ಗದಗ: ಕಾರಿನ ಮೇಲೆ ಪಾಕಿಸ್ತಾನ ಧ್ವಜ ಪ್ರದರ್ಶಿಸಿ, ಅದನ್ನು ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಮಾಡಿದ್ದ ಹಿನ್ನೆಲೆಯಲ್ಲಿ ಗದಗ ನಗರ ಠಾಣೆಯಲ್ಲಿ ಸುಮೊಟೊ ಪ್ರಕರಣ ದಾಖಲಾಗಿದೆ. ಬಕ್ರೀದ್ ಹಬ್ಬದಂದು ಈ ಘಟನೆ (Gadag News) ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.
ತಹಸೀನ್ ಎಂಬಾತ ತನ್ನ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಪಾಕಿಸ್ತಾನ ಧ್ವಜವನ್ನು ಪ್ರದರ್ಶಿಸುತ್ತಿರುವ ಫೋಟೊವನ್ನು ಹಂಚಿಕೊಂಡಿದ್ದಾನೆ. ಈ ಪೋಸ್ಟ್ ಅನ್ನು ಅಬ್ದುಲ್ ಎಂಬ ಇನ್ನೊಬ್ಬ ವ್ಯಕ್ತಿ ತನ್ನ ಖಾತೆಯಲ್ಲಿ ಮತ್ತೊಮ್ಮೆ ಹಂಚಿಕೊಂಡಿದ್ದಾನೆ.
ಈ ಫೋಟೊದಲ್ಲಿ, ಕಾರಿನ ಬಾನೆಟ್ ಮೇಲೆ ಇಸ್ಲಾಂ ಧರ್ಮದ ಬಾವುಟದ ಜತೆಗೆ ಪಾಕಿಸ್ತಾನ ಧ್ವಜದ ಚಿತ್ರವು ಕಂಡುಬಂದಿದ್ದು, ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ.
ಈ ಹಿನ್ನೆಲೆಯಲ್ಲಿ, ಗದಗ ನಗರ ಠಾಣೆಯಲ್ಲಿ ಭಾರತೀಯ ನ್ಯಾಯ ಸಂಹಿತೆ (BNS) ಕಾಯ್ದೆಯ ಕಲಂ 299, 353(2) ಮತ್ತು 3/5 ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ಈ ಸುದ್ದಿಯನ್ನೂ ಓದಿ | ED Raid: ಶಾಸಕ ವೀರೇಂದ್ರ ಪಪ್ಪಿ ಮನೆಯಲ್ಲಿ 21.43 ಕೆಜಿ ಚಿನ್ನದ ಬಿಸ್ಕೆಟ್, 10.98 ಕೆಜಿ ಚಿನ್ನಲೇಪಿತ ಬೆಳ್ಳಿ ಗಟ್ಟಿ ಜಪ್ತಿ!
ಭದ್ರಾವತಿಯಲ್ಲಿ ಪಾಕಿಸ್ತಾನ ಪರ ಘೋಷಣೆ; ಕೇಸ್ ದಾಖಲು
ಶಿವಮೊಗ್ಗ: ಭದ್ರಾವತಿಯಲ್ಲಿ ಸೋಮವಾರ ರಾತ್ರಿ ನಡೆದಿದ್ದ ಈದ್ ಮಿಲಾದ್ ಮೆರವಣಿಗೆ ವೇಳೆ ಪಾಕಿಸ್ತಾನ ಪರ ಘೋಷಣೆ ಕೂಗಿದ ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿತ್ತು. ಭದ್ರಾವತಿಯ ಅಂಬೇಡ್ಕರ್ ವೃತ್ತದಲ್ಲಿ ಮೆರವಣಿಗೆ ಸಾಗುವಾಗ ಗದ್ದಲದ ನಡುವೆ ಕೆಲವು ಯುವಕರಿಂದ ಪಾಕಿಸ್ತಾನ ಜಿಂದಾಬಾದ್ ಘೋಷಣೆ ಕೂಗಲಾಗಿದೆ ಎಂಬ ಆರೋಪ ಕೇಳಿಬಂದಿತ್ತು.
'ಈ ಕುರಿತು ಸ್ವಯಂ ಪ್ರೇರಿತವಾಗಿ ಪ್ರಕರಣ ದಾಖಲಿಸಿದ್ದೇವೆ. ವಿಡಿಯೊ ಎಲ್ಲಿ, ಯಾವಾಗ ಚಿತ್ರೀಕರಣ ಆಗಿದೆ. ಅದರ ಸತ್ಯಾಸತ್ಯತೆ ಪರಿಶೀಲಿಸಲು ಎಫ್‌ಎಸ್‌ಎಲ್ ಪರೀಕ್ಷೆಗೆ ಕಳುಹಿಸಲಾಗುವುದು. ತನಿಖೆಗೆ ಮೂರು ತಂಡಗಳ ರಚನೆ ಮಾಡಿದ್ದೇವೆ' ಎಂದು ಎಸ್‌ಪಿ ಜಿ.ಕೆ. ಮಿಥುನ್ ಕುಮಾರ್ ಮಂಗಳವಾರ ತಿಳಿಸಿದ್ದಾರೆ.
ಮುಸ್ಲಿಮ್ ಆಗಿ ಹುಟ್ಟುವ ಆಸೆಯಿದೆ
ಈದ್ ಮಿಲಾದ್ ಅಂಗವಾಗಿ ಉಸ್ಮಾನಿಯಾ ಚಾರಿಟಬಲ್ ಟ್ರಸ್ಟ್ ಏರ್ಪಡಿಸಿದ್ದ ರಕ್ತದಾನ ಶಿಬಿರದಲ್ಲಿ ಪಾಲ್ಗೊಂಡಿದ್ದ ಭದ್ರಾವತಿ ಶಾಸಕ ಬಿ.ಕೆ.ಸಂಗಮೇಶ್ವರ, 'ಮುಸ್ಲಿಮ್ ಜನಾಂಗದ ಪ್ರೀತಿಗೆ ಪಾತ್ರವಾಗಿರುವ ನನಗೆ, ಮುಂದಿನ ಜನ್ಮದಲ್ಲಿ ಮುಸ್ಲಿಂ ಆಗಿ ಹುಟ್ಟುವ ಅಸೆ ಇದೆ' ಎಂದು ಹೇಳಿರುವ ವಿಡಿಯೊ ಕೂಡ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.
20 ವರ್ಷದ ಹಿಂದೆ ಈದ್ ಮಿಲಾದ್ ಮೆರವಣಿಗೆ ರದ್ದಾಗಿತ್ತು. ಧರ್ಮಸಿಂಗ್ ನೇತೃತ್ವದ ಸರ್ಕಾರ ಮತ್ತೆ ಪ್ರಾರಂಭಿಸಿತು. ಅಂದಿನಿಂದ ಶಾಂತಿಯುತವಾಗಿ ಮೆರವಣಿಗೆ ನಡೆಯುತ್ತಿದೆ' ಎಂದು ಹೇಳಿದ್ದಾರೆ.