ಫೋಟೋ ಗ್ಯಾಲರಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

English Medium classes: ಗ್ರಾಮೀಣ ವಿದ್ಯಾರ್ಥಿಗಳಿಗೆ ಗುಡ್‌ ನ್ಯೂಸ್‌; 4134 ಸರ್ಕಾರಿ ಶಾಲೆಗಳಲ್ಲಿ ಆಂಗ್ಲ ಮಾಧ್ಯಮ ತರಗತಿ ಆರಂಭಕ್ಕೆ ಸರ್ಕಾರ ಆದೇಶ

government schools: 2025-26ನೇ ಸಾಲಿನಲ್ಲಿ ಸರ್ಕಾರಿ ಪ್ರಾಥಮಿಕ/ಪ್ರೌಢ ಶಾಲೆಗಳಲ್ಲಿ ಪ್ರಸ್ತುತ ಇರುವ ಕನ್ನಡ/ಇತರೆ ಮಾಧ್ಯಮದ ಜತೆ ಆಂಗ್ಲ ಮಾಧ್ಯಮ (ದ್ವಿಭಾಷಾ) ತರಗತಿಗಳನ್ನು ಪ್ರಾರಂಭಿಸಲು ಅನುಮತಿ ನೀಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಸ್ಥಳೀಯವಾಗಿ ಲಭ್ಯವಿರುವ ಸಂಪನ್ಮೂಲಗಳನ್ನು ಬಳಸಿಕೊಂಡು ಆಂಗ್ಲ ಮಾಧ್ಯಮ ಪ್ರಾರಂಭಿಸಲು ಸೂಚಿಸಲಾಗಿದೆ.

4134 ಸರ್ಕಾರಿ ಶಾಲೆಗಳಲ್ಲಿ ಆಂಗ್ಲ ಮಾಧ್ಯಮ ತರಗತಿ ಆರಂಭಕ್ಕೆ ಸರ್ಕಾರ ಆದೇಶ

Profile Prabhakara R Jul 4, 2025 10:59 AM

ಬೆಂಗಳೂರು: ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ರಾಜ್ಯ ಸರ್ಕಾರ ಗುಡ್‌ ನ್ಯೂಸ್‌ ನೀಡಿದೆ. ರಾಜ್ಯದ ಒಟ್ಟು 4134 ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ (English Medium classes) 2025-26ನೇ ಸಾಲಿನಿಂದ 1ನೇ ತರಗತಿಯಿಂದ ಪ್ರಸ್ತುತ ನಡೆಯುತ್ತಿರುವ ಕನ್ನಡ ಅಥವಾ ಇತರೆ ಮಾಧ್ಯಮದ ಜತೆಗೆ ಹೊಸದಾಗಿ ಆಂಗ್ಲ ಮಾಧ್ಯಮ (ದ್ವಿಭಾಷಾ ಮಾಧ್ಯಮ) (Bilingual) ತರಗತಿಗಳನ್ನು ಸ್ಥಳೀಯವಾಗಿ ಲಭ್ಯವಿರುವ ಸಂಪನ್ಮೂಲಗಳನ್ನು ಬಳಸಿಕೊಂಡು ಪ್ರಾರಂಭಿಸಲು ಷರತ್ತುಗಳಿಗೊಳಪಟ್ಟು ಅನುಮತಿ ನೀಡಿ ರಾಜ್ಯ ಸರ್ಕಾರ ಆದೇಶಿಸಿದೆ.

ಇನ್ನು ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ ತಾಲೂಕಿನ ಬಿಳಲುಕೊಪ್ಪ ಸರ್ಕಾರಿ ಪ್ರೌಢಶಾಲೆ, ಹೊಸೂರು-ಗುಡ್ಡಕೇರಿ ಸರ್ಕಾರಿ ಪ್ರೌಢಶಾಲೆ ಮತ್ತು ಹೆದ್ದೂರು ಸರ್ಕಾರಿ ಪ್ರೌಢಶಾಲೆ ಪ್ರಸ್ತುತ ನಡೆಯುತ್ತಿರುವ ಕನ್ನಡ ಅಥವಾ ಇತರೆ ಮಾಧ್ಯಮದ ಜತೆಗೆ ಹೊಸದಾಗಿ ಆಂಗ್ಲ ಮಾಧ್ಯಮ (ದ್ವಿಭಾಷಾ ಮಾಧ್ಯಮ) (Bilingual) ತರಗತಿಗಳನ್ನು ಸ್ಥಳೀಯವಾಗಿ ಲಭ್ಯವಿರುವ ಸಂಪನ್ಮೂಲಗಳನ್ನು ಬಳಸಿಕೊಂಡು ಪ್ರಾರಂಭಿಸಲು ಅನುಮತಿ ನೀಡಲಾಗಿದೆ.

ವಿದ್ಯಾರ್ಥಿಗಳಲ್ಲಿ ಮಾತೃ ಭಾಷೆಯ ಜತೆಗೆ ಆಂಗ್ಲಭಾಷೆಯ ಕೌಶಲ್ಯ ಬೆಳೆಸಲು ರಾಜ್ಯದ 4,000 ಸರ್ಕಾರಿ ಶಾಲೆಗಳಲ್ಲಿ ದ್ವಿ ಭಾಷಾ ವಿಭಾಗವನ್ನು ಪ್ರಾರಂಭಿಸಲಾಗುವುದು ಎಂದು ಮುಖ್ಯಮಂತ್ರಿಗಳು 2025-26ನೇ ಸಾಲಿನ ಆಯವ್ಯಯ ಭಾಷಣದಲ್ಲಿ ಘೋಷಿಸಿದ್ದರು. ಪ್ರಸ್ತುತ ಶೈಕ್ಷಣಿಕ ಸಾಲಿನವರೆಗೆ ರಾಜ್ಯದ ಒಟ್ಟು 4,404 ಸರ್ಕಾರಿ ಪ್ರಾಥಮಿಕ ಶಾಲೆಗಳು / KPS / PM SHRI ಶಾಲೆಗಳಲ್ಲಿ ದ್ವಿಭಾಷಾ ತರಗತಿಗಳನ್ನು ಪ್ರಾರಂಭಿಸಲು ಈಗಾಗಲೇ ಆದೇಶವಾಗಿರುತ್ತದೆ. ಬೆಂಗಳೂರು ಉತ್ತರ ಮತ್ತು ಬೆಂಗಳೂರು ದಕ್ಷಿಣ ಜಿಲ್ಲೆಗಳಲ್ಲಿ ಒಟ್ಟು 1465 ಸರ್ಕಾರಿ ಶಾಲೆಗಳು ಇರುತ್ತವೆ. ಈ ಪೈಕಿ ಬೆಂಗಳೂರು ಉತ್ತರ (373 ಸರ್ಕಾರಿ ಪ್ರಾಥಮಿಕ ಶಾಲೆಗಳು) ಮತ್ತು ಬೆಂಗಳೂರು ದಕ್ಷಿಣ(730 ಸರ್ಕಾರಿ ಪ್ರಾಥಮಿಕ ಶಾಲೆಗಳು) ಜಿಲ್ಲೆಗಳಲ್ಲಿನ ಒಟ್ಟು 1,103 ಸರ್ಕಾರಿ ಶಾಲೆಗಳಲ್ಲಿ 1ನೇ ತರಗತಿಯನ್ನು ಪ್ರಾರಂಭಿಕ ತರಗತಿಯನ್ನಾಗಿ ಹೊಂದಿದ್ದು, ಇವುಗಳಲ್ಲಿ ದ್ವಿಭಾಷಾ ತರಗತಿಗಳನ್ನು ಪ್ರಾರಂಭಿಸಲು ಪರಿಗಣಿಸಲಾಗಿದೆ.

ರಾಜ್ಯದ ಇನ್ನಿತರ 33 ಶೈಕ್ಷಣಿಕ ಜಿಲ್ಲೆಗಳಲ್ಲಿ ಬಾಕಿ ಇರುವ 2,897 ಸರ್ಕಾರಿ ಶಾಲೆಗಳನ್ನು 11555 (magnet / potential) ಸಂಭವನೀಯ ಶಾಲೆಗಳ ಪಟ್ಟಿಯಲ್ಲಿ KPS / PM SHRI / 4,783 ಶಾಲೆಗಳನ್ನು ಈಗಾಗಲೇ ದ್ವಿಭಾಷಾ ತರಗತಿಗಳನ್ನು ಹೊಂದಿರುವ ಶಾಲೆಗಳನ್ನು ಹೊರತುಪಡಿಸಿ ಆಯ್ಕೆ ಮಾಡಲು ಐದು ಮಾನದಂಡಗಳನ್ನು ಅನುಸರಿಸಲಾಗಿರುತ್ತದೆ. ಪ್ರತಿ ತಾಲೂಕಿನಲ್ಲಿ / ವಲಯದಲ್ಲಿ ಅತಿ ಹೆಚ್ಚು ವಿದ್ಯಾರ್ಥಿಗಳ ದಾಖಲಾತಿಯನ್ನು ಹೊಂದಿರುವ ಶಾಲೆಗಳ ಪೈಕಿ ಅವರೋಹಣ ಕ್ರಮದಲ್ಲಿ ಮೊದಲ 15 ಶಾಲೆಗಳನ್ನು ಪರಿಗಣಿಸಿದೆ. ಒಂದು ವೇಳೆ ಯಾವುದಾದರೂ ತಾಲ್ಲೂಕಿನಲ್ಲಿ / ವಲಯದಲ್ಲಿ ಇಂತಹ 15 ಶಾಲೆಗಳು ಲಭ್ಯವಿಲ್ಲದಿದ್ದಲ್ಲಿ ಸದರಿ ತಾಲೂಕಿನ ಎಲ್ಲಾ ಶಾಲೆಗಳನ್ನು ಪರಿಗಣಿಸಲಾಗಿದೆ.

ಈ ಸುದ್ದಿಯನ್ನೂ ಓದಿ | IBPS Recruitment 2025: 6,215 ಹುದ್ದೆಗಳ ಭರ್ತಿಗೆ ಮುಂದಾದ ಐಬಿಪಿಎಸ್‌; ಅಪ್ಲೈ ಮಾಡುವ ವಿಧಾನ ಇಲ್ಲಿದೆ

ಸದರಿ ಶಾಲೆಗಳು ಸಂಭವನೀಯ ಶಾಲೆಗಳಾಗಿದ್ದು, ಅಗತ್ಯ ಸಂಪನ್ಮೂಲಗಳನ್ನು ಮೂಲಭೂತ ಸೌಲಭ್ಯಗಳನ್ನು ಹೊಂದಿರುತ್ತವೆ. ಪ್ರಸ್ತುತ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕರ ಹುದ್ದೆಗಳ ಹೆಚ್ಚುವರಿ ಪ್ರಕ್ರಿಯೆ ಚಾಲನೆಯಲ್ಲಿದ್ದು, ಸದರಿ ಪ್ರಕ್ರಿಯೆ ಪೂರ್ಣಗೊಂಡ ನಂತರ ಈ ಶಾಲೆಗಳಿಗೆ ಅಗತ್ಯವಿರುವ ಶಿಕ್ಷಕರನ್ನು ಒದಗಿಸಬಹುದಾಗಿರುತ್ತದೆ. ಆಯ್ಕೆ ಮಾಡಿರುವ 4000 ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ದ್ವಿಭಾಷಾ ತರಗತಿಗಳನ್ನು ಪ್ರಾರಂಭಿಸಿದ್ದಲ್ಲಿ ಸರ್ಕಾರಕ್ಕೆ ಯಾವುದೇ ಆರ್ಥಿಕ ಹೊರೆ ಇರುವುದಿಲ್ಲ. ಸದರಿ 4000 ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ 2025-2026ನೇ ಸಾಲಿನಿಂದ ದ್ವಿಭಾಷಾ ತರಗತಿಗಳನ್ನು ಪ್ರಾರಂಭಿಸಲು ಅನುಮೋದನೆ ನೀಡಬೇಕು ಎಂದು ಶಾಲಾ ಶಿಕ್ಷಣ ಇಲಾಖೆ ಆಯುಕ್ತರು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದ್ದರು. ಇದನ್ನು ಕೂಲಂಕಷವಾಗಿ ಪರಿಶೀಲಿಸಿ 4134 ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಆಂಗ್ಲ ಮಾಧ್ಯಮ (ದ್ವಿಭಾಷಾ ಮಾಧ್ಯಮ) ತರಗತಿ ಆರಂಭಿಸಲು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.