ಬೀದರ್, ಜ.11 : ಮಾಜಿ ಸಚಿವ, ಶತಾಯುಷಿ ಭೀಮಣ್ಣ ಖಂಡ್ರೆ (102) ಅವರ (Bheemanna Khandre) ಆರೋಗ್ಯದಲ್ಲಿ ಏರುಪೇರಾಗಿದ್ದು, ಬೀದರ್ (Bidar news) ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಪುತ್ರ, ಸಚಿವ ಈಶ್ವರ್ ಖಂಡ್ರೆ ತಂದೆಯ ಜೊತೆಗಿದ್ದು ಚಿಕಿತ್ಸೆಯ ನಿಗಾ ವಹಿಸಿದ್ದಾರೆ.
ಕಳೆದ ಒಂದು ವಾರದಿಂದ ನಮ್ಮ ತಂದೆಯವರಾದ ಮಾಜಿ ಸಚಿವರು, ಲೋಕನಾಯಕ ಪೂಜ್ಯ ಡಾ. ಭೀಮಣ್ಣ ಖಂಡ್ರೆ ಅವರು ವಯೋಸಹಜ ಅನಾರೋಗ್ಯದಿಂದ ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದಾರೆ. ಇಂದು ಅವರ ಆರೋಗ್ಯದಲ್ಲಿ ಸ್ವಲ್ಪ ಮಟ್ಟಿನ ಸುಧಾರಣೆ ಕಂಡು ಬಂದಿದ್ದು, ಅವರು ಸಂಪೂರ್ಣವಾಗಿ ಚೇತರಿಸಿಕೊಳ್ಳುತ್ತಾರೆ ಎಂಬ ವಿಶ್ವಾಸ ನಮಗಿದೆ ಎಂದು ಸಚಿವ ಈಶ್ವರ ಖಂಡ್ರೆ ಹೇಳಿದ್ದಾರೆ.
ಬೀದರ್ ನಗರದ ಖಾಸಗಿ ಆಸ್ಪತ್ರೆಗೆ ಭೀಮಣ್ಣ ಖಂಡ್ರೆ ಅವರನ್ನು ದಾಖಲಿಸಲಾಗಿದ್ದು, ವೈದ್ಯಕೀಯ ತಂಡ ನಿಗಾ ವಹಿಸಿ ಚಿಕಿತ್ಸೆ ನೀಡುತ್ತಿದೆ. ಅವರ ಆರೋಗ್ಯದಲ್ಲಿ ಸುಧಾರಣೆ ಕಂಡು ಬಂದಿದೆ. ಒಂದು ವಾರದಿಂದ ವಯೋಸಹಜ ಅನಾರೋಗ್ಯದಿಂದ ಬಳಲುದ್ದಾರೆ.