ಫೋಟೋ ಗ್ಯಾಲರಿ ಬಿಗ್​ಬಾಸ್ ಬಜೆಟ್​ T20 ವಿಶ್ವಕಪ್​ ವಿದೇಶ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ಧಾರ್ಮಿಕ ಕ್ರೈಂ ಪ್ರವಾಸಿ ಪ್ರಪಂಚ ಸಂಪಾದಕೀಯ ಉದ್ಯೋಗ

Doctors Strike: ಮಾ.11ರಿಂದ ರಾಜ್ಯಾದ್ಯಂತ ಸರ್ಕಾರಿ OPD ಬಂದ್: ವೈದ್ಯರಿಂದ ಪ್ರತಿಭಟನೆ

ಕರ್ನಾಟಕ ಸರ್ಕಾರಿ ವೈದ್ಯಾಧಿಕಾರಿಗಳ ಸಂಘ ಮತ್ತು ಆರೋಗ್ಯ ಇಲಾಖೆಯ ನೌಕರರ ಸಂಘಗಳು ಈ ಪ್ರತಿಭಟನೆಗೆ ಕರೆ ನೀಡಿವೆ. ವೈದ್ಯರು ಮತ್ತು ಆರೋಗ್ಯ ಸಿಬ್ಬಂದಿಗಳು ಹಂತ-ಹಂತವಾಗಿ ಹೋರಾಟ ನಡೆಸಲು ನಿರ್ಧರಿಸಿದ್ದಾರೆ. ಈ ಕುರಿತು ರಾಜ್ಯ ಸರ್ಕಾರಿ ವೈದ್ಯಾಧಿಕಾರಿಗಳ ಸಂಘದ ರಾಜ್ಯಾಧ್ಯಕ್ಷ ಡಾ.ರವೀಂದ್ರನಾಥ್ ಎಂ.ಮೇಟಿ ಅವರು ಮಾಹಿತಿ ನೀಡಿದರು.

ಮಾ.11ರಿಂದ ರಾಜ್ಯಾದ್ಯಂತ ಸರ್ಕಾರಿ OPD ಬಂದ್: ವೈದ್ಯರಿಂದ ಪ್ರತಿಭಟನೆ

ಪ್ರಾತಿನಿಧಿಕ ಚಿತ್ರ -

ಹರೀಶ್‌ ಕೇರ
ಹರೀಶ್‌ ಕೇರ Feb 24, 2026 7:32 AM

ಬೆಂಗಳೂರು, ಫೆ.24 : ವರ್ಗಾವಣೆ ನೀತಿ ಬದಲಾವಣೆ, ಖಾಲಿ ಹುದ್ದೆಗಳ ಭರ್ತಿ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ರಾಜ್ಯ (Karnataka) ಸರ್ಕಾರಿ ವೈದ್ಯರು ಮಾರ್ಚ್ 11 ರಿಂದ 15 ರವರೆಗೆ ಹೊರ ರೋಗಿಗಳ (OPD) ಸೇವೆಯನ್ನು ಸ್ಥಗಿತಗೊಳಿಸಿ ಪ್ರತಿಭಟನೆ (Doctors Strike) ನಡೆಸಲು ತೀರ್ಮಾನಿಸಿದ್ದಾರೆ. ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಈ ಕುರಿತು ರಾಜ್ಯ ಸರ್ಕಾರಿ ವೈದ್ಯಾಧಿಕಾರಿಗಳ ಸಂಘದ ರಾಜ್ಯಾಧ್ಯಕ್ಷ ಡಾ.ರವೀಂದ್ರನಾಥ್ ಎಂ.ಮೇಟಿ ಅವರು ಮಾಹಿತಿ ನೀಡಿದರು.

ರಾಜ್ಯ ಸರ್ಕಾರ ಪ್ರತಿಭಟನೆಗೆ ಸ್ಪಂದಿಸಿ ಬೇಡಿಕೆಗಳನ್ನು ಈಡೇರಿಸದಿದ್ದರೆ ಮಾರ್ಚ್ 16 ರಿಂದ ಆರೋಗ್ಯ ಇಲಾಖೆಯ ಎಲ್ಲಾ ವೈದ್ಯರು, ಅಧಿಕಾರಿ-ನೌಕರರು ಕರ್ತವ್ಯಕ್ಕೆ ಅನಿರ್ದಿಷ್ಟಾವಧಿವರೆಗೆ ಗೈರಾಗುವ ಮೂಲಕ ಮುಷ್ಕರ ಮುಂದುವರೆಸುತ್ತೇವೆ ಎಂದು ತಿಳಿಸಿದರು.

ರಾಜ್ಯದ ಎಲ್ಲಾ ಸರ್ಕಾರಿ ಆಸ್ಪತ್ರೆಗಳಲ್ಲಿ ಔಷಧ ಕೊರತೆ ಉಂಟಾಗುತ್ತಿದ್ದು ಸಮರ್ಪಕವಾಗಿ ಔಷಧ ಸರಬರಾಜು ಮಾಡಬೇಕು. ವೃಂದ ಮತ್ತು ನೇಮಕಾತಿ ನಿಯಮಗಳನ್ನು ಪ್ರತಿ ಮೂರು ವರ್ಷಕ್ಕೊಮ್ಮೆ ತಿದ್ದುಪಡಿ ಮಾಡಬೇಕು. ಆದರೆ, ಸರ್ಕಾರಿ ಆದೇಶ ಉಲ್ಲಂಘಿಸಿ 1973ರಿಂದ ಇಲ್ಲಿಯವರೆಗೆ ಆರೋಗ್ಯ ಇಲಾಖೆಯ ವೃಂದ ಮತ್ತು ನೇಮಕಾತಿ ನಿಯಮಗಳನ್ನು ತಿದ್ದುಪಡಿ ಮಾಡಿಲ್ಲ. ಈ ಬಗ್ಗೆ ಶೀಘ್ರ ತಿದ್ದುಪಡಿ ಮಾಡಬೇಕು ಎಂದು ಒತ್ತಾಯಿಸಿದರು.

ಇಲಾಖೆಯ ಎಲ್ಲ ವೃಂದಗಳ ಜೇಷ್ಠತಾ ಪಟ್ಟಿಯನ್ನು ಕಾಲ ಕಾಲಕ್ಕೆ ಪ್ರಕಟಿಸಬೇಕು. ಗುತ್ತಿಗೆ ವೈದ್ಯರು, ನೌಕರರು ಹಾಗೂ ಎನ್ ಎಚ್‌ಎಂ ಗುತ್ತಿಗೆ ನೌಕರರಿಗೆ ಸೇವಾ ಭದ್ರತೆ ಮತ್ತು ಕಾಲಕಾಲಕ್ಕೆ ಸೂಕ್ತ ವೇತನ ಹೆಚ್ಚಳ ಮಾಡಬೇಕು ಎಂದು ಆಗ್ರಹಿಸಿದ್ದಾರೆ.

ಕರ್ನಾಟಕ ಸರ್ಕಾರಿ ವೈದ್ಯಾಧಿಕಾರಿಗಳ ಸಂಘ ಮತ್ತು ಆರೋಗ್ಯ ಇಲಾಖೆಯ ನೌಕರರ ಸಂಘಗಳು ಈ ಪ್ರತಿಭಟನೆಗೆ ಕರೆ ನೀಡಿವೆ. ಈ ಕುರಿತಾದ ಪ್ರಮುಖ ಮಾಹಿತಿಗಳು ಇಲ್ಲಿವೆ:

  1. ಪ್ರತಿಭಟನೆಯ ಹಂತಗಳು

ವೈದ್ಯರು ಮತ್ತು ಆರೋಗ್ಯ ಸಿಬ್ಬಂದಿಗಳು ಹಂತ-ಹಂತವಾಗಿ ಹೋರಾಟ ನಡೆಸಲು ನಿರ್ಧರಿಸಿದ್ದಾರೆ:

ಹಂತ 1 (ಮಾರ್ಚ್ 11 ರಿಂದ 15): ರಾಜ್ಯದ ಎಲ್ಲಾ ಜಿಲ್ಲಾ, ತಾಲ್ಲೂಕು ಆಸ್ಪತ್ರೆಗಳು ಮತ್ತು ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ವೈದ್ಯರು ಕಪ್ಪು ಪಟ್ಟಿ ಧರಿಸಿ ಕೆಲಸ ಮಾಡಲಿದ್ದಾರೆ. ಈ ಅವಧಿಯಲ್ಲಿ OPD (ಹೊರರೋಗಿ ಸೇವೆ) ಸಂಪೂರ್ಣವಾಗಿ ಸ್ಥಗಿತಗೊಳ್ಳಲಿದೆ.

ಹಂತ 2 (ಮಾರ್ಚ್ 16 ರಿಂದ): ಒಂದು ವೇಳೆ ಸರ್ಕಾರ ಅಷ್ಟರೊಳಗೆ ಬೇಡಿಕೆಗಳನ್ನು ಈಡೇರಿಸದಿದ್ದರೆ, ವೈದ್ಯರು ಕೆಲಸಕ್ಕೆ ಗೈರಾಗುವ ಮೂಲಕ ಅನಿರ್ದಿಷ್ಟಾವಧಿ ಮುಷ್ಕರ ಆರಂಭಿಸಲಿದ್ದಾರೆ.

ಮುಷ್ಕರ ತಾತ್ಕಾಲಿಕವಾಗಿ ಹಿಂಪಡೆದ ಸಾರಿಗೆ ನೌಕರರು; ಸರ್ಕಾರಕ್ಕೆ ಮತ್ತೊಂದು ಡೆಡ್​​ಲೈನ್: ಇಂದು ಏನೇನಾಯ್ತು?

  1. ವೈದ್ಯರ ಪ್ರಮುಖ ಬೇಡಿಕೆಗಳು

ಔಷಧಗಳ ಕೊರತೆ: ಸರ್ಕಾರಿ ಆಸ್ಪತ್ರೆಗಳಿಗೆ ನಿರಂತರವಾಗಿ ಮತ್ತು ಸಮರ್ಪಕವಾಗಿ ಔಷಧಗಳ ಪೂರೈಕೆಯಾಗಬೇಕು.

ಬಡ್ತಿ ಮತ್ತು ನೇಮಕಾತಿ: ಕಳೆದ 5 ವರ್ಷಗಳಿಂದ ಬಾಕಿ ಇರುವ ಬಡ್ತಿಗಳನ್ನು ನೀಡಬೇಕು ಮತ್ತು ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಬೇಕು.

ವರ್ಗಾವಣೆ ನೀತಿ: ಪ್ರಸ್ತುತ ಇರುವ ವರ್ಗಾವಣೆ ನೀತಿಯಲ್ಲಿ ಬದಲಾವಣೆ ತರಬೇಕು.

ಇತರ ಬೇಡಿಕೆಗಳು: 7ನೇ ವೇತನ ಆಯೋಗದ ಶಿಫಾರಸುಗಳ ಜಾರಿ ಮತ್ತು ಉನ್ನತ ಶಿಕ್ಷಣಕ್ಕೆ ಸಂಬಂಧಿಸಿದ ನಿಯಮಗಳ ಸಡಿಲಿಕೆ.

  1. ರೋಗಿಗಳಿಗೆ ಗಮನಿಸಬೇಕಾದ ಅಂಶ

ಮುಷ್ಕರದ ಸಮಯದಲ್ಲಿ ಕೇವಲ ತುರ್ತು ಚಿಕಿತ್ಸೆ (Emergency Services) ಮತ್ತು ಒಳರೋಗಿ ಸೇವೆಗಳು ಮಾತ್ರ ಲಭ್ಯವಿರುವ ಸಾಧ್ಯತೆಯಿದೆ.

ಸಾಮಾನ್ಯ ತಪಾಸಣೆಗಾಗಿ ಸರ್ಕಾರಿ ಆಸ್ಪತ್ರೆಗೆ ಹೋಗುವವರು ಮಾರ್ಚ್ 11 ರ ಮೊದಲು ಅಥವಾ ಪರಿಸ್ಥಿತಿ ತಿಳಿಯಾದ ನಂತರ ಹೋಗುವುದು ಉತ್ತಮ.