Karnataka Budget 2025: ಮೀನುಗಾರರ ಆರ್ಥಿಕ ಅಭಿವೃದ್ಧಿಗೆ ಮೀನುಗಾರಿಕಾ ನೀತಿ ಘೋಷಣೆ
ಮುಖ್ಯಮಂತ್ರಿ ಸಿದ್ದರಾಮಯ್ಯ 16ನೇ ಬಜೆಟ್ ಮಂಡಿಸುತ್ತಿದ್ದು, ಇದರಲ್ಲಿ ಮೀನುಗಾರಿಕೆ ವಿವಿಧ ಕೊಡುಗೆ ಪ್ರಕಟಿಸಿದ್ದಾರೆ. ರಾಜ್ಯದ ಮತ್ಸ್ಯ ಸಂಪತ್ತಿನ ರಕ್ಷಣೆಯೊಂದಿಗೆ ಸುಸ್ಥಿರ ಮೀನುಗಾರಿಕೆ ಹಾಗೂ ಮೀನುಗಾರರ ಆರ್ಥಿಕ ಅಭಿವೃದ್ಧಿಗೆ ಉತ್ತೇಜನ ನೀಡಲು ಮೀನುಗಾರಿಕಾ ನೀತಿಯನ್ನು ರೂಪಿಸಲಾಗುವುದು ಎಂದು ತಿಳಿಸಿದ್ದಾರೆ.

ಸಾಂದರ್ಭಿಕ ಚಿತ್ರ.

ಬೆಂಗಳೂರು: ರಾಜ್ಯದ ಮತ್ಸ್ಯ ಸಂಪತ್ತಿನ ರಕ್ಷಣೆಯೊಂದಿಗೆ ಸುಸ್ಥಿರ ಮೀನುಗಾರಿಕೆ ಹಾಗೂ ಮೀನುಗಾರರ ಆರ್ಥಿಕ ಅಭಿವೃದ್ಧಿಗೆ ಉತ್ತೇಜನ ನೀಡಲು ಮೀನುಗಾರಿಕಾ ನೀತಿಯನ್ನು ರೂಪಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಘೋಷಿಸಿದ್ದಾರೆ. ಶುಕ್ರವಾರ (ಮಾ. 7) ರಾಜ್ಯ ಬಜೆಟ್ ಮಂಡಿಸಿದ ಅವರು (Karnataka Budget 2025) ಮೀನುಗಾರಿಕಾ ಕ್ಷೇತ್ರಕ್ಕೆ ವಿವಿಧ ಕೊಡುಗೆ ಘೋಷಿಸಿದ್ದಾರೆ. ಜತೆಗೆ ಮಂಗಳೂರಿನಲ್ಲಿರುವ ಮೀನುಗಾರಿಕೆ ಕಾಲೇಜಿಗೆ ಪ್ರಸ್ತುತ ನಿಗದಿಪಡಿಸಿರುವ ವಿದ್ಯಾರ್ಥಿಗಳ ಸಂಖ್ಯಾಬಲವನ್ನು ದ್ವಿಗುಣಗೊಳಿಸಲಾಗುವುದು ಎಂದು ತಿಳಿಸಿದ್ದಾರೆ. ಮೀನುಗಾರರಿಗೆ ಯಾವೆಲ್ಲ ಯೋಜನೆಗಳು ಜಾರಿಗೊಳಿಸಲಾಗುವುದು ಎನ್ನುವ ವಿಚರ ಇಲ್ಲಿದೆ.
- ಮಂಗಳೂರಿನಲ್ಲಿರುವ ಮೀನುಗಾರಿಕೆ ಕಾಲೇಜಿಗೆ ಪ್ರಸ್ತುತ ನಿಗದಿಪಡಿಸಿರುವ ವಿದ್ಯಾರ್ಥಿಗಳ ಸಂಖ್ಯಾಬಲವನ್ನು ದ್ವಿಗುಣಗೊಳಿಸಲಾಗುವುದು.
- ಕರಾವಳಿ ಜಿಲ್ಲೆಗಳಲ್ಲಿನ ಮೀನುಗಾರಿಕೆ ಕೊಂಡಿ ರಸ್ತೆಗಳನ್ನು ನಬಾರ್ಡ್ ಸಹಯೋಗದೊಂದಿಗೆ ಅಭಿವೃದ್ಧಿಪಡಿಸಲು 30 ಕೋಟಿ ರೂ. ಒದಗಿಸಲಾಗುವುದು.
- ಪರಿಶಿಷ್ಟ ಜಾತಿ /ಪರಿಶಿಷ್ಟ ಪಂಗಡದ ಆಯ್ದ ಮೀನು ಮಾರಾಟಗಾರರಿಗೆ ನಾಲ್ಕು ಚಕ್ರ ವಾಹನ ಖರೀದಿಸಲು ಶೇ.50ರಷ್ಟು ಅಥವಾ ಗರಿಷ್ಠ 3 ಲಕ್ಷ ರೂ. ಆರ್ಥಿಕ ನೆರವು ನೀಡಲಾಗುವುದು.
- ರಾಜ್ಯದಲ್ಲಿ ನೋಂದಣಿಯಾಗಿರುವ ಮೋಟರೀಕೃತ ದೋಣಿಗಳಲ್ಲಿ 15 ವರ್ಷ ಕಾಲಾವಧಿ ಮೀರಿರುವ ಹಳೆಯ ಇಂಜಿನ್‌ಗಳನ್ನು ಬದಲಾಯಿಸಿ, ಹೊಸ ಇಂಜಿನ್ ಖರೀದಿಸಲು ಶೇ.50 ರಷ್ಟು ಒಂದು ಲಕ್ಷ ರೂ. ಮಿತಿಗೊಳಪಟ್ಟು ಸಹಾಯಧನ ನೀಡಲಾಗುವುದು.
- ಪ್ರವಾಸಿಗರಿಗೆ ಶುಚಿ-ರುಚಿಯಾದ ಪೌಷ್ಟಿಕ ಮೀನು ಖಾದ್ಯಗಳನ್ನು ಒದಗಿಸಲು ಮೈಸೂರಿನಲ್ಲಿ ಹೈ-ಟೆಕ್ ಮತ್ಸ್ಯದರ್ಶಿನಿಯನ್ನು ಪ್ರಾರಂಭಿಸಲಾಗುವುದು.
- ಮಲ್ಪೆ ಮೀನುಗಾರಿಕಾ ಬಂದರಿನಲ್ಲಿ ವಾಹನ ದಟ್ಟಣೆಯನ್ನು ನಿರ್ವಹಿಸಲು “ಮಲ್ಟಿ-ಲೆವೆಲ್ ಪಾರ್ಕಿಂಗ್” ವ್ಯವಸ್ಥೆಯನ್ನು ಸಾರ್ವಜನಿಕ-ಖಾಸಗಿ ಸಹಭಾಗಿತ್ವದಲ್ಲಿ ನಿರ್ಮಿಸಲಾಗುವುದು.
- ಆಳ ಸಮುದ್ರ ಮೀನುಗಾರಿಕೆಯನ್ನು ಪ್ರೋತ್ಸಾಹಿಸಲು ಪ್ರಸ್ತುತ ಇರುವ ಮೀನುಗಾರಿಕೆ ದೋಣಿಗಳ ಉದ್ದದ ಮಿತಿಯನ್ನು ಸಡಿಲಿಸಲು ಕ್ರಮವಹಿಸಲಾಗುವುದು.
ಈ ಸುದ್ದಿಯನ್ನೂ ಓದಿ: Karnataka Budget 2025 : ನೀರಾವರಿ ಕ್ಷೇತ್ರಕ್ಕೆ ಈ ಬಾರಿ ಬಜೆಟ್‌ನಲ್ಲಿ ಏನ್ ಸಿಕ್ತು? ಇಲ್ಲಿದೆ ಡಿಟೇಲ್ಸ್
ಮೂಲಸೌಕರ್ಯ ಅಭಿವೃದ್ಧಿ, ಬಂದರು ಮತ್ತು ಒಳನಾಡು ಜಲಸಾರಿಗೆಗೆ ಸಿಕ್ಕಿದ್ದೇನು?
- ವಿಜಯಪುರ ವಿಮಾನ ನಿಲ್ದಾಣ 2025-26ರಲ್ಲಿ ಕಾರ್ಯಾರಂಭ.
- ರಾಯಚೂರು ವಿಮಾನ ನಿಲ್ದಾಣ ಕಾಮಗಾರಿಗಳಿಗೆ 53 ಕೋಟಿ ರೂ. ಅನುದಾನ ಬಿಡುಗಡೆ.
- ಕಾರವಾರ ನೌಕಾನೆಲೆಯ ವಿಮಾನ ನಿಲ್ದಾಣ ಭೂ ಸ್ವಾಧಿನ ಪ್ರಕ್ರಿಯೆ ಜಾರಿಯಲ್ಲಿದೆ
- ಮೈಸೂರು ವಿಮಾನ ನಿಲ್ದಾಣದ ಅಭಿವೃದ್ಧಿಗೆ 319 ಕೋಟಿ ರೂ. ಅನುದಾನ ಬಿಡುಗಡೆ.
- 2025-26ನೇ ಸಾಲಿನಲ್ಲಿ, ರೈಲ್ವೇ ಯೋಜನೆಗಳಿಗೆ 600 ಕೋಟಿ ರೂ. ಮೀಸಲು.
- ರೈಲ್ವೆ ಮೇಲ್ಸೇತುವೆ/ಕೆಳಸೇತುವೆ ನಿರ್ಮಾಣಕ್ಕೆ 50 ಕೋಟಿ ರೂ. ಅನುದಾನ.
- ಬೈಯಪ್ಪನಹಳ್ಳಿ-ಹೊಸೂರು ಹಾಗೂ ಯಶವಂತಪುರ-ಚನ್ನಸಂದ್ರ ದ್ವಿಪಥೀಕರಣಕ್ಕೆ 406 ಕೋಟಿ ರೂ. ಅನುದಾನ.
- ಬೆಂಗಳೂರು ಉಪನಗರ ರೈಲ್ವೆ ಯೋಜನೆ 15,767 ಕೋಟಿ ರೂ. ವೆಚ್ಚದಲ್ಲಿ ಅನುಷ್ಠಾನ.
- ಜಲಸಾರಿಗೆ ಅಭಿವೃದ್ಧಿಗೆ ಪೂರಕವಾಗಿ ಮಂಗಳೂರು, ಉತ್ತರ ಕನ್ನಡ ಜಿಲ್ಲೆಯಲ್ಲಿ ಬಂದರು ಅಭಿವೃದ್ದಿ ಮತ್ತು ಪ್ರವಾಸೋದ್ಯಮಕ್ಕೆ ಅನುಮೋದನೆ.
- ಕಡಲು ಕೊರೆತ ತಡೆಗಟ್ಟಲು ಶೋರ್‌ಲೈನ್ ಮ್ಯಾನೇಜ್‌ಮೆಂಟ್ ಪ್ಲಾನ್ ಪ್ರಕಾರ ಹಂತಹಂತವಾಗಿ ಕಾಮಗಾರಿ ಅನುಷ್ಠಾನ.
- ಮಂಗಳೂರಿನಲ್ಲಿ ಪಿಪಿಪಿ ಮಾದರಿಯಲ್ಲಿ ಜಲಸಾರಿಗೆ ಸಂಗ್ರಹಾಲಯ ಮತ್ತು ಅನುಭವ ಕೇಂದ್ರ ಸ್ಥಾಪನೆ.
- ದೇವನಹಳ್ಳಿಯಲ್ಲಿ 407 ಕೋಟಿ ರೂ. ವೆಚ್ಚದಲ್ಲಿ ಬೆಂಗಳೂರು ಸಿಗ್ನೇಚರ್ ಬಿಸಿನೆಸ್ ಪಾರ್ಕ್ ಅಭಿವೃದ್ಧಿ.