ಫೋಟೋ ಗ್ಯಾಲರಿ ಬಿಗ್​ಬಾಸ್ ಬಜೆಟ್​ T20 ವಿಶ್ವಕಪ್​ ವಿದೇಶ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ಧಾರ್ಮಿಕ ಕ್ರೈಂ ಪ್ರವಾಸಿ ಪ್ರಪಂಚ ಸಂಪಾದಕೀಯ ಉದ್ಯೋಗ

Road Acident: ರೋಣ ಸಮೀಪ ಭೀಕರ ಅಪಘಾತ: ಕ್ರೂಸರ್‌ಗೆ ಲಾರಿ ಡಿಕ್ಕಿ, ಮೂವರು ಕಾರ್ಮಿಕರು ಸಾವು

ಗಜೇಂದ್ರಗಡದ ಶಿವಾಜಿ ನಗರ ನಿವಾಸಿಗಳಾದ ಕೂಲಿ ಕಾರ್ಮಿಕರು ಕ್ರೂಸರ್ ವಾಹನದಲ್ಲಿ ಕೆಲಸಕ್ಕಾಗಿ ರೋಣ ಕಡೆಗೆ ತೆರಳುತ್ತಿದ್ದ ವೇಳೆ ಲಾರಿ ಡಿಕ್ಕಿಯಾದ ಪರಿಣಾಮ ಈ ದುರ್ಘಟನೆ ಸಂಭವಿಸಿದೆ. ಅಪಘಾತದ ತೀವ್ರತೆಗೆ ಕ್ರೂಸರ್ ವಾಹನ ಸಂಪೂರ್ಣ ನಜ್ಜುಗುಜ್ಜಾಗಿದೆ. ಅಪಘಾತದ ಸ್ಥಳಕ್ಕೆ ರೋಣ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಅಪಘಾತಕ್ಕೀಡಾದ ಕ್ರೂಸರ್

ಗದಗ, ಫೆ. 05: ಕ್ರೂಸರ್ ವಾಹನ ಮತ್ತು ಲಾರಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ (Road Acident) ಮೂವರು ಸ್ಥಳದಲ್ಲೇ ಸಾವನ್ನಪ್ಪಿ (Death), 10ಕ್ಕೂ ಹೆಚ್ಚು ಮಂದಿ ಗಾಯಗೊಂಡ ಘಟನೆ ಗದಗ (Gadg) ಜಿಲ್ಲೆಯ ರೋಣ (Rona) ತಾಲೂಕಿನ ಜಿಗಳೂರು ಕ್ರಾಸ್ ಬಳಿ ನಡೆದಿದೆ. ಗಾಯಾಳುಗಳನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಗಜೇಂದ್ರಗಡದ ಶಿವಾಜಿ ನಗರ ನಿವಾಸಿಗಳಾದ ಕೂಲಿ ಕಾರ್ಮಿಕರು ಕ್ರೂಸರ್ ವಾಹನದಲ್ಲಿ ಕೆಲಸಕ್ಕಾಗಿ ರೋಣ ಕಡೆಗೆ ತೆರಳುತ್ತಿದ್ದ ವೇಳೆ ಲಾರಿ ಡಿಕ್ಕಿಯಾದ ಪರಿಣಾಮ ಈ ದುರ್ಘಟನೆ ಸಂಭವಿಸಿದೆ.

ಅಪಘಾತದ ತೀವ್ರತೆಗೆ ಕ್ರೂಸರ್ ವಾಹನ ಸಂಪೂರ್ಣ ನಜ್ಜುಗುಜ್ಜಾಗಿದೆ. ಅಪಘಾತದ ಸ್ಥಳಕ್ಕೆ ರೋಣ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಮನೆ ಗೋಡೆ ಕುಸಿದು ಇಬ್ಬರು ಕಾರ್ಮಿಕರ ಮೃತ್ಯು

ಗದಗ, ಫೆ.04 : ಗದಗ ಜಿಲ್ಲೆಯಲ್ಲಿ (gadag news) ಘೋರ ದುರಂತವೊಂದು ಸಂಭವಿಸಿದ್ದು, ಮನೆಗೋಡೆ ಕುಸಿದು (wall collapse) ಇಬ್ಬರು ಕಾರ್ಮಿಕರು ಸ್ಥಳದಲ್ಲೇ ಸಾವನ್ನಪ್ಪಿರುವ (Labourer death) ಘಟನೆ ನಡೆದಿದೆ. ಗದಗ ಜಿಲ್ಲೆಯ ನರಗುಂದ ತಾಲೂಕಿನ ಕಲಕೇರಿ ಗ್ರಾಮದಲ್ಲಿ ಘಟನೆ ನಡೆದಿದೆ. ಮನೆಗೋಡೆ ಕುಸಿದು ನಾಗಪ್ಪ ದೊಡ್ಡಮನಿ (60), ಶೇಖರಪ್ಪ ಪರಸಪ್ಪನವರ್ (55) ಸಾವನ್ನಪ್ಪಿದ್ದಾರೆ.

ಯಲ್ಲಪ್ಪ ಕೆಳಗೇರಿಯವರ ಹಳೆಯ ಮನೆ ಗೋಡೆ ತೆರವು ವೇಳೆ ಏಕಾಏಕಿ ಕಾರ್ಮಿಕರ ಮೇಲೆ ಗೋಡೆ ಕುಸಿದಿದೆ. ಅವಶೇಷಗಳಡಿ ಸಿಲುಕಿ ಇಬ್ಬರು ಕಾರ್ಮಿಕರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Self Harming: ಮದ್ಯ ಪಾರ್ಟಿ ಬಳಿಕ ಹೆತ್ತವರಿಗೆ ಹೆದರಿ ಕಟ್ಟಡದಿಂದ ಜಿಗಿದು ಬಾಲಕ ಸಾವು

ಹರೀಶ್‌ ಕೇರ

View all posts by this author