ಫೋಟೋ ಗ್ಯಾಲರಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Fire Accident: ಚಲಿಸುತ್ತಿದ್ದ ರೈಲಿನಲ್ಲಿ ಬೆಂಕಿ, ಬೆಂಗಳೂರಿನಲ್ಲಿ ತಪ್ಪಿದ ಭಾರಿ ಅನಾಹುತ

Fire Accident: ಬೆಂಗಳೂರು ದಕ್ಷಿಣ ಜಿಲ್ಲೆಯ ಚನ್ನಪಟ್ಟಣ ತಾಲೂಕಿನ ವಂದಾರಗುಪ್ಪೆ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಉದಯಪುರ ಎಕ್ಸ್‌ಪ್ರೆಸ್ ರೈಲಿನ ಇಂಜಿನ್‌ನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದೆ. ಮೈಸೂರಿನಿಂದ ಬೆಂಗಳೂರಿಗೆ ಈ ಎಕ್ಸ್‌ಪ್ರೆಸ್ ರೈಲು ತೆರಳುತ್ತಿತ್ತು. ಸದ್ಯ ಭಾರಿ ಅನಾಹುತ ತಪ್ಪಿದೆ.‌

ಚಲಿಸುತ್ತಿದ್ದ ರೈಲಿನಲ್ಲಿ ಬೆಂಕಿ, ಬೆಂಗಳೂರಿನಲ್ಲಿ ತಪ್ಪಿದ ಭಾರಿ ಅನಾಹುತ

ಸಾಂದರ್ಭಿಕ ಚಿತ್ರ

ಹರೀಶ್‌ ಕೇರ ಹರೀಶ್‌ ಕೇರ Jul 3, 2025 1:02 PM

ಬೆಂಗಳೂರು : ಬೆಂಗಳೂರಿನಲ್ಲಿ (Bengaluru) ಮತ್ತೊಂದು ಅಗ್ನಿ ದುರಂತ (Fire Accident) ಸಂಭವಿಸಿದ್ದು ಮೈಸೂರಿನಿಂದ ಬೆಂಗಳೂರಿಗೆ ಚಲಿಸುತ್ತಿದ್ದ ಉದಯಪುರ ಎಕ್ಸ್ಪ್ರೆಸ್ ರೈಲಿನ (Train) ಇಂಜಿನ್‌ನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದೆ. ತಕ್ಷಣ ಎಚ್ಚೆತ್ತುಕೊಂಡ ಸಿಬ್ಬಂದಿಗಳು ರೈಲನ್ನು ನಿಲ್ಲಿಸಿ ಬೆಂಕಿ ನಂದಿಸಿರುವ ಘಟನೆ ಬೆಂಗಳೂರಿನ ದಕ್ಷಿಣ ಜಿಲ್ಲೆಯ ಚನ್ನಪಟ್ಟಣ ತಾಲೂಕಿನಲ್ಲಿ ನಡೆದಿದೆ.

ಚಲಿಸುತ್ತಿದ್ದ ರೈಲಿನ ಇಂಜಿನ್‌ನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದೆ. ವಂದಾರಗುಪ್ಪೆ ಬಳಿ ರೈಲು ನಿಲ್ಲಿಸಿ ಸಿಬ್ಬಂದಿಗಳು ಕೂಡಲೇ ಬೆಂಕಿ ನಂದಿಸಿದ್ದಾರೆ. ಬೆಂಗಳೂರು ದಕ್ಷಿಣ ಜಿಲ್ಲೆಯ ಚನ್ನಪಟ್ಟಣ ತಾಲೂಕಿನ ವಂದಾರಗುಪ್ಪೆ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಉದಯಪುರ ಎಕ್ಸ್‌ಪ್ರೆಸ್ ರೈಲಿನ ಇಂಜಿನ್‌ನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದೆ. ಮೈಸೂರಿನಿಂದ ಬೆಂಗಳೂರಿಗೆ ಈ ಎಕ್ಸ್‌ಪ್ರೆಸ್ ರೈಲು ತೆರಳುತ್ತಿತ್ತು. ಸದ್ಯ ಭಾರಿ ಅನಾಹುತ ತಪ್ಪಿದೆ.‌

ಘಟನೆಯ ಕಾರಣ ತನಿಖೆಗೆ ರೈಲ್ವೆ ಪೊಲೀಸರು ಮುಂದಾಗಿದ್ದಾರೆ. ಇದು ಆಕಸ್ಮಿಕವೇ ಅಥವಾ ಉದ್ದೇಶಪೂರ್ವಕ ಕೃತ್ಯವೇ ಎಂದು ತನಿಖೆಯಿಂದ ತಿಳಿದುಬರಬೇಕಿದೆ.

ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಬೆಂಕಿ ಆಕಸ್ಮಿಕ, ರೋಗಿಗಳು ಪಾರು

ಬೆಂಗಳೂರು: ರಾಜಧಾನಿಯ (Bengaluru) ವಿಕ್ಟೋರಿಯಾ ಆಸ್ಪತ್ರೆಯಲ್ಲಿ (Victoria Hospital) ಅಗ್ನಿ ಅವಘಡ (Fire accident) ಸಂಭವಿಸಿದ್ದು, ಒಟ್ಟು 26 ರೋಗಿಗಳು ಇದ್ದ ವಾರ್ಡ್​​ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಬೆಂಕಿ ಹಾಗೂ ಹೊಗೆ ಕಾಣಿಸಿಕೊಳ್ಳುತ್ತಿದ್ದಂತೆ ಎಚ್ಚೆತ್ತ ವೈದ್ಯರು ಹಾಗೂ ಸಿಬ್ಬಂದಿ ದಿಢೀರ್ ಕಾರ್ಯಾಚರಣೆ ನಡೆಸಿ ಎಲ್ಲಾ ರೋಗಿಗಳನ್ನು ಬೇರೆ ಬ್ಲಾಕ್​ಗೆ ಶಿಫ್ಟ್ ಮಾಡಿದ್ದಾರೆ. ಅಗ್ನಿ ಅವಘಡದಿಂದ ಅದೃಷ್ಟವಶಾತ್ ಯಾವುದೇ ಸಾವು-ನೋವು ಸಂಭವಿಸಿಲ್ಲ ಎಂದು ವರದಿ ಆಗಿದೆ.

ವಿಕ್ಟೋರಿಯಾ ಆಸ್ಪತ್ರೆಯ ಸ್ವಿಚ್ ಬೋರ್ಡ್​​ನಲ್ಲಿ ಶಾರ್ಟ್ ಸರ್ಕ್ಯೂಟ್​​ನಿಂದ ಬೆಂಕಿ ಕಾಣಿಸಿಕೊಂಡಿದೆ ಎನ್ನಲಾಗುತ್ತಿದೆ. ಬರ್ನ್ ವಾರ್ಡ್​​ನ ಸೆಮಿನಾರ್ ಕೋಣೆಯಲ್ಲಿ ಬೆಂಕಿ ಹತ್ತಿಕೊಂಡಿತ್ತು. ಈ ವಾರ್ಡ್​​​ನಲ್ಲಿ ಒಟ್ಟು 26 ರೋಗಿಗಳಿದ್ದರು. 14 ಪುರುಷರು, 5 ಮಹಿಳೆಯರು, 7 ಮಕ್ಕಳಿಗೆ ಪಕ್ಕದ ವಾರ್ಡ್​​ನಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಬರ್ನ್ಸ್ ವಾರ್ಡ್ ಮೊದಲ ಮಹಡಿಯಲ್ಲಿದ್ದ ಸೆಮಿನಾರ್ ಹಾಲ್​ನಲ್ಲಿ ಬೆಂಕಿ ಹೊತ್ತಿಕೊಂಡ ವೇಳೆ ಪಕ್ಕದಲ್ಲೇ ಐದು ಮಂದಿ ಐಸಿಯುನಲ್ಲಿದ್ದರು. ಬೆಂಕಿ ಮತ್ತು ಹೊಗೆ ಕಾಣಿಸಿಕೊಳ್ಳುತ್ತಿದ್ದಂತೆ ಎಚ್ಚೆತ್ತ ವೈದ್ಯರು ಕೂಡಲೇ ಎಲ್ಲಾ ರೋಗಿಗಳನ್ನು ಹೆಚ್ ಬ್ಲಾಕ್‌ಗೆ ಶಿಫ್ಟ್ ಮಾಡಿದ್ದಾರೆ. ಕೋಡ್ ರೆಡ್ ಹೆಸರಲ್ಲಿ ದಿಢೀರ್​ ರಕ್ಷಣಾ ಕಾರ್ಯ ನಡೆಸಲಾಗಿದೆ.

ಬರ್ನ್ಸ್ ವಾರ್ಡ್ ಅಧೀಕ್ಷಕರು, ವೈದ್ಯರು, ಸಿಬ್ಬಂದಿಗಳ ಸಮಯ ಪ್ರಜ್ಞೆಯಿಂದ ಭಾರೀ ಅನಾಹುತ ತಪ್ಪಿದೆ. ಶಾರ್ಟ್ ಸರ್ಕ್ಯೂಟ್‌ನಿಂದ ಹೊತ್ತಿಕೊಂಡಿದ್ದ ಬೆಂಕಿ ನಂದಿಸುವ ಕಾರ್ಯ ಕೂಡ ನಡೆದಿದೆ. ರೋಗಿಗಳನ್ನು ಬೇರೆ ಬ್ಲಾಕ್​ಗೆ ಶಿಫ್ಟ್ ಮಾಡಲಾಗಿದ್ದು, ಎಲ್ಲರೂ ಸುರಕ್ಷಿತವಾಗಿದ್ದಾರೆ ಎಂದು ತಿಳಿದು ಬಂದಿದೆ.

ಇದನ್ನೂ ಓದಿ: Sanitary pads: ಆರೋಗ್ಯ ಇಲಾಖೆ ನಿರ್ಲಕ್ಷ್ಯ; ಹೆಣ್ಣು ಮಕ್ಕಳಿಗೆ ಸೇರಬೇಕಾದ 1 ಲಕ್ಷಕ್ಕೂ ಅಧಿಕ ಶುಚಿ ಸ್ಯಾನಿಟರಿ ಪ್ಯಾಡ್‌ಗಳಿಗೆ ಬೆಂಕಿ!