ಫೋಟೋ ಗ್ಯಾಲರಿ ಬಿಗ್​ಬಾಸ್ ಬಜೆಟ್​ T20 ವಿಶ್ವಕಪ್​ ವಿದೇಶ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ಧಾರ್ಮಿಕ ಕ್ರೈಂ ಪ್ರವಾಸಿ ಪ್ರಪಂಚ ಸಂಪಾದಕೀಯ ಉದ್ಯೋಗ

ಶಿವರಾತ್ರಿಯಂದೇ ಗದಗದಲ್ಲಿ ಶಿವಲಿಂಗ, ನಂದಿ ವಿಗ್ರಹ ಭಗ್ನಗೊಳಿಸಿದ ಕಿಡಿಗೇಡಿಗಳು

ಗದಗ ಜಿಲ್ಲೆಯ ಮುಂಡರಗಿ ತಾಲೂಕಿನ ಶಿಂಗಟಾಲೂರಲ್ಲಿ ಶ್ರೀ ರಾಮೇಶ್ವರ, ನಂದಿ ವಿಗ್ರಹವನ್ನು ಭಗ್ನಗೊಳಿಸಲಾಗಿದೆ. ಭಾನುವಾರ ಬೆಳಗ್ಗೆ ಅರ್ಚಕರು ದೇವಸ್ಥಾನಕ್ಕೆ ಹೋದ ವೇಳೆ ಘಟನೆ ಬೆಳಕಿಗೆ ಬಂದಿದೆ. ಈ ಘಟನೆಗೆ ಗ್ರಾಮಸ್ಥರು ವ್ಯಾಪಕ ಆಕ್ರೋಶ ಹೊರಹಾಕಿದ್ದು, ಆರೋಪಿಗಳ ಬಂಧನಕ್ಕೆ ಆಗ್ರಹಿಸಿದ್ದಾರೆ.

ಗದಗದಲ್ಲಿ ಶಿವಲಿಂಗ, ನಂದಿ ವಿಗ್ರಹ ಭಗ್ನಗೊಳಿಸಿದ ಕಿಡಿಗೇಡಿಗಳು

ಗದಗ ಜಿಲ್ಲೆಯ ಶಿಂಗಟಾಲೂರಲ್ಲಿ ಶಿವಲಿಂಗ, ನಂದಿ ವಿಗ್ರಹ ಭಗ್ನಗೊಳಿಸಿರುವುದು. -

Prabhakara R
Prabhakara R Feb 15, 2026 4:11 PM

ಗದಗ: ಮಹಾ ಶಿವರಾತ್ರಿಯ ದಿನದಂದೇ ಗದಗ ಜಿಲ್ಲೆಯ (Gadag News) ದೇವಸ್ಥಾನವೊಂದರಲ್ಲಿ ಶಿವಲಿಂಗ, ನಂದಿ ವಿಗ್ರಹವನ್ನು ಭಗ್ನಗೊಳಿಸಿ, ವಿರೂಪಗೊಳಿಸಿರುವ ಘಟನೆ ನಡೆದಿದೆ. ಜಿಲ್ಲೆಯ ಮುಂಡರಗಿ ತಾಲೂಕಿನ ಶಿಂಗಟಾಲೂರಲ್ಲಿ ಈ ಘಟನೆ ನಡೆದಿದೆ. ಶಿಂಗಟಾಲೂರು ಗ್ರಾಮದ ಹೊರ ವಲಯದಲ್ಲಿರುವ ಶ್ರೀ ರಾಮೇಶ್ವರ ಹಾಗೂ ನಂದಿ ವಿಗ್ರಹವನ್ನು ದುಷ್ಕರ್ಮಿಗಳು ಭಗ್ನಗೊಳಿಸಿದ್ದಾರೆ.

ಇಂದು ಮಹಾ ಶಿವರಾತ್ರಿಯ ದಿನವಾದ ಕಾರಣ ಪೂಜೆಗೆಂದು ಅರ್ಚಕರು ದೇವಾಲಯಕ್ಕೆ ತೆರಳಿದ ಸಂದರ್ಭದಲ್ಲಿ ಕೃತ್ಯ ಬೆಳಕಿಗೆ ಬಂದಿದೆ. ನೆನ್ನೆಯಷ್ಟೇ ಮಹಾ ಶಿವರಾತ್ರಿ ಪ್ರಯುಕ್ತ ದೇವಾಲಯಕ್ಕೆ ಸುಣ್ಣ-ಬಣ್ಣ ಬಳಿಯಲಾಗಿತ್ತು. ಆದರೇ ಇಂದು ಬೆಳಗ್ಗೆ ಶಿವಲಿಂಗ, ನಂದಿ ವಿಗ್ರಹವನ್ನು ವಿರೂಪಗೊಳಿಸಿದ್ದರಿಂದ ಗ್ರಾಮದಲ್ಲಿ ಉದ್ವಿಗ್ನತೆಯ ವಾತಾವರಣ ಉಂಟಾಗಿದೆ.

ಕಿಡಿಗೇಡಿಗಳ ಈ ದುಷ್ಕೃತ್ಯವನ್ನು ಶಿಂಗಟಾಲೂರು ಗ್ರಾಮಸ್ಥರು ಖಂಡಿಸಿದ್ದಾರೆ. ಅಲ್ಲದೇ ಆರೋಪಿಗಳ ಬಂಧಿಸಲು ಒತ್ತಾಯಿಸಿದ್ದಾರೆ.

ಕಲಬುರಗಿಯ ಶ್ರೀ ಸ್ವಯಂಭೂ ಸೋಮೇಶ್ವರ ಪೂಜೆಗೆ ಮುಂದಾದ ಹಿಂದೂ ಕಾರ್ಯಕರ್ತರ ಅರೆಸ್ಟ್

ಕಲಬುರಗಿ: ನಗರದ ಐತಿಹಾಸಿಕ ಕಲಬುರಗಿ ಕೋಟೆಯ (Kalaburagi Fort) ಆವರಣದಲ್ಲಿರುವ ಶ್ರೀ ಸ್ವಯಂಭೂ ಸೋಮೇಶ್ವರ ದೇವಾಲಯದಲ್ಲಿ (Swayambhu Someshwara Temple) ಮಹಾಶಿವರಾತ್ರಿ (Mahashivratri 2026) ಪ್ರಯುಕ್ತ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಲು ಮುಂದಾದ ನೂರಾರು ಹಿಂದೂ ಕಾರ್ಯಕರ್ತರನ್ನು ಪೊಲೀಸರು ತಡೆದು ಬಂಧಿಸಿದ ಘಟನೆ ಭಾನುವಾರ ನಡೆದಿದೆ.

ದೇಗುಲದಲ್ಲಿ ಪೂಜೆ ಸಲ್ಲಿಸಲು ವಿಶ್ವ ಹಿಂದೂ ಪರಿಷತ್ (VHP) ಹಾಗೂ ಬಜರಂಗದಳದ ಕಾರ್ಯಕರ್ತರು ನಿರ್ಧರಿಸಿದ್ದರು. ಆದರೆ, ಅಹಿತಕರ ಘಟನೆ ನಡೆಯದಂತೆ ಮುನ್ನೆಚ್ಚರಿಕೆ ವಹಿಸಿದ ಪೊಲೀಸ್ ಇಲಾಖೆ, ಕೋಟೆಯ ಸುತ್ತಮುತ್ತ ನೂರಾರು ಪೊಲೀಸರನ್ನು ನಿಯೋಜಿಸಿ, ಬ್ಯಾರಿಕೇಡ್‌ಗಳನ್ನು ಹಾಕಿ ಕೋಟೆಯನ್ನು ಸಂಪೂರ್ಣವಾಗಿ ಬಂದ್ ಮಾಡಿತ್ತು. ಕೋಟೆಯೊಳಗೆ ಯಾರನ್ನೂ ಬಿಡದಂತೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗಿತ್ತು.

ಬೆಳಗ್ಗೆಯಿಂದಲೇ ಕೋಟೆ ಮುಂಭಾಗ ಜಮಾಯಿಸಿದ ನೂರಾರು ಕಾರ್ಯಕರ್ತರು 'ಹರ್ ಹರ್ ಮಹದೇವ್', 'ಓಂ ನಮಃ ಶಿವಾಯ' ಹಾಗೂ ಬಜರಂಗದಳದ ಪರ ಘೋಷಣೆಗಳನ್ನು ಕೂಗಿದರು. ಪೊಲೀಸರು ಪೂಜೆಗೆ ಅವಕಾಶ ನಿರಾಕರಿಸಿದ್ದರಿಂದ ಆಕ್ರೋಶಗೊಂಡ ಕಾರ್ಯಕರ್ತರು ನಡುರಸ್ತೆಯಲ್ಲೇ ಕುಳಿತು ಪ್ರತಿಭಟನೆ ನಡೆಸಿದರು. ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದ್ದಂತೆ, ಪೊಲೀಸರು ಪ್ರತಿಭಟನಾನಿರತ ನೂರಾರು ಕಾರ್ಯಕರ್ತರನ್ನು ವಶಕ್ಕೆ ಪಡೆದಿದ್ದಾರೆ.