ಫೋಟೋ ಗ್ಯಾಲರಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Heart Attack: ಹಾಸನಕ್ಕೆ ಮತ್ತೊಂದು ಶಾಕ್‌; ಹೃದಯಾಘಾತಕ್ಕೆ ಗ್ರಾಮ ಪಂಚಾಯಿತಿ ಮಾಜಿ ಸದಸ್ಯ ಬಲಿ

ಕಳೆದ ಒಂದೂವರೆ ತಿಂಗಳಿನಿಂದ ಹಾಸನದಲ್ಲಿ ಸಂಭವಿಸುತ್ತಿರುವ ಸರಣಿ ಸಾವುಗಳು (Death) ಜನರಲ್ಲಿ ಆತಂಕವನ್ನುಂಟು ಮಾಡಿವೆ. ಈ ದುರಂತ ಸಾವಿನ ಸರಣಿಯಲ್ಲಿ ಇಂದು ಮತ್ತೊಂದು ದುರ್ಘಟನೆ ಸಂಭವಿಸಿದೆ. ಗ್ರಾಮ ಪಂಚಾಯತಿ ಮಾಜಿ ಸದಸ್ಯರೊಬ್ಬರು ಇಂದು ಬೆಳಗ್ಗಿನ ಜಾವ ಹಠಾತ್​ ಹೃದಯಾಘಾತದಿಂದ ಮೃತಪಟ್ಟಿದ್ದಾರೆ.

ಹೃದಯಾಘಾತಕ್ಕೆ ಗ್ರಾಮ ಪಂಚಾಯಿತಿ ಮಾಜಿ ಸದಸ್ಯ ಬಲಿ

Profile Vishakha Bhat Jul 6, 2025 9:16 AM

ಹಾಸನ: ಕಳೆದ ಒಂದೂವರೆ ತಿಂಗಳಿನಿಂದ ಹಾಸನದಲ್ಲಿ (Heart Attack) ಸಂಭವಿಸುತ್ತಿರುವ ಸರಣಿ ಸಾವುಗಳು (Death) ಜನರಲ್ಲಿ ಆತಂಕವನ್ನುಂಟು ಮಾಡಿವೆ. ಈ ದುರಂತ ಸಾವಿನ ಸರಣಿಯಲ್ಲಿ ಇಂದು ಮತ್ತೊಂದು ದುರ್ಘಟನೆ ಸಂಭವಿಸಿದೆ. ಗ್ರಾಮ ಪಂಚಾಯತಿ ಮಾಜಿ ಸದಸ್ಯರೊಬ್ಬರು ಇಂದು ಬೆಳಗ್ಗಿನ ಜಾವ ಹಠಾತ್​ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಹೊಳೆನರಸೀಪುರ ತಾಲೂಕಿನ ಕೊಂಗಲಬೀಡು ಗ್ರಾಮದ ಐಚನಹಳ್ಳಿ ಗ್ರಾಮ ಪಂಚಾಯಿತಿಯ ಮಾಜಿ ಸದಸ್ಯ ಆನಂದ್ (44) ಮೃತ ವ್ಯಕ್ತಿ. ಜಿಲ್ಲೆಯಲ್ಲಿ ಕಳೆದ 45 ದಿನಗಳಲ್ಲಿ ಹೃದಯಾಘಾತದಿಂದ ಸಾವನ್ನಪ್ಪಿದವರ ಸಂಖ್ಯೆ 37ಕ್ಕೆ ಏರಿಕೆಯಾಗಿದೆ.

ಗ್ರಾಮ ಪಂಚಾಯತ್ ಮಾಜಿ​ ಸದಸ್ಯ ಆನಂದ್ ಅವರ ದುರಂತದ ಸಾವು ಗ್ರಾಮದಲ್ಲಿ ಶೋಕದ ವಾತಾವರಣ ಸೃಷ್ಟಿಸಿದೆ. ಹೊಳೆನರಸೀಪುರ ತಾಲೂಕಿನ ಕೊಂಗಲಬೀಡು ಗ್ರಾಮದ ನಿವಾಸಿಯಾಗಿದ್ದ ಆನಂದ್, ಐಚನಹಳ್ಳಿ ಗ್ರಾಮ ಪಂಚಾಯಿತಿಯ ಮಾಜಿ ಸದಸ್ಯರಾಗಿದ್ದರು. ಇಂದು ಬೆಳಗಿನ ಜಾವ 4 ಗಂಟೆ ಸುಮಾರಿಗೆ ಅವರಿಗೆ ತೀವ್ರವಾದ ಎದೆನೋವು ಕಾಣಿಸಿಕೊಂಡಿತು. ಎದೆನೋವಿನ ಬಗ್ಗೆ ತಮ್ಮ ಪತ್ನಿಗೆ ತಿಳಿಸಿದ ಆನಂದ್ ಆಸ್ಪತ್ರೆಗೆ ತೆರಳಬೇಕು ಎನ್ನುವಷ್ಟರಲ್ಲಿ ಮೃತಪಟ್ಟಿದ್ದಾರೆ. ಕುಟುಂಬಸ್ಥರು ತಕ್ಷಣವೇ ಅವರನ್ನು ಹೊಳೆನರಸೀಪುರದ ಸರ್ಕಾರಿ ಆಸ್ಪತ್ರೆಗೆ ಕರೆದೊಯ್ದರಾದರೂ, ಆಗಲೇ ಆನಂದ್ ತಮ್ಮ ಪ್ರಾಣವನ್ನು ಕಳೆದುಕೊಂಡಿದ್ದರು.

ಈ ಸುದ್ದಿಯನ್ನೂ ಓದಿ: Heart Attack: ಕೋವಿಡ್‌ ಬಂದು ಹೋದವರಲ್ಲಿ ಹೃದಯಾಘಾತ ಸಾಧ್ಯತೆ: ತಜ್ಞರ ಸಮಿತಿ ವರದಿಯಲ್ಲಿದೆ ಆಘಾತಕರ ಅಂಶ!

ಜಿಲ್ಲೆಯಲ್ಲಿ ಹೃದಯಾಘಾತದ ಸರಣಿಕಳೆದ ಒಂದೂವರೆ ತಿಂಗಳಿನಿಂದ ಹಾಸನ ಜಿಲ್ಲೆಯಲ್ಲಿ ಹೃದಯಾಘಾತದಿಂದ ಸಾವನ್ನಪ್ಪುತ್ತಿರುವವರ ಸಂಖ್ಯೆ ಗಣನೀಯವಾಗಿ ಏರಿಕೆಯಾಗಿದೆ. ಈ ಅವಧಿಯಲ್ಲಿ 37 ಜನರು ಹೃದಯಾಘಾತಕ್ಕೆ ಬಲಿಯಾಗಿದ್ದಾರೆ. ಜೂನ್ 28 ರಂದು ಸಿದ್ದೇಶ್ವರ್ ನಗರದ ಆಟೋ ಚಾಲಕ ಗೋವಿಂದ (37) ಆಟೋ ಚಲಾಯಿಸುವಾಗ ಎದೆನೋವಿಗೆ ಒಳಗಾಗಿ, ತಾನೇ ಆಟೋ ಚಲಾಯಿಸಿಕೊಂಡು ಜಿಲ್ಲಾಸ್ಪತ್ರೆಗೆ ತೆರಳಿದರೂ ಸಾವನ್ನಪ್ಪಿದ್ದಾರೆ. ಅಂತೆಯೇ, ಚನ್ನರಾಯಪಟ್ಟಣ ತಾಲೂಕಿನ ಕೆಂಬಾಳು ಗ್ರಾಮದ ಲೋಹಿತ್ (38), 18 ವರ್ಷಗಳ ಕಾಲ ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸಿದ ಯೋಧ, ರಜೆಯಲ್ಲಿ ಊರಿಗೆ ಬಂದಾಗ ಜಮೀನಿನಲ್ಲಿ ಉಳುಮೆ ಮಾಡುತ್ತಿದ್ದ ವೇಳೆ ಹೃದಯಾಘಾತಕ್ಕೆ ಬಲಿಯಾದರು. ಇದೇ ರೀತಿ, ಬೇಲೂರಿನ ಜೆ.ಪಿ.ನಗರದ ಗೃಹಿಣಿ ಲೇಪಾಕ್ಷಿ (50) ಮತ್ತು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಧ್ಯಾಪಕ ಮುತ್ತಯ್ಯ (58) ಕೂಡ ಒಂದೇ ದಿನ ಹೃದಯಾಘಾತಕ್ಕೆ ಸಾವನ್ನಪ್ಪಿದ್ದಾರೆ.