ಚೌತಿ ಹಬ್ಬ ಫೋಟೋ ಗ್ಯಾಲರಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Movie ticket price: ಇಂದಿನಿಂದ ಚಿತ್ರಮಂದಿರಗಳಲ್ಲಿ ಏಕರೂಪ ಟಿಕೆಟ್ ದರ ಜಾರಿ; 200 ರೂ. ದಾಟುವಂತಿಲ್ಲ

Movie ticket price: ಸರ್ಕಾರದ ಹೊಸ ನಿಯಮದ ಪ್ರಕಾರ ಏಕಪರದೆ ಹಾಗೂ ಮಲ್ಟಿಪ್ಲೆಕ್ಸ್​ನಲ್ಲಿ ಟಿಕೆಟ್​ನ ಮೂಲ ಬೆಲೆ 200 ರೂಪಾಯಿ ದಾಟುವಂತಿಲ್ಲ. ಶೇ.18 ತೆರಿಗೆಯೂ ಸೇರಿದರೆ ಸಿನಿಮಾದ ಟಿಕೆಟ್ ದರ 236 ರೂಪಾಯಿ ಆಗಲಿದೆ. ಸಿನಿಮಾ ಪ್ರಿಯರಿಗೆ ಇದರಿಂದ ಕೊಂಚ ಸಮಾಧಾನವಾಗಿದೆ.

ಇಂದಿನಿಂದ ಚಿತ್ರಮಂದಿರಗಳಲ್ಲಿ ಏಕರೂಪ ಟಿಕೆಟ್ ದರ ಜಾರಿ

-

Prabhakara R Prabhakara R Sep 12, 2025 3:31 PM

ಬೆಂಗಳೂರು: ಸಿನಿಪ್ರಿಯರಿಗೆ ಸಿಹಿ ಸುದ್ದಿ ಸಿಕ್ಕಿದೆ. ದುಬಾರಿ ಸಿನಿಮಾ ಟಿಕೆಟ್ ದರಕ್ಕೆ (Movie ticket price) ಕಡಿವಾಣ ಹಾಕಲು ರಾಜ್ಯ ಸರ್ಕಾರ ಸರ್ಕಾರ ಏಕರೂಪ ಟಿಕೆಟ್ ದರ ಜಾರಿಗೆ ತರುವುದಾಗಿ ಹೇಳಿದೆ. ಇಂದಿನಿಂದ (ಸೆ.12) ಈ ನಿಯಮ ಜಾರಿಗೆ ಬರುವಂತೆ ಆದೇಶ ಹೊರಡಿಸಿದೆ.

ಇದರ ಪ್ರಕಾರ ಏಕಪರದೆ ಹಾಗೂ ಮಲ್ಟಿಪ್ಲೆಕ್ಸ್​ನಲ್ಲಿ ಟಿಕೆಟ್​ನ ಮೂಲ ಬೆಲೆ 200 ರೂಪಾಯಿ ದಾಟುವಂತಿಲ್ಲ. ಶೇ.18 ತೆರಿಗೆಯೂ ಸೇರಿದರೆ ಸಿನಿಮಾದ ಟಿಕೆಟ್ ದರ 236 ರೂಪಾಯಿ ಆಗಲಿದೆ. ಸಿನಿಮಾ ಪ್ರಿಯರಿಗೆ ಇದರಿಂದ ಕೊಂಚ ಸಮಾಧಾನವಾಗಿದೆ.

ಇನ್ನು ಕೆಲವು ಷರತ್ತುಗಳನ್ನು ಕೂಡ ಸರ್ಕಾರ ಹೇರಿದೆ. ಅನೇಕ ಮಲ್ಟಿಪ್ಲೆಕ್ಸ್​ಗಳಲ್ಲಿ ಗೋಲ್ಡ್ ಕ್ಲಾಸ್ ವ್ಯವಸ್ಥೆ ಇರುತ್ತವೆ. ಇವುಗಳಿಗೆ 200 ರೂಪಾಯಿ ಟಿಕೆಟ್ ದರದ ಮಿತಿ ಇಲ್ಲ. ಆ ಆಸನಗಳಿಗೆ ಮಲ್ಟಿಪ್ಲೆಕ್ಸ್​ಗಳು ತಮ್ಮಿಷ್ಟದ ದರ ನಿಗದಿ ಮಾಡಬಹುದು. ಬಹುತೇಕ ಮಲ್ಟಿಪ್ಲೆಕ್ಸ್​ಗಳಲ್ಲಿ ರಿಕ್ಲೈನ್ ಸೀಟ್​ಗಳು ಇರುತ್ತವೆ. ಅವುಗಳಿಗೂ 200 ರೂಪಾಯಿ ಟಿಕೆಟ್ ದರ ಅನ್ವಯ ಆಗುತ್ತದೆ ಎಂದು ತಿಳಿದುಬಂದಿದೆ.

ಈ ಸುದ್ದಿಯನ್ನೂ ಓದಿ | Karnataka Ratna: ವಿಷ್ಣುವರ್ಧನ್​​, ಬಿ. ಸರೋಜಾದೇವಿಗೆ ಮರಣೋತ್ತರ ‘ಕರ್ನಾಟಕ ರತ್ನ’ ಘೋಷಣೆ

ಕರ್ನಾಟಕ ಸಿನಿಮಾಗಳ (ನಿಯಂತ್ರಣ) ಕಾಯ್ದೆ, 1964ರ ಸೆಕ್ಷನ್ 19ರಲ್ಲಿ ನೀಡಲಾದ ಅಧಿಕಾರವನ್ನು ಚಲಾಯಿಸಲು ಕರ್ನಾಟಕ ಸಿನಿಮಾಗಳ (ನಿಯಂತ್ರಣ) ನಿಯಮಗಳು, 2014 ಅನ್ನು ಮತ್ತಷ್ಟು ತಿದ್ದುಪಡಿ ರಾಜ್ಯ ಸರ್ಕಾರ ಇತ್ತೀಚೆಗೆ ಕರಡು ರೂಪಿಸಿತ್ತು. ಈ ಕರಡನ್ನು ಅಧಿಕೃತ ಗೆಜೆಟ್‌ನಲ್ಲಿ ಪ್ರಕಟಿಸಿದ ದಿನಾಂಕದಿಂದ 15 ದಿನಗಳ ನಂತರ ಪರಿಗಣನೆಗೆ ತೆಗೆದುಕೊಳ್ಳಲಾಗುವುದು ಎಂದು ತಿಳಿಸಿತ್ತು. ಅದರಂತೆ ಸೆ.12ರಿಂದ ಏಕರೂಪ ಟಿಕೆಟ್ ದರ ಜಾರಿಯಾಗಿದೆ.