ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ

ಗದಗದ ಗ್ರಾಮೀಣಾಭಿವೃದ್ಧಿ ವಿವಿ ಹಾಸ್ಟೆಲ್‌ನಲ್ಲಿ MPH ವಿದ್ಯಾರ್ಥಿನಿ ಅನುಮಾನಾಸ್ಪದ ಸಾವು; ಕೊಲೆ ಶಂಕೆ!

Gadag Student death: ಮೂಲತಃ ಬಾಗಲಕೋಟೆ ಜಿಲ್ಲೆಯ ಗದ್ದನಕೇರಿ ಮೂಲದ ವಿದ್ಯಾರ್ಥಿನಿ, ಗದಗದ ಮಹಾತ್ಮ ಗಾಂಧಿ ಗ್ರಾಮೀಣಾಭಿವೃದ್ಧಿ ವಿಶ್ವವಿದ್ಯಾಲಯದ ಹಾಸ್ಟೆಲ್‌ನಲ್ಲಿ ಶವವಾಗಿ ಪತ್ತೆಯಾಗಿದ್ದಾಳೆ. ಈ ಬಗ್ಗೆ ಗದಗ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಗದಗ: ಹಾಸ್ಟೆಲ್‌ನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪದವಿ ವಿದ್ಯಾರ್ಥಿನಿ ಶವ ಪತ್ತೆಯಾಗಿರುವ ಘಟನೆ (Gadag Student death) ಗದಗದ ಮಹಾತ್ಮ ಗಾಂಧಿ ಗ್ರಾಮೀಣಾಭಿವೃದ್ಧಿ ವಿಶ್ವವಿದ್ಯಾಲಯ (MGRDPR University) ಹಾಸ್ಟೆಲ್‌ನಲ್ಲಿ ನಡೆದಿದೆ. 25 ವರ್ಷದ ವೀಣಾ ಹಾನಾಪುರ ಮೃತ ಯುವತಿ. ವೀಣಾ ಆರ್‌ಡಿಪಿಆರ್‌ ವಿಶ್ವವಿದ್ಯಾಲಯದಲ್ಲಿ ಮಾಸ್ಟರ್ ಆಫ್ ಪಬ್ಲಿಕ್ ಹೆಲ್ತ್ (MPH) ಕೋರ್ಸ್ ವ್ಯಾಸಂಗ ಮಾಡುತ್ತಿದ್ದಳು. ಈಕೆ ಮೂಲತಃ ಬಾಗಲಕೋಟೆ ಜಿಲ್ಲೆಯ ಗದ್ದನಕೇರಿ ಮೂಲದವಳು.

ವೀಣಾ ಸಾವಿನ ಬಗ್ಗೆ ನಿಖರವಾದ ಮಾಹಿತಿ ಸದ್ಯಕ್ಕೆ ತಿಳಿದು ಬಂದಿಲ್ಲ. ಆದರೆ ನೇಣುಬಿಗಿದ ಸ್ಥಿತಿಯಲ್ಲಿ ವೀಣಾ ಶವ ಪತ್ತೆಯಾದಾಗ, ಕಾಲುಗಳು ನೆಲಕ್ಕೆ ತಾಗಿದ್ದವು, ಬಿಗಿದಿರುವ ಬಟ್ಟೆ ಕೂಡ ಮಗಳದ್ದಲ್ಲ. ಅಲ್ಲದೇ ಮುಖಕ್ಕೆ ಗಾಯಗಳಾಗಿವೆ. ಇದರಿಂದ ಪೋಷಕರು ಕೊಲೆ ಶಂಕೆ ವ್ಯಕ್ತಪಡಿಸಿದ್ದಾರೆ. ಮಗಳ ಸಾವಿನ ಬಗ್ಗೆ ಪೋಷಕರು ಅನುಮಾನ ವ್ಯಕ್ತಪಡಿಸಿದ್ದು, ಸಮಗ್ರ ತನಿಖೆ ನಡೆಸಲು ಆಗ್ರಹಿಸಿದ್ದಾರೆ.

ಗದಗ ಗ್ರಾಮೀಣ ಪೊಲೀಸರು, ವಿವಿ ಸಿಬ್ಬಂದಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಬಳಿಕ ಗದಗ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮತ್ತೊಂದೆಡೆ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.

ದಿಟ್ಟಿಸಿ ನೋಡಿದ್ದಕ್ಕೆ ಟಂ-ಟಂ ಚಾಲಕನಿಗೆ ಮಾರಣಾಂತಿಕ ಹಲ್ಲೆ

ಅಫಜಲಪುರ: ತಾಲೂಕಿನ ದೇವಲಗಾಣಗಾಪುರ ಗ್ರಾಮದಲ್ಲಿ ಟಂ-ಟಂ ಚಾಲಕನ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿದ ಘಟನೆ ನಡೆದಿದೆ. ಶುಕ್ರವಾರ ನಸುಕಿನ ಜಾವ ಸುಮಾರು 2.17 ಗಂಟೆ ಸುಮಾರಿಗೆ ಸಂಗಮ ರಸ್ತೆಯಲ್ಲಿರುವ ಅವಧೂತ ಆಶ್ರಮದ ಸಮೀಪ ಈ ಘಟನೆ ನಡೆದಿದೆ. ಚಾಲಕನನ್ನು ದೇವಲಗಾಣಗಾಪುರ ಗ್ರಾಮದ ದತ್ತು (19) ಎಂದು ಗುರುತಿಸಲಾಗಿದೆ. ಆತ ವೃತ್ತಿಯಲ್ಲಿ ಟಂ-ಟಂ ಚಾಲಕ.

ಪ್ರಕರಣಕ್ಕೆ ಸಂಬಂಧಿಸಿದಂತೆ ಅದೇ ಗ್ರಾಮದ ಪ್ರಜ್ವಲ್ ಹಾಗೂ ಪ್ರೀತಮ್ ಹೊಸಮನಿ ವಿರುದ್ಧ ಹಲ್ಲೆ ನಡೆಸಿರುವ ಆರೋಪ ಕೇಳಿಬಂದಿದೆ. ಘಟನೆಯಲ್ಲಿ ತೀವ್ರವಾಗಿ ಗಾಯಗೊಂಡಿದ್ದ ದತ್ತುವನ್ನು ಮೊದಲಿಗೆ ಸ್ಥಳೀಯ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿ ಬಳಿಕ ಹೆಚ್ಚಿನ ಚಿಕಿತ್ಸೆಗೆ ಕಲಬುರಗಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಹೆಣ್ಣು ಮಗು ಎಂಬ ಕಾರಣಕ್ಕೆ 13 ದಿನಗಳ ಮಗುವನ್ನು ಸಂಪ್‌ಗೆ ಎಸೆದು ಕೊಂದ ತಂದೆ!

“ದಿಟ್ಟಿಸಿ ನೋಡಿದ ವಿಚಾರ”ವನ್ನು ನೆಪವನ್ನಾಗಿ ಮಾಡಿಕೊಂಡು ಆರೋಪಿಗಳು ಹಲ್ಲೆ ನಡೆಸಿದ್ದಾರೆ ಎಂದು ಗಾಯಾಳು ಯುವಕ ನೀಡಿದ್ದ ಹೇಳಿಕೆಯಲ್ಲಿ ಉಲ್ಲೇಖಿಸಲಾಗಿದೆ ಎಂದು ಮೂಲಗಳು ತಿಳಿಸಿವೆ. ಈ ಸಂಬಂಧ ದೇವಲಗಾಣಗಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಆರೋಪಿಗಳ ಪತ್ತೆ ಹಾಗೂ ಬಂಧನಕ್ಕೆ ಬಲೆ ಬೀಸಿದ್ದಾರೆ.