Govinda Karajola: ಜನರ ಗಮನ ಬೇರೆಡೆ ಸೆಳೆಯಲು ಜಾತಿಗಣತಿಗೆ ತಯಾರಿ: ಗೋವಿಂದ ಕಾರಜೋಳ
Govinda Karajola: ರಾಜ್ಯ ಸರ್ಕಾರ ಆರ್ಥಿಕವಾಗಿ ದಿವಾಳಿಯಾಗಿದೆ. ಕಳೆದ ಎರಡೂವರೆ ವರ್ಷದಿಂದ ರಾಜ್ಯದಲ್ಲಿ ಅಭಿವೃದ್ಧಿ ಕುಂಠಿತವಾಗಿದ್ದು, ಜನ ಅವರಿಗೆ ಛೀಮಾರಿ ಹಾಕುತ್ತಿದ್ದಾರೆ. ಎಲ್ಲಿಯೂ ಅವರು ಓಡಾಡುವ ಪರಿಸ್ಥಿತಿಯಿಲ್ಲ. ಜನರ ಗಮನವನ್ನು ಬೇರೆಡೆ ಸೆಳೆಯುವ ಸಲುವಾಗಿ ಸಿದ್ದರಾಮಯ್ಯ ಜಾತಿಗಣತಿಯನ್ನು ಮಾಡಿಸಲು ತಯಾರಾಗಿದ್ದಾರೆ ಎಂದು ಮಾಜಿ ಉಪಮುಖ್ಯಮಂತ್ರಿ ಹಾಗೂ ಸಂಸದ ಗೋವಿಂದ ಕಾರಜೋಳ ಆರೋಪಿಸಿದ್ದಾರೆ.

-

ಬೆಂಗಳೂರು: ಸಿದ್ದರಾಮಯ್ಯ (CM Siddramaiah) ಅವರದು ಸಂವಿಧಾನ ವಿರೋಧಿ ಸರ್ಕಾರ ಎಂದು ಮಾಜಿ ಉಪಮುಖ್ಯಮಂತ್ರಿ ಹಾಗೂ ಸಂಸದ ಗೋವಿಂದ ಕಾರಜೋಳ (Govinda Karajola) ಟೀಕಿಸಿದ್ದಾರೆ. ಬೆಂಗಳೂರಿನಲ್ಲಿ ಗುರುವಾರ ಮಾಧ್ಯಮ ಪ್ರತಿನಿಧಿಗಳ ಜತೆ ಮಾತನಾಡಿದ ಅವರು, ರಾಜ್ಯ ಸರ್ಕಾರ ಇಂದು ಸಂವಿಧಾನದ ಆಶಯಕ್ಕೆ ಅನುಗುಣವಾಗಿ ನಡೆಯುತ್ತಿಲ್ಲ ಎಂದು ಆರೋಪಿಸಿದರು.
ಸರ್ಕಾರ ಆರ್ಥಿಕವಾಗಿ ದಿವಾಳಿಯಾಗಿದೆ. ಕಳೆದ ಎರಡೂವರೆ ವರ್ಷದಿಂದ ರಾಜ್ಯದಲ್ಲಿ ಅಭಿವೃದ್ಧಿ ಕುಂಠಿತವಾಗಿದ್ದು, ಜನ ಅವರಿಗೆ ಛೀಮಾರಿ ಹಾಕುತ್ತಿದ್ದಾರೆ. ಎಲ್ಲಿಯೂ ಅವರು ಓಡಾಡುವ ಪರಿಸ್ಥಿತಿಯಿಲ್ಲ. ಜನರ ಗಮನವನ್ನು ಬೇರೆಡೆ ಸೆಳೆಯುವ ಸಲುವಾಗಿ ಸಿದ್ದರಾಮಯ್ಯ ಜಾತಿಗಣತಿಯನ್ನು ಮಾಡಿಸಲು ತಯಾರಾಗಿದ್ದಾರೆ ಎಂದು ದೂರಿದರು.
ಜಾತಿಗಣತಿಯನ್ನು ಮಾಡುವುದಕ್ಕೆ ಸಿದ್ದರಾಮಯ್ಯ ಅವರ ಸರ್ಕಾರಕ್ಕೆ ಅಧಿಕಾರವೇ ಇಲ್ಲ; ಎಸ್‌ಸಿ ಜನಾಂಗದ 15 ಜಾತಿಗಳಿಗೆ ಕ್ರಿಶ್ಚಿಯನ್ ಮಾದರ್, ಕ್ರಿಶ್ಚಿಯನ್ ಛಲವಾದಿ, ಕ್ರಿಶ್ಚಿಯನ್ ಹೊಲೆಯರು, ಕ್ರಿಶ್ಚಿಯನ್ ಸಮಗಾರ- ಈ ರೀತಿ ಮಾಡಿ ಹೊಸ ಹೊಸ ಸಮಸ್ಯೆಯನ್ನು ಹುಟ್ಟುಹಾಕುವ ಪ್ರಯತ್ನ ಮಾಡುತ್ತಿದ್ದಾರೆ ಎಂದು ಗೋವಿಂದ ಕಾರಜೋಳ ಆರೋಪಿಸಿದ್ದಾರೆ.
ಈ ಸುದ್ದಿಯನ್ನೂ ಓದಿ | R Ashok: ದೇಶದಲ್ಲಿ ಅತಿ ಹೆಚ್ಚು ಅಪಹಾಸ್ಯಕ್ಕೆ ಒಳಗಾದ ವ್ಯಕ್ತಿ ರಾಹುಲ್ ಗಾಂಧಿ- ಆರ್.ಅಶೋಕ್