Electric Shock: ದೊಡ್ಡಬಳ್ಳಾಪುರದಲ್ಲಿ ವಿದ್ಯುತ್ ಶಾಕ್, ತಾಯಿ- ಮಗ ಸಾವು, ಮಗಳು ಪಾರು
ದೊಡ್ಡಬಳ್ಳಾಪುರ ತಾಲೂಕಿನ ಕಾರನಾಳ ಗ್ರಾಮದಲ್ಲಿ ನಿನ್ನೆ ರಾತ್ರಿ ಘಟನೆ ನಡೆದಿದ್ದು, ವಿದ್ಯುತ್ ಅವಘಡದಲ್ಲಿ ತಾಯಿ ಲಲಿತಮ್ಮ (55), ಮಗ ಸಂಜಯ್ (35) ಸಾವನ್ನಪ್ಪಿದ್ದಾರೆ. ವಿದ್ಯುತ್ ಸ್ವರ್ಶದಿಂದ ಸುಟ್ಟಗಾಯಕ್ಕೆ ತುತ್ತಾಗಿರುವ ಮಗಳು ಲಕ್ಷ್ಮೀದೇವಿ(32)ಯನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ.


ದೊಡ್ಡಬಳ್ಳಾಪುರ : ದೊಡ್ಡಬಳ್ಳಾಪುರದಲ್ಲಿ (Doddaballapura) ಘೋರ ಘಟನೆ ನಡೆದಿದ್ದು, ಒಣಗಲು ಹಾಕಲಾಗಿದ್ದ ಬಟ್ಟೆಯನ್ನು ತೆಗೆಯಲು ಹೋದ ತಾಯಿ ಹಾಗೂ ತಾಯಿಯನ್ನ ಉಳಿಸಲು ಹೋದ ಮಗನಿಗೂ ವಿದ್ಯುತ್ ಸ್ವರ್ಶಿಸಿ (Electric Shock) ಮೃತಪಟ್ಟಿದ್ದಾರೆ. ಮತ್ತೊಂದು ಕಡೆ ತಾಯಿ ಮತ್ತು ಅಣ್ಣನನ್ನ ರಕ್ಷಿಸಲು ಮುಂದಾಗ ತಂಗಿಗೂ ವಿದ್ಯುತ್ ತಗುಲಿದೆ. ವಿದ್ಯುತ್ ಅವಘಡದಲ್ಲಿ ತಾಯಿ – ಮಗ ದುರಂತ (death) ಸಾವನ್ನಪ್ಪಿದ್ದು, ಗಾಯಗೊಂಡ ಮಗಳನ್ನು ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ಕೊಡಿಸಲಾಗುತ್ತಿದೆ.
ದೊಡ್ಡಬಳ್ಳಾಪುರ ತಾಲೂಕಿನ ಕಾರನಾಳ ಗ್ರಾಮದಲ್ಲಿ ನಿನ್ನೆ ರಾತ್ರಿ ಘಟನೆ ನಡೆದಿದ್ದು, ವಿದ್ಯುತ್ ಅವಘಡದಲ್ಲಿ ತಾಯಿ ಲಲಿತಮ್ಮ (55), ಮಗ ಸಂಜಯ್ (35) ಸಾವನ್ನಪ್ಪಿದ್ದಾರೆ. ವಿದ್ಯುತ್ ಸ್ವರ್ಶದಿಂದ ಸುಟ್ಟಗಾಯಕ್ಕೆ ತುತ್ತಾಗಿರುವ ಮಗಳು ಲಕ್ಷ್ಮೀದೇವಿ(32)ಯನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ದೈಹಿಕ ಪರೀಕ್ಷೆ ವೇಳೆ ಹೃದಯಾಘಾತದಿಂದ ವಿದ್ಯಾರ್ಥಿ ಸಾವು
ಧಾರವಾಡ: ಧಾರವಾಡದ ಐಐಟಿಯಲ್ಲಿ ಎನ್‌ಸಿಸಿ ಆಯ್ಕೆಗೆ ದೈಹಿಕ ಪರೀಕ್ಷೆ ವೇಳೆ ಹೃದಯಾಘಾತದಿಂದ ವಿದ್ಯಾರ್ಥಿಯೊಬ್ಬ ಕುಸಿದುಬಿದ್ದು ಮೃತಪಟ್ಟಿರುವ ಘಟನೆ (Heart Attack) ನಡೆದಿದೆ. ಬಿಹಾರ ಮೂಲದ ಅಸ್ತಿತ್ವ ಗುಪ್ತಾ (20) ಮೃತ ವಿದ್ಯಾರ್ಥಿ. ಈತ ಮೆಕ್ಯಾನಿಕಲ್ ಮೆಟೀರಿಯಲ್ಸ್ ಮತ್ತು ಏರೋಸ್ಪೇಸ್ ಎಂಜಿನಿಯರಿಂಗ್ (ಎಂ-ಟೆಕ್) ವ್ಯಾಸಂಗ ಮಾಡುತ್ತಿದ್ದ.
ಎರಡು ದಿನಗಳ ಹಿಂದೆ ಐಐಟಿ ಕ್ಯಾಂಪಸ್‌ನಲ್ಲಿ ಎನ್‌ಸಿಸಿ ಆಯ್ಕೆಗಾಗಿ ವಿದ್ಯಾರ್ಥಿಗಳಿಗೆ ಓಟದ ಸ್ಪರ್ಧೆ ಏರ್ಪಡಿಸಲಾಗಿತ್ತು. ಈ ಸ್ಪರ್ಧೆಯಲ್ಲಿ ಭಾಗವಹಿಸಿದ್ದ ಅಸ್ತಿತ್ವ ಗುಪ್ತಾ ಓಡುತ್ತಿದ್ದಾಗ ಇದ್ದಕ್ಕಿದ್ದಂತೆ ಕುಸಿದುಬಿದ್ದಿದ್ದಾನೆ. ಕೂಡಲೇ ಕ್ಯಾಂಪಸ್‌ನ ವೈದ್ಯಕೀಯ ಸಿಬ್ಬಂದಿ ಪ್ರಾಥಮಿಕ ಚಿಕಿತ್ಸೆ ನೀಡಿ, ಹೆಚ್ಚಿನ ಚಿಕಿತ್ಸೆಗಾಗಿ ಧಾರವಾಡದ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಆಸ್ಪತ್ರೆಗೆ ದಾಖಲಾದ ನಂತರ ಆರೋಗ್ಯ ಸ್ಥಿತಿ ಸುಧಾರಿಸಿದೆ. ಸಂಜೆವರೆಗೂ ಆರೋಗ್ಯವಾಗಿಯೇ ಇದ್ದ ವಿದ್ಯಾರ್ಥಿ ರಾತ್ರಿ ವೇಳೆಗೆ ಮತ್ತೆ ಹೃದಯಾಘಾತವಾಗಿದೆ. ಈ ವೇಳೆ ತೀವ್ರ ನಿಗಾ ಘಟಕದಲ್ಲಿ (ICU) ಚಿಕಿತ್ಸೆ ನೀಡುತ್ತಿದ್ದರೂ, ಚಿಕಿತ್ಸೆಗೆ ಸ್ಪಂದಿಸದೆ ಕೊನೆಯುಸಿರೆಳೆದಿದ್ದಾನೆಂದು ತಿಳಿದುಬಂದಿದೆ.
ಇದನ್ನೂ ಓದಿ: Vaishno Devi Landslide: ಜಮ್ಮು ಕಾಶ್ಮೀರದಲ್ಲಿ ಭಾರಿ ಮಳೆ; ವೈಷ್ಣೋದೇವಿ ಮಾರ್ಗ ಮಧ್ಯೆ ಗುಡ್ಡ ಕುಸಿದು 15 ಮಂದಿ ಸಾವು