ಫೋಟೋ ಗ್ಯಾಲರಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

CET, NEET coaching: ರಾಜ್ಯದ ಸರ್ಕಾರಿ ಪಿಯು ಕಾಲೇಜುಗಳಲ್ಲಿ ಸಿಇಟಿ, ನೀಟ್‌ ಉಚಿತ ತರಬೇತಿ; ಅನುದಾನ ಬಿಡುಗಡೆ

CET, NEET coaching: ರಾಜ್ಯ ಸರ್ಕಾರಿ ಪಿಯು ಕಾಲೇಜುಗಳಲ್ಲಿ ವಿಜ್ಞಾನ ವಿಭಾಗ ವಿದ್ಯಾರ್ಥಿಗಳಿಗೆ ಸಿಇಟಿ, ನೀಟ್, ಜೆಇಇ ಪರೀಕ್ಷೆಗಳಿಗೆ ಉಚಿತ ತರಬೇತಿ ನೀಡಲು ‘ವಿದ್ಯಾ ವಿಜೇತ’ ಕಾರ್ಯಕ್ರಮ ಜಾರಿಗೆ ತರಲಾಗಿದೆ. 2025–26ನೇ ಸಾಲಿನಲ್ಲೂ ಈ ಯೋಜನೆ ಮುಂದುವರಿಸಲು ರಾಜ್ಯ ಸರ್ಕಾರ ಆಡಳಿತಾತ್ಮಕ ಅನುಮೋದನೆ ನೀಡಿದೆ.

ಸರ್ಕಾರಿ ಪಿಯು ಕಾಲೇಜುಗಳಲ್ಲಿ ಸಿಇಟಿ, ನೀಟ್‌ ಉಚಿತ ತರಬೇತಿ

Prabhakara R Prabhakara R Aug 3, 2025 2:07 PM

ಬೆಂಗಳೂರು: ರಾಜ್ಯ ಸರ್ಕಾರಿ ಪಿಯು ಕಾಲೇಜುಗಳಲ್ಲಿ ವಿಜ್ಞಾನ ವಿಭಾಗ ವಿದ್ಯಾರ್ಥಿಗಳಿಗೆ ಸಿಇಟಿ, ನೀಟ್, ಜೆಇಇ ಪರೀಕ್ಷೆಗಳಿಗೆ ಉಚಿತ ತರಬೇತಿ ನೀಡಲು (CET, NEET coaching) ಜಾರಿಗೆ ತಂದಿರುವ ‘ವಿದ್ಯಾ ವಿಜೇತ’ (Vidya Vijeta scheme) ಕಾರ್ಯಕ್ರಮವನ್ನು 2025–26ನೇ ಸಾಲಿನಲ್ಲೂ ಮುಂದುವರಿಸಲು ರಾಜ್ಯ ಸರ್ಕಾರ ಆಡಳಿತಾತ್ಮಕ ಅನುಮೋದನೆ ನೀಡಿದೆ.

2024-25ನೇ ಸಾಲಿನಲ್ಲಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಗೆ ಸಂಬಂಧಿಸಿದಂತೆ, ವಿದ್ಯಾ ವಿಜೇತ ಕಾರ್ಯಕ್ರಮದಡಿ ಸರ್ಕಾರಿ ಪದವಿ ಪೂರ್ವ ಕಾಲೇಜುಗಳ 25000 ವಿದ್ಯಾರ್ಥಿಗಳಿಗೆ CET/NEET/JEE ತರಬೇತಿ ನೀಡಲಾಗಿದ್ದು, ಸದರಿ ಕಾರ್ಯಕ್ರಮವನ್ನು ಮುಂದುವರಿಸಲು 5 ಕೋಟಿ ರೂ ಒದಗಿಸಲು ಅನುಮೋದನೆ ನೀಡಲಾಗಿದೆ.

ರಾಜ್ಯದ ಸರ್ಕಾರಿ ಪದವಿ ಪೂರ್ವ ಕಾಲೇಜುಗಳ ವಿಜ್ಞಾನ ಸಂಯೋಜನೆಯಲ್ಲಿ ಅಭ್ಯಾಸ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಆನ್-ಲೈನ್ ತರಗತಿಗಳ ಮೂಲಕ NEET/JEE/CET ಪ್ರವೇಶ ಪರೀಕ್ಷೆಗಳಿಗೆ ತರಬೇತಿಯನ್ನು ನೀಡಲು ಒಟ್ಟು ರೂ.10.00 ಕೋಟಿ ವೆಚ್ಚದಲ್ಲಿ ಅಂದಾಜು 20,000 ವಿದ್ಯಾರ್ಥಿಗಳಿಗೆ ಹಾಗೂ ಆದರ್ಶ ಯೋಜನೆ ಅಡಿಯಲ್ಲಿ ರೂ.2.50 ಕೋಟಿ ವೆಚ್ಚದಲ್ಲಿ 5,000 ವಿದ್ಯಾರ್ಥಿಗಳಿಗೆ ಯೋಜನೆಯನ್ನು ಸಂಯೋಜಿಸಿ ಒಟ್ಟಾರೆ ರೂ.12.50 ಕೋಟಿಗಳ ವೆಚ್ಚದಲ್ಲಿ 25,000 ವಿದ್ಯಾರ್ಥಿಗಳಿಗೆ ಟೆಂಡರ್ ಮೂಲಕ ತರಬೇತುದಾರ ಸಂಸ್ಥೆಯನ್ನು ಗುರುತಿಸಿ, ತರಬೇತಿ ಕಾರ್ಯಕ್ರಮವನ್ನು ಅನುಷ್ಠಾನಗೊಳಿಸಲು ಅನುಮತಿ ನೀಡಿ ಆದೇಶಿಸಲಾಗಿದೆ.

ಈ ಸದ್ದಿಯನ್ನೂ ಓದಿ | CSA Recruitment 2025: ದೇಶಾದ್ಯಂತ ಬರೋಬ್ಬರಿ 10,277 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದ IBPS; ಪದವಿ ಪೂರೈಸಿದವರು ಅಪ್ಲೈ ಮಾಡಿ