ಯುಗಾದಿ ಹಬ್ಬ ಐಪಿಎಲ್​ ಸುನಿತಾ ವಿಲಿಯಮ್ಸ್​ ಫ್ಯಾಷನ್​ ವಿದೇಶ ಧಾರ್ಮಿಕ ಕ್ರೈಂ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Gadag News: ಪೊಲೀಸರ ಮೇಲೆ ಹಲ್ಲೆ ಮಾಡಿ ಎಸ್ಕೇಪ್‌ ಆಗಲು ಯತ್ನ; ಆರೋಪಿ ಕಾಲಿಗೆ ಗುಂಡೇಟು

Gadag News: ಮನೆ ಕಳ್ಳತನ, ದರೋಡೆ ಸೇರಿ ಹಲವು ಪ್ರಕರಣಗಳಲ್ಲಿ ಭಾಗಿಯಾಗಿದ್ದ ಆರೋಪಿಯನ್ನು ಲಕ್ಷ್ಮೇಶ್ವರ ಪೊಲೀಸ್ ಠಾಣೆಗೆ ಕರೆದುಕೊಂಡು ಹೋಗುವಾಗ ಗುಂಡು ಹಾರಿಸಲಾಗಿದೆ. ಪೊಲೀಸರ ಮೇಲೆ ಹಲ್ಲೆ ನಡೆಸಿ ಪರಾರಿಯಾಗಲು ಯತ್ನಿಸಿದಾಗ ಆರೋಪಿ ಕಾಲಿಗೆ ಪೊಲೀಸರು ಗುಂಡು ಹಾರಿಸಿದ್ದಾರೆ.

ಪೊಲೀಸರ ಮೇಲೆ ಹಲ್ಲೆ ಮಾಡಿ ಎಸ್ಕೇಪ್‌ ಆಗಲು ಯತ್ನ; ಆರೋಪಿ ಕಾಲಿಗೆ ಗುಂಡೇಟು

Profile Prabhakara R Mar 31, 2025 4:17 PM

ಗದಗ: ಪೊಲೀಸರ ಹಲ್ಲೆ ಮಾಡಿ ಪರಾರಿಯಾಗಲು ಯತ್ನಿಸಿದ ದರೋಡೆಕೋರನ ಕಾಲಿಗೆ ಗುಂಡು ಹಾರಿಸಿ ಬಂಧಿಸಿರುವ ಘಟನೆ (Gadag News) ​​ಜಿಲ್ಲೆಯ ಮುಂಡರಗಿ ತಾಲೂಕಿನ ಡಂಬಳ ಮತ್ತು ಡೋಣಿ ಗ್ರಾಮದಲ್ಲಿ ನಡೆದಿದೆ. ಆರೋಪಿ ಜಯಸಿಂಹ ಮೊಡಕೆರ್ ಕಾಲಿಗೆ ಗುಂಡೇಟು ಬಿದ್ದಿದೆ. ಲಕ್ಷ್ಮೇಶ್ವರ ಪೊಲೀಸ್ ಠಾಣೆಗೆ ಆರೋಪಿ ಜಯಸಿಂಹ ಮೊಡಕೆರ್‌ನ ಕರೆದುಕೊಂಡು ಬರುವಾಗ ಘಟನೆ ನಡೆದಿದೆ. ಆರೋಪಿಯನ್ನು ಬಂಧಿಸುವ ವೇಳೆ ಪೊಲೀಸ್ ಸಿಬ್ಬಂದಿಗೂ ಗಾಯಗಳಾಗಿದ್ದು, ಗದಗ ಜಿಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ.

ಆರೋಪಿಗಳಾದ ಜಯಸಿಂಹ ಮೊಡಕೆರ್, ಮಂಜುನಾಥ ಮೊಡಕೆರ್ ರಾಜ್ಯ ಮತ್ತು ಅಂತಾರಾಜ್ಯ ಪೊಲೀಸರಿಗೆ ಬೇಕಾಗಿದ್ದ ದರೋಡೆಕೋರರು. ನೆನ್ನೆ ವಿಜಯನಗರ ಜಿಲ್ಲೆಯ ಬಳಿ ಜಯಸಿಂಹನನ್ನು ವಶಕ್ಕೆ ಪಡೆಯಲಾಗಿತ್ತು. ಲಕ್ಷ್ಮೇಶ್ವರ ಪೊಲೀಸ್ ಠಾಣೆಗೆ ಕರೆದುಕೊಂಡು ಬರುತ್ತಿರುವಾಗ ಪೊಲೀಸ್ ವಾಹನದಲ್ಲಿ ಕೈಗೆ ಹಾಕಿದ್ದ ಬೇಡಿಯಿಂದ ಪೊಲೀಸ್ ಸಿಬ್ಬಂದಿ ವೀರೇಶ್ ಬಿಸ್ನಳ್ಳಿ ಮೇಲೆ ಹಲ್ಲೆ ಮಾಡಿ ಪರಾರಿಗೆ ಯತ್ನಿಸಿದ್ದ. ಈ ವೇಳೆ ಸಿಪಿಐ ಮಂಜುನಾಥ ಕುಸುಗಲ್​​​, ಆರೋಪಿ ಜಯಸಿಂಹ ಕಾಲಿಗೆ ಗುಂಡು ಹಾರಿಸಿ ಬಂಧಿಸಿದ್ದಾರೆ.

ಮನೆ ಕಳ್ಳತನ, ದರೋಡೆ ಸೇರಿ ಹಲವು ಪ್ರಕರಣಗಳಲ್ಲಿ ಈ ನಟೋರಿಯಸ್ ದರೋಡೆಕೋರರು ಭಾಗಿಯಾಗಿದ್ದರು. ಇನ್ನು ಗದಗ ಎಸ್​ಪಿ ಬಿಎಸ್ ನೇಮಗೌಡ ಆಸ್ಪತ್ರೆಗೆ ಭೇಟಿ ನೀಡಿ, ಆರೋಪಿ ಜಯಸಿಂಹ ಮೊಡಕೆರ್ ಹಾಗೂ ಪೊಲೀಸ್ ಸಿಬ್ಬಂದಿ ವೀರೇಶ್ ಬಿಸ್ನಳ್ಳಿ ಆರೋಗ್ಯ ವಿಚಾರಿಸಿದ್ದಾರೆ.

ಈ ಸುದ್ದಿಯನ್ನೂ ಓದಿ | Viral Video: ಮಸೀದಿಯಲ್ಲಿ ಸೆಕ್ಯೂರಿಟಿ ಗಾರ್ಡ್‌ಗೆ ಮಹಿಳೆಯಿಂದ ಕಪಾಳಮೋಕ್ಷ; ಮುಂದೇನಾಯ್ತು? ವಿಡಿಯೊ ನೋಡಿ

ಕೃಷ್ಣಾ ನದಿಯಲ್ಲಿ ಮುಳುಗಿ ಮೂವರು ಬಾಲಕರ ಸಾವು

ಬಾಗಲಕೋಟೆ: ಯುಗಾದಿ ಹಬ್ಬದ ದಿನವೇ ಜಿಲ್ಲೆಯಲ್ಲಿ ಘೋರ ದುರಂತವೊಂದು ನಡೆದಿದೆ. ಕೃಷ್ಣಾ ನದಿಯಲ್ಲಿ ಮುಳುಗಿ ಮೂವರು ಬಾಲಕರು ಮೃತಪಟ್ಟ ಘಟನೆ (Drown in River) ಬಾಗಲಕೋಟೆ ತಾಲೂಕಿನ ಸೀತಿಮನಿ ಗ್ರಾಮದ ಬಳಿ ನಡೆದಿದೆ. ಕೃಷ್ಣಾ ನದಿಯಲ್ಲಿ ಈಜಲು ಹೋಗಿದ್ದ ವೇಳೆ ಬಾಲಕರು ನೀರುಪಾಲಾಗಿದ್ದಾರೆ. ಮೃತ ಬಾಲಕರನ್ನು ಸೋಮಶೇಖರ್ ದೇವರಮನಿ (17), ಪರನಗೌಡ ಬೀಳಗಿ (15) ಹಾಗೂ ಮಲ್ಲಪ್ಪ ಬಗಲಿ (16) ಎಂದು ಗುರುತಿಸಲಾಗಿದೆ.

ಮೂವರು ಬಾಲಕರ ಪೈಕಿ ಸೋಮಶೇಖರ್ ಮೃತದೇಹ ಪತ್ತೆಯಾಗಿದ್ದು, ಉಳಿದ ಇಬ್ಬರಿಗಾಗಿ ಅಗ್ನಿಶಾಮಕ ದಳದ ಸಿಬ್ಬಂದಿ ಹುಡುಕಾಟ ನಡೆಸುತ್ತಿದ್ದಾರೆ. ಮೃತ ಬಾಲಕರು ಬಾಗಲಕೋಟೆ ತಾಲೂಕಿನ ಇಲ್ಯಾಳ ಗ್ರಾಮದ ನಿವಾಸಿಗಳಾಗಿದ್ದು, ಬಾಗಲಕೋಟೆ ಗ್ರಾಮೀಣ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ತ್ರಿವೇಣಿ ಸಂಗಮದಲ್ಲಿ ಪುಣ್ಯಸ್ನಾನಕ್ಕೆಂದು ಹೋದ ಬಾಲಕ ನೀರುಪಾಲು

ಮೈಸೂರು: ಜಿಲ್ಲೆಯಲ್ಲಿ ಯುಗಾದಿ ಹಬ್ಬದ ದಿನದಂದು ಘೋರ ದುರಂತ ನಡೆದಿದೆ. ಯುಗಾದಿ ಹಿನ್ನೆಲೆಯಲ್ಲಿ ಪುಣ್ಯ ಸ್ನಾನಕ್ಕೆಂದು ತ್ರಿವೇಣಿ ಸಂಗಮದಲ್ಲಿ ನದಿಗೆ ಇಳಿದಿದ್ದ ಬಾಲಕ ನೀರುಪಾಲಾಗಿರುವ ಘಟನೆ ಮೈಸೂರು ಜಿಲ್ಲೆಯ (Mysore News) ಟಿ.ನರಸೀಪುರದಲ್ಲಿ ನಡೆದಿದೆ. ಮೃತ ಬಾಲಕನನ್ನು ಶರಣ್ (13) ಎಂದು ಗುರುತಿಸಲಾಗಿದೆ. ಮೃತ ಶರಣ್ ಮೈಸೂರು ಜಿಲ್ಲೆಯ ಟಿ.ನರಸೀಪುರ ಪಟ್ಟಣದ ಶ್ರೀರಾಂಪುರ ನಿವಾಸಿಯಾಗಿದ್ದಾನೆ.

ಸ್ನೇಹಿತರ ಜೊತೆ ಪುಣ್ಯಸ್ನಾನಕ್ಕೆಂದು ತ್ರಿವೇಣಿ ಸಂಗಮಕ್ಕೆ ಬಂದಿದ್ದ. ಈ ವೇಳೆ ಸ್ನಾನಕ್ಕೆಂದು ನದಿಗೆ ಇಳಿದಾಗ ಬಾಲಕ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾನೆ. ಘಟನಾ ಸ್ಥಳಕ್ಕೆ ಪೊಲೀಸರು ಆಗಮಿಸಿ ಶವವನ್ನು ಹೊರ ತೆಗೆದಿದ್ದಾರೆ. ಸ್ಥಳದಲ್ಲಿ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.

ಈ ಸುದ್ದಿಯನ್ನೂ ಓದಿ | Murder Case: ತಂಗಿಯನ್ನು ಪ್ರೀತಿಸಿದ್ದಕ್ಕೆ ಯುವಕನನ್ನು ಬರ್ಬರವಾಗಿ ಹತ್ಯೆಗೈದ ಸಹೋದರರು!