Bomb threat: ಮಂಗಳೂರಿನ ಆರ್‌ಟಿಒ ಕಚೇರಿ, ಗದಗ ಜಿಲ್ಲಾಡಳಿತ ಭವನಕ್ಕೆ ಬಾಂಬ್ ಬೆದರಿಕೆ!
ಮಂಗಳೂರಿನ ಆರ್‌ಟಿಒ ಕಚೇರಿ ಮತ್ತು ಗದಗ ಜಿಲ್ಲಾಡಳಿತ ಭವನ ಸ್ಫೋಟಿಸುವುದಾಗಿ ಇಮೇಲ್‌ಗೆ ಬಾಂಬ್ ಬೆದರಿಕೆ ಸಂದೇಶ ಬಂದಿದೆ. ಇದರಿಂದ ಎರಡೂ ಸ್ಥಳಗಳಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದ್ದು, ಪೊಲೀಸರು, ಬಾಂಬ್ ಸ್ಕ್ವಾಡ್ ಸಿಬ್ಬಂದಿ ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸುತ್ತಿದ್ದಾರೆ.
ಗದಗ ಜಿಲ್ಲಾಡಳಿತ ಭವನ (ಸಂಗ್ರಹ ಚಿತ್ರ) -
ಗದಗ: ಮಂಗಳೂರಿನ ಆರ್‌ಟಿಒ ಕಚೇರಿ ಮತ್ತು ಗದಗ ಜಿಲ್ಲಾಡಳಿತ ಭವನ ಸ್ಫೋಟಿಸುವುದಾಗಿ ಬಾಂಬ್ ಬೆದರಿಕೆ ಸಂದೇಶ ಬಂದಿದ್ದು, ಎರಡೂ ಸ್ಥಳಗಳಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ. ಇಮೇಲ್‌ಗೆ ಬಾಂಬ್ ಬೆದರಿಕೆ ಸಂದೇಶ ಬಂದಿದ್ದು, ಪೊಲೀಸರು ಸ್ಥಳಕ್ಕೆ ದೌಡಾಯಿಸಿ ಪರಿಶೀಲನೆ ನಡೆಸುತ್ತಿದ್ದಾರೆ.
ಮಂಗಳೂರಿನ ನೆಹರು ಮೈದಾನದಲ್ಲಿರುವ ಆರ್‌ಟಿಒ ಕಚೇರಿಗೆ ಬಾಂಬ್ ಬೆದರಿಕೆ ಮೇಲ್ ಬಂದಿದೆ. ಇನ್ನು 5 ಬಾಂಬ್‌ಗಳಿಂದ ಗದಗ ಜಿಲ್ಲಾಡಳಿತ ಭವನ ಸ್ಫೋಟಿಸುವುದಾಗಿ ಸಂದೇಶ ಬಂದಿದ್ದು, ಸಿಬ್ಬಂದಿ ಕಂಗಾಲಾಗಿದ್ದಾರೆ. ಅರ್ನಾ ಅಶ್ವಿನ್ ಶೇಖರ್ ಎಂಬ ಇ-ಮೇಲ್ ಐಡಿಯಿಂದ ಡಿಸಿ ಕಚೇರಿ ಇಮೇಲ್-ಗೆ ಬೆದರಿಕೆ ಬಂದಿದೆ ಎಂದು ತಿಳಿದುಬಂದಿದೆ. ಸ್ಥಳಕ್ಕೆ ಪೊಲೀಸರು ದೌಡಾಯಿಸಿ, ಪರಿಶೀಲನೆ ನಡೆಸುತ್ತಿದ್ದಾರೆ.
ಗದಗ ಜಿಲ್ಲಾಡಳಿತದ ಅಧಿಕೃತ ಇಮೇಲ್‌ಗೆ ಬೆಳಗ್ಗೆ 10 ಗಂಟೆ ಸುಮಾರಿಗೆ ಸಂದೇಶ ಬಂದಿತ್ತು. ಜಿಲ್ಲಾಧಿಕಾರಿ ಕಚೇರಿಯ ಐದು ಕಡೆಗಳಲ್ಲಿ ಬಾಂಬ್ ಇಡುವುದಾಗಿ ಬೆದರಿಕೆ ಬಂದಿದೆ. ವಿಷಯ ತಿಳಿದು ಸ್ಥಳಕ್ಕೆ ಬಾಂಬ್ ಸ್ಕ್ಯಾಡ್, ಶ್ವಾನ ದಳ, ASC ಟೀಮ್ ದೌಡಾಯಿಸಿದೆ. ಜಿಲ್ಲಾಧಿಕಾರಿಗಳ ಕೊಠಡಿ ಸೇರಿ ಪ್ರಮುಖ ಸ್ಥಳಗಳಲ್ಲಿ ತಪಾಸಣೆ ಮಾಡಲಾಗಿದೆ.
ಪಾರ್ಟಿಗೆ ದಾಳಿ ಮಾಡಿ ಹಣ ಕೇಳಿದ ಪೊಲೀಸರು, ಬಾಲ್ಕನಿಯಿಂದ ಜಿಗಿದ ಯುವತಿ ಗಂಭೀರ
ಲಾರಿಗೆ ಬೆಂಕಿ ತಗುಲಿ 40 ಬೈಕುಗಳು ಸುಟ್ಟು ಕರಕಲು
ಬಳ್ಳಾರಿ: ಲಾರಿಗೆ ಆಕಸ್ಮಿಕವಾಗಿ ಬೆಂಕಿ ತಗುಲಿ, ಸುಮಾರು 45 ಲಕ್ಷಕ್ಕೂ ಹೆಚ್ಚು ಮೌಲ್ಯದ 40 ಬೈಕುಗಳು ಸಂಪೂರ್ಣವಾಗಿ ಸುಟ್ಟು ಕರಕಲಾಗಿರುವ ಘಟನೆ ಬಳ್ಳಾರಿ ನಗರದ ಅನಂತಪುರ ರಸ್ತೆಯ ಆಟೋನಗರದಲ್ಲಿ ನಡೆದಿದೆ.
ರಸ್ತೆ ಬದಿ ನಿಂತಿದ್ದ ಲಾರಿಯಲ್ಲಿ ಏಕಾಏಕಿ ಬೆಂಕಿ ಹೊತ್ತಿಕೊಂಡು ದಟ್ಟ ಹೊಗೆ ಕಾಣಿಸಿಕೊಂಡಿದೆ. ಲಾರಿಯಲ್ಲೇ ಕುಳಿತಿದ್ದ ಚಾಲಕ ಕೂಡಲೇ ಎಚ್ಚೆತ್ತುಕೊಂಡು ಲಾರಿಯಿಂದ ಕೆಳಗೆ ಇಳಿದಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾನೆ. ಅಗ್ನಿಶಾಮಕ ಸಿಬ್ಬಂದಿ ಬಂದು ಬೆಂಕಿ ನಂದಿಸುವಷ್ಟರಲ್ಲಿ ಲಾರಿಯಲ್ಲಿದ್ದ ಬೈಕ್‌ಗಳು ಸುಟ್ಟು ಕರಕಲಾಗಿದ್ದವು. ಘಟನೆ ಸಂಬಂಧ ಬಳ್ಳಾರಿಯ ಗಾಂಧಿನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.