ವಕ್ಫ್​ ತಿದ್ದುಪಡಿ ಮಸೂದೆ ಐಪಿಎಲ್​ ಸುನಿತಾ ವಿಲಿಯಮ್ಸ್​ ಫ್ಯಾಷನ್​ ವಿದೇಶ ಧಾರ್ಮಿಕ ಕ್ರೈಂ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Shivakumara Swamiji: ತುಮಕೂರು ರೈಲು ನಿಲ್ದಾಣಕ್ಕೆ ಶಿವಕುಮಾರ ಸ್ವಾಮೀಜಿ ಹೆಸರು: ಪರಮೇಶ್ವರ್

ತುಮಕೂರು ರೈಲ್ವೆ ನಿಲ್ದಾಣಕ್ಕೆ ಸಿದ್ದಗಂಗಾ ಶ್ರೀಗಳ (Dr Shivakumara swamiji ) ಹೆರಿಟ್ಟರೆ ಶಾಶ್ವತವಾಗಿ ಉಳಿಯಲಿದೆ. ಶ್ರೀಗಳ ಹೆಸರಿಡುವ ಬಗ್ಗೆ ಕೇಂದ್ರ ಸಚಿವ ವಿ.ಸೋಮಣ್ಣ ಪ್ರಸ್ತಾಪಿಸಿದ್ದರು. ಅವರ ಇಲಾಖೆಯಿಂದ ಶ್ರೀಗಳ ಹೆಸರಿಡಲು ಕೇಂದ್ರದಿಂದ ಮಂಜೂರು ಸಿಕ್ಕಿದೆ. ಶ್ರೀಗಳ ಹೆಸರಿಡುವ ವಿಚಾರದಲ್ಲಿ ವಿಳಂಬವಾಗಿಲ್ಲ ಎಂದು ತಿಳಿಸಿದ್ದಾರೆ.

ತುಮಕೂರು ರೈಲು ನಿಲ್ದಾಣಕ್ಕೆ ಶಿವಕುಮಾರ ಸ್ವಾಮೀಜಿ ಹೆಸರು: ಪರಮೇಶ್ವರ್

ಜಿ. ಪರಮೇಶ್ವರ್

ಹರೀಶ್‌ ಕೇರ ಹರೀಶ್‌ ಕೇರ Apr 10, 2025 10:59 AM

ತುಮಕೂರು: ತುಮಕೂರು ನಗರದ ರೈಲು ನಿಲ್ದಾಣಕ್ಕೆ ಡಾ. ಶಿವಕುಮಾರ ಸ್ವಾಮೀಜಿ ಹೆಸರು ಇಡುವ ಬಗ್ಗೆ ಗೃಹ ಸಚಿವ ಡಾ.ಪರಮೇಶ್ವರ್ ಮಹತ್ವದ ಹೇಳಿಕೆ ನೀಡಿದ್ದಾರೆ. ತುಮಕೂರಿನ ಸಿದ್ದಗಂಗಾ ಮಠದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತುಮಕೂರು ರೈಲ್ವೆ ನಿಲ್ದಾಣಕ್ಕೆ ಸಿದ್ದಗಂಗಾ ಶ್ರೀಗಳ ಹೆಸರಿಡುವ ಬಗ್ಗೆ ಸಿಎಂ ಸಿದ್ದರಾಮಯ್ಯ ಜೊತೆಗೆ ಚರ್ಚಿಸಿ ಒಪ್ಪಿಗೆ ಪಡೆದು ಆದೇಶ ಹೊರಡಿಸಲಾಗುವುದು ಎಂದು ಹೇಳಿದ್ದಾರೆ.

ತುಮಕೂರು ರೈಲ್ವೆ ನಿಲ್ದಾಣಕ್ಕೆ ಸಿದ್ದಗಂಗಾ ಶ್ರೀಗಳ ಹೆರಿಟ್ಟರೆ ಶಾಶ್ವತವಾಗಿ ಉಳಿಯಲಿದೆ. ಶ್ರೀಗಳ ಹೆಸರಿಡುವ ಬಗ್ಗೆ ಕೇಂದ್ರ ಸಚಿವ ವಿ.ಸೋಮಣ್ಣ ಪ್ರಸ್ತಾಪಿಸಿದ್ದರು. ಅವರ ಇಲಾಖೆಯಿಂದ ಶ್ರೀಗಳ ಹೆಸರಿಡಲು ಕೇಂದ್ರದಿಂದ ಮಂಜೂರು ಸಿಕ್ಕಿದೆ. ಶ್ರೀಗಳ ಹೆಸರಿಡುವ ವಿಚಾರದಲ್ಲಿ ವಿಳಂಬವಾಗಿಲ್ಲ ಎಂದು ತಿಳಿಸಿದ್ದಾರೆ.

ಬೆಂಗಳೂರು- ಕುಕ್ಕೆ ಸುಬ್ರಹ್ಮಣ್ಯ ನಡುವೆ ಹೊಸ ರೈಲು

ತುಮಕೂರು: ಕರ್ನಾಟಕದ ಪ್ರಸಿದ್ಧ ತೀರ್ಥಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯಕ್ಕೆ (Kukke Subrahmanya) ಇದೇ 12ರಿಂದ ಬೆಂಗಳೂರಿನಿಂದ (Bengaluru) ಹೊಸ ರೈಲು (New train) ಸಂಚರಿಸಲಿದೆ ಎಂದು ರೈಲ್ವೆ ಇಲಾಖೆಯ ರಾಜ್ಯ ಖಾತೆ ಸಚಿವ ವಿ ಸೋಮಣ್ಣ (central minister V Somanna) ಬುಧವಾರ ಘೋಷಣೆ ಮಾಡಿದರು. ತುಮಕೂರಿನಲ್ಲಿ ರೈಲ್ವೆ ಗೇಟ್ ಮೇಲ್ಸೇತುವೆಗೆ ಗುದ್ದಲಿ ಪೂಜೆ ನಡೆಸಿದ ಬಳಿಕ ಮಾತನಾಡಿದ ಅವರು, ಕರ್ನಾಟಕದಲ್ಲಿ ರೈಲ್ವೆ ಇಲಾಖೆಯ ಯೋಜನೆಗಳಿಗೆ ಸಂಬಂಧಿಸಿ ಮಹತ್ವದ ಮಾಹಿತಿ ಹಂಚಿಕೊಂಡರು. ಇದೇ 12ರಂದು ಬೆಂಗಳೂರಿನಿಂದ ಕುಕ್ಕೆ ಸುಬ್ರಹ್ಮಣ್ಯಕ್ಕೆ ಒಂದು ಹೊಸ ರೈಲು ಬಿಡುತ್ತಿದ್ದೇವೆ. ದಿನಕ್ಕೆ ನಾಲ್ಕು ಬಾರಿ ಹೋಗಿ ಬರುವಂತೆ ಆಗಲಿದೆ ಎಂದು ಅವರು ಹೇಳಿದರು.

23 ಕಾಮಗಾರಿಗಳ ಪೈಕಿ ಈಗಾಗಲೇ 10 ಕಾಮಗಾರಿಗೆ ಚಾಲನೆ ಕೊಡಲಾಗಿದೆ. ಹಂತ ಹಂತವಾಗಿ ಕೆಲಸಗಳನ್ನು ಪ್ರಾರಂಭ ಮಾಡಲಾಗುತ್ತದೆ. ನರೇಂದ್ರ ಮೋದಿ ಅವರು ಮೂರನೇ ಬಾರಿಗೆ ಪ್ರಧಾನಿಯಾಗಿ ಬಂದ ಮೇಲೆ ರೈಲ್ವೆ ಇಲಾಖೆಗೆ ಒಂದು ಕಾಯಕಲ್ಪ ಕೊಟ್ಟಿದ್ದಾರೆ ಎಂದು ಹೇಳಿದರು.

ಕರ್ನಾಟಕದಲ್ಲಿ ಇದ್ದ 33 ಸಾವಿರ ಕೋಟಿ ರೂ. ವೆಚ್ಚದ ಯೋಜನೆಗಳನ್ನು ನಾವು ಕೈಗೆತ್ತಿಕೊಂಡಿದ್ದೇವೆ. ಇದೇ 11ರಂದು ಹಾವೇರಿಯಿಂದ ಬೆಂಗಳೂರಿಗೆ ವಂದೇ ಭಾರತ್ ರೈಲಿಗೆ ಚಾಲನೆ ಕೊಡುತ್ತಿದ್ದೇವೆ. ಮುಂದಿನ 15 ದಿನಗಳಲ್ಲಿ ಗದಗ, ವಾಡಿ, ಕುಷ್ಠಗಿ, ಯಲಬುರ್ಗಾ ರೈಲು ಸಂಚಾರ ಲೋಕಾರ್ಪಣೆ ಮಾಡುತ್ತೇವೆ. ಅನೇಕ ರೈಲ್ವೆ ಯೋಜನೆಗಳನ್ನು ಲೋಕಾರ್ಪಣೆ ಮಾಡುವಂತಹ ಕೆಲಸ ಈಗಾಗಲೇ ಆಗಿದೆ ಎಂದು ಸೋಮಣ್ಣ ಹೇಳಿದರು.

ಇದನ್ನೂ ಓದಿ: Railways Solar: ದೇಶದ 2,249 ರೈಲು ನಿಲ್ದಾಣ, ಸೇವಾ ಕಟ್ಟಡಗಳಲ್ಲಿ 209 ಮೆಗಾವ್ಯಾಟ್‌ ಸೌರ ಸ್ಥಾವರ ಸ್ಥಾಪನೆ