Bike accident: ಚನ್ನರಾಯಪಟ್ಟಣದಲ್ಲಿ 3 ಬೈಕ್‌ಗಳ ನಡುವೆ ಸರಣಿ ಅಪಘಾತ; ವೃದ್ಧ ಸಾವು, ಮೂವರಿಗೆ ಗಂಭೀರ ಗಾಯ
Hassan Accident: ಹಾಸನ ಜಿಲ್ಲೆಯ ಚನ್ನರಾಯಪಟ್ಟಣದ ಹಿರೆಸಾವೆ ಬಳಿ ಭೀಕರ ರಸ್ತೆ ಅಪಘಾತ ನಡೆದಿದೆ. ಮೂರು ಬೈಕ್‌ಗಳ ನಡುವೆ ನಡೆದ ಸರಣಿ ಅಪಘಾತದಲ್ಲಿ ವೃದ್ಧ ಮೃತಪಟ್ಟಿದ್ದು, ಮೂವರಿಗೆ ಗಂಭೀರ ಗಾಯಗಳಾಗಿವೆ. ಸ್ಥಳಕ್ಕೆ ಸಂಚಾರ ಪೊಲೀಸರು ಆಗಮಿಸಿ ಪರಿಶೀಲಿಸಿದ್ದಾರೆ.

-

ಹಾಸನ: ಜಿಲ್ಲೆಯ ಚನ್ನರಾಯಪಟ್ಟಣದ ಹಿರೆಸಾವೆ ಬಳಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಮೂರು ಬೈಕ್‌ಗಳ ನಡುವೆ ನಡೆದ ಸರಣಿ ಅಪಘಾತದಲ್ಲಿ ವೃದ್ಧ ಮೃತಪಟ್ಟಿದ್ದು, ಮೂವರಿಗೆ ಗಂಭೀರ ಗಾಯಗಳಾಗಿವೆ. ಬೈಕ್ (Bike accident) ಓವರ್‌ಸ್ಪೀಡ್‌ನಿಂದ ಬಂದು ಗುದ್ದಿದ್ದರಿಂದ ಅಪಘಾತ ನಡೆದಿದೆ. ಗಾಯಾಳುಗಳನ್ನು ಆ್ಯಂಬುಲೆನ್ಸ್‌ನಲ್ಲಿ ಚನ್ನರಾಯಪಟ್ಟಣ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ. ಸ್ಥಳಕ್ಕೆ ಸಂಚಾರ ಪೊಲೀಸರು ಆಗಮಿಸಿ ಪರಿಶೀಲಿಸಿದ್ದಾರೆ.
ತಲ್ವಾರ್‌ನಿಂದ ಕೊಚ್ಚಿ ಬರ್ಬರವಾಗಿ ವೃದ್ಧನ ಕೊಲೆ

ಕಲಬುರ್ಗಿ: ಜಮೀನಿನ ಕೆಲಸ ಮುಗಿಸಿ ಮನೆಗೆ ತೆರಳುತ್ತಿದ್ದ ವ್ಯಕ್ತಿಯನ್ನು (Murder Case) ದುಷ್ಕರ್ಮಿಗಳು ತಲ್ವಾರಿನಿಂದ ಕೊಚ್ಚಿ ಬರ್ಬರವಾಗಿ ಹತ್ಯೆ ಮಾಡಿದ್ದಾರೆ. ಈ ಘಟನೆ ಕಲಬುರಗಿಯ ಸೀತನೂರು ಗ್ರಾಮದ ಸೇತುವೆ ಬಳಿ ನಡೆದಿದೆ. ಕೊಲೆಯಾದ ವ್ಯಕ್ತಿಯನ್ನು 65 ವರ್ಷದ ಶಿವರಾಯ ಮಾಲಿ ಪಾಟೀಲ್ ಎಂದು ಗುರುತಿಸಲಾಗಿದೆ. ಕೊಲೆಗೆ ಕಾರಣವೇನೆಂದು ತಿಳಿದು ಬಂದಿಲ್ಲ. ಪೊಲೀಸ್ ಮೂಲಗಳ ಪ್ರಕಾರ, ಈ ಕೊಲೆಗೆ ಹಳೇ ವೈಷಮ್ಯವೇ ಕಾರಣವಿರಬಹುದು ಎಂದು ಶಂಕಿಸಲಾಗಿದೆ. ಕೊಲೆಗಾರರು ಯಾರು ಎಂಬುದು ಇನ್ನೂ ಗೊತ್ತಿಲ್ಲ. ಆದರೆ, ಕೊಲೆಯ ಉದ್ದೇಶ ಏನು ಎಂಬುದೂ ತಿಳಿದಿಲ್ಲ.
ಶಿವರಾಯ ಮಾಲಿ ಪಾಟೀಲ್ ಅವರು ತಮ್ಮ ಜಮೀನಿನಲ್ಲಿ ದಿನನಿತ್ಯದ ಕೆಲಸದಲ್ಲಿ ತೊಡಗಿದ್ದರು. ಭಾನುವಾರ ಬೆಳಗ್ಗೆ ಕೆಲಸ ಮುಗಿಸಿ ಸೀತನೂರು ಗ್ರಾಮದ ಸೇತುವೆಯ ಮೂಲಕ ಮನೆಗೆ ಹಿಂದಿರುಗುತ್ತಿದ್ದಾಗ, ಈ ಘಟನೆ ಸಂಭವಿಸಿದೆ. ಅಪರಿಚಿತ ದುಷ್ಕರ್ಮಿಗಳ ಗುಂಪೊಂದು ಶಿವರಾಯ ಅವರ ಮೇಲೆ ತಲ್ವಾರಿನಿಂದ ದಾಳಿ ನಡೆಸಿದೆ. ವೃದ್ಧ ಶಿವರಾಯ ಅವರು ತೀವ್ರವಾಗಿ ಗಾಯಗೊಂಡಿದ್ದಾರೆ. ಈ ದಾಳಿಯಿಂದ ಗಂಭೀರ ಗಾಯಗೊಂಡ ಅವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಕಲಬುರಗಿ ನಗರದ ಡೆಪ್ಯುಟಿ ಕಮಿಷನರ್ ಆಫ್ ಪೊಲೀಸ್ ಕನ್ನಿಕಾ ಸಿಖಿವಾಲ್ ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕೊಲೆಗಾರರನ್ನು ಶೀಘ್ರವಾಗಿ ಬಂಧಿಸಲು ಪೊಲೀಸರು ತೀವ್ರ ಶೋಧ ನಡೆಸುತ್ತಿದ್ದಾರೆ.
ಪ್ರತ್ಯೇಕ ಘಟನೆಯಲ್ಲಿ, ಕೃಷಿ ಹೊಂಡದಲ್ಲಿ ಅನುಮಾನಾಸ್ಪದ ರೀತಿಯಲ್ಲಿ ಪುರುಷ ಮತ್ತು ಮಹಿಳೆಯ ಶವ ಪತ್ತೆಯಾಗಿರುವ ಘಟನೆ ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಒಡೆಯರಪಾಳ್ಯದಲ್ಲಿ ಒಂದು ಘಟನೆ ನಡೆದಿದೆ.
ಈ ಸುದ್ದಿಯನ್ನೂ ಓದಿ: Triple Murder Case: ಕೊಲೆಯಾದ ರೌಡಿಶೀಟರ್ ಪತ್ನಿಯ ಶಪಥ ಈಡೇರಿಸಲು ತ್ರಿವಳಿ ಕೊಲೆ! 10 ಆರೋಪಿಗಳ ಸೆರೆ
ಮೂರು ಮಕ್ಕಳ ತಾಯಿಯಾದ ಮೀನಾಕ್ಷಿ (38) ಹಾಗೂ ಅವಿವಾಹಿದ ರವಿ (40) ಎನ್ನುವ ಪುರುಷನ ಶವ ಪತ್ತೆಯಾಗಿದೆ. ಬೇರೆ ಬೇರೆ ಜಾತಿಯವರಾಗಿದ್ದ ಮೀನಾಕ್ಷಿ ಮತ್ತು ರವಿ ಪರಸ್ಪರ ಪ್ರೀತಿಸುತ್ತಿದ್ದರು ಎಂಬ ಅನುಮಾನ ವ್ಯಕ್ತವಾಗುತ್ತಿದೆ. ಇದು ಕೊಲೆಯೋ ಅಥವಾ ಆತ್ಮಹತ್ಯೆಯೋ ಎಂದು ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಸದ್ಯ ಘಟನಾ ಸ್ಥಳಕ್ಕೆ ಹನೂರು ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.