ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

ಬಾತುಕೋಳಿ ಹಿಡಿಯಲು ಹೋಗಿ ಕೆರೆಯಲ್ಲಿ ಮುಳುಗಿ ನಾಲ್ವರು ಮಕ್ಕಳ ದುರ್ಮರಣ

Chikkamagaluru: ಶಾಸಕ ಎಚ್.ಡಿ.ತಮ್ಮಯ್ಯ ಜಿಲ್ಲಾ ಆಸ್ಪತ್ರೆಗೆ ಭೇಟಿ ನೀಡಿ ಚಿಕಿತ್ಸೆ ಪಡೆಯುತ್ತಿರುವ ಮಗುವಿನ ಆರೋಗ್ಯ ವಿಚಾರಿಸಿದರಲ್ಲದೆ ಮೃತ ಮಕ್ಕಳ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು. ಕೆರೆಗಳ ಬಳಿ ಯಾವ ರೀತಿ ಮುಂಜಾಗ್ರತ ಕ್ರಮ ಕೈಗೊಳ್ಳಬಹುದು ಎಂಬ ಬಗ್ಗೆ ಜಿಲ್ಲಾಧಿಕಾರಿ ಜೊತೆ ಚರ್ಚೆ ನಡೆಸಿದ್ದೇನೆ ಎಂದರು.

ಬಾತುಕೋಳಿ ಹಿಡಿಯಲು ಹೋಗಿ ಕೆರೆಯಲ್ಲಿ ಮುಳುಗಿ 4 ಮಕ್ಕಳು ಸಾವು

Representational Image -

Abhilash BC
Abhilash BC May 5, 2026 7:21 AM

ಚಿಕ್ಕಮಗಳೂರು, ಮೇ 5: ಬಾತುಕೋಳಿ ಹಿಡಿಯುವುದಕ್ಕೆ ಹೋದ ನಾಲ್ವರು ಮಕ್ಕಳು ಕೆರೆಯಲ್ಲಿ ಮುಳುಗಿ ಮೃತಪಟ್ಟ ಧಾರುಣ ಘಟನೆ ಚಿಕ್ಕಮಗಳೂರು ತಾಲೂಕಿನ ಅರಳುಗುಪ್ಪೆ ಗ್ರಾಮದ ಕಾರಂಜಿ ಕೆರೆಯಲ್ಲಿ ನಡೆದಿದೆ. ಅರಳುಗುಪ್ಪೆ ಗ್ರಾಮದ ಅಬ್ದುಲ್ ರೆಹಮಾನ್ (13), ನಾಯಜ್ (12), ಶಿವಮೊಗ್ಗದ ಮೈದಿಹಾ (9), ಅರಮಾನ್ (8) ಮೃತಪಟ್ಟ ಮಕ್ಕಳು. ಅರಳುಗುಪ್ಪೆಯ 4 ವರ್ಷದ ಅರ್ಮನ್ ಪ್ರಾಣಾಪಾಯದಿಂದ ಪಾರಾಗಿದ್ದು, ಚಿಕಿತ್ಸೆಗಾಗಿ ಚಿಕ್ಕಮಗಳೂರಿನ ಮಲ್ಲೇಗೌಡ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ರಜೆಯಲ್ಲಿ ಸಂಬಂಧಿಕರ ಮನೆಗೆ ಬಂದಾಗ ಈ ದುರ್ಘಟನೆ ನಡೆದಿದೆ ಎಂದು ತಿಳಿದು ಬಂದಿದೆ.

ಕೆರೆ ಪಾತ್ರದಲ್ಲಿ ಈ ಮಕ್ಕಳು ಆಟವಾಡುವಾಗ ಈ ದುರ್ಘಟನೆ ನಡೆದಿದೆ. ಆಟವಾಡುತ್ತಿರುವಾಗ ತಮ್ಮೊಂದಿಗಿದ್ದ ಬಾತುಕೋಳಿ ನೀರಿಗಿಳಿದಿದೆ ಎಂದು ಅದನ್ನು ಹಿಡಿಯಲು ಹೋದ ಬಾಲಕಿ ನೀರಿಗೆ ಬಿದ್ದಿದ್ದಾಳೆ. ಈ ಬಾಲಕಿಯನ್ನು ರಕ್ಷಿಸಲು ಹೋದ ಒಬ್ಬರ ಹಿಂದೊಬ್ಬರಂತೆ ಮಕ್ಕಳು ನೀರಿಗಿಳಿದು ಮೃತಪಟ್ಟಿದ್ದಾರೆ ಎಂದು ಹೇಳಲಾಗುತ್ತಿದೆ. ಈ ಸಂಬಂಧ ಚಿಕ್ಕಮಗಳೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಶ್ರೀನಿವಾಸ ಸಾಗರದಲ್ಲಿ ಮುಳುಗಿ 12 ವರ್ಷದ ಪ್ರವಾಸಿ ಸಬಿಹಾ ಸಾವು

ಶಾಸಕ ಎಚ್.ಡಿ.ತಮ್ಮಯ್ಯ ಜಿಲ್ಲಾ ಆಸ್ಪತ್ರೆಗೆ ಭೇಟಿ ನೀಡಿ ಚಿಕಿತ್ಸೆ ಪಡೆಯುತ್ತಿರುವ ಮಗುವಿನ ಆರೋಗ್ಯ ವಿಚಾರಿಸಿದರಲ್ಲದೆ ಮೃತ ಮಕ್ಕಳ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು. ಕೆರೆಗಳ ಬಳಿ ಯಾವ ರೀತಿ ಮುಂಜಾಗ್ರತ ಕ್ರಮ ಕೈಗೊಳ್ಳಬಹುದು ಎಂಬ ಬಗ್ಗೆ ಜಿಲ್ಲಾಧಿಕಾರಿ ಜೊತೆ ಚರ್ಚೆ ನಡೆಸಿದ್ದೇನೆ. ಕ್ಷೇತ್ರದಲ್ಲಿ ಈ ರೀತಿ ಹಲವು ಕೆರೆಗಳಿವೆ. ಮಕ್ಕಳ ಸುರಕ್ಷತೆಗೆ ಇಲ್ಲಿ ಯಾವ ಕ್ರಮ ಕೈಗೊಳ್ಳಬೇಕು ಎಂಬ ಬಗ್ಗೆ ಚಿಂತನೆ ನಡೆಸುತ್ತೇವೆ ಎಂದರು.

ಶ್ರೀನಿವಾಸ ಸಾಗರದಲ್ಲಿ ಮುಳುಗಿ 12 ವರ್ಷದ ಪ್ರವಾಸಿ ಸಬಿಹಾ ಸಾವು

ಪ್ರತ್ಯೇಕ ಪ್ರಕರಣವೊಂದರಲ್ಲಿ, ಹಾವೇರಿ ಜಿಲ್ಲೆಯ ಶಿಗ್ಗಾಂವಿ ತಾಲೂಕು ತಳದ ಗ್ರಾಮದ ವಾಸಿ 12 ವರ್ಷದ ಸಬಿಹಾ ಶ್ರೀನಿವಾಸ ಸಾಗರದಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಚಿಕ್ಕಬಳ್ಳಾಪುರ ತಾಲೂಕಿನಲ್ಲಿ ಸೋಮವಾರ ಮಧ್ಯಾಹ್ನ ನಡೆದಿದೆ. ತಾಲೂಕಿನ ಶ್ರೀನಿವಾಸ ಸಾಗರಕ್ಕೆ ದೂರದ ಗದಗ ಹಾವೇರಿ ಜಿಲ್ಲೆಯಿಂದ ಪ್ರವಾಸಕ್ಕೆಂದು ಬಂದಿದ್ದ 10 ಮಂದಿ ಪ್ರವಾಸಿಗರ ಪೈಕಿ 12 ವರ್ಷದ ಸಬೀಹಾ ಈಜಾಡುತ್ತಾ ಆಳದ ಮಡುವಿಗೆ ಇಳಿದಾಗ ಈ ಸಾವು ಸಂಭವಿಸಿದೆ.

ಬಿಸಿಲು ಹೆಚ್ಚಿದ್ದ ಕಾರಣ ನೀರಲ್ಲಿ ಈಜಾಡಲು ತೆರಳಿದಾಗ ಈ ಅವಘಡ ನಡೆದಿದೆ. ಈ ಸಂಬಂಧ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮತ್ತು ಅಗ್ನಿಶಾಮಕ ಸಿಬ್ಬಂದಿಯ ಹುಡುಕಾಟದ ನಂತರ ನೀರಿನಲ್ಲಿ ಮುಳುಗಿದ್ದ ಸಬಿಹಾಳ ಮೃತದೇಹ ಪತ್ತೆಯಾಗಿದೆ.