ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

BESCOM: ಗೃಹ ಜ್ಯೋತಿ ಮನೆ-ಮನೆ ಪರಿಶೀಲನೆ ಕಾರ್ಯ: ಜುಲೈ ತಿಂಗಳಿನಲ್ಲಿ ಗ್ರಾಹಕರಿಗೆ ಬೆಸ್ಕಾಂನಿಂದ ಸರಾಸರಿ ಬಿಲ್

BESCOM: ಗೃಹ ಜ್ಯೋತಿ ಫಲಾನುಭವಿಗಳ ಮನೆ-ಮನೆ ಪರಿಶೀಲನೆ ಕಾರ್ಯಕ್ಕೆ ಬೆಸ್ಕಾಂ ಮೀಟರ್ ರೀಡರ್‌ಗಳು ನಿಯೋಜನೆಗೊಂಡಿರುವುದರಿಂದ ಜುಲೈ ತಿಂಗಳ ನಿಯಮಿತ ಮೀಟರ್ ರೀಡಿಂಗ್ ಇರುವುದಿಲ್ಲ, ಗ್ರಾಹಕರಿಗೆ ಸರಾಸರಿ ಬಿಲ್‌ಗಳನ್ನು ನೀಡಲಾಗುತ್ತದೆ. ಜುಲೈ ತಿಂಗಳ ಬಿಲ್ಲಿಂಗ್ ಅವಧಿಯಲ್ಲಿ ಗ್ರಾಹಕರಿಗೆ ಕಳೆದ ಮೂರು ತಿಂಗಳ ಸರಾಸರಿ ವಿದ್ಯುತ್ ಬಳಕೆ ಆಧಾರದ ಮೇಲೆ ಸರಾಸರಿ ಬಿಲ್ ನೀಡಲಾಗುವುದು ಎಂದು ಬೆಸ್ಕಾಂ ಪ್ರಕಟಣೆ ತಿಳಿಸಿದೆ.

ಜುಲೈ ತಿಂಗಳಿನಲ್ಲಿ ಗ್ರಾಹಕರಿಗೆ ಬೆಸ್ಕಾಂನಿಂದ ಸರಾಸರಿ ಬಿಲ್

-

Profile
Siddalinga Swamy Jul 7, 2026 6:19 PM

ಬೆಂಗಳೂರು, ಜು.7: ಗೃಹ ಜ್ಯೋತಿ (Gruha Jyothi Scheme) ಫಲಾನುಭವಿಗಳ ಮನೆ-ಮನೆ ಪರಿಶೀಲನೆ ಕಾರ್ಯಕ್ಕೆ ಬೆಸ್ಕಾಂ (BESCOM) ಮೀಟರ್ ರೀಡರ್‌ಗಳು ನಿಯೋಜನೆಗೊಂಡಿರುವುದರಿಂದ ಜುಲೈ ತಿಂಗಳ ನಿಯಮಿತ ಮೀಟರ್ ರೀಡಿಂಗ್ ಇರುವುದಿಲ್ಲ, ಗ್ರಾಹಕರಿಗೆ ಸರಾಸರಿ (Average Bills) ಬಿಲ್‌ಗಳನ್ನು ನೀಡಲಾಗುತ್ತದೆ. ಜುಲೈ ತಿಂಗಳ ಬಿಲ್ಲಿಂಗ್ ಅವಧಿಯಲ್ಲಿ ಗ್ರಾಹಕರಿಗೆ ಕಳೆದ ಮೂರು ತಿಂಗಳ ಸರಾಸರಿ ವಿದ್ಯುತ್ ಬಳಕೆ ಆಧಾರದ ಮೇಲೆ ಸರಾಸರಿ ಬಿಲ್ ನೀಡಲಾಗುವುದು ಎಂದು ಬೆಸ್ಕಾಂ ತಿಳಿಸಿದೆ.

ಆದರೆ ಎಚ್‌ಟಿ ಗ್ರಾಹಕರು, 40 HP ಮತ್ತು ಅದಕ್ಕಿಂತ ಹೆಚ್ಚಿನ ಮಂಜೂರಾದ ಲೋಡ್ ಹೊಂದಿರುವ ಲೋ ಟೆನ್ಷನ್ (LT) ಗ್ರಾಹಕರು, ಸೋಲಾರ್ ರೂಫ್ಟಾಪ್ (SRTPV) ಗ್ರಾಹಕರು ಹಾಗೂ ತಾತ್ಕಾಲಿಕ ವಿದ್ಯುತ್ ಸಂಪರ್ಕ ಪಡೆದಿರುವ ಗ್ರಾಹಕರಿಗೆ ನೈಜ ಮೀಟರ್ ರೀಡಿಂಗ್ ಆಧಾರದ ಮೇಲೆ ಬಿಲ್ ನೀಡಲಾಗುವುದು ಎಂದು ಬೆಸ್ಕಾಂ ಸ್ಪಷ್ಟಪಡಿಸಿದೆ.

ಜುಲೈ ತಿಂಗಳ ಸರಾಸರಿ ಬಿಲ್‌ಗಳನ್ನು ಗ್ರಾಹಕರಿಗೆ ಎಸ್‌ಎಂಎಸ್‌ ಮತ್ತು ಇಮೇಲ್ ಮೂಲಕ ಕಳುಹಿಸಲಾಗುವುದು. ಗೃಹ ಬಳಕೆದಾರರಿಗೆ ಆಗಸ್ಟ್ ತಿಂಗಳಿನಿಂದ ಯಥಾಪ್ರಕಾರ ನಿಯಮಿತ ಮೀಟರ್ ರೀಡಿಂಗ್ ಮತ್ತು ನೈಜ ವಿದ್ಯುತ್ ಬಳಕೆಯ ಆಧಾರದಮೇಲೆ ಬಿಲ್ ನೀಡಲಾಗುವುದು. ಸರಾಸರಿ ಬಿಲ್ಲಿಂಗ್ ಅವಧಿಯಲ್ಲಿನ ವ್ಯತ್ಯಾಸದ ಯೂನಿಟ್‌ಗಳನ್ನು, ನೈಜ ಮೀಟರ್ ರೀಡಿಂಗ್ ಆರಂಭವಾದ ನಂತರ ಮುಂದಿನ ಬಿಲ್ಗಳಲ್ಲಿ ಸೂಕ್ತವಾಗಿ ಹೊಂದಾಣಿಕೆ ಮಾಡಲಾಗುವುದು.‌

ವೈರಲ್ 'ದುಬೈ ಚಾಕೊಲೇಟ್'ಗೆ ಈಗ ಫುಲ್‌ ಡಿಮ್ಯಾಂಡ್‌; ಬೆಂಗಳೂರಿಗರ ಚಾಕೊಲೇಟ್ ಕ್ರೇಜ್‌ ಬಿಚ್ಚಿಟ್ಟ ಇನ್‌ಸ್ಟಾಮಾರ್ಟ್‌!

ಗ್ರಾಹಕರು ಜುಲೈ ಬಿಲ್‌ನ ಪಾವತಿಗೆ ಪ್ರಸ್ತುತ ಚಾಲ್ತಿಯಲ್ಲಿರುವ ಎಲ್ಲಾ ಪಾವತಿ ವಿಧಾನಗಳನ್ನು(ಉಪ ವಿಭಾಗದ ನಗದು ಕೌಂಟರ್‌ಗಳು, ಬೆಸ್ಕಾಂ ವೆಬ್‌ಸೈಟ್, ಬೆಸ್ಕಾಂ ಮಿತ್ರ ಆಪ್ ಹಾಗೂ ಥರ್ಡ್ ಪಾರ್ಟಿ ಆಪ್) ಬಳಸಿಕೊಳ್ಳಬಹುದು ಎಂದು ಬೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದೆ.