ಯುಗಾದಿ ಹಬ್ಬ ಐಪಿಎಲ್​ ಸುನಿತಾ ವಿಲಿಯಮ್ಸ್​ ಫ್ಯಾಷನ್​ ವಿದೇಶ ಧಾರ್ಮಿಕ ಕ್ರೈಂ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

MLC Rajendra Rajanna: ಎಂಎಲ್‌ಸಿ ರಾಜೇಂದ್ರ ಕೊಲೆಗೆ ಸಂಚು; ಐವರ ವಿರುದ್ಧ ಎಫ್‌ಐಆ‌ರ್ ದಾಖಲು

2024 ನವೆಂಬರ್ ತಿಂಗಳಿನಲ್ಲಿ ನನ್ನ ಕೊಲೆಗೆ ಸುಪಾರಿ ನೀಡಲಾಗಿತ್ತು. 5 ಲಕ್ಷಕ್ಕೆ ಸುಪಾರಿ ಪಡೆದು ಕೊಲೆಗೆ ದುಷ್ಕರ್ಮಿಗಳು ಯತ್ನಿಸಿದ್ದರು. ಈ ಬಗ್ಗೆ ತನಿಖೆ ನಡೆಸಬೇಕು ಎಂದು ಎಂಎಲ್‌ಸಿ ರಾಜೇಂದ್ರ ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಾಗಿದೆ.

ಎಂಎಲ್‌ಸಿ ರಾಜೇಂದ್ರ ಕೊಲೆಗೆ ಸಂಚು; ಐವರ ವಿರುದ್ಧ ಎಫ್‌ಐಆ‌ರ್

Profile Prabhakara R Mar 28, 2025 10:04 PM

ತುಮಕೂರು: ಸಹಕಾರ ಸಚಿವ ಕೆ.ಎನ್. ರಾಜಣ್ಣ ಅವರ ಪುತ್ರ, ಎಂಎಲ್‌ಸಿ ರಾಜೇಂದ್ರ ರಾಜಣ್ಣ (MLC Rajendra Rajanna) ಕೊಲೆಗೆ ಸಂಚು ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಕ್ಯಾತ್ಸಂದ್ರ ಪೊಲೀಸ್ ಠಾಣೆಯಲ್ಲಿ ಐವರ ವಿರುದ್ಧ ಎಫ್‌ಐಆ‌ರ್ ದಾಖಲಾಗಿದೆ. ಸೋಮ, ಭರತ್, ಅಮಿತ್, ಗುಂಡ, ಯತೀಶ್ ಎಂಬುವರ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. 2024 ನವೆಂಬರ್ ತಿಂಗಳಿನಲ್ಲಿ ನನ್ನ ಕೊಲೆಗೆ ಸುಪಾರಿ ನೀಡಲಾಗಿತ್ತು. 5 ಲಕ್ಷಕ್ಕೆ ಸುಪಾರಿ ಪಡೆದು ಕೊಲೆಗೆ ದುಷ್ಕರ್ಮಿಗಳು ಯತ್ನಿಸಿದ್ದರು ಎಂದು ಆರೋಪಿಸಿ ಎಂಎಲ್‌ಸಿ ರಾಜೇಂದ್ರ ಅವರು ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಾಗಿದೆ.

ಅನಾಮಧೇಯ ಮೂಲಗಳಿಂದ ಸಿಕ್ಕ ಆಡಿಯೊದಲ್ಲಿ ರಾಜೇಂದ್ರ ಕೊಲೆಗೆ ಸುಪಾರಿ ಬಗ್ಗೆ ಮಾತುಕತೆ ನಡೆದಿದೆ ಎಂಬ ಆರೋಪ ಕೇಳಿಬಂದಿದೆ. ಆರೋಪಿಗಳಾದ ಸೋಮ, ಭರತ್, ಅಮಿತ್, ಗುಂಡ ಹಾಗೂ ಯತೀಶ್ ಅವರು ವಿಧಾನಪರಿಷತ್‌ ಸದಸ್ಯ ರಾಜೇಂದ್ರ ಕೊಲೆಗೆ 70 ಲಕ್ಷಕ್ಕೆ ಡೀಲ್ ಕುದುರಿಸಿದ್ದು, 5 ಲಕ್ಷ ರೂಪಾಯಿ ಮುಂಗಡವಾಗಿ ಪಡೆದಿದ್ದರು ಎನ್ನಲಾಗಿದೆ.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗೆ ರಾಜೇಂದ್ರ ದೂರು

2024 ನವೆಂಬರ್ ತಿಂಗಳಿನಲ್ಲಿ ನನ್ನ ಕೊಲೆಗೆ ಸುಪಾರಿ ನೀಡಲಾಗಿತ್ತು. ನಾಲ್ಕು ತಿಂಗಳ ಹಿಂದೆ 5 ಲಕ್ಷಕ್ಕೆ ಸುಪಾರಿ ಪಡೆದು ಕೊಲೆಗೆ ದುಷ್ಕರ್ಮಿಗಳು ಯತ್ನಿಸಿದ್ದರು. ಈ ಬಗ್ಗೆ ತನಿಖೆ ನಡೆಸುವಂತೆ ರಾಜ್ಯ ಪೊಲೀಸ್ ಮಹಾನಿರ್ದೇಶಕರಿಗೆ ದೂರು ಸಲ್ಲಿಸಿದ್ದೇನೆ, ಘಟನೆ ತುಮಕೂರಿನಲ್ಲಿ ನಡೆದಿರುವುದರಿಂದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗೆ ದೂರು ನೀಡಿದ್ದೇನೆ ಎಂದು ಎಂಎಲ್‌ಸಿ ರಾಜೇಂದ್ರ ರಾಜಣ್ಣ (MLC Rajendra Rajanna) ತಿಳಿಸಿದ್ದಾರೆ.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗೆ ದೂರು ಸಲ್ಲಿಸಿದ ಬಳಿಕ ಮಾತನಾಡಿರುವ ಅವರು, ತಮ್ಮ ಮೇಲೆ ಕೊಲೆಯತ್ನ ನಡೆದಿದ್ದು, ಸೂಕ್ತ ಕ್ರಮ ಕೈಗೊಳ್ಳುವಂತೆ ಎಸ್‌ಪಿ ಅಶೋಕ್ ಅವರಿಗೆ ದೂರು ನೀಡಿದ್ದೇನೆ ಎಂದು ತಿಳಿಸಿದ್ದಾರೆ.

ನನ್ನ ಮೇಲೆ ಹನಿಟ್ರ್ಯಾಪ್ ನಡೆದಿಲ್ಲ. ಆದರೆ ಕೊಲೆಗೆ ಯತ್ನ ನಡೆದಿದೆ. ಕಳೆದ ನವೆಂಬರ್‌ 16 ರಂದು ಕ್ಯಾತ್ಸಂದ್ರದ ರಜತಾದ್ರಿ ಮನೆಯಲ್ಲಿ ನನ್ನ ಮಗಳ ಹುಟ್ಟುಹಬ್ಬ ಇತ್ತು. ಆ ಕಾರ್ಯಕ್ರಮದ ಹಿಂದಿನ ನ.15 ರಂದು ನಮ್ಮ ಮನೆಗೆ ಶಾಮಿಯಾನ ಹಾಕುವ ನೆಪದಲ್ಲಿ ಬಂದು ನನ್ನ ಕೊಲೆಗೆ ದುಷ್ಕರ್ಮಿಗಳು ಯತ್ನಿಸಿದ್ದರು. ಈ ಕೊಲೆ ಯತ್ನದ ಸಂಗತಿ ನನಗೆ ಜನವರಿಯಲ್ಲಿ ಗೊತ್ತಾಯಿತು. ಆಗ ನನಗೆ ಬಾತ್ಮಿದಾರರ ಮೂಲಕ ಒಂದು ವಾಯ್ಸ್‌ ರೆಕಾರ್ಡ್‌ ಸಿಕ್ಕಿತು. ಆ ಆಡಿಯೊದಲ್ಲಿ ತುಮಕೂರಿನ ಮೂವರ ಹೆಸರುಗಳು ಉಲ್ಲೇಖವಾಗಿವೆ ಎಂದು ಹೇಳಿದರು.

ಈ ಸುದ್ದಿಯನ್ನೂ ಓದಿ | KN Rajanna: ಬ್ಲೂ ಜೀನ್ಸ್ ಹುಡುಗಿ ಹನಿ ಟ್ರ್ಯಾಪ್ ಮಾಡಲು ಬಂದಿದ್ದಳು: ಸಚಿವ ಕೆ.ಎನ್‌.ರಾಜಣ್ಣ

ಮೂವರ ಪೈಕಿ ಒಬ್ಬಾತನ ಖಾತೆಗೆ 5 ಲಕ್ಷ ಹಣ ವರ್ಗಾವಣೆಯಾಗಿದೆ. ನನ್ನ ಹತ್ಯೆಗೆ ನೀಡಿದ ಹಣ ಇದಾಗಿದೆ. ಈ ಕೊಲೆ ಯತ್ನದ ಬಗ್ಗೆ ಗೃಹ ಸಚಿವರು ಹಾಗೂ ಮುಖ್ಯಮಂತ್ರಿಗಳಿಗೆ ತಿಳಿಸಿದಾಗ ಮುಖ್ಯಮಂತ್ರಿಗಳು ಸೂಕ್ತ ದಾಖಲೆಗಳೊಂದಿಗೆ ಡಿಜಿಪಿಗೆ ದೂರು ಸಲ್ಲಿಸುವಂತೆ ಸೂಚಿಸಿದ್ದರು. ಅಂತೆಯೇ ಡಿಜಿಪಿ ಅವರನ್ನು ಭೇಟಿಯಾಗಿ ದೂರು ನೀಡಿದೆ. ಆದರೆ ತುಮಕೂರಿನಲ್ಲಿ ಕೃತ್ಯ ನಡೆದಿರುವುದರಿಂದ ಎಸ್ಪಿಯವರಿಗೆ ದೂರು ಕೊಡುವಂತೆ ಡಿಜಿಪಿ ಸೂಚಿಸಿದ್ದರು. ಹಾಗಾಗಿ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ದೂರು ಸಲ್ಲಿಸಿದ್ದೇನೆ ಎಂದರು.