ಫೋಟೋ ಗ್ಯಾಲರಿ ಬಿಗ್​ಬಾಸ್ ಬಜೆಟ್​ T20 ವಿಶ್ವಕಪ್​ ವಿದೇಶ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ಧಾರ್ಮಿಕ ಕ್ರೈಂ ಪ್ರವಾಸಿ ಪ್ರಪಂಚ ಸಂಪಾದಕೀಯ ಉದ್ಯೋಗ

ಸರ್ಕಾರಕ್ಕೆ ನಿಧಿ ಹಸ್ತಾಂತರಿಸಿದ್ದ ಲಕ್ಕುಂಡಿಯ ಪ್ರಜ್ವಲ್‌ ರಿತ್ತಿ ಕುಟುಂಬಕ್ಕೆ ಸೈಟ್‌ ಘೋಷಣೆ

ಮನೆಗೆ ಪಾಯ ಅಗೆಯುವಾಗ ಸಿಕ್ಕಿದ್ದ ನಿಧಿಯನ್ನು ರಾಜ್ಯ ಸರ್ಕಾರಕ್ಕೆ ಹಸ್ತಾಂತಿಸಿದ್ದ ರಿತ್ತಿ ‌ಕುಟುಂಬಕ್ಕೆ 30*40 ಸೈಟ್ ನೀಡುವ ನಿರ್ಣಯವನ್ನು ಗ್ರಾಮ ಪಂಚಾಯಿತಿ ಪಾಸ್ ಮಾಡಿದೆ. ಮಾನವೀಯ ಮತ್ತು ಸಾಮಾಜಿಕ ನ್ಯಾಯದ ದೃಷ್ಟಿಯಿಂದ ವಿಶೇಷ ಪ್ರಕರಣ ಎಂದು ಪರಿಗಣಿಸಿ ಗ್ರಾಮ ಪಂಚಾಯಿತಿ ಸೈಟ್‌ ನೀಡುವ ನಿರ್ಧಾರ ತೆಗೆದುಕೊಂಡಿದೆ.

ರಾಜ್ಯ ಸರ್ಕಾರಕ್ಕೆ ನಿಧಿ ಒಪ್ಪಿಸಿದ್ದ ಪ್ರಜ್ವಲ್ ರಿತ್ತಿ ಕುಟುಂಬಕ್ಕೆ ಸನ್ಮಾನ

ಗದಗ: ಜಿಲ್ಲೆಯ ಲಕ್ಕುಂಡಿಯಲ್ಲಿ ಮನೆ ನಿರ್ಮಾಣಕ್ಕಾಗಿ ಪಾಯ ತೋಡುವ ವೇಳೆ ಸಿಕ್ಕಿದ್ದ ನಿಧಿಯನ್ನು ರಾಜ್ಯ ಸರ್ಕಾರಕ್ಕೆ ಹಸ್ತಾಂತರಿಸಿದ್ದ ಪ್ರಜ್ವಲ್ ರಿತ್ತಿ ಕುಟುಂಬಕ್ಕೆ ಜಿಲ್ಲಾಡಳಿತ ಸಹಾಯಹಸ್ತ ಚಾಚಿದೆ. ಲಕ್ಕುಂಡಿ ಗ್ರಾಮ ಪಂಚಾಯಿತಿಯಿಂದ ನಿವೇಶನ ನೀಡುವುದಾಗಿ ಘೋಷಣೆ ಮಾಡಲಾಗಿದೆ. ಗ್ರಾಪಂ ವಿಶೇಷ ಸಭೆಯಲ್ಲಿ ರಿತ್ತಿ ಕುಟುಂಬಕ್ಕೆ ನಿವೇಶನ ನೀಡಲು ನಿರ್ಧರಿಸಲಾಗಿದೆ. ಜನವರಿ 26ರಂದು ಪ್ರಜ್ವಲ್ ರಿತ್ತಿ ಕುಟುಂಬಸ್ಥರಿಗೆ ನಿವೇಶನದ ಪ್ರಮಾಣ ಪತ್ರವನ್ನು ಹಸ್ತಾಂತರವಾಲಿದೆ.

ರಿತ್ತಿ ‌ಕುಟುಂಬಕ್ಕೆ 30*40 ಸೈಟ್ ನೀಡುವ ನಿರ್ಣಯವನ್ನು ಪಾಸ್ ಮಾಡಲಾಗಿದೆ. ಮಾನವೀಯ ಮತ್ತು ಸಾಮಾಜಿಕ ನ್ಯಾಯದ ದೃಷ್ಟಿಯಿಂದ ವಿಶೇಷ ಪ್ರಕರಣ ಎಂದು ಪರಿಗಣಿಸಿ ಗ್ರಾಮ ಪಂಚಾಯಿತಿ ಸೈಟ್‌ ನೀಡುವ ನಿರ್ಧಾರ ತೆಗೆದುಕೊಂಡಿದೆ. ಮುಂದೆ ಸಚಿವರು, ಶಾಸಕರ ಅನುದಾನದಲ್ಲಿ ಮನೆ ನಿರ್ಮಾಣ ಮಾಡಿಕೊಡುವುದಾಗಿ ಭರವಸೆ ನೀಡಲಾಗಿದೆ. ಅಲ್ಲದೇ ಪ್ರಜ್ವಲ್ ರಿತ್ತಿಗೆ ಉಚಿತ ಶಿಕ್ಷಣ, ಪ್ರಜ್ವಲ್ ತಾಯಿ ಗಂಗಮ್ಮಗೆ ಕೆಲಸ ಕೊಡುವುದಾಗಿ ಗ್ರಾಮ ಪಂಚಾಯಿತಿ ಭರವಸೆ ನೀಡಿದೆ.

ದೇವಸ್ಥಾನದೊಳಗೆ ಮನೆ ನಿರ್ಮಿಸಿಕೊಂಡ ಕುಟುಂಬ

Lakkundi temple

ಗದಗ: ಲಕ್ಕುಂಡಿಯಲ್ಲಿ ನಿಧಿ ಸಿಕ್ಕ ಗ್ರಾಮದಲ್ಲಿ ಕುಟುಂಬವೊಂದು ನಾಲ್ಕು ಶತಮಾನಗಳಷ್ಟು ಹಳೆಯದಾದ ಈಶ್ವರನ ದೇವಾಲಯದೊಳಗೆ ಮನೆ ನಿರ್ಮಾಣ ಮಾಡಿಕೊಂಡು ವಾಸಿಸುತ್ತಿದೆ. ಹೌದು, ಗದಗ ತಾಲೂಕಿನ ಲಕ್ಕುಂಡಿ ಗ್ರಾಮದ ಶಿವಯ್ಯ ಹಾಗೂ ಶೇಖರಯ್ಯ ಚೌಕಿಮಠ ಎಂಬವರ ಕುಟುಂಬ, ದೇವಸ್ಥಾನದೊಳಗೆ ಮನೆ ನಿರ್ಮಾಣ ಮಾಡಿಕೊಂಡು ವಾಸಿಸುತ್ತಿದೆ. ಈ ಮನೆಯಲ್ಲಿ ಸುಮಾರು 5-6 ಮಂದಿ ವಾಸ ಮಾಡುತ್ತಿದ್ದಾರೆ. ದೇವಸ್ಥಾನದ ಹೊರಭಾಗದಲ್ಲಿ ಮನೆಯಿದೆ. ಅದರೊಳಗೆ ಈ ಐತಿಹಾಸಿಕ ದೇವಾಲಯವಿದೆ.

ಲಕ್ಕುಂಡಿ ಉತ್ಖನನದ ವೇಳೆಯಲ್ಲಿ ದೊಡ್ಡ ಹಾವು ಪತ್ತೆ! ಬೆಚ್ಚಿ ಬಿದ್ದ ಅಧಿಕಾರಿಗಳು

ಈ ದೇವಾಲಯದೊಳಗೆ ನಾಲ್ಕನೇ ಶತಮಾತನದ ಶಿವನ ಮೂರ್ತಿಯಿದೆ. ಈ ಮೂರ್ತಿಯನ್ನೇ ಕುಟುಂಬದವರು ಆರಾಧಿಸುತ್ತಾ ಬಂದಿದ್ದಾರೆ. ಸುಮಾರು 5 ತಲೆಮಾರಿನಿಂದ ಈ ಕುಟುಂಬ ಇಲ್ಲಿ ವಾಸಿಸುತ್ತಿದೆ. ಬೇರೆ ಕಡೆ ನಿವೇಶನ ನೀಡಿದರೆ ಮಾತ್ರ ಸ್ಥಳಾಂತರಗೊಳ್ಳುತ್ತೇವೆ, ಇಲ್ಲವಾದರೆ ಸ್ಥಳಾಂತರವಾಗುವುದಿಲ್ಲ ಎಂದು ಕುಟುಂಬ ತಿಳಿಸಿದೆ.