಧಾನ ಪರಿಷತ್ ಸದಸ್ಯರಾದ ಟಿ.ಎ.ಶರವಣ, ಜವರಾಯಿಗೌಡ ಹಾಗೂ ಗೋಪಿನಾಥ್ ಅವರ ನೇತೃತ್ವದಲ್ಲಿ ಪ್ರತ್ಯೇಕ ಮೂರು ಸಮಿತಿಗಳನ್ನು ಮಾಡುವಂತೆ ಡಿಸಿಎಂ ಡಿ.ಕೆ. ಶಿವಕುಮಾರ್ ಸೂಚನೆ ನೀಡಿದ್ದಾರೆ.

ವಿಧಾನ ಪರಿಷತ್ ಸದಸ್ಯರ ನೇತೃತ್ವದಲ್ಲಿ 'ಕೆರೆ ಅಧ್ಯಯನ ಸಮಿತಿ': ಡಿಕೆಶಿ

ಡಿಸಿಎಂ ಡಿ.ಕೆ. ಶಿವಕುಮಾರ್.

Profile Siddalinga Swamy Jun 18, 2025 10:26 PM

ಬೆಂಗಳೂರು: ಬೆಂಗಳೂರು ನಗರದ ಕೆರೆಗಳ ಒತ್ತುವರಿ ಸೇರಿದಂತೆ ಕೆರೆ ಮಾಲಿನ್ಯದ ಬಗ್ಗೆ ಅಧ್ಯಯನ ನಡೆಸಲು ವಿಧಾನ ಪರಿಷತ್ ಸದಸ್ಯರಾದ ಟಿ.ಎ.ಶರವಣ, ಜವರಾಯಿಗೌಡ ಹಾಗೂ ಗೋಪಿನಾಥ್ ಅವರ ನೇತೃತ್ವದಲ್ಲಿ ಪ್ರತ್ಯೇಕ ಮೂರು ಸಮಿತಿಗಳನ್ನು ಮಾಡುವಂತೆ ಡಿಸಿಎಂ ಡಿ.ಕೆ. ಶಿವಕುಮಾರ್ (DK Shivakumar)‌ ಸೂಚನೆ ನೀಡಿದರು. ಬನಶಂಕರಿಯಲ್ಲಿರುವ ಬೆಂಗಳೂರು ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಬುಧವಾರ ನಡೆದ 2025-26ನೇ ಸಾಲಿನ ಮೊದಲನೇ ತ್ರೈಮಾಸಿಕ ಕೆಡಿಪಿ ಸಭೆಯಲ್ಲಿ ಮಾತನಾಡಿದ ಅವರು, ಈ ಸಮಿತಿಯು ನಗರದಾದ್ಯಂತ ಇರುವ ಕೆರೆಗಳ ಒತ್ತುವರಿ, ಕೆರೆಗಳಿಗೆ ಕೊಳಚೆ ನೀರು ಸೇರುತ್ತಿರುವುದು ಸೇರಿ ಇತರೇ ಸಮಸ್ಯೆಗಳ ಬಗ್ಗೆ ಅಧ್ಯಯನ ನಡೆಸಿ ವರದಿ ನೀಡಲಿದೆ.‌ ಕೆರೆಗಳಿಗೆ ಚರಂಡಿ ಕೊಳಚೆ ನೀರು ಬಿಡುತ್ತಿರುವವರು ಯಾರೇ ಆಗಿರಲಿ, ಯಾವುದೇ ಕೈಗಾರಿಕೆಗಳಾಗಲಿ ಯಾರಿಗೂ ಮುಲಾಜು ತೋರಬೇಡಿ.‌ ಅಂತಹವರ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಿ. ಕೆರೆಗಳನ್ನು ಈಗಲೇ ಸಂರಕ್ಷಣೆ ಮಾಡದಿದ್ದರೆ ಮುಂದಕ್ಕೆ ಕಷ್ಟವಾಗಲಿದೆ ಎಂದು ಅಧಿಕಾರಿಗಳಿಗೆ ತಿಳಿಸಿದರು.

ಸಮರ್ಪಕ ಆಸ್ತಿ ತೆರಿಗೆ ಏಕೆ ಬರುತ್ತಿಲ್ಲ

ನಗರ ಇಷ್ಟು ದೊಡ್ಡದಾಗಿ ಬೆಳೆದರೂ ಸಮರ್ಪಕ ಆಸ್ತಿ ತೆರಿಗೆ ಏಕೆ ಬರುತ್ತಿಲ್ಲ? ನಗರದಲ್ಲಿ ಎಷ್ಟು ಬಾಲ್ಯ ವಿವಾಹಗಳು ನಡೆದಿವೆ ಎನ್ನುವ ಮಾಹಿತಿ ಇದೆಯೇ? ಎಂಬಿತ್ಯಾದಿ ಪ್ರಶ್ನೆಗಳ ಸುರಿಮಳೆಗೈದು ಅಧಿಕಾರಿಗಳ ಬೆವರಿಳಿಸಿದರು. ಬೆಂಗಳೂರು ನಗರದಲ್ಲಿ ವಿದ್ಯಾವಂತರು, ಬುದ್ಧಿವಂತರು, ಸುಶಿಕ್ಷಿತರು ಇದ್ದಾರೆ. ಬೆಂಗಳೂರು ದಿನೇ ದಿನೇ ಬೆಳೆಯುತ್ತಿದೆ. ಗ್ರೇಟರ್ ಬೆಂಗಳೂರು ಆಗಿ ಮಾರ್ಪಾಡಾಗಿದೆ. ಹೊರವಲಯದ ಪ್ರದೇಶಗಳನ್ನು ಗ್ರೇಟರ್ ಬೆಂಗಳೂರು ವ್ಯಾಪ್ತಿಗೆ ಸೇರಿಸಿಕೊಳ್ಳುವ ಒತ್ತಡವಿದೆ. ನಗರದ ಸೌಲಭ್ಯಗಳನ್ನು ಪಡೆಯಲು ಜನ ಉತ್ಸುಕರಾಗಿದ್ದಾರೆ ಎಂದು ಅವರು ಹೇಳಿದರು.

ಆಸಕ್ತಿ ಇದ್ದರೆ ನನ್ನ ಜತೆ ಕೆಲಸ ಮಾಡಿ

ಅಧಿಕಾರಿಗಳು ಸರಿಯಾಗಿ ಕೆಲಸ ಮಾಡುತ್ತಿಲ್ಲ. ಯಾರ‍್ಯಾರು ಏನೇನು ಮಾಡುತ್ತಿದ್ದಾರೆ ಅನ್ನೋ ಸಂಪೂರ್ಣ ಮಾಹಿತಿ ಇದೆ. ನನಗೇನೂ ಗೊತ್ತಾಗಲ್ಲ ಅನ್ನುವ ಭ್ರಮೆ ಬೇಡ. ಆತ್ಮ ಸ್ಥೈರ್ಯ ಕುಂದಿಸಬಾರದು ಎಂದು ನಿಮ್ಮ ವಿರುದ್ದ ಕ್ರಮ ತೆಗೆದುಕೊಳ್ಳುತ್ತಿಲ್ಲ. ನನ್ನ ಜತೆ ಕೆಲಸ ಮಾಡಲು ಆಸಕ್ತಿ ಇದ್ದರೆ ಇರಬಹುದು, ಇಲ್ಲದಿದ್ದರೆ ಬೇರೆ ಕಡೆಗೆ ನೀವು ಹೊರಡಬಹುದು ಎಂದು ಖಡಕ್ ಎಚ್ಚರಿಕೆ ನೀಡಿದರು.

ಶೈಕ್ಷಣಿಕ ಕ್ಷೇತ್ರಗಳಿಗೆ ಸಿಎಸ್‌ಆರ್ ನಿಧಿಗಳನ್ನು ತರುವ ಬಗ್ಗೆ ಜಿಲ್ಲಾಧಿಕಾರಿಗಳು, ಜಿಲ್ಲಾ ಪಂಚಾಯಿತಿಯ ಸಿಇಓಗಳು ಉದ್ಯಮಿಗಳ ಸಭೆ ಕರೆದು ಚರ್ಚೆ ನಡೆಸಬೇಕು. ವಿದ್ಯಾರ್ಥಿ ನಿಲಯಗಳಲ್ಲಿ ಇರುವ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳ ಫಲಿತಾಂಶ ಉತ್ತಮಗೊಳಿಸಲು ನಿಗಾವಹಿಸಬೇಕು ಹಾಗೂ ಸೂಕ್ತ ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂದರು.

ಈ ಸುದ್ದಿಯನ್ನೂ ಓದಿ | Metro Station: ಮೆಟ್ರೋ ನಿಲ್ದಾಣಕ್ಕೆ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಹೆಸರಿಡಲು ಕ್ರಮ: ಡಿಸಿಎಂ ಡಿಕೆಶಿ

ಬಾಲ್ಯವಿವಾಹದ ಬಗ್ಗೆ ಮಾಹಿತಿ ಇದೆಯೇ?

ಬಾಲ್ಯ ವಿವಾಹ ತಡೆಯಬೇಕು ಅಂತ ಪ್ರತಿಜ್ಞೆ ಸ್ವೀಕಾರ ಮಾಡಿದ್ದೇವೆ. ಆದರೆ ಬೆಂಗಳೂರು ನಗರದಲ್ಲಿ ಎಷ್ಟೆಷ್ಟು ಬಾಲ್ಯ ವಿವಾಹ ನಡೆದಿದೆ ಅಂತ ನಿಮ್ಮ ಬಳಿ ಮಾಹಿತಿ ಇದೆಯಾ? ಪೊಲೀಸರು ಎಷ್ಟು ಕೇಸ್ ದಾಖಲು ಮಾಡಿದ್ದೀರಿ? ಎಂದು ಡಿಸಿಎಂ ಡಿ.ಕೆ. ಶಿವಕುಮಾರ್‌ ಪ್ರಶ್ನಿಸಿದರು. ಬೆಂಗಳೂರಿನ ರಸ್ತೆಗಳನ್ನು ಸುಸ್ಥಿತಿಯಲ್ಲಿಡಿ, ಅಗತ್ಯ ಬಿದ್ದ ಕಡೆ ಹೊಸ ರಸ್ತೆ ನಿರ್ಮಾಣ ಮಾಡಿ ಎಂದು ಸಭೆಯಲ್ಲಿ ಸೂಚನೆ ನೀಡಿದರು.