Republic Day 2025: ಗಣರಾಜ್ಯೋತ್ಸವ ಪರೇಡ್‌ನಲ್ಲಿ ಲಕ್ಕುಂಡಿ ಸ್ತಬ್ಧಚಿತ್ರ; ಅನಾವರಣವಾಗಲಿದೆ ಕಲ್ಲಿನಲ್ಲಿ ಅರಳಿದ ಶಿಲ್ಪಕಲೆ

Republic Day 2025: ಲಕ್ಕುಂಡಿ ಶಿಲ್ಪಕಲೆಯ ಸ್ತಬ್ಧಚಿತ್ರವು ರಾಜಧಾನಿಯ ಕರ್ತವ್ಯಪಥದಲ್ಲಿ ಗಣರಾಜ್ಯೋತ್ಸವದಂದು ಕರ್ನಾಟಕ ರಾಜ್ಯದ ಹಿರಿಮೆ, ಸರ್ವಧರ್ಮ ಸಮನ್ವಯ. ಶಾಂತಿ, ಸಹಬಾಳ್ವೆಯನ್ನು ಪ್ರತಿಪಾದಿಸಲಿದೆ.

Lakkandi Tableau
Profile Prabhakara R January 22, 2025

ವಿಶ್ವವಾಣಿ ಸುದ್ದಿಮನೆ, ಬೆಂಗಳೂರು: ಸರ್ವಜನಾಂಗದ ಶಾಂತಿಯ ತೋಟದಂತೆ ಕಂಗೊಳಿಸುತ್ತಿರುವ ಲಕ್ಕುಂಡಿ ಶಿಲ್ಪಕಲೆಯ ಸ್ತಬ್ಧಚಿತ್ರವು ಗಣರಾಜ್ಯೋತ್ಸವದ (Republic Day 2025) ಪಥಸಂಚಲನದಲ್ಲಿ ಭಾಗವಹಿಸಲು ಸಜ್ಜಾಗಿದೆ. ರಾಜಧಾನಿಯ ಕರ್ತವ್ಯಪಥದಲ್ಲಿ ಗಣರಾಜ್ಯೋತ್ಸವದಂದು ಕರ್ನಾಟಕ ರಾಜ್ಯದ ಹಿರಿಮೆ, ಸರ್ವಧರ್ಮ ಸಮನ್ವಯ. ಶಾಂತಿ, ಸಹಬಾಳ್ವೆಯನ್ನು ಪ್ರತಿಪಾದಿಸಲಿದೆ.

ಸುದ್ದಿಗೋಷ್ಠಿಯಲ್ಲಿ ಈ ಬಗ್ಗೆ ಮಾತನಾಡಿದ ವಾರ್ತಾ ಇಲಾಖೆ ಆಯುಕ್ತ ಹೇಮಂತ್ ನಿಂಬಾಳ್ಕರ್, ಈ ಬಾರಿಯ ಗಣರಾಜ್ಯೋತ್ಸವದ ಪಥಸಂಚಲನದಲ್ಲಿ ಲಕ್ಕುಂಡಿಯ ಶಿಲ್ಪಕಲೆಯಿಂದ ಕೂಡಿರುವ ಐತಿಹಾಸಿಕ ದೇವಾಲಯಗಳು ಎಲ್ಲರನ್ನು ಮಂತ್ರಮುಗ್ಧರನ್ನಾಗಿಸಲು ಹೊರಟಿದೆ ಎಂದು ಹೇಳಿದರು.

ಕರ್ನಾಟಕಕ್ಕೆ ಈ ಬಾರಿಯ ಗಣರಾಜ್ಯೋತ್ಸವದ ಸ್ತಬ್ಧಚಿತ್ರವು ಅತ್ಯಂತ ಸ್ಮರಣೀಯವಾದುದು. ಎಲ್ಲಾ ಧರ್ಮಗಳನ್ನು ಸಮಾನವಾಗಿ ಕಾಣುವ ನಮ್ಮ ರಾಜ್ಯದಲ್ಲಿ ಎಲ್ಲಾ ಧರ್ಮಗಳ ದೇವಾಲಯಗಳಿವೆ. ಈ ಪೈಕಿ ಐತಿಹಾಸಿಕ ಪಟ್ಟಣವಾದ ಗದಗದ ಲಕ್ಕುಂಡಿಯು ಒಂದಾಗಿದೆ. ಅಹಿಂಸಾವಾದಿಯ ನೆಲೆಬೀಡು. ಶಿಲ್ಪಕಲೆಯ ತೊಟ್ಟಿಲಾದ ಲಕ್ಕುಂಡಿಯಲ್ಲಿ ಶೈವ, ಜೈನ ಮತ್ತು ವೈಷ್ಣವ ದೇವಾಲಯಗಳಿವೆ. ಕಲಾತ್ಮಕತೆಯಿಂದ ಕಂಗೊಳಿಸುವ ಇಲ್ಲಿನ ದೇವಾಲಯಗಳು ಈ ಬಾರಿಯ ಸ್ತಬ್ಧಚಿತ್ರದಲ್ಲಿ ಅವುಗಳ ಪಡಿಯಚ್ಚಿನಂತೆ ಮೂಡಿಬಂದಿವೆ ಎಂದರು.

Lakkundi tableau  1

ಸ್ತಬ್ಧಚಿತ್ರದಲ್ಲಿ ಏನಿರಲಿದೆ?

ಕರ್ನಾಟಕದ ಗದಗ ಜಿಲ್ಲೆಯಲ್ಲಿರುವ ಲಕ್ಕುಂಡಿಯನ್ನು ಅದರ ಅದ್ಭುತ ಕಲ್ಲಿನ ವಾಸ್ತುಶಿಲ್ಪಕ್ಕಾಗಿ ’ಶಿಲ್ಪಕಲೆಯ ತೊಟ್ಟಿಲು’ ಎಂದು ಕರೆಯಲಾಗುತ್ತದೆ. ಇಲ್ಲಿನ ಸುಂದರವಾದ ದೇವಾಲಯಗಳು, ಮೆಟ್ಟಿಲು ಬಾವಿಗಳು ಮತ್ತು ಚಾಲುಕ್ಯ ರಾಜವಂಶದ ಶಾಸನಗಳಿಗೆ ನೆಲೆಯಾಗಿದೆ. ಸಾಂಸ್ಕೃತಿಕ ಶಕ್ತಿ ಕೇಂದ್ರವಾಗಿರುವುದರೊಂದಿಗೆ 10 ರಿಂದ 12 ನೇ ಶತಮಾನದ ನಡುವೆ ಲಕ್ಕುಂಡಿ ಒಂದು ದೊಡ್ಡ ವಾಣಿಜ್ಯ ಕೇಂದ್ರವಾಗಿತ್ತು. ಈ ನಗರವು ಹಲವಾರು ರಾಜವಂಶಗಳಿಂದ ಆಳಲ್ಪಟ್ಟಿತ್ತಾದರೂ ಅವುಗಳಲ್ಲಿ ಅತ್ಯಂತ ಪ್ರಮುಖವಾದದ್ದು ಚಾಲುಕ್ಯರ ರಾಜವಂಶ.

ಸ್ತಬ್ಧಚಿತ್ರದ ಮುಂಭಾಗವು ಬ್ರಹ್ಮ ಜಿನಾಲಯ ದೇವಸ್ಥಾನದ ಬ್ರಹ್ಮನ ಪ್ರತಿಮೆಯನ್ನು ಹೊಂದಿದೆ. ಇದು ಲಕ್ಕುಂಡಿಯಲ್ಲಿರುವ ಅತ್ಯಂತ ಹಳೆಯ ಜೈನ ದೇವಾಲಯವಾಗಿದ್ದು ಭಗವಾನ್ ಮಹಾವೀರನಿಗೆ ಸಮರ್ಪಿತವಾಗಿದೆ. ಅದರ ನಂತರ ಬ್ರಹ್ಮ ಜಿನಾಲಯ ದೇವಸ್ಥಾನದ ತೆರೆದ ಕಂಬದ ಮಂಟಪವಿದೆ. ಸ್ತಬ್ಧಚಿತ್ರದ ಮುಖ್ಯ ವಿಭಾಗವು ಭವ್ಯವಾದ ಮತ್ತು ಅಲಂಕೃತವಾದ ಕಾಶಿ ವಿಶ್ವೇಶ್ವರ ದೇವಸ್ಥಾನ ಮತ್ತು ಶಿವನಿಗೆ ಸಮರ್ಪಿತವಾದ ನನ್ನೇಶ್ವರ ದೇವಸ್ಥಾನವನ್ನು ಪ್ರದರ್ಶಿಸುತ್ತದೆ.

ಈ ಸುದ್ದಿಯನ್ನೂ ಓದಿ | Aeroindia 2025: ಏರ್‌ ಶೋ ಹಿನ್ನೆಲೆ ಈ ದಿನಗಳಲ್ಲಿ ಬೆಂಗಳೂರು ಏರ್‌ಪೋರ್ಟ್‌ ವಿಮಾನ ಹಾರಾಟದಲ್ಲಿ ವ್ಯತ್ಯಯ

image

ಈ ಬಾರಿ ‘ಲಕ್ಕುಂಡಿ : ಶಿಲ್ಪಕಲೆಯ ತೊಟ್ಟಿಲು’ ‘ಮೆಕ್ಕೆಕಟ್ಟು : ಮರಕೆತ್ತನೆಯ ದೈವ ನಿಧಿ’, ‘ಕರ್ನಾಟಕದ ಸಮೃದ್ಧಿಯ ಆಚರಣೆ’ ಹಾಗೂ ‘ಕರ್ನಾಟಕ ಒಂದು ರಾಜ್ಯ ಹಲವು ಜಗತ್ತು’ ಎಂಬ ನಾಲ್ಕು ವಿಷಯಗಳನ್ನು ಆಯ್ಕೆ ಮಾಡಿ ಕಳುಹಿಸಿತ್ತು. ಮೊದಲ ಸಭೆಯಲ್ಲಿಯೇ ‘ಲಕ್ಕುಂಡಿ: ಶಿಲ್ಪಕಲೆಯ ತೊಟ್ಟಿಲು’ ಎಂಬ ವಿಷಯವನ್ನು ಪರಿಣತರ ಸಮಿತಿಯು ಒಮ್ಮತದಿಂದ ಅಂತಿಮಗೊಳಿಸಿತ್ತು. ಅದಕ್ಕನುಗಣವಾಗಿ ಈ ಬಾರಿಯ ಸ್ತಬ್ಧಚಿತ್ರದಲ್ಲಿ ಲಕ್ಕುಂಡಿಯ ದೇವಾಲಯಗಳು ಕರ್ನಾಟಕದ ಶ್ರೀಮಂತ ಸಾಂಸ್ಕೃತಿಕ ಪರಂಪರೆಯನ್ನು ಪ್ರತಿಬಿಂಬಿಸುತ್ತಿವೆ.

| ಹೇಮಂತ್ ನಿಂಬಾಳ್ಕರ್, ವಾರ್ತಾ ಇಲಾಖೆ ಆಯುಕ್ತ
Three labourers brutally assaulted by brick kiln owner
1:53 PM January 20, 2025

Assault case: ಮೂವರು ಕಾರ್ಮಿಕರ ಮೇಲೆ ಇಟ್ಟಿಗೆ ಭಟ್ಟಿ ಮಾಲೀಕ ಮಾರಣಾಂತಿಕ ಹಲ್ಲೆ; ಕೆಲಸಕ್ಕೆ ಬರುವುದು ವಿಳಂಬವಾಗಿದ್ದಕ್ಕೆ ರಾಕ್ಷಸಿ ಕೃತ್ಯ!

Saif Ali Khan, Ibrahim
2:50 PM January 16, 2025

Saif Ali Khan: 1,200 ಕೋಟಿ ರೂ. ಆಸ್ತಿಗಳ ಒಡೆಯ ಸೈಫ್‌ ಆಲಿ ಖಾನ್‌ನನ್ನು‌ ಆಟೋದಲ್ಲಿ ಆಸ್ಪತ್ರೆಗೆ ಕರೆದೊಯ್ದ ಪುತ್ರ ಇಬ್ರಾಹಿಂ; ಕಾರಣವೇನು?

Student dies 1
8:51 PM January 18, 2025

Heart Attack: ಕಾಲೇಜು ಮುಗಿಸಿ ಹೋಗುವಾಗ ಹೃದಯಾಘಾತವಾಗಿ ವಿದ್ಯಾರ್ಥಿನಿ ಸಾವು

robbery case shooting
1:49 PM January 16, 2025

Murder Case: ಸೆಕ್ಯೂರಿಟಿ ಸಿಬ್ಬಂದಿಯ ಗುಂಡಿಕ್ಕಿ ಹತ್ಯೆ ಮಾಡಿ 93 ಲಕ್ಷ ರೂ. ದರೋಡೆ

BBK 11 Mid week Elimination (1)
9:12 PM January 15, 2025

BBK 11: ಇಂದೇ ನಡೆಯಲಿದೆ ಮಿಡ್ ವೀಕ್ ಎಲಿಮಿನೇಷನ್: ಔಟ್ ಆದ ಸ್ಪರ್ಧಿ ಇವರೇ ನೋಡಿ

Saif ali Khan (1)
9:38 AM January 18, 2025

Saif Ali Khan: ರಕ್ತಸಿಕ್ತವಾದ ಬಟ್ಟೆ, ಸಂಪೂರ್ಣ ಅಸ್ವಸ್ಥರಾಗಿದ್ದ ಸೈಫ್‌! ಆ ರಾತ್ರಿ ನಡೆದಿದ್ದಾದರೂ ಏನು? ಆಟೋ ಡ್ರೈವರ್‌ ಹೇಳಿದ್ದೇನು?

Naga Sadhus
11:15 PM January 18, 2025

Maha Kumbh Mela: ಕುಂಭಮೇಳದ ವೇಳೆ ನಾಗ ಸಾಧುಗಳು ಬರುವುದೆಲ್ಲಿಂದ? ಬಳಿಕ ಅಪ್ರತ್ಯಕ್ಷರಾಗುವುದೇಕೆ? ಅವರ ನಿಗೂಢ ಪ್ರಪಂಚ ಹೇಗಿದೆ? ಇಲ್ಲಿದೆ ಸಮಗ್ರ ವಿವರ

Chaithra Kundapura remuneration (1)
7:13 AM January 16, 2025

BBK 11: ಬಿಗ್ ಬಾಸ್​ನಿಂದ ಹೊರಬಂದ ಚೈತ್ರಾ ಕುಂದಾಪುರಗೆ ಸಿಕ್ಕ ಹಣ ಎಷ್ಟು ಗೊತ್ತೇ?

Honnamaradi jatre
5:53 PM January 15, 2025

Honnamaradi Jatre: ವೈಭವದಿಂದ ನಡೆದ ಹೊನ್ನಮರಡಿ ಜಾತ್ರೆ; ಶ್ರೀ ರಂಗನಾಥಸ್ವಾಮಿ ದರ್ಶನ ಪಡೆದ ಸಾವಿರಾರು ಭಕ್ತರು

Eshwara Khandre
6:54 PM January 16, 2025

Bidar ATM Robbery: ಬೀದರ್ ಎಟಿಎಂ ದರೋಡೆ ಪ್ರಕರಣ; ದುಷ್ಕರ್ಮಿಗಳ ವಿರುದ್ಧ ಕಠಿಣ ಕ್ರಮಕ್ಕೆ ಸಚಿವ ಖಂಡ್ರೆ ಸೂಚನೆ