ವಕ್ಫ್​ ತಿದ್ದುಪಡಿ ಮಸೂದೆ ಐಪಿಎಲ್​ ಸುನಿತಾ ವಿಲಿಯಮ್ಸ್​ ಫ್ಯಾಷನ್​ ವಿದೇಶ ಧಾರ್ಮಿಕ ಕ್ರೈಂ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Toilet cleaning: ಶಾಲೆಗಳಲ್ಲಿ ಮಕ್ಕಳಿಂದ ಶೌಚಗೃಹ ಸ್ವಚ್ಛ ಮಾಡಿಸಿದ್ರೆ ಬೀಳುತ್ತೆ ಎಫ್‌ಐಆರ್‌; ಶಿಕ್ಷಣ ಇಲಾಖೆ ಎಚ್ಚರಿಕೆ

Toilet cleaning: ಬೆಂಗಳೂರಿನ ಯಲಹಂಕ ಸರ್ಕಾರಿ ಪ್ರೌಢಶಾಲೆಯಲ್ಲಿ ಮಕ್ಕಳಿಂದ ಶೌಚಗೃಹ ಸ್ವಚ್ಛ ಮಾಡಿಸಿದ ಆರೋಪ ಕೇಳಿಬಂದ ಬೆನ್ನಲ್ಲೇ ಶಿಕ್ಷಣ ಇಲಾಖೆ ಮಹತ್ವದ ಸುತ್ತೋಲೆ ಹೊರಡಿಸಿದೆ. ಇಂತಹ ಘಟನೆಗಳು ಮರುಕಳಿಸಿದಲ್ಲಿ ಶಿಕ್ಷಕರ ವಿರುದ್ಧ ಎಫ್‌ಐಆರ್‌ ದಾಖಲಿಸುವುದಾಗಿ ಶಿಕ್ಷಣ ಇಲಾಖೆ ಎಚ್ಚರಿಕೆ ನೀಡಿದೆ.

ಶಾಲೆಗಳಲ್ಲಿ ಮಕ್ಕಳಿಂದ ಶೌಚಗೃಹ ಸ್ವಚ್ಛ ಮಾಡಿಸಿದ್ರೆ ಬೀಳುತ್ತೆ ಎಫ್‌ಐಆರ್‌!

Profile Prabhakara R Apr 7, 2025 1:53 PM

ಬೆಂಗಳೂರು: ಶಾಲೆಗಳಲ್ಲಿ ಮಕ್ಕಳಿಂದ ಶೌಚಾಲಯ ಸ್ವಚ್ಛ ಮಾಡಿಸುವ ಪ್ರಕರಣಗಳನ್ನು ರಾಜ್ಯ ಸರ್ಕಾರ ಗಂಭೀರವಾಗಿ ಪರಿಗಣಿಸಿದೆ. ಬೆಂಗಳೂರಿನ ಯಲಹಂಕ ಸರ್ಕಾರಿ ಪ್ರೌಢಶಾಲೆಯಲ್ಲಿ ಮಕ್ಕಳಿಂದ ಶೌಚಗೃಹ ಸ್ವಚ್ಛ ಮಾಡಿಸಿದ ಆರೋಪ ಕೇಳಿಬಂದ ಬೆನ್ನಲ್ಲೇ ಶಿಕ್ಷಣ ಇಲಾಖೆ ಮಹತ್ವದ ಸುತ್ತೋಲೆ ಹೊರಡಿಸಿದೆ. ಶೌಚಗೃಹ ಸ್ವಚ್ಛಗೊಳಿಸುವಂತಹ (Toilet cleaning) ಘಟನೆಗಳು ಮರುಕಳಿಸಿದಲ್ಲಿ ಶಿಕ್ಷಕರ ವಿರುದ್ಧ ಎಫ್‌ಐಆರ್‌ ದಾಖಲಿಸಿ, ಕಠಿಣ ಕ್ರಮ ಜರುಗಿಸುವ ಎಚ್ಚರಿಕೆಯನ್ನು ಇಲಾಖೆ ನೀಡಿದೆ.

ಈ ಬಗ್ಗೆ ಶಾಲಾ ಶಿಕ್ಷಣ ಇಲಾಖೆ ಸುತ್ತೋಲೆ ಹೊರಡಿಸಿದ್ದು, ರಾಜ್ಯದ ಎಲ್ಲಾ ಸರ್ಕಾರಿ ಶಾಲೆಗಳಲ್ಲಿ ವಿದ್ಯಾರ್ಥಿಗಳಿಂದ ಶೌಚಾಲಯಗಳ ಸ್ವಚ್ಛತೆಯನ್ನು ಮಾಡಿಸಬಾರದೆಂದು ಈ ಹಿಂದೆ ಸಂಬಂಧಿಸಿದ ಶಾಲಾ ಶಿಕ್ಷಣ ಇಲಾಖಾಧಿಕಾರಿಗಳು ಮತ್ತು ಸರ್ಕಾರಿ ಪ್ರಾಥಮಿಕ, ಪ್ರೌಢಶಾಲಾ ಮುಖ್ಯ ಶಿಕ್ಷಕರಿಗೆ ಈಗಾಗಲೇ ತಿಳಿಸಲಾಗಿದ್ದರೂ ವಿದ್ಯಾರ್ಥಿಗಳಿಂದ ಶೌಚಾಲಯಗಳ ಸ್ವಚ್ಛತೆಯಲ್ಲಿ ತೊಡಗಿಸಿಕೊಳ್ಳುತ್ತಿರುವ ಬಗ್ಗೆ ಇತ್ತೀಚೆಗೆ ಕೆಲವು ಪ್ರಕರಣಗಳು ಬೆಳಕಿಗೆ ಬಂದಿರುವುದನ್ನು ಇಲಾಖೆಯು ಗಮನಿಸಿದೆ.

ಸರ್ಕಾರದಿಂದ ಮತ್ತು ಇಲಾಖೆಯಿಂದ ಕಾಲ ಕಾಲಕ್ಕೆ ಹೊರಡಿಸಲಾಗುವ ಸೂಚನೆಗಳನ್ನು ಮತ್ತು ನಿರ್ದೇಶನಗಳನ್ನು ಚಾಚೂ ತಪ್ಪದೆ ಪಾಲಿಸುವಂತೆ ಸೂಚನೆಗಳನ್ನು ನೀಡಲಾಗುತ್ತಿದ್ದರೂ ಸೂಚನೆಗಳನ್ನು ಉಲ್ಲಂಘಿಸುತ್ತಿರುವುದು ಗಂಭೀರವಾಗಿ ಪರಿಗಣಿಸಲಾಗಿದೆ.

ಈ ಹಿನ್ನೆಲೆಯಲ್ಲಿ ಮತ್ತೆ ಇಂತಹ ಘಟನೆಗಳು ಮರುಕಳಿಸಿದಲ್ಲಿ ಅಂತವರ ವಿರುದ್ಧ ಇಲಾಖಾ ವತಿಯಿಂದ ನಿಯಮಾನುಸಾರ ಕಠಿಣ ಶಿಸ್ತು ಕ್ರಮಗಳನ್ನು ಜರುಗಿಸಲಾಗುವುದು. ಅಲ್ಲದೆ ಎಫ್‌ಐಆರ್‌ ದಾಖಲಿಸಲಾಗುವುದು ಮತ್ತು ಸಂಬಂಧಿಸಿದ ಶಾಲಾ ಶಿಕ್ಷಣ ಇಲಾಖಾಧಿಕಾರಿಗಳು ಮತ್ತು ಸರ್ಕಾರಿ ಪ್ರಾಥಮಿಕ/ಪ್ರೌಢ ಶಾಲಾ ಮುಖ್ಯ ಶಿಕ್ಷಕರನ್ನೇ ನೇರ ಹೊಣೆಗಾರರನ್ನಾಗಿ ಮಾಡಿ ಶಿಸ್ತು ಕ್ರಮಕ್ಕೆ ಶಿಫಾರಸು ಮಾಡಲಾಗುವುದು. ಇನ್ನು ಶೌಚಾಲಯ ಸ್ವಚ್ಛತೆಯನ್ನು ನಿರ್ವಹಿಸುವ ಕುರಿತು ತಿಳಿಸಿರುವ ಅಂಶಗಳನ್ನು ಕಡ್ಡಾಯವಾಗಿ ಪಾಲಿಸುವಂತೆ ಮತ್ತೊಮ್ಮೆ ಎಚ್ಚರಿಸಲಾಗಿದೆ ಎಂದು ಸುತ್ತೋಲೆಯಲ್ಲಿ ತಿಳಿಸಲಾಗಿದೆ.

ಈ ಸುದ್ದಿಯನ್ನೂ ಓದಿ | Health Tips: ಪ್ರತಿದಿನ ವಾಕಿಂಗ್ ಮಾಡಿದ್ರೆ ಹೃದಯಾಘಾತದ ಅಪಾಯ ಕಡಿಮೆ

ಶಿಕ್ಷಕಿ ಎಡವಟ್ಟು; ಮಾಡದ ತಪ್ಪಿಗೆ ಕಣ್ಣು ಕಳೆದುಕೊಂಡ ಬಾಲಕ

Yeshwanth

ಚಿಕ್ಕಬಳ್ಳಾಪುರ: ಶಿಕ್ಷಕಯೊಬ್ಬರ ಎಡವಟ್ಟಿಗೆ ಒಂದನೇ ತರಗತಿ ವಿದ್ಯಾರ್ಥಿಯೊಬ್ಬ ಕಣ್ಣು ಕಳೆದುಕೊಂಡಿರುವ ಘಟನೆ (Eyesight loss) ಚಿಂತಾಮಣಿ ತಾಲೂಕಿನ ಯಗವಕೋಟೆ ಗ್ರಾಮದ ಸರ್ಕಾರಿ ಮಾದರಿ ಹಿರಿಯ ಪ್ರಾರ್ಥಮಿಕ ಶಾಲೆಯಲ್ಲಿ ನಡೆದಿದೆ. ಶಾಲೆಯ ಶಿಕ್ಷಕಿ ಕೋಲಿನಿಂದ ಹೊಡೆದಿದ್ದರಿಂದಲೇ ತಮ್ಮ ಮಗನ ಕಣ್ಣಿಗೆ ಹಾನಿಯಾಗಿದೆ. ಹೀಗಾಗಿ ಶಿಕ್ಷಕಿ ವಿರುದ್ಧ ಕ್ರಮ ಕೈಗೊಂಡು, ತಮಗೆ ನ್ಯಾಯ ಕೊಡಿಸಬೇಕು ಎಂದು ಬಾಲಕನ ಪೋಷಕರು ಆಗ್ರಹಿಸಿದ್ದಾರೆ. ಕಣ್ಣು ಕಳೆದುಕೊಂಡ ಬಾಲಕನ ತಂದೆ-ತಾಯಿ ನ್ಯಾಯಕ್ಕಾಗಿ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಮುಂದೆ ಧರಣಿ ನಡೆಸಿದ್ದಾರೆ.

ಯಗವಕೋಟೆ ಸರ್ಕಾರಿ ಮಾದರಿ ಹಿರಿಯ ಪ್ರಾರ್ಥಮಿಕ ಶಾಲೆಯಲ್ಲಿ ನಟರಾಜ್ - ಅಂಜಲಿ ದಂಪತಿ ಪುತ್ರನಾದ ಯಶ್ವಂತ್ (8) ಒಂದನೇ ತರಗತಿಯಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದ. ಶಿಕ್ಷಕಿ ಸರಸ್ವತಿ ಕೋಲಿನಿಂದ ಬೇರೆ ಬಾಲಕನಿಗೆ ಹೊಡೆಯಲು ಹೋದಾಗ ಯಶ್ವಂತ್ ಕಣ್ಣಿಗೆ ಪೆಟ್ಟು ಬಿದ್ದಿದೆ. ಇದರಿಂದ ಬಲಗಣ್ಣಿಗೆ ಹಾನಿಯಾಗಿದೆ ಎಂಬ ಆರೋಪ ಕೇಳಿಬಂದಿದೆ.

ಈ ಸುದ್ದಿಯನ್ನೂ ಓದಿ | Viral news: ಕೆಲಸ ಸಿಗದೆ ತನಗೆ ತಾನೇ ಶ್ರದ್ಧಾಂಜಲಿ ಪೋಸ್ಟ್‌ ಮಾಡಿದ ಬೆಂಗಳೂರು ಯುವಕ!

ಪೋಷಕರು ಬಾಲಕನಿಗೆ ಕಣ್ಣಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿದ್ದರು. ಆದರೆ, ವೈದ್ಯರು ಬಾಲಕನ ಕಣ್ಣು ಕಾಣುವುದಿಲ್ಲ ಎಂದು ದೃಢಕರಿಸಿದ್ದರಿಂದ ಪೋಷಕರು ಶಿಕ್ಷಕಿಯ ವಿರುದ್ಧ ಪೊಲೀಸ್‌ ಠಾಣೆಗೆ, ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ದೂರು ನೀಡಿದ್ದರು. ಆದರೆ ಯಾವುದೇ ರೀತಿಯ ಕ್ರಮ ಜರುಗಿಸದ ಕಾರಣಕ್ಕೆ ನ್ಯಾಯಕ್ಕಾಗಿ ಬಾಲಕ ಹಾಗೂ ಅವರ ತಂದೆ-ತಾಯಿ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಮುಂಭಾಗ ಧರಣಿ ನಡೆಸಿದ್ದಾರೆ. ಶಿಕ್ಷಕಿಯ ಮೇಲೆ ಕ್ರಮ ಜರುಗಿಸುವವರೆಗೂ ಕಾನೂನು ಹೋರಾಟ ಮಾಡುವುದಾಗಿ ಅವರು ತಿಳಿಸಿದ್ದಾರೆ.