ವಕ್ಫ್​ ತಿದ್ದುಪಡಿ ಮಸೂದೆ ಐಪಿಎಲ್​ ಸುನಿತಾ ವಿಲಿಯಮ್ಸ್​ ಫ್ಯಾಷನ್​ ವಿದೇಶ ಧಾರ್ಮಿಕ ಕ್ರೈಂ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Basanagouda Patil Yatnal: ಪ್ರವಾದಿ ಕುರಿತು ಅವಹೇಳನಕಾರಿ ಹೇಳಿಕೆ; ಯತ್ನಾಳ್ ವಿರುದ್ಧ ಎಫ್‌ಐಆರ್‌

Basanagouda Patil Yatnal: ಇಸ್ಲಾಂ ಧರ್ಮ ಮತ್ತು ಪ್ರವಾದಿ ಮಹಮ್ಮದ್ ಪೈಗಂಬರ್ ಅವರ ಬಗ್ಗೆ ಶಾಸಕ ಯತ್ನಾಳ್ ಪ್ರಚೋದನಕಾರಿ ಹಾಗೂ ಅವಹೇಳನಕಾರಿ ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಿ ಮೊಹಮ್ಮದ್ ಹನ್ನಾನ್ ಶೇಖ್ ಎಂಬುವರು ದೂರು ಸಲ್ಲಿಸಿದ್ದಾರೆ. ಹೀಗಾಗಿ ವಿಜಯಪುರದ ಗೋಳಗುಮ್ಮಟ ಪೊಲೀಸ್ ಠಾಣೆಯಲ್ಲಿ ಶಾಸಕ ಯತ್ನಾಳ್‌ ವಿರುದ್ಧ ಎಫ್‌ಐಆರ್‌ ದಾಖಲಾಗಿದೆ.

ಪ್ರವಾದಿ ಕುರಿತು ಅವಹೇಳನಕಾರಿ ಹೇಳಿಕೆ; ಯತ್ನಾಳ್ ವಿರುದ್ಧ ಎಫ್‌ಐಆರ್‌

Profile Prabhakara R Apr 9, 2025 2:10 PM

ವಿಜಯಪುರ: ಇಸ್ಲಾಂ ಧರ್ಮದ ಪ್ರವಾದಿ ಕುರಿತು ಅವಹೇಳನಕಾರಿ ಹೇಳಿಕೆ ನೀಡಿದ ಆರೋಪದಡಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ನಗರದ ಗೋಳಗುಮ್ಮಟ ಪೊಲೀಸ್ ಠಾಣೆಯಲ್ಲಿ ಎಫ್ಐಆರ್‌ ದಾಖಲಾಗಿದೆ. ಏಪ್ರಿಲ್ 7ರಂದು ಹುಬ್ಬಳ್ಳಿಯ ಬಾನಿ ಓಣಿಯಲ್ಲಿ ನಡೆದ ರಾಮನವಮಿ ಕಾರ್ಯಕ್ರಮದಲ್ಲಿ ಇಸ್ಲಾಂ ಧರ್ಮ ಮತ್ತು ಪ್ರವಾದಿ ಮಹಮ್ಮದ್ ಪೈಗಂಬರ್ ಅವರ ಬಗ್ಗೆ ಶಾಸಕ ಯತ್ನಾಳ್ ಪ್ರಚೋದನಕಾರಿ ಹಾಗೂ ಅವಹೇಳನಕಾರಿ ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಿ ಮೊಹಮ್ಮದ್ ಹನ್ನಾನ್ ಶೇಖ್ ಎಂಬುವರು ದೂರು ಸಲ್ಲಿಸಿದ್ದಾರೆ.

“ಬಾಳ ಸಾಹೇಬ್ ಠಾಕ್ರೆ ಮನೆಯಲ್ಲಿ ಮಹಮ್ಮದ್ ಪೈಗಂಬರ್ ಹುಟ್ಟಿದ್ದಾನೆ" ಎಂಬ ಆಧಾರರಹಿತ ಮತ್ತು ಧಾರ್ಮಿಕ ಅಪಮಾನಕಾರಕ ಹೇಳಿಕೆಯನ್ನು ಯತ್ನಾಳ್ ನೀಡಿದ್ದು, ಇದು ಮುಸ್ಲಿಂ ಸಮುದಾಯದ ಧಾರ್ಮಿಕ ಭಾವನೆಗಳಿಗೆ ತೀವ್ರ ಆಘಾತ ಉಂಟುಮಾಡಿದೆ. ಈ ಹೇಳಿಕೆಯಿಂದ ಸಮಾಜದಲ್ಲಿ ಶಾಂತಿ ಮತ್ತು ಸೌಹಾರ್ದತೆಗೆ ಭಂಗ ಉಂಟಾಗುವ ಸಾಧ್ಯತೆ ಇದೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

ಈ ಸುದ್ದಿಯನ್ನೂ ಓದಿ | BY Vijayendra: ಬೆಲೆ ಏರಿಕೆಯಿಂದ ಜನರ ಸಹನೆಯ ಕಟ್ಟೆ ಒಡೆಯುವ ಪರಿಸ್ಥಿತಿ- ವಿಜಯೇಂದ್ರ

ಪೊಲೀಸನಿಂದ ಬರ್ಬರ ಕೃತ್ಯ, ಬಾಲಕಿ ಮೇಲೆ ಅತ್ಯಾಚಾರ, ಅಬಾರ್ಷನ್‌

pocso case police

ಯಾದಗಿರಿ: ರಾಜ್ಯದಲ್ಲಿ ಮತ್ತೊಂದು ಬರ್ಬರ ಕೃತ್ಯ ಬೆಳಕಿಗೆ ಬಂದಿದೆ. ರಕ್ಷಿಸಬೇಕಾದ ಆರಕ್ಷಕನೇ ಇದರಲ್ಲಿ ಅಮಾನುಷವಾಗಿ ವರ್ತಿಸಿದ್ದಾನೆ. ಅಪ್ರಾಪ್ತ ಬಾಲಕಿ ಮೇಲೆ (POCSO Case) ಪೊಲೀಸ್ ಕಾನ್ಸ್ ಟೇಬಲ್ (Police Constable) ಅತ್ಯಾಚಾರ (Physical Abuse) ಎಸಗಿ, ಆಕೆ ಗರ್ಭಿಣಿಯಾಗುತ್ತಿದ್ದಂತೆ ಟ್ಯಾಬ್ಲೆಟ್ ಕೊಟ್ಟು ಅಬಾರ್ಷನ್ (Abortion) ಮಾಡಿಸಿರುವ ಘಟನೆ ನಡೆದಿದೆ. ಇದೀಗ ಆತನ ಮೇಲೆ ದೂರು ದಾಖಲಾಗಿದೆ.

ಯಾದಗಿರಿ ಜಿಲ್ಲೆಯ ಸೈದಾಪುರ ಠಾಣೆಯ ಕಾನ್ಸ್‌ಟೇಬಲ್ ಬಲರಾಮನ ವಿರುದ್ಧ ಈ ಗಂಭೀರ ಆರೋಪ ಕೇಳಿಬಂದಿದೆ. ಈತ ಪ್ರೀತಿಯ ನಾಟಕವಾಡಿ 16 ವರ್ಷದ ಅಪ್ರಾಪ್ತೆಯ ಮೇಲೆ 2 ವರ್ಷ ಅತ್ಯಾಚಾರವೆಸಗಿದ್ದ. ಬಾಲಕಿ ಗರ್ಭಿಣಿಯಾಗುತ್ತಿದ್ದಂತೆ ಟ್ಯಾಬ್ಲೆಟ್ ಕೊಟ್ಟು ಅಬಾರ್ಷನ್ ಮಾಡಿಸಿದ್ದ ಎಂದು ಬಾಲಕಿ ಕುಟುಂಬಸ್ಥರು ಆರೋಪಿಸಿದ್ದಾರೆ.

18 ವರ್ಷ ತುಂಬುತ್ತಿದ್ದಂತೆ 2024ರಲ್ಲಿ ಈಕೆಯನ್ನು ರಿಜಿಸ್ಟರ್ ಮ್ಯಾರೇಜ್ ಆಗಿದ್ದ. ಆದರೆ ಆಕೆಯನ್ನು ಮನೆಗೆ ಸೇರಿಸಿಕೊಳ್ಳಲು ಕಾನ್ಸ್ ಟೇಬಲ್ ಕುಟುಂಬದವರು ನಿರಾಕರಿಸಿದ್ದಾರೆ. ಮನನೊಂದ ಬಾಲಕಿಯ ಕುಟುಂಬದವರು ನ್ಯಾಯಕ್ಕಾಗಿ ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾರೆ. ಕಾನ್ಸ್ ಟೇಬಲ್ ಬಲರಾಮನ ವಿರುದ್ಧ ದೂರು ನೀಡಿದ್ದಾರೆ.