ಫೋಟೋ ಗ್ಯಾಲರಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Gruhalkahsmi Scheme : ಮಹಿಳೆಯರಿಗೆ ಸಿಹಿ ಸುದ್ದಿ, ವರಮಹಾಲಕ್ಷ್ಮಿ ಹಬ್ಬದ ಸಂದರ್ಭವೇ ಗೃಹಲಕ್ಷ್ಮಿ ಹಣ ಬಿಡುಗಡೆ

Varamahalakshmi festival: ರಾಜ್ಯ ಸರಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ಗೃಹಲಕ್ಷ್ಮಿ ಯೋಜನೆಯ ಹಣಕ್ಕಾಗಿ ರಾಜ್ಯದ ಮಹಿಳೆಯರು ಎರಡು ತಿಂಗಳಿನಿಂದ ಕಾಯುತ್ತಿದ್ದಾರೆ. ರಾಜ್ಯದ 1.24 ಕೋಟಿ ಮಹಿಳೆಯರು ಈ ಯೋಜನೆಯ ಫಲಾನುಭವಿಗಳಾಗಿದ್ದು, ಪ್ರತಿ ತಿಂಗಳು 2000 ರೂ ಪಡೆಯುತ್ತಿದ್ದಾರೆ.

ಬೆಂಗಳೂರು: ರಾಜ್ಯದ ಮಹಿಳೆಯರಿಗೆ ವರಮಮಹಾಲಕ್ಷ್ಮಿ ಹಬ್ಬದ (Varamahalakshmi festival) ಸಂದರ್ಭದಲ್ಲಿ ಸಿಹಿಸುದ್ದಿ ದೊರೆತಿದ್ದು, ಗೃಹಲಕ್ಷ್ಮೀ ಯೋಜನೆಯ (Gruhalkahsmi Scheme) 2025-26ನೇ ಸಾಲಿನ 3ನೇ ಕಂತಿನ ಹಣ ಬಿಡಗುಡೆಯಾಗಿದೆ. ಈ ಯೋಜನೆಯ ಫಲಾನುಭವಿಗಳ ಖಾತೆಗೆ ಡಿಬಿಟಿ ಮೂಲಕ ನೇರವಾಗಿ ಹಣ ವರ್ಗಾವಣೆ ಆಗುತ್ತಿದೆ.

ರಾಜ್ಯ ಸರಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ಗೃಹಲಕ್ಷ್ಮಿ ಯೋಜನೆಯ ಹಣಕ್ಕಾಗಿ ರಾಜ್ಯದ ಮಹಿಳೆಯರು ಎರಡು ತಿಂಗಳಿನಿಂದ ಕಾಯುತ್ತಿದ್ದಾರೆ. ರಾಜ್ಯದ 1.24 ಕೋಟಿ ಮಹಿಳೆಯರು ಈ ಯೋಜನೆಯ ಫಲಾನುಭವಿಗಳಾಗಿದ್ದು, ಪ್ರತಿ ತಿಂಗಳು 2000 ರೂ ಪಡೆಯುತ್ತಿದ್ದಾರೆ.

ನಿಮಗೆ ಗೃಹ ಲಕ್ಷ್ಮೀ ಯೋಜನೆ ಹಣ ಬಂದಿದೆಯಾ ಅಂತ ಹೀಗೆ ಚೆಕ್ ಮಾಡಿ:

ಹಂತ 1: ನಿಮ್ಮ ಪೋನಿನಲ್ಲಿ ಗೂಗಲ್ ಪ್ಲೇ ಸ್ಟೋರ್ ಗೆ ಹೋಗಿ, DBT Karnataka application ಅಂತ ಟೈಪ್ ಮಾಡಿ ಸರ್ಚ್ ಮಾಡಿ, ಡೌನ್ ಲೋಡ್ ಮಾಡಿಕೊಳ್ಳಿ.

ಹಂತ 2: ಫಲಾನುಭವಿಯ ಆಧಾರ್ ನಂಬರ್ ಹಾಕಿ Get OTP ಮೇಲೆ ಕ್ಲಿಕ್ ಮಾಡಿ

ಹಂತ 3: ಆಗ ನಿಮ್ಮ ಆಧಾರ್ ಸಂಖ್ಯೆಯನ್ನು ಕೇಳುತ್ತದೆ. ಅದನ್ನು ನಮೂದಿಸಿ, ಗೆಟ್ ಓಟಿವಿ ನೀಡಿ, ಓಟಿಪಿ ಬಂದ ನಂತ್ರ, ವೆರಿಫೈ ಓಟಿಪಿಯ ಮೇಲೆ ಕ್ಲಿಕ್ ಮಾಡಿ.

ಹಂತ 4: ನಂತರ ಇಲ್ಲಿ ನೀವು ಪಾಸ್ವರ್ಡ್ ಅನ್ನು ಆಯ್ಕೆ ಮಾಡಬೇಕಾಗುತ್ತದೆ ನಿಮಗೆ ಬೇಕಾದ 4 ಸಂಖ್ಯೆಯ mPIN create ಮಾಡಿ,Confirm mPIN ಹಾಕಿ,Submit ಮೇಲೆ ಕ್ಲಿಕ್ ಮಾಡಿ

ಹಂತ 4: ಈಗ ಹೋಂ ಪೇಜ್ ನಲ್ಲಿ ನೀವು Payment status ಮೇಲೆ ಕ್ಲಿಕ್ ಮಾಡಿ. ಗೃಹಲಕ್ಷ್ಮಿ ಯೋಜನೆಯ ಡಿಬಿಟಿ ಸ್ಟೇಟಸ್ ಅನ್ನು ತಿಳಿದುಕೊಳ್ಳಬಹುದು. ಪಕ್ಕದಲ್ಲಿರುವ Seeding status of Adhaar in bank account ಮೇಲೆ ಕ್ಲಿಕ್ ಮಾಡುವ ಮೂಲಕ ನಿಮ್ಮ ಆಧಾರ್ ಸೀಡಿಂಗ್ ಸ್ಟೇಟಸ್ ಅನ್ನು ಮತ್ತು ಯಾವ ಬ್ಯಾಂಕಿಗೆ ಸೀಡಾಗಿದೆ ಎಂಬುದನ್ನು ತಿಳಿದುಕೊಳ್ಳಬಹುದು

ಹಂತ 5: ಇಲ್ಲಿ ನಿಮಗೆ ಸರ್ಕಾರದಿಂದ ಜಮಾ ಆಗಿರುವಂತ ಗೃಹ ಲಕ್ಷ್ಮೀ ಯೋಜನೆಯ ಹಣ ವರ್ಗಾವಣೆಯಾಗಿರುವುದು ತಿಳಿಯಲಿದೆ.

ಇದನ್ನೂ ಓದಿ: Laxmi Hebbalkar: ಯಜಮಾನಿಯರಿಗೆ ಗುಡ್‌ನ್ಯೂಸ್‌: ಮಹಿಳೆಯರಿಗೆ ಆರ್ಥಿಕ ಬಲ ತುಂಬಲು ಶೀಘ್ರದಲ್ಲೇ ಗೃಹಲಕ್ಷ್ಮಿ ಸಂಘಗಳ ರಚನೆ

ಹರೀಶ್‌ ಕೇರ

View all posts by this author