Accidental death: ಟ್ರ್ಯಾಕ್ಟರ್ ಮಗುಚಿ ಬಿದ್ದು ಸಿಎಂ ಸಿದ್ದರಾಮಯ್ಯ ಆಪ್ತ ಸಾವು
ಜಗದೀಶ್ ಜಿಲ್ಲಾ ಸಶಸ್ತ್ರ ಮೀಸಲು ಪಡೆಯ ಪೊಲೀಸ್ ಪೇದೆಯಾಗಿದ್ದರು. ಚುನಾವಣೆಗೆ ಸ್ಪರ್ಧಿಸಲು ಪೊಲೀಸ್ ಇಲಾಖೆಗೆ ರಾಜೀನಾಮೆ ನೀಡಿ ಗ್ರಾಮ ಪಂಚಾಯತ್ ಚುನಾವಣೆಯಲ್ಲಿ ಸ್ಪರ್ಧಿಸಿ ಗೆದ್ದಿದ್ದರು. ಜಗದೀಶ್ ಅವರು ಸಿಎಂ ಸಿದ್ದರಾಮಯ್ಯ ಆಪ್ತ ಹಾಗೂ ಮಾಜಿ ಸಚಿವ ಹೆಚ್ ಎಂ ರೇವಣ್ಣ ಆಪ್ತರಾಗಿದ್ದರು.

ಮೃತ ಜಗದೀಶ್

ಹಾಸನ: ಹಾಸನ ಜಿಲ್ಲೆಯಲ್ಲಿ (Hassan news) ಘೋರ ಘಟನೆಯೊಂದು ನಡೆದಿದ್ದು, ಟ್ರ್ಯಾಕ್ಟರ್ ಇಂಜಿನ್ ಮಗುಚಿ ಬಿದ್ದು ಸಿಎಂ ಸಿದ್ದರಾಮಯ್ಯ (CM Siddaramaiah) ಅವರ ಆಪ್ತರೊಬ್ಬರು (close aide) ಸಾವನ್ನಪ್ಪಿದ್ದಾರೆ. ಜಿಲ್ಲೆಯ ಅರಸೀಕೆರೆ ತಾಲೂಕಿನ ಗಂಡಸಿ ಎಂಬಲ್ಲಿ ಈ ಘಟನೆ ನಡೆದಿದೆ. ಜಗದೀಶ್ (52) ತಮ್ಮ ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಮಣ್ಣು ಸಾಗಿಸುವಾಗ ಇಂಜಿನ್ ಪಲ್ಟಿಯಾಗಿದ್ದು, ಅದರ ಕೆಳಗೆ ಸಿಲುಕಿ ಅವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಜಗದೀಶ್ ಜಿಲ್ಲಾ ಸಶಸ್ತ್ರ ಮೀಸಲು ಪಡೆಯ ಪೊಲೀಸ್ ಪೇದೆಯಾಗಿದ್ದರು. ಚುನಾವಣೆಗೆ ಸ್ಪರ್ಧಿಸಲು ಪೊಲೀಸ್ ಇಲಾಖೆಗೆ ರಾಜೀನಾಮೆ ನೀಡಿ ಗ್ರಾಮ ಪಂಚಾಯತ್ ಚುನಾವಣೆಯಲ್ಲಿ ಸ್ಪರ್ಧಿಸಿ ಗೆದ್ದಿದ್ದರು. ಜಗದೀಶ್ ಅವರು ಸಿಎಂ ಸಿದ್ದರಾಮಯ್ಯ ಆಪ್ತ ಹಾಗೂ ಮಾಜಿ ಸಚಿವ ಹೆಚ್ ಎಂ ರೇವಣ್ಣ ಆಪ್ತರಾಗಿದ್ದರು. ಸ್ಥಳಕ್ಕೆ ಗಂಡಸಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಕಾರು ಅಪಘಾತ, ತಿರುಪತಿಗೆ ತೆರಳುತ್ತಿದ್ದ ಬೆಂಗಳೂರಿನ ಇಬ್ಬರು ಯಾತ್ರಿಕರ ಸಾವು
ಬೆಂಗಳೂರು: ತಿರುಮಲ ತಿರುಪತಿ ದೇವಸ್ಥಾನಕ್ಕೆ (Tirupati Temple) ತೆರಳುತ್ತಿದ್ದ ಕಾರು ಅಪಘಾತಕ್ಕೀಡಾಗಿ ಬೆಂಗಳೂರಿನ (Bengaluru news) ಒಂದೇ ಕುಟುಂಬದ ಇಬ್ಬರು ಸಾವನ್ನಪ್ಪಿ, ಇತರ ನಾಲ್ವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಶುಕ್ರವಾರ ನಡೆದಿದೆ. ಪ್ರಾಥಮಿಕ ವರದಿಗಳ ಪ್ರಕಾರ ಒಂದೇ ಕುಟುಂಬದ ಆರು ಮಂದಿ ತೆರಳುತ್ತಿದ್ದ ಕಾರು ಕಾಶಿಪೆಂಟ್ಲಾ ಹೆರಿಟೇಜ್ ಬಳಿ ಅಪಘಾತಕ್ಕೀಡಾಗಿದೆ ಎನ್ನಲಾಗಿದೆ. ಅಪಘಾತದ ಸ್ವಲ್ಪ ಸಮಯದ ನಂತರ ತುರ್ತು ಸೇವೆಗಳು ಸ್ಥಳಕ್ಕೆ ಧಾವಿಸಿದ್ದು, ಗಾಯಾಳುಗಳನ್ನು ತಕ್ಷಣ ಚಿಕಿತ್ಸೆಗಾಗಿ ತಿರುಪತಿಯ ರುಯಾ ಆಸ್ಪತ್ರೆಗೆ ರವಾನಿಸಲಾಗಿದೆ.
ಚಂದ್ರಗಿರಿ ಪೊಲೀಸರು ಸ್ಥಳಕ್ಕೆ ಆಗಮಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಅಪಘಾತದ ಕಾರಣ ಕಂಡುಹಿಡಿಯಲು ತನಿಖೆ ನಡೆಯುತ್ತಿದೆ. ಬೆಂಗಳೂರು ಮತ್ತು ತಮಿಳುನಾಡಿನ ಹೊಸೂರು ಮೂಲದ ಸಂತ್ರಸ್ತರು ರಾಷ್ಟ್ರೀಯ ಹೆದ್ದಾರಿಯಲ್ಲಿ ಮಾರುತಿ ಎರ್ಟಿಗಾದಲ್ಲಿ ಪ್ರಯಾಣಿಸುತ್ತಿದ್ದಾಗ ಅಪಘಾತ ಸಂಭವಿಸಿದೆ.
ಮೃತರನ್ನು ಬೆಂಗಳೂರಿನ ನಿವಾಸಿಗಳಾದ ವಿಜಯಲಕ್ಷ್ಮಿ (50), ಸಹನಾ ಬಿ ಎಸ್ (34) ಎಂದು ಗುರುತಿಸಲಾಗಿದೆ. ರಜನಿ ಎಸ್ ಆರ್ (27), ಆರ್ ಲೇಖನ್ ಗೌಡ (11), ಹೊಸೂರಿನ ಚಾಲಕ ತ್ಯಾಗರಾಜನ್ (48), ತ್ಯಾಗರಾಜನ್ ಅವರ ಪುತ್ರ ಕ್ರಿಸ್ವಿನ್ (15) ಗಂಭೀರವಾಗಿ ಗಾಯಗೊಂಡಿದ್ದು, ಚಿಕಿತ್ಸೆಗಾಗಿ ತಿರುಪತಿಯ ಎಸ್‌ವಿಆರ್ ರುಯಿಯಾ ಸರ್ಕಾರಿ ಜನರಲ್ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಚಂದ್ರಗಿರಿ ಉಪ ಪೊಲೀಸ್ ವರಿಷ್ಠಾಧಿಕಾರಿ (ಡಿಎಸ್ಪಿ) ಪ್ರಸಾದ್ ತಿಳಿಸಿದ್ದಾರೆ.
ಇದನ್ನೂ ಓದಿ: Road Accident: ಆಟೋಗೆ ಸಾರಿಗೆ ಬಸ್ ಡಿಕ್ಕಿಯಾಗಿ ಸ್ಥಳದಲ್ಲೇ ಇಬ್ಬರ ಸಾವು; ಮೂವರ ಸ್ಥಿತಿ ಗಂಭೀರ