Hassan tragedy: ಹಾಸನ ಗಣೇಶ ಮೆರವಣಿಗೆ ವೇಳೆ ಟ್ರಕ್ ಹರಿದು ದುರಂತ: ಸಾವಿನ ಸಂಖ್ಯೆ 9ಕ್ಕೆ ಏರಿಕೆ
ಮೊಸಳೆಹೊಸಳ್ಳಿ ಗ್ರಾಮದಲ್ಲಿ ನಡೆದ ದುರಂತದಲ್ಲಿ ಸಾವನ್ನಪ್ಪಿದವರ ಸಂಖ್ಯೆ 9ಕ್ಕೆ ಏರಿಕೆ ಆಗಲಿದೆ. ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡಿದ್ದ ಪ್ರಭಾಕರ್ ಎಂಬಾತ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಚಿಕಿತ್ಸೆ ಫಲಾರಿಯಾಗದೆ ಬಂಟರಹಳ್ಳಿಯ ಪ್ರಭಾಕರ್ ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ.

-

ಹಾಸನ: ಗಣೇಶ ಮೂರ್ತಿ ಮೆರವಣಿಗೆ ವೇಳೆ ಟ್ರಕ್ ಹರಿದು ಸಾವನ್ನಪ್ಪಿದವರ ಸಂಖ್ಯೆ 9ಕ್ಕೆ ಏರಿಕೆಯಾಗಿದ. ಮೊಸಳೆಹೊಸಹಳ್ಳಿ (Moasalehosahalli) ದುರಂತದಲ್ಲಿ 17ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಕೆಲವರ ಸ್ಥಿತಿ ಗಂಭೀರವಾಗಿದೆ ಎಂದು ವರದಿಯಾಗಿದೆ. ಇನ್ನು ಟ್ರಕ್ ಚಾಲಕ ಭುವನೇಶ್ ಎಂದು ಗುರುತಿಸಲಾಗಿದೆ. ಅಪಘಾತದ (Accident) ನಂತರ ಸ್ಥಳೀಯರು ಚಾಲಕನಿಗೂ ಹಿಗ್ಗಾಮುಗ್ಗ ಥಳಿಸಿದ್ದು ಭುವನೇಶ್ಗೂ ಗಂಭೀರ ಗಾಯಗಳಾಗಿವೆ ಎಂದು ತಿಳಿದುಬಂದಿದೆ.
ಮೊಸಳೆಹೊಸಳ್ಳಿ ಗ್ರಾಮದಲ್ಲಿ ನಡೆದ ದುರಂತದಲ್ಲಿ ಸಾವನ್ನಪ್ಪಿದವರ ಸಂಖ್ಯೆ 9ಕ್ಕೆ ಏರಿಕೆ ಆಗಲಿದೆ. ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡಿದ್ದ ಪ್ರಭಾಕರ್ ಎಂಬಾತ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಚಿಕಿತ್ಸೆ ಫಲಾರಿಯಾಗದೆ ಬಂಟರಹಳ್ಳಿಯ ಪ್ರಭಾಕರ್ ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ.
ಶಾಸಕ ಸ್ವರೂಪ್ ಪ್ರಕಾಶ್ ಜೊತೆ ಹಾಸನದ ಹಿಮ್ಸ್ಗೆ ತಡರಾತ್ರಿಯೇ ಜೆಡಿಎಸ್ ನಾಯಕ ನಿಖಿಲ್ ಕುಮಾರಸ್ವಾಮಿ ಆಗಮಿಸಿದರು. ಗಾಯಾಳುಗಳ ಆರೋಗ್ಯದ ಮಾಹಿತಿ ಪಡೆದು ಗಾಯಾಳುಗಳ ಕುಟುಂಬಸ್ಥರಿಗೆ ಧೈರ್ಯ ತುಂಬಿದ್ದಾರೆ.
ಟ್ರಕ್ ಅನ್ನು ಭುವನೇಶ್ ಎಂಬಾತ ಓಡಿಸುತ್ತಿದ್ದ ಎನ್ನಲಾಗಿದೆ. ಹಾಸನದಿಂದ ಹೊಳೆನರಸೀಪುರ ಕಡೆಗೆ ಟ್ರಕ್ ಹೋಗುತ್ತಿದ್ದು, ಈ ವೇಳೆ ಬೈಕ್ ಸವಾರ ಅಡ್ಡ ಬಂದಿದ್ದಾನೆ. ಈ ವೇಳೆ ಅಡ್ಡ ಬಂದ ಬೈಕ್ ಸವಾರನನ್ನು ಉಳಿಸಲು ಹೋಗಿ ಜನರು ಸಾಗುತ್ತಿದ್ದ ಗಣೇಶೋತ್ಸವದ ಮೆರವಣಿಗೆ ಮೇಲೆ ಟ್ರಕ್ ನುಗ್ಗಿಸಿದ್ದಾನೆ. ಅಪಘಾತದ ಕಾರಣ ತಿಳಿಯಲು ತನಿಖೆ ಆರಂಭಗೊಂಡಿದೆ. ಘಟನೆ ನಡೆದ ಸ್ಥಳವನ್ನು ತಜ್ಞರ ತಂಡ ಇಂಚಿಂಚೂ ಪರಿಶೀಲನೆ ನಡೆಸುತ್ತಿದೆ. ಅಪಘಾತ ನಡೆದ ಸ್ಥಳದಲ್ಲಿ ಪರಿಶೀಲನೆ ನಡೆಸುತ್ತಿರುವ ಅಧಿಕಾರಿಗಳು ಈ ಘಟನೆಗೆ ಸಂಬಂಧಿಸಿದ ಎಲ್ಲಾ ವಿವರಗಳನ್ನು ಸಂಗ್ರಹಿಸುತ್ತಿದ್ದಾರೆ.