ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್‌ಗೆ ಅರ್ಜಿ ಆಹ್ವಾನ; ಅಕ್ಟೋಬರ್ 31 ಕೊನೆಯ ದಿನ

ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಮಾಧ್ಯಮ ಪಟ್ಟಿಯಲ್ಲಿರುವ ದಿನಪತ್ರಿಕೆಗಳು/ಮಾಧ್ಯಮ ಸಂಸ್ಥೆಗಳಲ್ಲಿ ತಾಲೂಕು ಮಟ್ಟದಲ್ಲಿ ಕಾರ್ಯನಿರ್ವಹಿಸುತ್ತಿರುವ ಪತ್ರಕರ್ತರಿಗೆ ತಿದ್ದುಪಡಿ ಮಾಡಲಾದ ಹೊಸ ಮಾರ್ಗಸೂಚಿಯನ್ವಯ ಉಚಿತ ಬಸ್ ಪಾಸ್ ನೀಡಲು ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಕೆಗೆ ಅಕ್ಟೋಬರ್ 31 ಕೊನೆಯ ದಿನವಾಗಿದೆ.

ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್‌ಗೆ ಅರ್ಜಿ ಆಹ್ವಾನ

ಸಾಂದರ್ಭಿಕ ಚಿತ್ರ. -

Profile
Siddalinga Swamy Oct 7, 2026 5:17 PM

ಬೆಂಗಳೂರು, ಅ.07: ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಮಾಧ್ಯಮ ಪಟ್ಟಿಯಲ್ಲಿರುವ ದಿನಪತ್ರಿಕೆಗಳು/ಮಾಧ್ಯಮ ಸಂಸ್ಥೆಗಳಲ್ಲಿ ತಾಲೂಕು ಮಟ್ಟದಲ್ಲಿ ಕಾರ್ಯನಿರ್ವಹಿಸುತ್ತಿರುವ ಪತ್ರಕರ್ತರಿಗೆ ತಿದ್ದುಪಡಿ ಮಾಡಲಾದ ಹೊಸ ಮಾರ್ಗಸೂಚಿಯನ್ವಯ ಉಚಿತ ಬಸ್ ಪಾಸ್ (Free Bus Pass) ನೀಡಲು ಅರ್ಜಿ ಆಹ್ವಾನಿಸಲಾಗಿದೆ.‌

ಪತ್ರಕರ್ತರು ಕಾರ್ಯನಿರ್ವಹಿಸುತ್ತಿರುವ ಸಂಸ್ಥೆಗಳಲ್ಲಿ “ಪೂರ್ಣಾವಧಿ/ಅರೆಕಾಲಿಕ ವರದಿಗಾರರಾಗಿ ನೇಮಕವಾಗಿದ್ದಲ್ಲಿ ಆಯಾ ಮಾಧ್ಯಮ ಸಂಸ್ಥೆಯ ಸಂಪಾದಕರ / ಸ್ಥಾನಿಕ ಸಂಪಾದಕರ / ಮುಖ್ಯಸ್ಥರ ಶಿಫಾರಸ್ಸು ಪತ್ರ ಮತ್ತು ಸೇವಾ ಪ್ರಮಾಣ ಪತ್ರವನ್ನು ಲಗತ್ತಿಸಿ “ಸೇವಾ ಸಿಂಧು” ಪೋರ್ಟಲ್ https://sevasindhu.karnataka.gov.in ಮೂಲಕ ಸಮೀಪದ ಗ್ರಾಮ-1 ಕೇಂದ್ರದಲ್ಲಿ ಆನ್‌ಲೈನ್‌ನಲ್ಲಿ ಅರ್ಜಿಗಳನ್ನು ಸಲ್ಲಿಸಬಹುದು.

ಈ ಹಿಂದೆ ಇದ್ದ ಮಾರ್ಗಸೂಚಿಯಲ್ಲಿ 11 ತಿಂಗಳ ವೇತನ ಪತ್ರ ಸಲ್ಲಿಸಬೇಕು ಎಂಬ ಷರತ್ತನ್ನು ಸಡಿಲಿಸಿ, ಆಯಾ ಮಾಧ್ಯಮ ಸಂಸ್ಥೆಯ ಸಂಪಾದಕರ, ಸ್ಥಾನಿಕ ಸಂಪಾದಕರ/ಮುಖ್ಯಸ್ಥರ ಶಿಫಾರಸ್ಸು ಪತ್ರವನ್ನು ಪರಿಗಣಿಸಲು ಅವಕಾಶ ಕಲ್ಪಿಸಲಾಗಿದೆ.

ಆನ್‌ಲೈನ್‌ನಲ್ಲಿ ಸಲ್ಲಿಸಲಾದ ಅರ್ಜಿ ಮತ್ತು ಲಗತ್ತಿಸಲಾಗಿರುವ ದಾಖಲೆಗಳ ಒಂದು ಪ್ರತಿಯನ್ನು ಆಯಾ ಜಿಲ್ಲೆಯ ವಾರ್ತಾಧಿಕಾರಿಗಳ ಕಚೇರಿಗೆ ಸಲ್ಲಿಸಬೇಕು. ಸ್ವೀಕೃತ ಅರ್ಜಿಗಳನ್ನು ಆಯ್ಕೆ ಸಮಿತಿಯ ಸಭೆಯಲ್ಲಿ ಪರಿಶೀಲಿಸಿ ಬಸ್ ಪಾಸ್ ಮಂಜೂರು ಮಾಡಲಾಗುತ್ತದೆ. ತಾಲೂಕು ಮಟ್ಟದ ಪತ್ರಕರ್ತರಿಗೆ ಸುದ್ದಿ ಸಂಗ್ರಹಿಸಲು ಅನುಕೂಲ ಕಲ್ಪಿಸಲು ಸರ್ಕಾರವು ವಾರ್ತಾ ಇಲಾಖೆಯ ಮೂಲಕ ಉಚಿತ ಬಸ್ ಪಾಸ್‌ಗಳನ್ನು ನೀಡುತ್ತಿದೆ.

Cabinet Meeting: ನೈಸರ್ಗಿಕ ವಿಕೋಪಗಳು, ತುರ್ತು ಪರಿಸ್ಥಿತಿ ಎದುರಿಸಲು ಸ್ವಯಂಸೇವಕರಿಗೆ ‘ಎಮರ್ಜೆನ್ಸಿ ರೆಸ್ಪಾಂಡರ್ ಕಿಟ್ʼ; ಸಂಪುಟ ಒಪ್ಪಿಗೆ

ರಾಜ್ಯದ ಎಲ್ಲಾ ತಾಲೂಕುಗಳ ಅರ್ಹ ಪತ್ರಕರ್ತರು ಕೂಡಲೇ “ಸೇವಾಸಿಂಧು” ಪೋರ್ಟಲ್ ಮೂಲಕ ಗ್ರಾಮ-1 ಕೇಂದ್ತದ ಮೂಲಕ 2026 ರ ಅಕ್ಟೋಬರ್ 31 ರೊಳಗೆ ಅರ್ಜಿಗಳನ್ನು ಸಲ್ಲಿಸಬೇಕು ಎಂದು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಆಯುಕ್ತ ಎಂ.ಎನ್.ಅನುಚೇತ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.