ಗದಗ: ರಸ್ತೆ ಕಾಮಗಾರಿ ಸಂಬಂಧಿಸಿ 5 ಲಕ್ಷ ಲಂಚ ಸ್ವೀಕರಿಸುವ ವೇಳೆ ಶಿರಹಟ್ಟಿ ಬಿಜೆಪಿ ಶಾಸಕ ಡಾ. ಚಂದ್ರು ಲಮಾಣಿ (BJP MLA Dr. Chandru Lamani ) ಅವರು ಲೋಕಾಯುಕ್ತ ಅಧಿಕಾರಿಗಳಿಗೆ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾರೆ. ಗದಗ ಜಿಲ್ಲೆ ಲಕ್ಷ್ಮೇಶ್ವರ ಪಟ್ಟಣದಲ್ಲಿರುವ ಶಾಸಕರ ಒಡೆತನದ ಬಾಲಾಜಿ ಆಸ್ಪತ್ರೆಯಲ್ಲಿ ಘಟನೆ ನಡೆದಿದೆ.
ಗುತ್ತಿಗೆದಾರ ವಿಜಯ ಪೂಜಾರ ಎಂಬುವರಿಂದ 5 ಲಕ್ಷ ಹಣ ಪಡೆಯುವ ವೇಳೆ ಧಾರವಾಡ ಲೋಕಾಯುಕ್ತ ಎಸ್ಪಿ ಸಿದ್ದಲಿಂಗಪ್ಪ ಅವರ ನೇತೃತ್ವದಲ್ಲಿ ತಂಡ ದಾಳಿ ನಡೆಸಿದೆ.
ಗದಗ ಜಿಲ್ಲೆಯ ಲಕ್ಷ್ಮೇಶ್ವರ ತಾಲೂಕಿನ ಸಂಕಧಾಳ ಗ್ರಾಮದಲ್ಲಿ 1 ಕೋಟಿ ರೂಪಾಯಿ ವೆಚ್ಚದಲ್ಲಿ ರಸ್ತೆ ಬದಿಯ ತಡೆಗೋಡೆ ನಿರ್ಮಾಣ ಕಾಮಗಾರಿ ಮಂಜೂರಾಗಿದೆ. ಇದಕ್ಕಾಗಿ ಗುತ್ತಿಗೆದಾರ ವಿಜಯ ಪೂಜಾರ ಎಂಬುವರ ಬಳಿ ಗುತ್ತಿಗೆಗೆ ಶಾಸಕ 11 ಲಕ್ಷ ಡೀಲ್ ಮಾಡಿಕೊಂಡಿದ್ದರು ಎನ್ನಲಾಗಿದೆ.
ಎಟಿಎಂಗಳಿಗೆ ತುಂಬಬೇಕಿದ್ದ 3.40 ಕೋಟಿ ರೂ. ವಂಚನೆ; ಸಿಎಂಎಸ್ ಕಂಪನಿಯ ಇಬ್ಬರ ವಿರುದ್ಧ ಎಫ್‌ಐಆರ್
ಇಂದು ಗುತ್ತಿಗೆದಾರ ವಿಜಯ ಪೂಜಾರ 5 ಲಕ್ಷ ಹಣ ಶಾಸಕರಿಗೆ ನೀಡುವ ವೇಳೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಸದ್ಯ ಶಾಸಕ ಚಂದ್ರ ಲಮಾಣಿ, ಅವರ ಸರ್ಕಾರಿ ಪಿಎ ಮಂಜುನಾಥ ವಾಲ್ಮೀಕಿ ಹಾಗೂ ಶಾಸಕರ ಖಾಸಗಿ ಪಿಎ ಗುರು ಲಮಾಣಿ ಅವರನ್ನು ಲೋಕಾಯುಕ್ತ ಅಧಿಕಾರಿಗಳು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.
ಶಾಸಕ ಬೈರತಿ ಬಸವರಾಜ್‌ಗೆ ಫೆ.26ರವರೆಗೆ ನ್ಯಾಯಾಂಗ ಬಂಧನ
ಬೆಂಗಳೂರು: ರೌಡಿಶೀಟರ್ ಬಿಕ್ಲು ಶಿವ ಕೊಲೆ ಪ್ರಕರಣದಲ್ಲಿ ಶಾಸಕ ಬೈರತಿ ಬಸವರಾಜ್‌ರನ್ನು (Byrati Basavaraj) ಫೆ.26ರವರೆಗೆ ನ್ಯಾಯಾಂಗ ಬಂಧನಕ್ಕೆ (Judicial Custody) ನೀಡಿ ಜನಪ್ರತಿನಿಧಿಗಳ ಕೋರ್ಟ್ ಆದೇಶ ಹೊರಡಿಸಿದೆ. ಬಿಕ್ಲು ಶಿವ ಕೊಲೆ ಕೇಸಲ್ಲಿ ಬೈರತಿ ಬಸವರಾಜ್ ಐದನೇ ಆರೋಪಿಯಾಗಿದ್ದಾರೆ.
ಇಂದು (ಫೆ.21) ಬೈರತಿ ಬಸವರಾಜ್ ಅವರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ ಸಿಐಡಿ ಪೊಲೀಸರು, ಮತ್ತೆ ಪೊಲೀಸ್ ಕಸ್ಟಡಿಗೆ ನೀಡವಂತೆ ಮನವಿ ಮಾಡಿದರು. ವೈದ್ಯಕೀಯ ವರದಿ ಆಧರಿಸಿ ಜೈಲಿಗೆ ಕಳುಹಿಸುವಂತೆ ಬೈರತಿ ಪರ ವಕೀಲರು ಮನವಿ ಮಾಡಿದ್ದರು.
ಸದ್ಯ ಫೆ.26ರವರೆಗೆ ಬೈರತಿ ಬಸವರಾಜ್ ಅವರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಜಯದೇವ ಆಸ್ಪತ್ರೆಯಲ್ಲಿ ನೀಡಿರುವ ಡಯೆಟ್ ಪ್ಲಾನ್ ಅನ್ನು ಜೈಲಿನಲ್ಲಿ ಮುಂದುವರಿಸಲು ಕೋರ್ಟ್ ಸೂಚನೆ ನೀಡಿದೆ. ಜೈಲಿನಲ್ಲಿ ಕೂಡ ಡಯೆಟ್ ಪ್ಲಾನ್ ಪ್ರಕಾರವೇ ಊಟ ನೀಡಲು ನ್ಯಾಯಾಲಯ ಸೂಚಿಸಿದೆ.