Cabinet Decisions: ಕಾರ್ಮಿಕರಿಗೆ ಗುಡ್‌ನ್ಯೂಸ್; ವಿಮಾ ಸೊಸೈಟಿ ಸ್ಥಾಪನೆಗೆ ಸಚಿವ ಸಂಪುಟ ಅನುಮೋದನೆ
CM Siddaramaiah: ಕಾರ್ಮಿಕ ರಾಜ್ಯ ವಿಮಾ ಯೋಜನೆ ವೈದ್ಯಕೀಯ ಸೇವೆಗಳ ಇಲಾಖೆಯನ್ನು ಇಎಸ್‌ಐ ಮಾರ್ಗಸೂಚಿಗಳನ್ವಯ ಸೊಸೈಟಿ ನೋಂದಣಿ ಕಾಯ್ದೆ 1860 ಅಡಿಯಲ್ಲಿ ನೋಂದಾಯಿಸಿ ಕರ್ನಾಟಕ ಕಾರ್ಮಿಕರ ರಾಜ್ಯ ವಿಮಾ ಸೊಸೈಟಿಯನ್ನಾಗಿ ರೂಪಿಸಲು ಸಚಿವ ಸಂಪುಟ ಆಡಳಿತಾತ್ಮಕ ಅನುಮೋದನೆ ನೀಡಿದೆ.

ಎಐ ಚಿತ್ರ.

ಬೆಂಗಳೂರು: ಕಾರ್ಮಿಕ ರಾಜ್ಯ ವಿಮಾ ಯೋಜನೆ ವೈದ್ಯಕೀಯ ಸೇವೆಗಳ ಇಲಾಖೆಯನ್ನು ಇಎಸ್‌ಐ ಮಾರ್ಗಸೂಚಿಗಳನ್ವಯ ಸೊಸೈಟಿ ನೋಂದಣಿ ಕಾಯ್ದೆ 1860 ಅಡಿಯಲ್ಲಿ ನೋಂದಾಯಿಸಿ ಕರ್ನಾಟಕ ಕಾರ್ಮಿಕರ ರಾಜ್ಯ ವಿಮಾ ಸೊಸೈಟಿಯನ್ನಾಗಿ ರೂಪಿಸಲು ಸಚಿವ ಸಂಪುಟ ಆಡಳಿತಾತ್ಮಕ ಅನುಮೋದನೆ ನೀಡಿದೆ. ಗುರುವಾರ ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಅವರ ನೇತೃತ್ವದಲ್ಲಿ ಸಭೆ ನಡೆಯಿತು (Cabinet Decisions). ಸಭೆಯ ಬಳಿಕ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಆಯೋಜಿಸಿದ್ದ ಸುದ್ದಿಗೋಷ್ಠಿಯಲ್ಲಿ ಕಾನೂನು ಮತ್ತು ಪ್ರವಾಸೋದ್ಯಮ ಸಚಿವ ಎಚ್.ಕೆ. ಪಾಟೀಲ್ (HK Patil) ಮಾಹಿತಿ ನೀಡಿದರು.
ನವಿಲುತೀರ್ಥದಿಂದ ರಾಮದುರ್ಗದ 8 ಕೆರೆ ಭರ್ತಿ
ಬೆಳಗಾವಿ ಜಿಲ್ಲೆಯ ನವಿಲುತೀರ್ಥ ಆಣೆಕಟ್ಟಿನಿಂದ ಮಲಪ್ರಭಾ ನದಿಯ ನೀರು ಎತ್ತುವ ಮೂಲಕ ರಾಮದುರ್ಗ ತಾಲ್ಲೂಕಿನ ಚಂದರಗಿ ಮತ್ತು ಸುತ್ತಮುತ್ತಲಿನ ಗ್ರಾಮಗಳ 8 ಕೆರೆಗಳಿಗೆ ನೀರು ತುಂಬಿಸುವ ಯೋಜನೆಗೆ ಆಡಳಿತಾತ್ಮಕ ಅನುಮೋದನೆ ನೀಡಲು ಸಚಿವ ಸಂಪುಟ ನಿರ್ಧರಿಸಿದೆ.
ಮದ್ದೂರು ಕಾಲುವೆಗಳ ಆಧುನೀಕರಣ ಕಾಮಗಾರಿ
ಮಂಡ್ಯ ಜಿಲ್ಲೆ, ಮದ್ದೂರು ತಾಲೂಕಿನ ಮದ್ದೂರು ಕೆರೆ ಅಡಿಯಲ್ಲಿನ ಚಾಮನಹಳ್ಳಿ ಬೈರಾನ್ ಹಾಗೂ ವೈದ್ಯನಾಥಪುರ ಕಾಲುವೆಗಳ ಆಧುನೀಕರಣ ಕಾಮಗಾರಿಯನ್ನು ಕೈಗೊಳ್ಳಲು ಆಡಳಿತಾತ್ಮಕ ಅನುಮೋದನೆಗೆ ಪ್ರಸ್ತಾಪಿಸಲಾಗಿದ್ದು, ಮಂಡ್ಯ ಜಿಲ್ಲೆ, ಮದ್ದೂರು ತಾಲೂಕಿನ ಮದ್ದೂರು ಕೆರೆ ಅಡಿಯಲ್ಲಿನ ಚಾಮನಹಳ್ಳಿ ಬೈರಾನ್ ಹಾಗೂ ವೈದ್ಯನಾಥಪುರ ಕಾಲುವೆಗಳ ಆಧುನೀಕರಣ ಕಾಮಗಾರಿಯನ್ನು 49.50 ಕೋಟಿ ರೂ. ಅಂದಾಜು ಮೊತ್ತದಲ್ಲಿ ಕೈಗೊಳ್ಳಲು ಸಚಿವ ಸಂಪುಟವು ಆಡಳಿತಾತ್ಮಕ ಅನುಮೋದನೆ ನೀಡಿದೆ.
ಈ ಸುದ್ದಿಯನ್ನೂ ಓದಿ: ಪರಿಶಿಷ್ಟ ಜಾತಿ ಒಳಮೀಸಲಾತಿ ವರ್ಗೀಕರಣ: ಆಗಸ್ಟ್ 16ಕ್ಕೆ ವಿಶೇಷ ಸಚಿವ ಸಂಪುಟ ಸಭೆ
ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ನಿಯಮಗಳಿಗೆ ತಿದ್ದುಪಡಿ
ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ (ತಿದ್ದುಪಡಿ) ನಿಯಮಗಳು 2025ಕ್ಕೆ ಸಚಿವ ಸಂಪುಟ ಅನುಮೋದನೆ ನೀಡಿದೆ. ಆಯೋಗದ ಅಧ್ಯಕ್ಷರ ವಯೋಮಿತಿಯನ್ನು ಕನಿಷ್ಠ 40 ವರ್ಷ ಹಾಗೂ ಸದಸ್ಯರ ವಯೋಮಿತಿಯನ್ನು ಕನಿಷ್ಠ 35 ವರ್ಷ ಎಂದು ನಿಗದಿಪಡಿಸಲಾಗಿದೆ. ಮಕ್ಕಳ ಕ್ಷೇತ್ರದಲ್ಲಿ ಅವರಿಗೆ ಇರಬೇಕಾದ ಅನುಭವದ ಅವಧಿಯನ್ನು ಐದು ವರ್ಷಗಳಿಂದ 10 ವರ್ಷಗಳಿಗೆ ಹೆಚ್ಚಿಸಲಾಗಿದೆ. ಆಯೋಗದ ಅಧ್ಯಕ್ಷರು ಹಾಗೂ ಸದಸ್ಯರಿಗೆ ಸಾಮರ್ಥ್ಯ ಅಭಿವೃದ್ಧಿ ತರಬೇತಿ ನೀಡುವ ಬಗ್ಗೆ ತಿಳಿಸಲಾಗಿದೆ. ಆಯೋಗವು ಕೇಂದ್ರ ಸ್ಥಾನದಲ್ಲಿ ಸಭೆ ನಡೆಸುವ ಕುರಿತು ಹಾಗೂ ಕೇಂದ್ರ ಸ್ಥಾನದ ಹೊರಗೆ ಇತರೆ ಜಿಲ್ಲೆ / ತಾಲ್ಲೂಕುಗಳಿಗೆ ಭೇಟಿ ನೀಡಿ ಪರಿಶೀಲನಾ ಸಭೆಗಳನ್ನು ನಡೆಸುವ ಸಂದರ್ಭದಲ್ಲಿ ಇರಬೇಕಾದ ಸದಸ್ಯರ ಉಪಸ್ಥಿತಿ (Quoram) ಬಗ್ಗೆ ಸ್ಪಷ್ಟ ಮಾರ್ಗಸೂಚಿ ನೀಡಲಾಗಿದೆ. ಆಯೋಗದ ಕಾರ್ಯದರ್ಶಿಗಳು ಆಯೋಗದ ಆಡಳಿತದ ವ್ಯವಹಾರಗಳನ್ನು ಸುಲಲಿತವಾಗಿ ನಡೆಸಲು ವಿವರವಾದ ಮಾರ್ಗಸೂಚಿಯನ್ನು ನೀಡಲಾಗಿದೆ.
ಸಾಮಾಜಿಕ ಮತ್ತು ಶೈಕ್ಷಣಿಕ ಸಮಿಕ್ಷೆ
ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಅಯೋಗದ ವತಿಯಿಂದ ನಾಗರಿಕರ ಸಾಮಾಜಿಕ ಮತ್ತು ಶೈಕ್ಷಣಿಕ ಸ್ಥಿತಿಗಳ ಬಗ್ಗೆ ಸಮೀಕ್ಷೆಯನ್ನು ಕೈಗೊಳ್ಳಲು ಸಚಿವ ಸಂಪುಟ ನಿರ್ಧರಿಸಿದೆ. ಸಮೀಕ್ಷೆಯನ್ನು ಡಿಜಿಟಲ್ ಕೈಗೊಳ್ಳುವುದು ಮತ್ತು ಸಮೀಕ್ಷೆಯನ್ನು ಡಿಜಿಟಲ್ ವಿಧಾನದಲ್ಲಿ ಮಾಡಲು ತಂತ್ರಾಂಶದ ಅಭಿವೃದ್ಧಿ ಮತ್ತು ಉಸ್ತುವಾರಿಯನ್ನು ಇ-ಆಡಳಿತ ಇಲಾಖೆ ಮೂಲಕ ಕೈಗೊಳ್ಳಲು; ಹಾಗೂ ಸಮೀಕ್ಷೆಯಲ್ಲಿ ನಮೂದಿಸಲಾಗುವ 6 ವರ್ಷ ಮೇಲ್ಪಟ್ಟ ಪ್ರತಿ ವ್ಯಕ್ತಿಯ ಆಧಾರ್ ದೃಢೀಕರಣವನ್ನು ಕಡ್ಡಾಯಗೊಳಿಸಲು ಹಾಗೂ ನ್ಯಾ.ನಾಗಮೋಹನ್‌ದಾಸ್ ಅವರ ನೇತೃತ್ವದಲ್ಲಿ ಒಳಮೀಸಲಾತಿಗೆ ಸಂಬಂಧಿಸಿದಂತೆ ಪರಿಶಿಷ್ಟ ಜಾತಿ ಸಮೀಕ್ಷೆಗೆ ಸಾರ್ವಜನಿಕವಾಗಿ ಲಭ್ಯವಿರುವ ಚುನಾವಣಾ ಮತದಾರರ ಪಟ್ಟಿಯನ್ನು ಉಪಯೋಗಿಸಿದ್ದಾರೆ. ಅದೇ ರೀತಿಯಾಗಿ ಹಿಂದುಳಿದ ವರ್ಗಗಳ ಆಯೋಗವು ನಡೆಸುವ ಸಮೀಕ್ಷೆಗೆ ಸಾರ್ವಜನಿಕವಾಗಿ ಲಭ್ಯವಿರುವ ಚುನಾವಣಾ ಮತದಾರರ ಪಟ್ಟಿಯನ್ನು ಉಪಯೋಗಿಸಿಕೊಂಡು ಸಮೀಕ್ಷಾ ಕಾರ್ಯವನ್ನು ಕೈಗೊಳ್ಳಲು ಮತ್ತು ಸಮೀಕ್ಷಾ ಕಾರ್ಯವನ್ನು ಯಶಸ್ವಿಯಾಗಿ ಪೂರ್ಣಗೊಳಿಸಲು ಆಯೋಗದ ಮೇಲುಸ್ತುವಾರಿಯಲ್ಲಿ ಅಗತ್ಯವಿರುವ ಅಧಿಕಾರಿಗಳು, ಶಿಕ್ಷಕರು ಹಾಗೂ ಇತರೆ ಸಿಬ್ಬಂದಿ ಕೆಲಸ ಮಾಡಲಿದ್ದಾರೆ.
ಕರ್ನಾಟಕ ಸೌಹಾರ್ದ ಸಹಕಾರಿ (ತಿದ್ದುಪಡಿ) ವಿಧೇಯಕ, 2025ಕ್ಕೆ ಅನುಮೋದನೆ
ಕರ್ನಾಟಕ ವಿಧಾನ ಮಂಡಲದ ಉಭಯ ಸದನಗಳ ಅನುಮೋದನೆ ಪಡೆದು, ರಾಜ್ಯಪಾಲರ ಅವಲೋಕನಗೊಳಗಾಗಿ ಹಿಂದಿರುಗಿಸಲ್ಪಟ್ಟ ಕರ್ನಾಟಕ ಸೌಹಾರ್ದ ಸಹಕಾರಿ (ತಿದ್ದುಪಡಿ) ವಿಧೇಯಕ 2024 ಅನ್ನು ಹಿಂಪಡೆಯಲು ಮತ್ತು ಕರ್ನಾಟಕ ಸೌಹಾರ್ದ ಸಹಕಾರಿ (ತಿದ್ದುಪಡಿ) ವಿಧೇಯಕ 2025ಕ್ಕೆ ಸಚಿವ ಸಂಪುಟ ಅನುಮೋದನೆ ನೀಡಿದೆ.
ಕರ್ನಾಟಕ ಸಹಕಾರ ಸಂಘಗಳು (ತಿದ್ದುಪಡಿ) ವಿಧೇಯಕ, 2025ಕ್ಕೆ ಅನುಮೋದನೆ
ಕರ್ನಾಟಕ ವಿಧಾನ ಮಂಡಲದ ಉಭಯ ಸದನಗಳ ಅನುಮೋದನೆ ಪಡೆದು ರಾಜ್ಯಪಾಲರ ಅವಲೋಕನೆಗೊಳಗಾಗಿ ಹಿಂದಿರುಗಿಸಲ್ಪಟ್ಟ ಕರ್ನಾಟಕ ಸಹಕಾರ ಸಂಘಗಳ (ತಿದ್ದುಪಡಿ) ವಿಧೇಯಕ 2024 ಅನ್ನು ಹಿಂಪಡೆಯಲು ಹಾಗೂ ಕರ್ನಾಟಕ ಸಹಕಾರ ಸಂಘಗಳ (ತಿದ್ದುಪಡಿ) ವಿಧೇಯಕ 2025ಕ್ಕೆ ಸಚಿವ ಸಂಪುಟ ಅನುಮೋದನೆ ನೀಡಿದೆ. ಅಧ್ಯಕ್ಷರ ಹುದ್ದೆಗೆ ನಡೆಯುವ ಚುನಾವಣೆಗೆ ಮೀಸಲಾತಿ ಇರಲಿದೆ. ಸಹಕಾರಿ ಸಂಸ್ಥೆಗಳಲ್ಲಿ ಸಾಮಾಜಿಕ ನ್ಯಾಯವನ್ನು ತರಲು ಇದು ನೆರವಾಗಲಿದೆ.
ಕರ್ನಾಟಕ ಬಂದರು (ಲ್ಯಾಂಡಿಂಗ್ & ಶಿಪ್ಪಿಂಗ್ ಫೀಸ್) (ತಿದ್ದುಪಡಿ) ವಿಧೇಯಕ, 2025ಕ್ಕೆ ಅನುಮೋದನೆ
ಕರ್ನಾಟಕ ಸರ್ಕಾರ (ವ್ಯವಹಾರ ನಿರ್ವಹಣೆ) ನಿಯಮಗಳು, 1977ರ ಮೊದಲನೇ ಅನುಸೂಚಿಯ ಐಟಂ 28ರ ಪರಂತುಕದನ್ವಯ ಕರ್ನಾಟಕ ಬಂದರುಗಳ (ಲ್ಯಾಂಡಿಂಗ್ & ಶಿಪ್ಪಿಂಗ್ ಫೀಸ್) ಆಕ್ಟ್, 1961ರ ಸೆಕ್ಷನ್ 3 ಮತ್ತು ಸೆಕ್ಷನ್ 10ನ್ನು ಮಾರ್ಪಡಿಸಿ ಕರ್ನಾಟಕ ಬಂದರು (ಲ್ಯಾಂಡಿಂಗ್ & ಶಿಪ್ಪಿಂಗ್ ಫೀಸ್) (ಅಮೆಂಡ್‌ಮೆಂಟ್) ಆಕ್ಟ್, 2025ರನ್ನು ಹೊರಡಿಸಲು; ಸಚಿವ ಸಂಪುಟ ಅನುಮೋದನೆ ನೀಡಿದೆ ಎಂದು ಕಾನೂನು ಮತ್ತು ಪ್ರವಾಸೋದ್ಯಮ ಸಚಿವರು ತಿಳಿಸಿದರು.
ಕರ್ನಾಟಕ ಸರ್ಕಾರಿ ವ್ಯಾಜ್ಯ ನಿರ್ವಹಣೆ (ತಿದ್ದುಪಡಿ) ವಿಧೇಯಕ, 2025ಕ್ಕೆ ಅನುಮೋದನೆ
ಕರ್ನಾಟಕ ಸರ್ಕಾರಿ ವ್ಯಾಜ್ಯ ನಿರ್ವಹಣೆ (ತಿದ್ದುಪಡಿ) ವಿಧೇಯಕ, 2025ಕ್ಕೆ; ಹಾಗೂ ಸದರಿ ವಿಧೇಯಕವನ್ನು ವಿಧಾನ ಮಂಡಲದಲ್ಲಿ ಮಂಡಿಸಲು ಸಚಿವ ಸಂಪುಟ ಅನುಮೋದನೆ ನೀಡಿದೆ.
ಕರ್ನಾಟಕ ಭೂ ಸುಧಾರಣೆಗಳು ಮತ್ತು ಇತರೆ ಕಾನೂನು (ತಿದ್ದುಪಡಿ) ವಿಧೇಯಕ, 2025ಕ್ಕೆ ಅನುಮೋದನೆ
ಕರ್ನಾಟಕ ಭೂ ಕಂದಾಯ ಅಧಿನಿಯಮ 1964ರ ಹಾಗೂ ಕರ್ನಾಟಕ ಭೂ ಸುಧಾರಣೆ ಕಾಯ್ದೆ, 1961ರ ವಿವಿಧ ಕಲಂ ಗಳಿಗೆ ತಿದ್ದುಪಡಿ ಮಾಡಲು ಅನುಬಂಧದಲ್ಲಿರುವಂತೆ ತಿದ್ದುಪಡಿ ತರಲು ಮತ್ತು ಈ ಕರಡು ವಿಧೇಯಕವನ್ನು ವಿಧಾನಮಂಡಲದ ಉಭಯ ಸದನಗಳಲ್ಲಿ ಮಂಡಿಸಲು ಸಚಿವ ಸಂಪುಟ ಅನುಮೋದನೆ ನೀಡಿದೆ.
ಕರ್ನಾಟಕ ಭೂ ಸುಧಾರಣೆಗಳು ಮತ್ತು ಇತರೆ ಕಾನೂನು (ತಿದ್ದುಪಡಿ) ವಿಧೇಯಕ, 2025ಕ್ಕೆ ಅನುಮೋದನೆ
ಕರ್ನಾಟಕ ಭೂ ಕಂದಾಯ ಅಧಿನಿಯಮ, 1964ರ ಹಾಗೂ ಕರ್ನಾಟಕ ಭೂ ಸುಧಾರಣೆ ಕಾಯ್ದೆ, 1961ರ ವಿವಿಧ ಕಲಂ ಗಳಿಗೆ ತಿದ್ದುಪಡಿ ಮಾಡಲು ಅನುಬಂಧದಲ್ಲಿರುವಂತೆ ತಿದ್ದುಪಡಿ ತರಲು ಮತ್ತು ಈ ಕರಡು ವಿಧೇಯಕವನ್ನು ವಿಧಾನಮಂಡಲದ ಉಭಯ ಸದನಗಳಲ್ಲಿ ಮಂಡಿಸಲು ಸಚಿವ ಸಂಪುಟ ಅನುಮೋದನೆ ನೀಡಿದೆ.
ಕರ್ನಾಟಕ ನಗರಪಾಲಿಕೆಗಳ (ತಿದ್ದುಪಡಿ) ವಿಧೇಯಕ, 2025ಕ್ಕೆ ಅನುಮೋದನೆ
ಕರ್ನಾಟಕ ಮಹಾನಗರ ಪಾಲಿಕೆಗಳ (ತಿದ್ದುಪಡಿ) ವಿಧೇಯಕ 2025ಕ್ಕೆ ಅನುಮೋದನೆ ಹಾಗೂ ಸದರಿ ವಿಧೇಯಕವನ್ನು ಮುಂಬರುವ ವಿಧಾನಮಂಡಲದ ಅಧಿವೇಶನದಲ್ಲಿ ಮಂಡಿಸಲು ಸಮ್ಮತಿ ನೀಡಲಾಗಿದೆ.
ಗ್ರೇಟರ್ ಬೆಂಗಳೂರು ಆಡಳಿತ (ತಿದ್ದುಪಡಿ) ವಿಧೇಯಕ, 2025ಕ್ಕೆ ಅನುಮೋದನೆ
ಕರ್ನಾಟಕ ಸರ್ಕಾರ (ವ್ಯವಹಾರ ನಿರ್ವಹಣೆ) ನಿಯಮಗಳು 1977ರ ಅನುಸೂಚಿ 01ರ ಕ್ರಮ ಸಂಖ್ಯೆ: 1ರ ಅನ್ವಯ ಗ್ರೇಟರ್ ಬೆಂಗಳೂರು ಅಧಿನಿಯಮ, 2024ರ ಕಲಂ 8, 14 ಮತ್ತು 35ಕ್ಕೆ ತಿದ್ದುಪಡಿ ತರುವ ಉದ್ದೇಶದ ಅನುಬಂಧ-1 ರಲ್ಲಿನ ಗ್ರೇಟರ್ ಬೆಂಗಳೂರು ಆಡಳಿತ (ತಿದ್ದುಪಡಿ) ವಿಧೇಯಕ, 2025ಕ್ಕೆ ಅನುಮೋದನೆ ಸಿಕ್ಕಿದೆ.
ಕರ್ನಾಟಕ ಅತ್ಯಾವಶ್ಯಕ ಸೇವೆಗಳ ನಿರ್ವಹಣಾ (ತಿದ್ದುಪಡಿ) ವಿಧೇಯಕ, 2025ಕ್ಕೆ ಅನುಮೋದನೆ
ಕರ್ನಾಟಕ ಅತ್ಯಾವಶ್ಯಕ ಸೇವೆಗಳ ನಿರ್ವಹಣಾ ಅಧಿನಿಯಮ 2013ಕ್ಕೆ ತಿದ್ದುಪಡಿ ಮಾಡಲು ಇದರೊಂದಿಗೆ ಲಗತ್ತಿಸಿರುವ, ಅನುಬಂಧದಲ್ಲಿರುವಂತೆ ಕರ್ನಾಟಕ ಅತ್ಯಾವಶ್ಯಕ ಸೇವೆಗಳ ನಿರ್ವಹಣಾ (ತಿದ್ದುಪಡಿ) ವಿಧೇಯಕ 2025ನ್ನು ವಿಧಾನ ಮಂಡಲದಲ್ಲಿ ಮಂಡಿಸಲು ಸಚಿವ ಸಂಪುಟ ಒಪ್ಪಿಗೆ ನೀಡಿದೆ.
ಕರ್ನಾಟಕ ದೇವದಾಸಿ ಪದ್ಧತಿ (ತಡೆಗಟ್ಟುವಿಕೆ, ನಿಷೇಧ, ಪರಿಹಾರ ಮತ್ತು ಪುನರ್ವಸತಿ) ವಿಧೇಯಕ, 2025ಕ್ಕೆ ಅನುಮೋದನೆ
ಕರ್ನಾಟಕ ದೇವದಾಸಿಯರ (ಸಮರ್ಪಣ ನಿಷೇಧ) ಅಧಿನಿಯಮ 1982 ಹಾಗೂ ಕರ್ನಾಟಕ ದೇವದಾಸಿಯರ (ಸಮರ್ಪಣ ನಿಷೇಧ) (ತಿದ್ದುಪಡಿ) ಅಧಿನಿಯಮ, 2009 ರದ್ದುಪಡಿಸಿ ಅನುಬಂಧ-1 ರಲ್ಲಿ ಇರಿಸಲಾದ ಸಮಗ್ರವಾದ ಕರ್ನಾಟಕ ದೇವದಾಸಿ (ತಡೆಗಟ್ಟುವಿಕೆ, ನಿಷೇಧ, ಪರಿಹಾರ ಮತ್ತು ಪುನರ್ವಸತಿ) ಕಾಯ್ದೆ, 2025ರ ಕರಡು ಪ್ರಸ್ತಾವನೆಗೆ ಅನುಮೋದನೆ ನೀಡುವುದು ಮತ್ತು ಈ ವಿಧೇಯಕವನ್ನು ವಿಧಾನ ಮಂಡಲದಲ್ಲಿ ಮಂಡಿಸಲು ನಿರ್ಧರಿಸಲಾಗಿದೆ..
ಕರ್ನಾಟಕ ಅಪರಾಧ ಮುಕ್ತಗೊಳಿಸುವಿಕೆ (ಉಪಬಂಧಗಳ ತಿದ್ದುಪಡಿ) ವಿಧೇಯಕ, 2025ಕ್ಕೆ ಅನುಮೋದನೆ
ಕರ್ನಾಟಕ ಸರ್ಕಾರದ (ವ್ಯವಹಾರಗಳ ನಿರ್ವಹಣೆ) ನಿಯಮಗಳು, 1977 ಷೆಡ್ಯೂಲ್-1ರ ಪ್ಯಾರ-1ರನ್ವಯ ಅನುಬಂಧದಲ್ಲಿ ಲಗತ್ತಿಸಿರುವ The Karnataka Decriminalisation (Amendment of Provisions) Bill, 2025ಕ್ಕೆ ಸಚಿವ ಸಂಪುಟ ಅನುಮೋದನೆ ನೀಡಿದೆ.
ನೋಂದಣಿ (ಕರ್ನಾಟಕ ತಿದ್ದುಪಡಿ) ವಿಧೇಯಕ 2025ಕ್ಕೆ ಅನುಮೋದನೆ
ನೋಂದಣಿ (ಕರ್ನಾಟಕ ತಿದ್ದುಪಡಿ) ವಿಧೇಯಕ, 2024ನ್ನು ಕೈಬಿಡಲು ಮತ್ತು ನೋಂದಣಿ (ಕರ್ನಾಟಕ ತಿದ್ದುಪಡಿ) ವಿಧೇಯಕ, 2025ಕ್ಕೆ ಹಾಗೂ ಮೇಲೆ ತಿಳಿಸಿರುವ, ನೋಂದಣಿ (ಕರ್ನಾಟಕ ತಿದ್ದುಪಡಿ) ಕಾಯ್ದೆ 2025ರ ವಿಧೇಯಕವನ್ನು ವಿಧಾನ ಮಂಡಲದಲ್ಲಿ ಮಂಡಿಸಲು ಒಪ್ಪಿಗೆ ಸಿಕ್ಕಿದೆ.
ಕರ್ನಾಟಕ ಪ್ರವಾಸೋದ್ಯಮ ವ್ಯಾಪಾರ (ಅನುಕೂಲತೆ ಮತ್ತು ನಿಯಂತ್ರಣಾ) (ತಿದ್ದುಪಡಿ) ವಿಧೇಯಕ, 2025ಕ್ಕೆ ಅನುಮೋದನೆ
Karnataka Tourism Trade (Facilitation and Regulation) Act, 2015, 2015ಕ್ಕೆ ತಿದ್ದುಪಡಿ ತಂದು, ಈ ಅಧಿನಿಯಮದ ಸೆಕ್ಷನ್-3ರ ನಂತರ 3-A. District Level Monitoring Committee ಅನ್ನು ರಚಿಸಿ, ಉಪಬಂಧ ಕಲ್ಪಿಸುವ ಸಂಬಂಧ ಅನುಬಂಧದಲ್ಲಿರುವ The Karnataka Tourism Trade (Facilitation and Regulation) (Amendment) Bill, 2025ರ ಅನುಮೋದನೆಗಾಗಿ ಮತ್ತು ಈ ವಿಧೇಯಕವನ್ನು ವಿಧಾನ ಮಂಡಲದಲ್ಲಿ ಮಂಡಿಸಲು ಸಚಿವ ಸಂಪುಟ ಒಪ್ಪಿದೆ.
ಕರ್ನಾಟಕ ಪುರಸಭೆಗಳ ಹಾಗೂ ಇತರ ಕಾನೂನುಗಳ (ತಿದ್ದುಪಡಿ) ವಿಧೇಯಕ, 2025ಕ್ಕೆ ಅನುಮೋದನೆ
ಕರ್ನಾಟಕ ಪೌರಸಭೆಗಳ ಹಾಗೂ ಇತರೆ ಕಾನೂನುಗಳ (ತಿದ್ದುಪಡಿ) ವಿಧೇಯಕ 2025ಕ್ಕೆ ಅನುಮೋದನೆ ಹಾಗೂ ಈ ವಿಧೇಯಕವನ್ನು ಮುಂಬರುವ ವಿಧಾನಮಂಡಲದ ಅಧಿವೇಶನದಲ್ಲಿ ಮಂಡಿಸಲು ಸಚಿವ ಸಂಪುಟ ಅನುಮೋದನೆ ನೀಡಿದೆ.
ಯಲಬುರ್ಗಾ, ಜೇವರ್ಗಿ, ಯಾದಗಿರಿಯಲ್ಲಿ ಬಿಎಸ್‌ಸಿ ನರ್ಸಿಂಗ್ ಕಾಲೇಜು
ಯಲಬುರ್ಗಾ, ಜೇವರ್ಗಿ ಹಾಗೂ ಯಾದಗಿರಿಯಲ್ಲಿ ಬಿಎಸ್‌ಸಿ ನರ್ಸಿಂಗ್ ಕಾಲೇಜುಗಳಿಗೆ ಒಟ್ಟು 41.91 ಕೋಟಿ ರೂ.ಗಳ ಅಂದಾಜು ಮೊತ್ತದಲ್ಲಿ ಕೆಕೆಆರ್‌ಡಿಬಿ ಅನುದಾನದಲ್ಲಿ ಪ್ರಾರಂಭ ಮಾಡಲು ರಾಜ್ಯ ಸರ್ಕಾರ ಅನುಮೋದನೆ ನೀಡಿದೆ.