Drowned: ಒಂದೇ ಕುಟುಂಬದ ನಾಲ್ವರು ತುಂಗಭದ್ರಾ ನದಿಯಲ್ಲಿ ನೀರುಪಾಲು
ಆಂಧ್ರಪ್ರದೇಶದ ಕೋಸಗಿ ತಾಲೂಕಿನ ರಾಜಲಬಂಡ ಅಣೆಕಟ್ಟಿನ ಕೊನೆ ಭಾಗದಲ್ಲಿರುವ ಸಾತುನೂರು ಗ್ರಾಮದ ಬಳಿಯ ತುಂಗಭದ್ರಾ ನದಿಗೆ ಮಧ್ಯಾಹ್ನ ಸ್ನಾನಕ್ಕೆ ತೆರಳಿದ್ದರು. ಈ ವೇಳೆ ತಗ್ಗು ಪ್ರದೇಶದಲ್ಲಿ ಸಿಲುಕಿ ನಾಲ್ವರು ಸಾವನ್ನಪ್ಪಿದ್ದಾರೆ. ಮೃತರನ್ನು ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿನ ಕುರ್ಡಿ ಗ್ರಾಮದ ನಿವಾಸಿಗಳು ಎಂದು ಗುರುತಿಸಲಾಗಿದೆ.
ದುರ್ಘಟನೆ ನಡೆದ ತಾಣ -
ರಾಯಚೂರು, ಮಾ. 28: ತುಂಗಭದ್ರಾ ನದಿಯಲ್ಲಿ (tungabhadra river) ಸ್ನಾನಕ್ಕೆ ತೆರಳಿದ್ದ ಒಂದೇ ಕುಟುಂಬದ ನಾಲ್ವರು ದುರ್ಮರಣ (death) ಹೊಂದಿರುವಂತಹ ಘಟನೆ ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿನ ಕುರ್ಡಿ ಗ್ರಾಮದ ಬಳಿ ನಡೆದಿದೆ. ಉಮಾವತಿ(35), ರತ್ನ(24), ಮಹೇಶ್(28) ಮತ್ತು ಶಿವಾನಂದ(24) ಮೃತ ದುರ್ದೈವಿಗಳು. ಸದ್ಯ ಮರಣೋತ್ತರ ಪರೀಕ್ಷೆಗಾಗಿ ಕೋಸಗಿ ಆಸ್ಪತ್ರೆಗೆ ಶವಗಳ ಸ್ಥಳಾಂತರ ಮಾಡಲಾಗಿದೆ.
ಒಂದೇ ಕುಟುಂಬದವರು ಆಂಧ್ರಪ್ರದೇಶದ ಕೋಸಗಿ ತಾಲೂಕಿನ ರಾಜಲಬಂಡ ಅಣೆಕಟ್ಟಿನ ಕೊನೆ ಭಾಗದಲ್ಲಿರುವ ಸಾತನೂರು ಗ್ರಾಮದ ಬಳಿಯ ತುಂಗಭದ್ರಾ ನದಿಗೆ ಮಧ್ಯಾಹ್ನ ಸ್ನಾನಕ್ಕೆ ತೆರಳಿದ್ದರು. ಈ ವೇಳೆ ತಗ್ಗು ಪ್ರದೇಶದಲ್ಲಿ ಸಿಲುಕಿ ನಾಲ್ವರು ಸಾವನ್ನಪ್ಪಿದ್ದಾರೆ. ಮೃತರನ್ನು ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿನ ಕುರ್ಡಿ ಗ್ರಾಮದ ನಿವಾಸಿಗಳು ಎಂದು ಗುರುತಿಸಲಾಗಿದೆ. ಆಂಧ್ರಪ್ರದೇಶದ ಕೋಸಗಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಮೂವರು ಮಕ್ಕಳನ್ನು ಬಾವಿಗೆ ತಳ್ಳಿ ಮಹಿಳೆ ಆತ್ಮಹತ್ಯೆ
ವಿಜಯಪುರ: ಜಿಲ್ಲೆಯ (Vijayapuara) ಇಂಡಿ ತಾಲೂಕಿನ ಮಿರಗಿ ಗ್ರಾಮದಲ್ಲಿ ಮನಕಲಕುವ ಘಟನೆಯೊಂದು ಸಂಭವಿಸಿದೆ. ತಾಯಿಯೊಬ್ಬಳು (mother) ತನ್ನ ಮೂವರು ಮಕ್ಕಳನ್ನು ಬಾವಿಗೆ ತಳ್ಳಿ, ತಾನೂ ಕೂಡ ಬಾವಿಗೆ ಹಾರಿ ಆತ್ಮಹತ್ಯೆ (Self Harming) ಮಾಡಿಕೊಂಡಿರುವ ಹೃದಯವಿದ್ರಾವಕ ಘಟನೆ ವರದಿಯಾಗಿದೆ. ಮಿರಗಿ ಗ್ರಾಮದ ನಿವಾಸಿ ರಾಜಶ್ರೀ ಶಂಕರ ಹಳ್ಳೂರ (31) ಮೃತ ದುರ್ದೈವಿ. ಇವರು ತಮ್ಮ ಮಕ್ಕಳಾದ ತನುಶ್ರೀ (7 ವರ್ಷ), ಅನುಶ್ರೀ (5 ವರ್ಷ) ಹಾಗೂ ಕೇವಲ 10 ತಿಂಗಳ ಹಸುಳೆ ಸಂತೋಷ್‌ರನ್ನು ಬಾವಿಗೆ ಎಸೆದು ಕ್ರೂರ ಅಂತ್ಯ ಕಂಡಿದ್ದಾರೆ.
ರಾಜಶ್ರೀ ಅವರ ಪತಿ ಶಂಕರ್ ಅವರು ಖಾಸಗಿ ಬಸ್ ಚಾಲಕರಾಗಿ ಕೆಲಸ ಮಾಡುತ್ತಿದ್ದು, ಘಟನೆ ನಡೆದ ಸಮಯದಲ್ಲಿ ಅವರು ಊರಿನಲ್ಲಿ ಇರಲಿಲ್ಲ ಎನ್ನಲಾಗಿದೆ. ಮನೆಯಲ್ಲಿ ಯಾರೂ ಇಲ್ಲದ ವೇಳೆ ರಾಜಶ್ರೀ ಈ ತೀವ್ರ ನಿರ್ಧಾರ ತೆಗೆದುಕೊಂಡಿದ್ದಾರೆ. ಶನಿವಾರ ಸಂಜೆ ಗ್ರಾಮದ ಸಮೀಪವಿರುವ ಬಾವಿಯಲ್ಲಿ ಇಬ್ಬರು ಮಕ್ಕಳ ಶವಗಳು ತೇಲುತ್ತಿರುವುದನ್ನು ಸ್ಥಳೀಯರು ಗಮನಿಸಿದ್ದಾರೆ. ತಕ್ಷಣವೇ ಗ್ರಾಮಸ್ಥರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಧಾವಿಸಿದ ಇಂಡಿ ಗ್ರಾಮೀಣ ಪೊಲೀಸರು, ಪರಿಶೀಲನೆ ನಡೆಸಿದಾಗ ತಾಯಿ ಮತ್ತು ಮೂವರು ಮಕ್ಕಳ ಸಾವಿನ ಸುದ್ದಿ ದೃಢಪಟ್ಟಿದೆ.