ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ

Hindi in SSLC: ಎಸ್‌ಎಸ್‌ಎಲ್‌ಸಿಯಲ್ಲಿ ಹಿಂದಿ ಭಾಷೆಗೆ ಗ್ರೇಡ್‌ ಬೇಡ, ಅಂಕವನ್ನೇ ಕೊಡಿ: ಸರ್ಕಾರಕ್ಕೆ ಹೈಕೋರ್ಟ್‌ ಅಂತಿಮ ನಿರ್ದೇಶನ

ಎಸ್ಎಸ್ಎಲ್‌ಸಿಯಲ್ಲಿ ಹಿಂದಿ ಭಾಷೆಗೆ ಗ್ರೇಡ್ ಬದಲು ಅಂಕ ನೀಡುವಂತೆ ಈ ಹಿಂದೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ಆದೇಶ ನೀಡಿತ್ತು. ಇದನ್ನು ಪ್ರಶ್ನಿಸಿ ರಾಜ್ಯ ಸರ್ಕಾರ ಹೈಕೋರ್ಟ್‌ಗೆ ಮರುಪರಿಶೀಲನ ಅರ್ಜಿ ಸಲ್ಲಿಸಿತ್ತು. ಇದೀಗ ಹೈಕೋರ್ಟ್ ಮರುಪರಿಶೀಲನೆ ಅರ್ಜಿಯನ್ನು ವಜಾಗೊಳಿಸಿ ಹಿಂದಿ ಭಾಷೆಗೆ ಗ್ರೇಡ್ ಬದಲು ಅಂಕಗಳನ್ನು ನೀಡಿ ಎಂದು ಮಹತ್ವದ ಆದೇಶ ಹೊರಡಿಸಿದೆ.

ಕರ್ನಾಟಕ ಹೈಕೋರ್ಟ್

ಬೆಂಗಳೂರು, ಏ.21: ಎಸ್​ಎಸ್​ಎಲ್​ಸಿ ಪರೀಕ್ಷೆಯಲ್ಲಿ (SSLC exam) ಹಿಂದಿ (Hindi) ಸೇರಿದಂತೆ ತೃತೀಯ ಭಾಷೆ ವಿಷಯಗಳಿಗೆ ಗ್ರೇಡ್‌ ಬದಲಿಗೆ ಅಂಕಗಳನ್ನು ನೀಡುವಂತೆ ಹೈಕೋರ್ಟ್‌ (Karnataka High Court) ಸೂಚನೆ ನೀಡಿದ್ದರೂ ಮರು ಪರಿಶೀಲನಾ ಅರ್ಜಿ (Reconsideration Application) ಸಲ್ಲಿಸಿದ್ದ ರಾಜ್ಯ ಸರ್ಕಾರಕ್ಕೆ ಮತ್ತೆ ಹಿನ್ನಡೆಯಾಗಿದೆ. ಈ ಸಂಬಂಧ ಹೈಕೋರ್ಟ್​ನಲ್ಲಿ ಇಂದು ಅರ್ಜಿ ವಿಚಾರಣೆ ನಡೆದಿದ್ದು, ಹಿಂದಿ ಭಾಷೆಗೆ ಅಂಕ ನೀಡುವ ವಿಚಾರಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ಮಹತ್ವದ ಆದೇಶ ಹೊರಡಿಸಿದೆ. ಹಿಂದಿ ಭಾಷೆಗೆ ಕೇವಲ ‘ಗ್ರೇಡ್’ ನೀಡುವ ಬದಲಾಗಿ, ಇತರ ವಿಷಯಗಳಂತೆ ಅಂಕಗಳನ್ನು (Marks) ನೀಡಬೇಕು ಎಂದು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನಿರ್ದೇಶನ ನೀಡಿದೆ.

ಎಸ್ಎಸ್ಎಲ್‌ಸಿ ಯಲ್ಲಿ ಹಿಂದಿ ಭಾಷೆಗೆ ಗ್ರೇಡ್ ಬದಲು ಅಂಕ ನೀಡುವಂತೆ ಈ ಹಿಂದೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ಆದೇಶ ನೀಡಿತ್ತು. ಇದನ್ನು ಪ್ರಶ್ನಿಸಿ ರಾಜ್ಯ ಸರ್ಕಾರ ಹೈಕೋರ್ಟ್‌ಗೆ ಮರುಪರಿಶೀಲನ ಅರ್ಜಿ ಸಲ್ಲಿಸಿತ್ತು. ಇದೀಗ ಹೈಕೋರ್ಟ್ ಮರುಪರಿಶೀಲನೆ ಅರ್ಜಿಯನ್ನು ವಜಾಗೊಳಿಸಿ ಹಿಂದಿ ಭಾಷೆಗೆ ಗ್ರೇಡ್ ಬದಲು ಅಂಕಗಳನ್ನು ನೀಡಿ ಎಂದು ಮಹತ್ವದ ಆದೇಶ ಹೊರಡಿಸಿದೆ. ನ್ಯಾಯಮೂರ್ತಿ ಇ.ಎಸ್ ಇಂದಿರೇಶ್ ಅವರಿದ್ದ ಹೈಕೋರ್ಟ್ ಪೀಠ ಈ ಆದೇಶ ಹೊರಡಿಸಿದೆ.

ಪ್ರಸಕ್ತ ಸಾಲಿಗೆ ಹಿಂದಿ ಭಾಷೆಗೆ ಗ್ರೇಡ್ ಬದಲು ಅಂಕ ನೀಡಿ ಎಂದು ಆದೇಶ ಹೊರಡಿಸಿದ್ದು, ಸರ್ಕಾರದ ಪರವಾಗಿ ಅಡ್ವೋಕೇಟ್ ಜನರಲ್ ಶಶಿಕಿರಣ್ ಶೆಟ್ಟಿ ವಾದ ಮಂಡಿಸಿದರು. ಹೈಕೋರ್ಟ್ ವಿಭಾಗೀಯ ಪೀಠದಲ್ಲಿ ಪಿಐಎಲ್ ವಜಾಗೊಂಡಿದೆ. ಹಿಂದಿ ಭಾಷೆಯಲ್ಲಿ ಲಕ್ಷಕ್ಕೂ ಹೆಚ್ಚು ಮಂದಿ ಅನುತ್ತೀರ್ಣಗೊಂಡಿದ್ದರು. ಹೀಗಾಗಿ ವಿದ್ಯಾರ್ಥಿಗಳ ಮೇಲೆ ಒತ್ತಡ ಕಡಿಮೆ ಮಾಡಲು ಈ ಕ್ರಮ ಕೈಗೊಳ್ಳಲಾಗಿದೆ. ಸೂಕ್ತ ತಿದ್ದುಪಡಿಯೊಂದಿಗೆ ಸರ್ಕಾರ ಕರಡು ರೂಪಿಸುತ್ತಿದೆ. ಅಂಕದ ಬದಲು ಗ್ರೇಡ್ ನೀಡಲಾಗುತ್ತಿದೆ ಎಂದು ಎಜಿ ಶಶಿಕರಣ್ ಶೆಟ್ಟಿ ವಾದ ಮಂಡಿಸಿದರು.

Hindi Language: ಹಿಂದಿ ಭಾಷೆಗೆ ಗ್ರೇಡ್:‌ ನ್ಯಾಯಾಲಯದ ಮುಂದೆ ರಾಜ್ಯ ಸರಕಾರ ಮರುಪರಿಶೀಲನೆ ಅರ್ಜಿ

ಎಸ್ಎಸ್ಎಲ್‌ಸಿ ಪರೀಕ್ಷೆ ಆಧಿಸೂಚನೆ ಹೊರಡಿಸಿದಾಗಲೇ ಇದನ್ನು ಸ್ಪಷ್ಟಪಡಿಸಬೇಕಿತ್ತು. ಅಧಿಸೂಚನೆಯಲ್ಲಿ ಇಲ್ಲದ ಗ್ರೇಡ್ ಪದ್ದತಿ ಈಗ ಅನುಷ್ಠಾನಗೊಳಿಸುತ್ತಿದ್ದೀರಿ. ಪಿಯುಸಿಯಲ್ಲಿ ಈಗ 83 ಪ್ರತಿಶತ ವಿದ್ಯಾರ್ಥಿಗಳು ಉತ್ತೀರ್ಣರಾಗುತ್ತಿದ್ದಾರೆ. ನೀವು ಅದನ್ನು ಪಾಸ್ ಮಾಡಬೇಕೆಂದಿದ್ದರೆ ಪರೀಕ್ಷೆಯನ್ನೇ ರದ್ದು ಮಾಡಿ. ನಿಯಮ ರೂಪಿಸಿದ ಬಳಿಕ ಸರ್ಕಾರ ಸೂಕ್ತವನಿಸಿದ ಕ್ರಮ ತೆಗೆದುಕೊಳ್ಳಬಹುದು. ನಿಯಮ ರೂಪಿಸುವ ಮುಂಚೆಯೇ ಅಂಕ ಪದ್ಧತಿ ಬದಲಾವಣೆ ಸೂಕ್ತವಲ್ಲ. ಹೀಗಾಗಿ 2025- 26ನೇ ಸಾಲಿನಲ್ಲಿ ಹಿಂದಿ ಭಾಷೆಗೆ ಅಂಕ ನೀಡಿ ಎಂದು ಹೈಕೋರ್ಟ್ ಆದೇಶ ಹೊರಡಿಸಿದೆ.

ಪ್ರಕರಣದ ಹಿನ್ನೆಲೆ ಮತ್ತು ಆದೇಶ

ಹೈಕೋರ್ಟ್‌ನ ಈ ನಿರ್ಧಾರವು ಮುಖ್ಯವಾಗಿ ಹಿಂದಿ ಭಾಷೆಯ ಪರೀಕ್ಷೆಯಲ್ಲಿನ ಪ್ರಶ್ನೆಗಳ ಗೊಂದಲ ಅಥವಾ ತಪ್ಪುಗಳಿಗೆ ಸಂಬಂಧಿಸಿದ್ದಾಗಿದೆ. ಪರೀಕ್ಷೆಯಲ್ಲಿ ಕೇಳಲಾದ ಕೆಲವು ಪ್ರಶ್ನೆಗಳು ಪಠ್ಯಕ್ರಮಕ್ಕೆ ಹೊರತಾಗಿದ್ದವು ಅಥವಾ ತಾಂತ್ರಿಕ ದೋಷಗಳನ್ನು ಹೊಂದಿದ್ದವು ಎಂಬ ಹಿನ್ನೆಲೆಯಲ್ಲಿ, ಆ ಪ್ರಶ್ನೆಗಳಿಗೆ ಹಾಜರಾದ (Attempt ಮಾಡಿದ) ವಿದ್ಯಾರ್ಥಿಗಳಿಗೆ ಕೃಪಾಂಕ ನೀಡುವಂತೆ ಕೋರ್ಟ್ ಈ ಹಿಂದೆ ಸೂಚಿಸಿತ್ತು.

Hindi Third Language: ಎಸ್‌ಎಸ್‌ಎಲ್‌ಸಿಯಲ್ಲಿ ಹಿಂದಿ ಭಾಷೆಗೆ ಗ್ರೇಡ್‌ ನಿರ್ಧಾರ ಹೀಗೆ: ಕರಡು ಅಧಿಸೂಚನೆ

ಹೈಕೋರ್ಟ್‌ನ ಈ ಆದೇಶವನ್ನು ಪ್ರಶ್ನಿಸಿ ರಾಜ್ಯ ಸರ್ಕಾರವು ‘ಮರುಪರಿಶೀಲನಾ ಅರ್ಜಿ’ ಸಲ್ಲಿಸಿತ್ತು. ಆದರೆ, ಈ ಅರ್ಜಿಯಲ್ಲಿ ಸೂಕ್ತ ಆಧಾರಗಳಿಲ್ಲ ಎಂದು ಅಭಿಪ್ರಾಯಪಟ್ಟ ಹೈಕೋರ್ಟ್, ಅದನ್ನು ಈಗ ವಜಾಗೊಳಿಸಿದೆ. ಈ ಆದೇಶದಿಂದಾಗಿ, ಅಂಕಗಳ ಕೊರತೆಯಿಂದ ಕಷ್ಟಪಡುತ್ತಿದ್ದ ಅಥವಾ ಪರೀಕ್ಷೆಯಲ್ಲಿನ ದೋಷದಿಂದ ಅಂಕ ಕಳೆದುಕೊಂಡಿದ್ದ ಸಾವಿರಾರು ವಿದ್ಯಾರ್ಥಿಗಳಿಗೆ ದೊಡ್ಡ ಮಟ್ಟದ ಸಮಾಧಾನ ಸಿಗಲಿದೆ.

ಹರೀಶ್‌ ಕೇರ

View all posts by this author