ಎಸ್​ ಎಲ್​ ಭೈರಪ್ಪ ನಿಧನ ಫೋಟೋ ಗ್ಯಾಲರಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

SL Bhyrappa: ಇಂದು ಚಾಮುಂಡಿ ಬೆಟ್ಟದ ತಪ್ಪಲಲ್ಲಿ ಪಂಚಭೂತ ಲೀನವಾಗಲಿರುವ ಎಸ್ಎಲ್ ಭೈರಪ್ಪ

Mysuru: ಸಕಲ ಸರ್ಕಾರಿ ಗೌರವಗಳೊಂದಿಗೆ ಕನ್ನಡದ ಹಿರಿಯ ಸಾಹಿತಿ, ಪದ್ಮಭೂಷಣ ಪುರಸ್ಕೃತ ಎಸ್ ಎಲ್ ಭೈರಪ್ಪ ಅವರ ಅಂತ್ಯಕ್ರಿಯೆಯನ್ನು ನೆರವೇರಿಸಲು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಅಂತ್ಯಸಂಸ್ಕಾರದಲ್ಲಿ ಕೇಂದ್ರದ ಪ್ರತಿನಿಧಿಯಾಗಿ ಭಾಗಿಯಾಗಲು ಸಚಿವ ಪ್ರಲ್ಹಾದ ಜೋಶಿ ಅವರನ್ನು ಕೇಂದ್ರ ಸರಕಾರ ನಿಯೋಜಿಸಿದೆ.

ಮೈಸೂರು: ಇಂದು ಬೆಳಗ್ಗೆ 11 ಗಂಟೆಗೆ ಮೈಸೂರಿನ (Mysuru) ಚಾಮುಂಡಿ ಬೆಟ್ಟದ (Chamundi hill) ತಪ್ಪಲಿನ ರುದ್ರ ಭೂಮಿಯಲ್ಲಿ ಹಿರಿಯ ಸಾಹಿತಿ ಡಾ. ಎಸ್.ಎಲ್. ಭೈರಪ್ಪ (SL Bhyrappa) ಅವರ ಅಂತ್ಯಕ್ರಿಯೆ ಸಕಲ ಸರ್ಕಾರಿ ಗೌರವಗಳೊಂದಿಗೆ ಬ್ರಾಹ್ಮಣ ಸಂಪ್ರದಾಯದಂತೆ ನಡೆಯಲಿದೆ. ಭೈರಪ್ಪ ಅವರ ಪಾರ್ಥಿವ ಶರೀರವನ್ನು ಗುರುವಾರ ಮೈಸೂರಿಗೆ ತರಲಾಗಿದ್ದು, ನಗರದ ಕಲಾಮಂದಿರ ಬಳಿಯ ಕಿಂದರಿ ಜೋಗಿ ಆವರಣದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿತ್ತು. ಬಳಿಕ ಜೆಎಸ್‌ಎಸ್ ಆಸ್ಪತ್ರೆಗೆ ರವಾನಿಸಲಾಗಿದೆ.

ಸಕಲ ಸರ್ಕಾರಿ ಗೌರವಗಳೊಂದಿಗೆ ಕನ್ನಡದ ಹಿರಿಯ ಸಾಹಿತಿ, ಪದ್ಮಭೂಷಣ ಪುರಸ್ಕೃತ ಎಸ್ ಎಲ್ ಭೈರಪ್ಪ ಅವರ ಅಂತ್ಯಕ್ರಿಯೆಯನ್ನು ನೆರವೇರಿಸಲು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಈ ಕುರಿತಂತೆ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಅಧಿಸೂಚನೆ ಹೊರಡಿಸಿದ್ದು, ಪದ್ಮಭೂಷಣ ಪುರಸ್ಕೃತರು, ಹಿರಿಯ ಸಾಹಿತಿ ಡಾ.ಎಸ್ಎಲ್ ಭೈರಪ್ಪ ಅವರು ಇಂದು ನಿಧನರಾದ ವಿಷಯವನ್ನು ರಾಜ್ಯ ಸರ್ಕಾರವು ತೀವ್ರ ಸಂತಾಪವನ್ನು ಪ್ರಕಟಿಸಿದೆ ಎಂದಿದೆ.

ಪ್ರಹ್ಲಾದ ಜೋಶಿ ಭಾಗಿ

ಭೈರಪ್ಪನವರ ಅಂತ್ಯಸಂಸ್ಕಾರದಲ್ಲಿ ಕೇಂದ್ರದ ಪ್ರತಿನಿಧಿಯಾಗಿ ಭಾಗಿಯಾಗಲು ಸಚಿವ ಪ್ರಲ್ಹಾದ ಜೋಶಿ ಅವರನ್ನು ಕೇಂದ್ರ ಸರಕಾರ ನಿಯೋಜಿಸಿದೆ. ಈ ನಾಡಿನ ಸರಸ್ವತಿ ಸಮ್ಮಾನ್‌ ಪುರಸ್ಕೃತರಾದ ಮೇರು ಸಾಹಿತಿ ಇಂದು ಪಂಚಭೂತಗಳಲ್ಲಿ ಲೀನರಾಗಲಿದ್ದು, ಕೇಂದ್ರ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಪ್ರಲ್ಹಾದ ಜೋಶಿ ಅವರು ಬೆಳಗ್ಗೆ ಭೈರಪ್ಪ ಅವರ ಪಾರ್ಥೀವ ಶರೀರಕ್ಕೆ ಕೇಂದ್ರ ಸರ್ಕಾರದ ಪರವಾಗಿ ಅಂತಿಮ ನಮನ, ಗೌರವಾರ್ಪಣೆ ಸಲ್ಲಿಸಲಿದ್ದಾರೆ.

ಸಚಿವ ಪ್ರಲ್ಹಾದ ಜೋಶಿ ಅವರು ಇಂದು ಬೆಳಗ್ಗೆ 11 ಗಂಟೆ ವೇಳೆಗೆ ಮೈಸೂರಿನಲ್ಲಿರುವ ಭೈರಪ್ಪ ಅವರ ಸ್ವಗೃಹಕ್ಕೆ ತೆರಳಿ ಅವರ ಕುಟುಂಬಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರ ಶೋಕ ಸಂದೇಶವನ್ನು ತಲುಪಿಸುವುದರೊಂದಿಗೆ ಕೇಂದ್ರ ಸರ್ಕಾರದ ಪರವಾಗಿ ಅಂತಿಮ ನಮನಗಳನ್ನು ಸಮರ್ಪಿಸಲಿದ್ದಾರೆ. ಬಳಿಕ ಚಾಮುಂಡಿ ಬೆಟ್ಟದ ತಪ್ಪಲಿನಲ್ಲಿರುವ ರುದ್ರಭೂಮಿಯಲ್ಲಿ ನೆರವೇರಲಿಸಲು ಉದ್ದೇಶಿಸಿರುವ ಅಂತ್ಯಕ್ರಿಯೆ ವೇಳೆ ಸಹ ಸಚಿವರು ಭಾಗಿಯಾಗಿ ಅಂತಿಮ ಶ್ರದ್ಧಾಂಜಲಿ ಸಲ್ಲಿಸಲಿದ್ದಾರೆ.

ಇದನ್ನೂ ಓದಿ: SL Bhyrappa: ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆಶಿ ಸೇರಿ ಗಣ್ಯರಿಂದ ಎಸ್‌.ಎಲ್‌. ಭೈರಪ್ಪ ಅಂತಿಮ ದರ್ಶನ

ಹರೀಶ್‌ ಕೇರ

View all posts by this author