ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ

ಮಾಜಿ ಶಿಕ್ಷಣ ಸಚಿವ, ಹಿರಿಯ ಬಿಜೆಪಿ ನಾಯಕ ಬಿ.ಸಿ. ನಾಗೇಶ್ ನಿಧನ

BC Nagesh: ಬಿಜೆಪಿ ನಾಯಕ, ಮಾಜಿ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಅಸೌಖ್ಯದಿಂದ ಮಂಗಳವಾರ ಬೆಂಗಳೂರಿನಲ್ಲಿ ನಿಧನ ಹೊಂದಿದರು. ಅವರಿಗೆ 67 ವರ್ಷ ವಯಸ್ಸಾಗಿತ್ತು. ಬುಧವಾರ (ಆಗಸ್ಟ್‌ 19) ತಿಪಟೂರಿನಲ್ಲಿ ಅಂತಿಮ ಸಂಸ್ಕಾರ ನಡೆಯಲಿದೆ.

ಬಿ.ಸಿ. ನಾಗೇಶ್‌ (ಸಂಗ್ರಹ ಚಿತ್ರ)

ಬೆಂಗಳೂರು, ಆ. 18: ಹಿರಿಯ ರಾಜಕಾರಣಿ, ಬಿಜೆಪಿ ನಾಯಕ, ಮಾಜಿ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಹಾಗೂ ತಿಪಟೂರು ಕ್ಷೇತ್ರದ ಮಾಜಿ ಶಾಸಕ ಬಿ.ಸಿ. ನಾಗೇಶ್ (BC Nagesh) ಅಸೌಖ್ಯದಿಂದ ಮಂಗಳವಾರ (ಆಗಸ್ಟ್‌ 18) ಬೆಂಗಳೂರಿನಲ್ಲಿ ನಿಧನ ಹೊಂದಿದರು. ಅವರಿಗೆ 67 ವರ್ಷ ವಯಸ್ಸಾಗಿತ್ತು. ಶಿಸ್ತಿನ ಸಿಪಾಯಿಯಂತೆ, ಸದ್ಧಿಲ್ಲದೆ ಕಾರ್ಯನಿರ್ವಹಿಸುತ್ತಿದ್ದ ಅವರ ನಿಧನಕ್ಕೆ ಪಕ್ಷಾತೀತವಾಗಿ ನಾಯಕರು ಕಂಬನಿ ಮಿಡಿದಿದ್ದಾರೆ. ಬುಧವಾರ (ಆಗಸ್ಟ್‌ 19) ತಿಪಟೂರಿನಲ್ಲಿ ಅಂತಿಮ ಸಂಸ್ಕಾರ ನಡೆಯಲಿದ್ದು, ಬೆಂಗಳೂರಿನಿಂದ ಕುಟುಂಬಸ್ಥರು ಪಾರ್ಥಿವ ಶರೀರವನ್ನು ಕೊಂಡೊಯ್ಯುತ್ತಿದ್ದಾರೆ. ಸಚಿವರಾಗಿದ್ದ ವೇಳೆ ಅವರು ಶಿಕ್ಷಣ ಕ್ಷೇತ್ರದಲ್ಲಿ ಕ್ರಾಂತಿಕಾರಿ ಬದಲಾವಣೆ ತರುವ ಮೂಲಕ ಗಮನ ಸೆಳೆದಿದ್ದರು.

ಬಿ.ಸಿ. ನಾಗೇಶ್ 1 ವರ್ಷದಿಂದ ಬ್ರೈನ್ ಟ್ಯೂಮರ್‌ನಿಂದ ಬಳಲುತ್ತಿದ್ದರು. ಅವರಿಗೆ ಎರಡು ಬಾರಿ ಶಸ್ತ್ರಚಿಕಿತ್ಸೆ ನಡೆದಿತ್ತು. ಅನಾರೋಗ್ಯದ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿರುವ ತಮ್ಮ ಮಗಳ ಮನೆಯಲ್ಲಿ ಅವರು ವಾಸವಾಗಿದ್ದರು. ಚಿಕಿತ್ಸೆ ಮುಂದುವರಿದಿದ್ದರೂ ಆರೋಗ್ಯ ಹದಗೆಡುತ್ತ ಬಂದಿತ್ತು. ನಾಗೇಶ್ ಪತ್ನಿ, ಓರ್ವ ಪುತ್ರ ಹಾಗೂ ಓರ್ವ ಪುತ್ರಿಯನ್ನು ಅಗಲಿದ್ದಾರೆ.

ಎಚ್‌.ಡಿ. ಕುಮಾರಸ್ವಾಮಿ ಅವರ ಎಕ್ಸ್‌ ಪೋಸ್ಟ್‌:



ಶಿಕ್ಷಣ ಸಚಿವ

1959ರಲ್ಲಿ ಜನಿಸಿದ ಬಿ.ಸಿ. ನಾಗೇಶ್ ತಿಪಟೂರು ವಿಧಾನಸಭಾ ಕ್ಷೇತ್ರದಿಂದ 2008 ಮತ್ತು 2018ರಲ್ಲಿ ಜಯಗಳಿಸಿ 2 ಬಾರಿ ಶಾಸಕರಾಗಿ ಆಯ್ಕೆಯಾಗಿದ್ದರು. 2021ರಲ್ಲಿ ಬಸವರಾಜ ಬೊಮ್ಮಾಯಿ ನೇತೃತ್ವದ ಬಿಜೆಪಿ ಸರ್ಕಾರದಲ್ಲಿ ಅವರು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವರಾಗಿ ಕಾರ್ಯನಿರ್ವಹಿಸಿದ್ದರು. ಸಚಿವರಾಗಿದ್ದ ಅವಧಿಯಲ್ಲಿ ರಾಜ್ಯದ ಶಿಕ್ಷಣ ಕ್ಷೇತ್ರಕ್ಕೆ ಸಂಬಂಧಿಸಿದ ಹಲವು ಪ್ರಮುಖ ನಿರ್ಧಾರಗಳನ್ನು ತೆಗೆದುಕೊಂಡಿದ್ದರು. ಪಠ್ಯಪುಸ್ತಕ ಪರಿಷ್ಕರಣೆ, ಶಾಲಾ ಸಮವಸ್ತ್ರ ನಿಯಮ, ಶಿಕ್ಷಣದಲ್ಲಿ ಮೌಲ್ಯವರ್ಧನೆ ಮುಂತಾದ ವಿಚಾರಗಳಲ್ಲಿ ಮಹತ್ವದ ಬದಲಾವಣೆ ತಂದಿದ್ದರು.

ಆದಿ ಜಾಂಬವ ಸಮಾಜದ ಹಿರಿಯ ಮುಖಂಡ ಡಿ.ಎಸ್. ಮಾಳಗಿ ನಿಧನ

ಆರ್‌ಎಸ್‌ಎಸ್‌ ಹಿನ್ನೆಲೆ

ಆರ್‌ಎಸ್‌ಎಸ್‌ ಹಿನ್ನೆಲೆ ಹೊಂದಿದ್ದ ನಾಗೇಶ್‌ ರಾಜಕೀಯ ಜೀವನದಲ್ಲೂ ಶಿಸ್ತು ಕಾಪಾಡಿಕೊಂಡು ಬಂದಿದ್ದರು. ಹಲವು ವರ್ಷಗಳ ಕಾಲ ಅವರು ಆರ್‌ಎಸ್‌ಎಸ್‌ನ ಪೂರ್ಣಕಾಲಿಕ ಕಾರ್ಯಕರ್ತರಾಗಿಯೂ ಸೇವೆ ಸಲ್ಲಿಸಿದ್ದರು. ಬಳಿಕ 1984ರಲ್ಲಿ ಬಿಜೆಪಿಗೆ ಸೇರಿ ರಾಜಕೀಯದಲ್ಲಿ ಸಕ್ರಿಯವಾಗಿದ್ದರು.

ಸರಳ ವ್ಯಕ್ತಿತ್ವ

ತಮ್ಮ ಸರಳ ವ್ಯಕ್ತಿತ್ವದಿಂದಲೇ ನಾಗೇಶ್‌ ರಾಜ್ಯದ ಗಮನ ಸೆಳೆದಿದ್ದರು. ಸಚಿವರಾದ ಮೇಲೂ ತುಮಕೂರಿನಿಂದ ಬೆಂಗಳೂರಿಗೆ ರೈಲಿನಲ್ಲಿ ಪ್ರಯಾಣಿಸುತ್ತದ್ದರು. ತಮ್ಮ ಕ್ಷೇತ್ರದ ಜನರ ಜತೆ ಬೆರೆಯುತ್ತ ಅವರ ಕಷ್ಟಗಳಿಗೆ ಸ್ಪಂದಿಸುತ್ತಿದ್ದರು.

ಗಣ್ಯರ ಸಂತಾಪ

ಹಲವು ನಾಯಕರು ನಾಗೇಶ್‌ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ. ಮಾಜಿ ಕೇಂದ್ರ ಸಚಿಬ ಭಗವಂತ ಖೂಬಾ ಎಕ್ಸ್‌ನಲ್ಲಿ, ʼʼಆರ್‌ಎಸ್‌ಎಸ್‌, ಎಬಿವಿಪಿ ಮೂಲಕ ರಾಜಕಾರಣಕ್ಕೆ ಪ್ರವೇಶ ಬಸವರಾಜ ಬೊಮ್ಮಾಯಿ ಸಂಪುಟದಲ್ಲಿ ಸರಳ ಸಜ್ಜನಿಕೆಯ ವ್ಯಕ್ತಿತ್ವದ, ಮಾಜಿ ಶಾಸಕರೂ ಹಾಗೂ ನಾನು ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ಶಿಕ್ಷಣ ಸಚಿವರಾಗಿ ಅತ್ಯಂತ ಸಮರ್ಥವಾಗಿ ಸೇವೆ ಸಲ್ಲಿಸಿದ್ದ ತಿಪಟೂರಿನ ಶ್ರೀ ಬಿ.ಸಿ. ನಾಗೇಶ್ ಅವರ ನಿಧನದ ಸುದ್ದಿ ತಿಳಿದು ತೀವ್ರ ದುಃಖಿತನಾಗಿದ್ದೇನೆ. ಶಿಕ್ಷಣ ಕ್ಷೇತ್ರದ ಅಭಿವೃದ್ಧಿಗೆ ಹಾಗೂ ತಿಪಟೂರು ಮತ್ತು ತುಮಕೂರು ಭಾಗದ ಜನರ ಸೇವೆಗೆ ಅವರು ನೀಡಿದ ಕೊಡುಗೆ ಸದಾ ಸ್ಮರಣೀಯ. ಅವರ ಅಗಲಿಕೆಯಿಂದ ಬಿಜೆಪಿ ಪಕ್ಷಕ್ಕೆ ಮಾತ್ರವಲ್ಲದೆ, ತುಮಕೂರು ಭಾಗದ ಜನತೆ ಹಾಗೂ ಅವರ ಅಪಾರ ಅಭಿಮಾನಿ ಬಳಗಕ್ಕೆ ತುಂಬಲಾರದ ನಷ್ಟʼʼ ಎಂದು ಬರೆದುಕೊಂಡಿದ್ದಾರೆ.

Ramesh Ballamoole

View all posts by this author