ಬೆಂಗಳೂರು: ಖ್ಯಾತ ಜ್ಯೋತಿಷಿ ಆನಂದ ಗುರೂಜಿ (Anand Guruji) ಅವರಿಗೆ ಹಣಕ್ಕಾಗಿ ಬ್ಲ್ಯಾಕ್ ಮೇಲ್ ಮಾಡಿ, ಬೆದರಿಕೆ ಹಾಕಿರುವ ಆರೋಪ ಕೇಳಿಬಂದಿದೆ. ಈ ಸಂಬಂಧ ಬೆಂಗಳೂರಿನ ಚಿಕ್ಕಜಾಲ ಠಾಣೆಗೆ ದೂರು ಸಲ್ಲಿಕೆಯಾದ ಹಿನ್ನೆಲೆಯಲ್ಲಿ ಕೃಷ್ಣಮೂರ್ತಿ (ಎ1) ಹಾಗೂ ಟಿವಿ ನಿರೂಪಕಿ ದಿವ್ಯಾ ವಸಂತ (ಎ2) ಸೇರಿ ಇಬ್ಬರ ವಿರುದ್ಧ ಎಫ್ಐಆರ್ ದಾಖಲಾಗಿದೆ. ಆನಂದ ಗುರೂಜಿ ವಿಡಿಯೋ ಮತ್ತು ಜಮೀನು ಖರೀದಿಯ ಬಗ್ಗೆ ಕೋರ್ಟ್‌ನಿಂದ ತಡೆಯಾಜ್ಞೆ ತಂದರೂ ಬೆದರಿಕೆ ಹಾಕಲಾಗಿದೆ. ಆನಂದ ಗುರೂಜಿಯ ಕಾರು ಅಡ್ಡಗಟ್ಟಿ ಅವಾಚ್ಯ ಶಬ್ದಗಳಿಂದ ನಿಂದಿಸಿರುವ ಆರೋಪದಲ್ಲಿ ಇಬ್ಬರ ವಿರುದ್ಧ ಕೇಸ್ ದಾಖಲಾಗಿದೆ.
ವಿಡಿಯೋ ಇದೆ ಪ್ರತಿನಿತ್ಯ ಹಣಕ್ಕಾಗಿ ಆರೋಪಿಗಳು ಬ್ಲ್ಯಾಕ್ಮೇಲ್ ಮಾಡುತ್ತಿದ್ದಾರೆ. ಕೋರ್ಟ್‌ನಿಂದ ತಡೆಯಾಜ್ಞೆ ತಂದರೂ ಹಣಕ್ಕಾಗಿ ಬೆದರಿಸಿ ಬ್ಲ್ಯಾಕ್ ಮೇಲ್, ಜೀವಬೆದರಿಕೆ ಹಾಕಿದ್ದಾರೆ. ಅಲ್ಲದೇ ಕಾರು ಅಡ್ಡಗಟ್ಟಿ ಅಶ್ಲೀಲ ಪದಗಳಿಂದ ನಿಂದನೆ ಮಾಡಿದ್ದಾರೆ ಎಂದು ಆನಂದ್ ಗುರೂಜಿ ದೂರಿನಲ್ಲಿ ಆರೋಪಿಸಿದ್ದಾರೆ. ಈ ಬಗ್ಗೆ ಸದ್ಯ ಚಿಕ್ಕಜಾಲ ಠಾಣೆ ಪೊಲೀಸರು ತನಿಖೆ ಆರಂಭಿಸಿದ್ದಾರೆ.
ಅಶ್ಲೀಲ ವಿಡಿಯೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಬಿಡುವುದಾಗಿ ಬ್ಲ್ಯಾಕ್ಮೇಲ್ ಮಾಡುತ್ತಿದ್ದಾರೆ. ಹಲವಾರು ಯುಟ್ಯೂಬ್ ಚಾನೆಲ್‌ಗಳ ಮೂಲಕ ಮಾನಹಾನಿ ಮಾಡಿದ್ದಾರೆ. ಮುಖವಾಡ, ಸಾಮ್ರಾಟ್ ಹೆಸರಿನ ಯೂಟ್ಯೂಬ್ ಚಾನೆಲ್‌ಗಳಲ್ಲೂ ಚಾರಿತ್ರ್ಯ ತೇಜೋವಧೆ ಮಾಡಿದ್ದಾರೆ ಎಂದು ಆನಂದ ಗುರೂಜಿ ಆರೋಪಿಸಿದ್ದಾರೆ.
ಈ ಸುದ್ದಿಯನ್ನೂ ಓದಿ | Physical abuse: ʻಬೆಸ್ಟ್ ಟೀಚರ್ ಅವಾರ್ಡ್ʼ ಪಡೆದಿದ್ದ ಶಿಕ್ಷಕಿ ಇದೀಗ ಜೈಲುಪಾಲು; ಲೈಂಗಿಕ ದೌರ್ಜನ್ಯ ಕೇಸ್‌ನಲ್ಲಿ 30 ವರ್ಷಗಳ ಸಜೆ
ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ; ಮತ್ತೆ ಮೂವರು ಆರೋಪಿಗಳು ಅರೆಸ್ಟ್

ದಕ್ಷಿಣ ಕನ್ನಡ: ಕೆಲವು ದಿನಗಳ ಹಿಂದೆಯಷ್ಟೇ ಮಂಗಳೂರಿನ ಬಜಿಪೆಯಲ್ಲಿ ಬರ್ಬರವಾಗಿ ಕೊಲೆಯಾದ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ(Suhas Shetty Murder Case) ಪ್ರಕರಣದಲ್ಲಿ ಮತ್ತೆ ಮೂವರು ಆರೋಪಿಗಳನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಬಂಧಿತರನ್ನು ಕಳವಾರಿನ ಅಜರುದ್ದೀನ್ ಆಲಿಯಾಸ್ ಅಜರ್ ಆಲಿಯಾಸ್ ಅಜ್ಜು(29), ಬಜ್ಪೆ ನಿವಾಸಿ ಅಬ್ದುಲ್ ಖಾದರ್ ಆಲಿಯಾಸ್ ನೌಫಲ್(24), ವಾಮಂಜೂರಿನ ನೌಷದ್ ಆಲಿಯಾಸ್ ಚೊಟ್ಟೆ ನೌಷದ್(39) ಎಂದು ಗುರುತಿಸಲಾಗಿದೆ. ಮೇ.1ರಂದು ಸುಹಾಸ್ ಶೆಟ್ಟಿಯನ್ನು ನಡುರಸ್ತೆಯಲ್ಲಿ ಕೊಚ್ಚಿ ಕೊಲೆಗೈದಿದ್ದರು.
ಇನ್ನು ಅಜರುದ್ದೀನ್ ವಿರುದ್ಧ ಈ ಹಿಂದೆಯೂ ಮೂರು ಪ್ರಕರಣಗಳು ದಾಖಲಾಗಿದ್ದವು. ಪಣಂಬೂರು, ಸುರತ್ಕಲ್, ಮುಲ್ಕಿ ಪೊಲೀಸರು ಠಾಣೆಯಲ್ಲಿ ಕೇಸ್ ಗಳಿವೆ. ಸುಹಾಸ್ ಶೆಟ್ಟಿ ಚಲನವಲನದ ಬಗ್ಗೆ ಮಾಹಿತಿ ನೀಡಿ ಹತ್ಯೆಗೆ ಈ ಆರೋಪಿಗಳು ಸಹಕರಿಸಿದ್ದರು. ಸುಹಾಸ್ ಶೆಟ್ಟಿ ಹತ್ಯೆ ಬಳಿಕ ಆರೋಪಿಗಳು ಕಾರಿನಲ್ಲಿ ಪಾರಿಯಾಗಲು ಅಬ್ದುಲ್ ಖಾದರ್ ಸಹಕರಿಸಿದ್ದನು. ಸುಹಾಸ್ ಹತ್ಯೆಗೆ ಉಳಿದ ಆರೋಪಿಗಳ ಜೊತೆಗೆ ನೌಷದ್ ಸಂಚು ರೂಪಿಸಿದ್ದನು. ನೌಷದ್ ವಿರುದ್ಧ ಕೊಲೆ, ಕೊಲೆ ಯತ್ನ, ದರೋಡೆ ಸೇರಿದಂತೆ 6 ಕೇಸ್ ಗಳಿದ್ದಾವೆ.
ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣದ ತನಿಖೆಯನ್ನು ರಾಷ್ಟ್ರೀಯ ತನಿಖಾ ದಳಗೆ ವಹಿಸಬೇಕಾಗಿ ರಾಜ್ಯ ಬಿಜೆಪಿ (BJP) ನಿಯೋಗ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರಿಗೆ ಮನವಿ ಮಾಡಿದೆ. ರಾಜ್ಯ ಬಿಜೆಪಿ ಅಧ್ಯಕ್ಷ ವಿಜಯೇಂದ್ರ, ವಿಧಾನಸಭೆ ವಿಪಕ್ಷ ನಾಯಕ ಆರ್ ಅಶೋಕ್, ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಮತ್ತು ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ಬಿಜೆಪಿ ಶಾಸಕರುಗಳು ಸೇರಿ ರಾಜ್ಯಪಾಲರಿಗೆ ನಾಲ್ಕು ಪುಟಗಳಷ್ಟು ಕೈ ಬರಹದ ರೂಪದಲ್ಲೇ ಮನವಿ ಸಲ್ಲಿಸಿದ್ದಾರೆ.
ಈ ಸುದ್ದಿಯನ್ನೂ ಓದಿ: Dinesh Gundu Rao: ಸುಹಾಸ್‌ನನ್ನು ಮಹಾತ್ಮ ಎಂದು ಬಿಂಬಿಸುತ್ತಿರುವ ಬಿಜೆಪಿಯವರು ಆಗೇಕೆ ರೌಡಿ ಪಟ್ಟಿಗೆ ಸೇರಿಸಿದ್ದರು? ದಿನೇಶ್ ಗುಂಡೂರಾವ್
ಪ್ರಕರಣದ ಹಿನ್ನೆಲೆ:
ಮೇ 1ರ ಗುರುವಾರದಂದು ರಾತ್ರಿ ಮಂಗಳೂರು ಸಮೀಪವಿರುವ ಬಜ್ಪೆ ಎಂಬಲ್ಲಿ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿಯರನ್ನು ಮಾರಾಕಾಸ್ತ್ರಗಳಿಂದ ಬರ್ಬರವಾಗಿ ಹತ್ಯೆ ಮಾಡಲಾಗಿತ್ತು. ಘಟನೆಗೆ ಸಂಬಂಧಿಸಿಂದಂತೆ ಮಂಗಳೂರು ಪೊಲೀಸರಿಂದ ಈಗಾಗಲೇ 8 ಆರೋಪಿಗಳ ಬಂಧನ ಆಗಿದೆ.
ಕೃತ್ಯ ಎಸಗಲು ಮೂರು ತಿಂಗಳ ಹಿಂದೆಯೇ ಪ್ರೀ ಪ್ಲ್ಯಾನ್:
ಮೂರು ತಿಂಗಳ ಹಿಂದೆಯೇ ಸುಹಾಸ್ ಶೆಟ್ಟಿ ಕೊಲೆ ಮಾಡಲು ಪ್ಲ್ಯಾನ್ ಆಗಿತ್ತು ಜನವರಿಯಲ್ಲೇ ಸಫ್ವಾನ್ ತಂಡಕ್ಕೆ ಫಾಜಿಲ್ ತಮ್ಮ ಆದಿಲ್ 3 ಲಕ್ಷ ರೂಪಾಯಿ ಹಣ ನೀಡಿದ್ದ. ಕೃತ್ಯಕ್ಕಾಗಿ ಒಂದು ಪಿಕ್ ಅಪ್ ವಾಹನ, ಸ್ವಿಫ್ಟ್ ಕಾರ್ ಬಳಸಿದ್ದ. ಒಂದು ವೇಳೆ ಸುಹಾಸ್ ಶೆಟ್ಟಿ ಪಾರಾದರೆ ಇನ್ನೊಂದು ಪ್ಲಾನ್ ಕೂಡ ಸಿದ್ದವಾಗಿತ್ತು ಎನ್ನುವ ಮಾಹಿತಿ ಲಭ್ಯ ಆಗಿದೆ.