ಫೋಟೋ ಗ್ಯಾಲರಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

e-Signature: ಇನ್ನುಮುಂದೆ ಆಸ್ತಿ ನೋಂದಣಿಗೆ ಇ-ಸಹಿ ಕಡ್ಡಾಯ

e-Signature: ಕರ್ನಾಟಕ ಸ್ಟ್ಯಾಂಪ್‌ ತಿದ್ದುಪಡಿ ಕಾಯ್ದೆ ಜಾರಿಗೊಳಿಸಿ ರಾಜ್ಯ ಕಂದಾಯ ಇಲಾಖೆ ಆದೇಶ ಹೊರಡಿಸಿದೆ. ಅದರಂತೆ ಯಾವುದೇ ನೋಂದಣಿ ಪ್ರಕ್ರಿಯೆಗಳು ಡಿಜಿಟಲೀಕರಣವಾಗಲಿದ್ದು, ಇ-ಸ್ಟ್ಯಾಂಪ್‌ ಜತೆಗೆ ಇ-ಸಹಿ ಕಡ್ಡಾಯವಾಗಿರಲಿದೆ. ವಿದ್ಯುನ್ಮಾನ ಸಹಿಗಳಿಗೆ ಕಾನೂನಾತ್ಮಕ ಬೆಂಬಲ ನೀಡಲಾಗಿದೆ.

ಬೆಂಗಳೂರು: ಇನ್ನುಮುಂದೆ ಆಸ್ತಿ ನೋಂದಣಿಗೆ ಇ-ಸಹಿ (e-Signature) ಕಡ್ಡಾಯವಾಗಲಿದೆ. ಈ ನಿಟ್ಟಿನಲ್ಲಿ ಕರ್ನಾಟಕ ಸ್ಟ್ಯಾಂಪ್‌ ತಿದ್ದುಪಡಿ ಕಾಯ್ದೆ ಜಾರಿಗೊಳಿಸಿ ಕಂದಾಯ ಇಲಾಖೆ (revenue department) ಆದೇಶ ಹೊರಡಿಸಿದೆ. ಅದರಂತೆ ಯಾವುದೇ ನೋಂದಣಿ ಪ್ರಕ್ರಿಯೆಗಳು ಡಿಜಿಟಲೀಕರಣವಾಗಲಿದ್ದು, ಸೇಲ್‌ ಡೀಡ್‌ ಸೇರಿ ಎಲ್ಲ ಮಾದರಿಯ ಡೀಡ್‌ಗಳನ್ನು ಆರಂಭದಿಂದ ಅಂತಿಮ ಪ್ರಕ್ರಿಯೆವರೆಗೂ ಡಿಜಿಟಲೈಸ್‌‍ ಮಾಡಲು ಈ ಕಾಯ್ದೆಯಲ್ಲಿ ನಿಯಮ ರೂಪಿಸಲಾಗಿದೆ.

ಇನ್ನು ಇ-ಸಹಿ ಜತೆಗೆ ಇ-ಸ್ಟ್ಯಾಂಪ್‌ಗಳು ಕಡ್ಡಾಯವಾಗಿರಲಿದ್ದು, ಇದರಿಂದ ಸ್ಟ್ಯಾಂಪ್‌ಗಳ ದುರುಪಯೋಗ ಮತ್ತು ಸೋರಿಕೆ ತಡೆಯಲು ಅನುಕೂಲವಾಗಲಿದೆ. ಬ್ಯಾಂಕ್‌ ಚಲನ್‌ಗಳ ಮೂಲಕ ಸ್ಟ್ಯಾಂಪ್‌ ದುರುಪಯೋಗ ತಡೆಯಲು ಇದು ಸಹಕಾರಿಯಾಗಲಿದೆ. ವಿದ್ಯುನ್ಮಾನ ಸಹಿಗಳಿಗೆ ಕಾನೂನಾತ್ಮಕ ಬೆಂಬಲ ನೀಡಲಾಗಿದ್ದು, ವಿದ್ಯನ್ಮಾನ ವಿಧಾನಗಳ ಮೂಲಕ ಸ್ಟ್ಯಾಂಪ್ ಶುಲ್ಕ ಪಾವತಿಸಬೇಕಾಗಿದೆ.

ಸಿಬ್ಬಂದಿ ಮೂಲಕ ಸ್ಟ್ಯಾಂಪ್ ವಿತರಣೆಗೆ ಸಂಪೂರ್ಣ ತಡೆ ಬೀಳಲಿದೆ. ಡಿಜಿಟಲ್‌ ಸಹಿ ದುರ್ಬಳಕೆಯಾಗದಂತೆ ಜಿಲ್ಲಾಧಿಕಾರಿ ಅಥವಾ ಸಕ್ಷಮ ಪ್ರಾಧಿಕಾರದ ಅಧಿಕಾರಿಯ ಸಹಿಯನ್ನು ಆಧಾರ್‌ಗೆ ಜೋಡಣೆ ಮಾಡಲಾಗುತ್ತದೆ. ಸಹಿ ದೃಢೀಕರಣಗೊಂಡರೆ ಮಾತ್ರ ಸಹಿ ಸಾಧ್ಯ. ಡಿಜಿಟಲ್‌ ಸಹಿಯಲ್ಲಿ ಬಯೊಮೆಟ್ರಿಕ್‌ ಕೂಡ ಇರಲಿದೆ.

ಮಾರ್ಗಸೂಚಿಯಂತೆ ಸರ್ಕಾರಿ ನೌಕರರ ವರ್ಗಾವಣೆ ನಡೆಯಸಲು ಸೂಚನೆ

ಬೆಂಗಳೂರು: ಸರ್ಕಾರಿ ನೌಕರರ ವರ್ಗಾವಣೆ (Transfer guidelines) ವೇಳೆ ಯಾವುದೇ ಆಕ್ಷೇಪಣೆಗಳು ಉದ್ಭವಿಸದಂತೆ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು ಎಂದ ಸಂಬಂಧಪಟ್ಟ ಅಧಿಕಾರಿಗಳಿಗೆ ಮುಖ್ಯ ಕಾರ್ಯದರ್ಶಿ ಡಾ.ಶಾಲಿನಿ ರಜನೀಶ್ ಸೂಚನೆ ನೀಡಿದ್ದಾರೆ. ಕೆಲವೆಡೆ ವರ್ಗಾವಣೆ ಮಾರ್ಗಸೂಚಿಗಳನ್ನು ಉಲ್ಲಂಘಿಸಿರುವ ಹಿನ್ನೆಲೆಯಲ್ಲಿ ಈ ಮಹತ್ವದ ಸುತ್ತೋಲೆ ಹೊರಡಿಸಿದ್ದಾರೆ.

ಈ ಹಿಂದಿನ ವರ್ಷಗಳ ವರ್ಗಾವಣೆ ಅವಧಿಯಲ್ಲಿ ಗಮನಿಸಿದ ಸನ್ನಿವೇಶಗಳ ಹಿನ್ನೆಲೆಯಲ್ಲಿ, ಸ್ಪಷ್ಟ ವರ್ಗಾವಣೆ ಮಾರ್ಗಸೂಚಿ ಹಾಗೂ ಸೂಚನೆಗಳನ್ನು ಹೊರಡಿಸಿದ್ದರೂ ಕೂಡ, ಮಾರ್ಗಸೂಚಿಗಳನ್ನು ಉಲ್ಲಂಘಿಸಿ ವರ್ಗಾವಣೆ ಆದೇಶಗಳನ್ನು ಹೊರಡಿಸಿದ್ದಲ್ಲಿ ಕರ್ನಾಟಕ ಆಡಳಿತ ನ್ಯಾಯಮಂಡಳಿಯಲ್ಲಿ ಬಹಳಷ್ಟು ಪ್ರಕರಣಗಳು ದಾಖಲಾಗುವುದನ್ನು ಗಮನಿಸಲಾಗಿದೆ. ಆದ್ದರಿಂದ ಪ್ರತಿಯೊಬ್ಬ ಇಲಾಖಾ ಕಾರ್ಯದರ್ಶಿ/ಮುಖ್ಯಸ್ಥರು ತಮ್ಮ ಇಲಾಖೆಯಲ್ಲಿ ಯಾವುದೇ ವರ್ಗಾವಣೆ ಆದೇಶ ಹೊರಡಿಸುವ ಮೊದಲು ಈ ಕೆಳಕಂಡ ಆಕ್ಷೇಪಣೆಗಳು ಉದ್ಭವಿಸದಂತೆ ಕಟ್ಟುನಿಟ್ಟಾಗಿ ಮಾರ್ಗಸೂಚಿಗಳನ್ನು ಅನುಸರಿಸಿ ವರ್ಗಾವಣೆ ಆದೇಶಗಳನ್ನು ಮಾಡಲು ಸೂಚಿಸಿದ್ದಾರೆ.

1) ಕನಿಷ್ಠ ಅವಧಿ ಪೂರ್ಣಗೊಳಿಸದೇ ಇರುವವರನ್ನು ವರ್ಗಾಯಿಸುವುದು.

2) ನಿವೃತ್ತರಾಗಲು 2 ವರ್ಷಕ್ಕಿಂತ ಕಡಿಮೆ ಸೇವಾವಧಿ ಇರುವವರ ವರ್ಗಾವಣೆಯನ್ನು ಸಕಾರಣವಿಲ್ಲದೆ ಮಾಡುವುದು.

3) ಅವಧಿ ಪೂರ್ವ ವರ್ಗಾವಣೆಗಳನ್ನು ಸಕಾರಣಗಳಿಲ್ಲದೆ ಮಾಡುವುದು

4) ವಿಶೇಷ ಚೇತನ ನೌಕರರಿಗೆ ನೀಡಲಾದ ವಿನಾಯಿತಿಗಳನ್ನು ಅನುಸರಿಸದೇ ವರ್ಗಾಯಿಸುವುದು.

5) ವರ್ಗಾವಣೆ ಆದೇಶದಲ್ಲಿ ಹುದ್ದೆಯನ್ನು ತೋರಿಸದಿರುವುದು.

6) ಸಾಮಾನ್ಯ ವರ್ಗಾವಣೆ ಅವಧಿ ಮುಗಿದ ನಂತರ ಮಾನ್ಯ ಮುಖ್ಯಮಂತ್ರಿಗಳ ಅನುಮೋದನೆ ಪಡೆಯದೆ ವರ್ಗಾಯಿಸುವುದು

7) ಸರ್ಕಾರದ ಆದೇಶದಲ್ಲಿ ಸೂಚಿಸಲಾದ ಇನ್ನಿತರೆ ವರ್ಗಾವಣೆ ಮಾರ್ಗಸೂಚಿಗಳನ್ನು ಅನುಸರಿಸದಿರುವುದು.

ವರ್ಗಾವಣೆ ವೇಳೆ ಈ ಮೇಲ್ಕಂಡ ಆಕ್ಷೇಪಣೆಗಳು ಉದ್ಭವಿಸದಂತೆ ಕಟ್ಟುನಿಟ್ಟಾಗಿ ಕ್ರಮ ಕೈಗೊಳ್ಳಲು ಅಧಿಕಾರಿಗಳಿಗೆ ಮುಖ್ಯ ಕಾರ್ಯದರ್ಶಿ ಸೂಚಿಸಿದ್ದಾರೆ.

ಜೂನ್ 14ರವರೆಗೆ ಸಾರ್ವತ್ರಿಕ ವರ್ಗಾವಣೆ

ಪ್ರಸಕ್ತ 2025-26ನೇ ಸಾಲಿನಲ್ಲಿ ಗ್ರೂಪ್-ಎ, ಗ್ರೂಪ್-ಬಿ, ಗ್ರೂಪ್-ಸಿ ಮತ್ತು ಗ್ರೂಪ್-ಡಿ ಹುದ್ದೆಗಳಿಗೆ ಮಾಡಲಾಗುವ ವರ್ಗಾವಣೆಗಳ ಸಂಖ್ಯೆಯು ಆಯಾ ವೃಂದಗಳ ಕಾರ್ಯನಿರತ ವೃಂದ ಬಲದ ಶೇ.6ನ್ನು ಮೀರದಂತೆ ಮೇ 15ರಿಂದ ಜೂನ್ 14ರವರೆಗೆ ಸಾರ್ವತ್ರಿಕ ವರ್ಗಾವಣೆ ಕೈಗೊಳ್ಳಲು, ಗ್ರೂಪ್-ಎ ಮತ್ತು ಗ್ರೂಪ್ ಬಿ ವೃಂದದ ಅಧಿಕಾರಿಗಳಿಗೆ ಸಂಬಂಧಿಸಿದಂತೆ ಆಯಾ ಇಲಾಖಾ ಸಚಿವರಿಗೆ ಹಾಗೂ ಗ್ರೂಪ್-ಸಿ ಮತ್ತು ಗ್ರೂಪ್-ಡಿ ವೃಂದದ ನೌಕರರಿಗೆ ಸಂಬಂಧಿಸಿದಂತೆ ಆಯಾ ನೇಮಕಾತಿ ಪ್ರಾಧಿಕಾರಗಳಿಗೆ ಅಧಿಕಾರ ನೀಡಲಾಗಿದೆ.

ಸರ್ಕಾರಿ ನೌಕರರ ವರ್ಗಾವಣೆ ಮಾರ್ಗಸೂಚಿಗಾಗಿ ಇಲ್ಲಿ ಕ್ಲಿಕ್‌ ಮಾಡಿ

ಸರ್ಕಾರಿ ನೌಕರರ ವರ್ಗಾವಣೆ ಮಾರ್ಗಸೂಚಿ (Transfer guidelines)

ಈ ಸುದ್ದಿಯನ್ನೂ ಓದಿ | KVB Recruitment 2025: ಕರೂರ್‌ ವೈಶ್ಯ ಬ್ಯಾಂಕ್‌ನಲ್ಲಿದೆ ವಿವಿಧ ಹುದ್ದೆ; ಹೀಗೆ ಅಪ್ಲೈ ಮಾಡಿ