ಫೋಟೋ ಗ್ಯಾಲರಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

ED Raid: ಕಾಂಗ್ರೆಸ್‌ ಶಾಸಕ ಸುಬ್ಬಾರೆಡ್ಡಿ ಮನೆ ಮೇಲೆ ಇಡಿ ದಾಳಿ

ED Raid: ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ ಕ್ಷೇತ್ರದ ಶಾಸಕ ಸುಬ್ಬಾರೆಡ್ಡಿ ವಿದೇಶಿ ವಿನಿಮಯ ನಿರ್ವಹಣಾ ಕಾಯ್ದೆ (Foreign Exchange Management Act) ಉಲ್ಲಂಘನೆ ಮಾಡಿದ ಆರೋಪದ ಅಡಿ ಅವರ ಮನೆಗಳ ಮೇಲೆ ದಾಳಿ ನಡೆಸಲಾಗಿದೆ. ಸುಬ್ಬಾರೆಡ್ಡಿ ವಿದೇಶಗಳಾದ ಮಲೇಷ್ಯಾ, ಹಾಂಕಾಂಗ್​​, ಜರ್ಮನಿ ಮುಂತಾದ ಕಡೆ ಆಸ್ತಿ ಹೊಂದಿದ್ದಾರೆ.

ಕಾಂಗ್ರೆಸ್‌ ಶಾಸಕ ಸುಬ್ಬಾರೆಡ್ಡಿ ಮನೆ ಮೇಲೆ ಇಡಿ ದಾಳಿ

ಶಾಸಕ ಸುಬ್ಬಾರೆಡ್ಡಿ

ಹರೀಶ್‌ ಕೇರ ಹರೀಶ್‌ ಕೇರ Jul 10, 2025 11:53 AM

ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರ (Chikkaballapura) ಜಿಲ್ಲೆಯ ಬಾಗೇಪಲ್ಲಿ ಕ್ಷೇತ್ರದ ಕಾಂಗ್ರೆಸ್ ಶಾಸಕ ಸುಬ್ಬಾರೆಡ್ಡಿ (MLA Subba Reddy) ಮನೆಗಳ ಮೇಲೆ ಇಂದು ಬೆಳ್ಳಂಬೆಳಿಗ್ಗೆ ಜಾರಿ ನಿರ್ದೇಶನಾಲಯ ಅಧಿಕಾರಿಗಳ ತಂಡ ದಾಳಿ (ED Raid) ನಡೆಸಿದೆ. ಬೆಂಗಳೂರಿನಲ್ಲಿ ಇಡಿ ಅಧಿಕಾರಿಗಳು 5 ಕಡೆ ದಾಳಿ ನಡೆಸಿದ್ದಾರೆ. ಶಾಸಕ ಸುಬ್ಬಾರೆಡ್ಡಿ ಮತ್ತು ಸಂಬಂಧಿಕರಿಗೆ ಸೇರಿದ ಮನೆಗಳಲ್ಲಿ ಇಡಿ ಅಧಿಕಾರಿಗಳು ದಾಳಿ ನಡೆಸಿ ದಾಖಲೆಗಳ ಪರಿಶೀಲನೆ ನಡೆಸುತ್ತಿದ್ದಾರೆ.

ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ ಕ್ಷೇತ್ರದ ಶಾಸಕ ಸುಬ್ಬಾರೆಡ್ಡಿ ವಿದೇಶಿ ವಿನಿಮಯ ನಿರ್ವಹಣಾ ಕಾಯ್ದೆ (Foreign Exchange Management Act) ಉಲ್ಲಂಘನೆ ಮಾಡಿದ ಆರೋಪದ ಅಡಿ ಅವರ ಮನೆಗಳ ಮೇಲೆ ದಾಳಿ ನಡೆಸಲಾಗಿದೆ. ಸುಬ್ಬಾರೆಡ್ಡಿ ವಿದೇಶಗಳಾದ ಮಲೇಷ್ಯಾ, ಹಾಂಕಾಂಗ್​​, ಜರ್ಮನಿ ಮುಂತಾದ ಕಡೆ ಆಸ್ತಿ ಹೊಂದಿದ್ದಾರೆ. ಶಾಸಕ ಸುಬ್ಬಾರೆಡ್ಡಿ ಕುಟುಂಬ ಸದಸ್ಯರು ಹೊಂದಿರುವ ವಿದೇಶಿ ಆಸ್ತಿ ಮತ್ತು ಅವರ ಉದ್ಯಮ ಪಾಲುದಾರರಿಗೆ ಸೇರಿದ ಆಸ್ತಿ ಸಂಬಂಧ ದಾಳಿ ನಡೆದಿದೆ. ವಿದೇಶಗಳಲ್ಲಿನ ಬ್ಯಾಂಕ್​ ಅಕೌಂಟ್​​, ವಿದೇಶ ವ್ಯವಹಾರದಲ್ಲಿ ಹೂಡಿಕೆ ವಿಚಾರವಾಗಿ ಶೋಧ ನಡೆಸಲಾಗುತ್ತಿದೆ.

ರಸ್ತೆ ಕಾಮಗಾರಿ ಬಿಲ್ ಮಂಜೂರು ಮಾಡಲು ಲಂಚಕ್ಕೆ ಬೇಡಿಕೆ; ಇಬ್ಬರು ಅಧಿಕಾರಿಗಳ ಅಮಾನತು

ಕಲಬುರಗಿ: ಜಿಲ್ಲೆಯ ಚಿತ್ತಾಪುರ ತಾಲೂಕಿನ ಗುಂಡಗುರ್ತಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ನಡೆದಿದ್ದ ಸಿಸಿ ರಸ್ತೆಯ ಕಾಮಗಾರಿಯ ಬಿಲ್ ಮಂಜೂರು ಮಾಡಲು ಕಮಿಷನ್‌ಗೆ ಬೇಡಿಕೆಯಿಟ್ಟ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಪಂಚಾಯತ್ ರಾಜ್ ಇಲಾಖೆಯ ಇಬ್ಬರು ಅಧಿಕಾರಿಗಳನ್ನು ಅಮಾನತು ಮಾಡಿ ಆದೇಶ ಹೊರಡಿಸಲಾಗಿದೆ. ಕಲಬುರಗಿ (Kalaburagi News) ಪಂಚಾಯತ್ ರಾಜ್ ಎಂಜಿನಿಯರಿಂಗ್ ವಿಭಾಗದ ಜೆಇ ಶ್ರೀಪಾದ್ ಬಾಪುರಾವ್ ಕುಲಕರ್ಣಿ ಹಾಗೂ ಪಿಡಿಒ ಮಂಜುಶ್ರೀ ಜಹಾಗಿರದಾರ್ ಅಮಾನತುಗೊಂಡವರು.

ಈ ಇಬ್ಬರು ಅಧಿಕಾರಿಗಳನ್ನು ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಅವರ ಆದೇಶದ ಮೇರೆಗೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಭಂವರ ಸಿಂಗ್ ಮೀನಾ ಅವರು ಇಲಾಖೆ ವಿಚಾರಣೆ ಕಾಯ್ದಿರಿಸಿ, ಬುಧವಾರ ಅಮಾನತು ಮಾಡಿ ಆದೇಶ ಹೊರಡಿಸಿದ್ದಾರೆ.

ಜಿಲ್ಲೆಯ ಚಿತ್ತಾಪುರ ತಾಲೂಕಿನ ಗುಂಡಗುರ್ತಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ 15ನೇ ಹಣಕಾಸಿನ ಯೋಜನೆಯಡಿ ಸಿಸಿ ರಸ್ತೆ ಕಾಮಗಾರಿ ಬಿಲ್ ಮಂಜೂರು ಮಾಡಲು ಗುತ್ತಿಗೆದಾರರ ಬಳಿ ಲಂಚಕ್ಕೆ ಬೇಡಿಕೆಯಿಟ್ಟ ಆರೋಪದ ಹಿನ್ನೆಲೆಯಲ್ಲಿ ಇಬ್ಬರು ಅಧಿಕಾರಿಗಳನ್ನು ಅಮಾನತು ಮಾಡಲಾಗಿದೆ.

ಇದನ್ನೂ ಓದಿ: Murder Case: ಬೆಂಗಳೂರಿನಲ್ಲಿ ಬರ್ಬರ ಕೃತ್ಯ, ಅತ್ಯಾಚಾರ ಎಸಗಿ ಬಾಲಕಿಯ ಕೊಲೆ