Ka Vem Srinivas Death: ಪ್ರಧಾನಿ ಮೋದಿಯಿಂದ ಮೆಚ್ಚುಗೆ ಪಡೆದಿದ್ದ ಕಲಾಪೋಷಕ ಕಾವೆಂಶ್ರೀ ನಿಧನ
Kalamangi Venkatagiriyappa Srinivas: ಗದಗ ನಗರದ ಖಾಸಗಿ ಆಸ್ಪತ್ರೆಯಲ್ಲಿ ಕಾವೆಂ ಶ್ರೀನಿವಾಸ್ ನಿಧನರಾದರು. ಕಾಳಮಂಜಿ ವೆಂಕಟಗಿರಿಯಪ್ಪ ಶ್ರೀನಿವಾಸ್ ಅವರ ಕಲಾ ಸೇವೆಯ ಬಗ್ಗೆ ಪ್ರಧಾನಿ ಮೋದಿ ಅವರು ಮನ್ ಕೀ ಬಾತ್ ಕಾರ್ಯಕ್ರಮದಲ್ಲಿ ಪ್ರಸ್ತಾಪಿಸಿ, ಮೆಚ್ಚುಗೆ ವ್ಯಕ್ತಪಡಿಸಿದ್ದರು.


ಗದಗ: ಪ್ರಧಾನಿ ನರೇಂದ್ರ ಮೋದಿ ಅವರಿಂದ ಮೆಚ್ಚುಗೆ ಪಡೆದಿದ್ದ ಕಲಾಪೋಷಕ ಕಾಳಮಂಜಿ ವೆಂಕಟಗಿರಿಯಪ್ಪ ಶ್ರೀನಿವಾಸ್ (ಕಾವೆಂಶ್ರೀ) (Kalamangi Venkatagiriyappa Srinivas) ಅವರು ನಗರದ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಅನಾರೋಗ್ಯದ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದ ಅವರು ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾರೆ. ಶಿವಮೊಗ್ಗ ಜಿಲ್ಲೆಯ ಕಾಳಮಂಜಿ ಮೂಲದ ಕಾವೆಂ ಶ್ರೀನಿವಾಸ್ ಅವರು ಗದಗ ನಗರದಲ್ಲೇ 34 ವರ್ಷದಿಂದ ವಾಸವಾಗಿದ್ದರು. ಕಲೆ, ಸಾಹಿತ್ಯ ಆಸಕ್ತಿ ಬೆಳೆಸಿಕೊಂಡಿದ್ದ ಶ್ರೀನಿವಾಸ್ ಅವರು, ಅನೇಕ ಪತ್ರಿಕೆಗಳಲ್ಲಿ ಕಲೆ, ಸಾಹಿತ್ಯದ ಬಗ್ಗೆ ಬರೆಯುತ್ತಿದ್ದರು. ಹೋಟೆಲ್ ಉದ್ಯಮದ ಜತೆಗೆ ಕಲಾ ಸೇವೆಯಲ್ಲೂ ಇವರು ತೊಡಗಿದ್ದರು.
ಕಾವೆಂಶ್ರೀ ಅವರು ಕಲೆ, ಸಂಸ್ಕೃತಿ ಉಳಿವಿಗಾಗಿ 1996ರಲ್ಲಿ ಕಲಾ ಚೇತನ ಸಂಸ್ಥೆ ಸ್ಥಾಪಿಸಿದ್ದರು. ಈ ಸಂಸ್ಥೆಯ ಮೂಲಕ ಅಂತಾರಾಷ್ಟ್ರೀಯ ಕಲಾವಿದರ ಕಾರ್ಯಕ್ರಮ ಆಯೋಜನೆ ಮಾಡುತ್ತಿದ್ದರು. ನಿರಂತರ ಕಾರ್ಯಕ್ರಮ ಆಯೋಜನೆ ಬಗ್ಗೆ ಪ್ರಧಾನಿ ಮೋದಿ ಅವರು ಸಂತಸ ವ್ಯಕ್ತಪಡಿಸಿದ್ದರು.

2022ರಲ್ಲಿ 96ನೇ ಮನ್ ಕೀ ಬಾತ್ ಕಾರ್ಯಕ್ರಮದಲ್ಲಿ ಕಾವೆಂ ಶ್ರೀನಿವಾಸ್ ಅವರ ಬಗ್ಗೆ ಪ್ರಸ್ತಾಪಿಸಿದ್ದ ಪ್ರಧಾನಿ ಮೋದಿ ಅವರು, ಕಾವೆಂಶ್ರೀ 25 ವರ್ಷಗಳ ಕಲಾ ಸೇವೆಯನ್ನು ಶ್ಲಾಘಿಸಿದ್ದರು.
ಈ ಸುದ್ದಿಯನ್ನೂ ಓದಿ | Arjun Krishna: ನಟ ಯಶ್ ಬಹುಕಾಲದ ಆಪ್ತ ದಿಢೀರ್ ಸಾವು; ಮೊದಲ ಚಿತ್ರ ರಿಲೀಸ್‌ಗೂ ಮೊದಲೇ ನಿಧನ!