ಯುಗಾದಿ ಹಬ್ಬ ಐಪಿಎಲ್​ ಸುನಿತಾ ವಿಲಿಯಮ್ಸ್​ ಫ್ಯಾಷನ್​ ವಿದೇಶ ಧಾರ್ಮಿಕ ಕ್ರೈಂ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

KAS Officers Transfer: 13 ಕೆಎಎಸ್ ಅಧಿಕಾರಿಗಳ ವರ್ಗಾವಣೆ ಮಾಡಿ ಸರ್ಕಾರ ಆದೇಶ

KAS Officers Transfer: ಐಎಎಸ್‌ ಅಧಿಕಾರಿಗಳಾದ ಸೈಯಿದಾ ಆಯಿಷಾ, ಅನ್ನಪೂರ್ಣ ಕೆ, ಶಬೀರ್ ಬಾಷಾ ಗಂಟಿ, ಕ್ಯಾಪ್ಟನ್ ಶ್ರೀನಿವಾಸಗೌಡ, ಮಮತ ಹೊಸಗೌಡರ್ ಸೇರಿ 13 ಕೆಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಲಾಗಿದೆ. ವರ್ಗಾವಣೆ ಹಾಗೂ ಸ್ಥಳ ನಿಯುಕ್ತಿಗೊಂಡ 13 ಕೆಎಎಸ್ ಅಧಿಕಾರಿಗಳ ಪಟ್ಟಿ ಇಲ್ಲಿದೆ.

13 ಕೆಎಎಸ್ ಅಧಿಕಾರಿಗಳ ವರ್ಗಾವಣೆ ಮಾಡಿ ಸರ್ಕಾರ ಆದೇಶ

Profile Prabhakara R Mar 31, 2025 8:08 PM

ಬೆಂಗಳೂರು: ರಾಜ್ಯ ಸರ್ಕಾರವು ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ ಮಾಡಿದ್ದು, 13 ಕೆಎಎಸ್ ಅಧಿಕಾರಿಗಳನ್ನು ವರ್ಗಾವಣೆ (KAS Officers Transfer) ಮಾಡಿ ಆದೇಶ ಹೊರಡಿಸಿದೆ. ಕರ್ನಾಟಕ ಆಡಳಿತ ಸೇವೆಗೆ ಸೇರಿದ ಅಧಿಕಾರಿಗಳನ್ನು ಸಾರ್ವಜನಿಕ ಹಾಗೂ ಆಡಳಿತಾತ್ಮಕ ಹಿತದೃಷ್ಟಿಯಿಂದ ಕೆಲವರನ್ನು ವರ್ಗಾವಣೆ ಮಾಡಲಾಗಿದ್ದು, ಸ್ಥಳ ನಿರೀಕ್ಷೆಯಲ್ಲಿದ್ದರನ್ನು ವಿವಿಧ ಹುದ್ದೆಗಳಿಗೆ ನಿಯುಕ್ತಿ ಮಾಡಲಾಗಿದೆ. ಸೈಯಿದಾ ಆಯಿಷಾ, ಅನ್ನಪೂರ್ಣ ಕೆ, ಶಬೀರ್ ಬಾಷಾ ಗಂಟಿ, ಕ್ಯಾಪ್ಟನ್ ಶ್ರೀನಿವಾಸಗೌಡ, ಮಮತ ಹೊಸಗೌಡರ್ ಸೇರಿ 13 ಕೆಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಲಾಗಿದೆ.

ವರ್ಗಾವಣೆಗೊಂಡ ಕೆಎಎಸ್‌ ಅಧಿಕಾರಿಗಳ ಪಟ್ಟಿ

KAS Officers Transfer

KAS Officers Transfer (1)

ರಾಜ್ಯ ಸಿವಿಲ್‌ ಸೇವೆ ಹುದ್ದೆಗಳ ಹೊಸ ನೇಮಕಾತಿಗೆ ಸರ್ಕಾರ ತಡೆ

ಬೆಂಗಳೂರು: ರಾಜ್ಯ ಸಿವಿಲ್‌ ಸೇವೆಗಳಲ್ಲಿನ ಹುದ್ದೆಗಳ ನೇಮಕಾತಿಗಾಗಿ ಹೊಸದಾಗಿ ಅಧಿಸೂಚನೆ (Job Recruitment) ಹೊರಡಿಸುವುದನ್ನು ತಡೆ ಹಿಡಿಯಲು ರಾಜ್ಯ ಸರ್ಕಾರ ಮಹತ್ವದ ಆದೇಶ ನೀಡಿದೆ. ಇದಕ್ಕೆ ಸಂಬಂಧಿಸಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ಸರ್ಕಾರದ ಉಪ ಕಾರ್ಯದರ್ಶಿ-1 ಉಮಾ ವರದಯ್ಯ ಸುತ್ತೋಲೆ ಹೊರಡಿಸಿದ್ದು, ಒಂದು ವೇಳೆ ಸುತ್ತೋಲೆಯನ್ನು ಉಲ್ಲಂಘಿಸಿದರೆ ನೇಮಕಾತಿ ಪ್ರಾಧಿಕಾರಗಳ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳುವುದಾಗಿ ಎಚ್ಚರಿಕೆ ನೀಡಿದ್ದಾರೆ.

25.11.2024 ಸುತ್ತೋಲೆಯಲ್ಲಿ, ರಾಜ್ಯ ಸಿವಿಲ್ ಸೇವೆಗಳಲ್ಲಿನ ಮೀಸಲಾತಿ ಅನ್ವಯವಾಗುವ ವೃಂದಗಳಲ್ಲಿನ ಹುದ್ದೆಗಳಿಗೆ ನೇರ ನೇಮಕಾತಿ ಮಾಡಲು ಹೊಸದಾಗಿ ಯಾವುದೇ ಅಧಿಸೂಚನೆಯನ್ನು ಹೊರಡಿಸಬಾರದೆಂದು ಸೂಚಿಸಲಾಗಿತ್ತು. ಆದಾಗ್ಯೂ ಕೆಲವು ನೇಮಕಾತಿ ಪ್ರಾಧಿಕಾರಗಳು ಈ ಸೂಚನೆಗಳನ್ನು ಉಲ್ಲಂಘಿಸಿ ನೇರ ನೇಮಕಾತಿ ಮಾಡಲು ಹೊಸ ಅಧಿಸೂಚನೆಗಳನ್ನು ಹೊರಡಿಸಿರುವುದು ಸರ್ಕಾರದ ಗಮನಕ್ಕೆ ಬಂದಿರುತ್ತದೆ.

ಈ ಸುದ್ದಿಯನ್ನೂ ಓದಿ | Job Guide: ರಾಷ್ಟ್ರೀಯ ಕೆಮಿಕಲ್‌ & ಫರ್ಟಿಲೈಸರ್ಸ್‌ ಲಿಮಿಟೆಡ್‌ನಲ್ಲಿದೆ 74 ಹುದ್ದೆ; ಅರ್ಜಿ ಸಲ್ಲಿಸುವ ವಿಧಾನ ಇಲ್ಲಿದೆ

ಈ ಹಿನ್ನೆಲೆಯಲ್ಲಿ ದಿನಾಂಕ: 25.11.2024ರ ನಂತರ ನೇರ ನೇಮಕಾತಿಗಾಗಿ ಯಾವುದೇ ಹೊಸ ಅಧಿಸೂಚನೆಗಳನ್ನು ಹೊರಡಿಸಿದ್ದಲ್ಲಿ, ಈ ತಕ್ಷಣದಿಂದ ಜಾರಿಗೆ ಬರುವಂತೆ ರದ್ದುಪಡಿಸಲು ಆಯಾಯ ನೇಮಕಾತಿ ಪ್ರಾಧಿಕಾರಗಳಿಗೆ ಈ ಮೂಲಕ ಸೂಚಿಸಲಾಗಿದೆ. ಅಲ್ಲದೇ ದಿನಾಂಕ: 25.11.2024ರ ಸುತ್ತೋಲೆಯನ್ನು ಉಲ್ಲಂಘಿಸುವ ಎಲ್ಲಾ ನೇಮಕಾತಿ ಪ್ರಾಧಿಕಾರಗಳ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಲು ಆಯಾಯ ಆಡಳಿತ ಇಲಾಖೆಯ ಕಾರ್ಯದರ್ಶಿಗಳಿಗೆ ಈ ಮೂಲಕ ಸೂಚಿಸಲಾಗಿದೆ ಎಂದು ತಿಳಿಸಿದ್ದಾರೆ.