ಫೋಟೋ ಗ್ಯಾಲರಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

PM Narendra Modi: ಹಾಸನ ಗಣೇಶ ಮೆರವಣಿಗೆ ದುರಂತ: ಮೃತರ ಕುಟುಂಬಕ್ಕೆ 2 ಲಕ್ಷ ಪರಿಹಾರ ಘೋಷಿಸಿದ ಪ್ರಧಾನಿ ನರೇಂದ್ರ ಮೋದಿ

Hassan Tragedy: ಕರ್ನಾಟಕದ ಹಾಸನದಲ್ಲಿ ನಡೆದ ಅಪಘಾತವು ಹೃದಯ ವಿದ್ರಾವಕವಾಗಿದೆ. ಈ ದುರಂತದ ಸಮಯದಲ್ಲಿ, ನನ್ನ ಆಲೋಚನೆಗಳು ಮೃತರ ಕುಟುಂಬಗಳೊಂದಿಗೆ ಇವೆ. ಗಾಯಗೊಂಡವರು ಆದಷ್ಟು ಬೇಗ ಚೇತರಿಸಿಕೊಳ್ಳಬೇಕೆಂದು ನಾನು ಹಾರೈಸುತ್ತೇನೆ ಎಂದು ಪ್ರಧಾನಿ ನರೇಂದ್ರ ಮೋದಿ ನೋವು ಹಂಚಿಕೊಂಡಿದ್ದಾರೆ.

ಹಾಸನ : ನಿನ್ನೆ ಹಾಸನ ತಾಲೂಕಿನ ಮೊಸಳೆ ಹೊಸಳ್ಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಗಣೇಶ ಮೆರವಣಿಗೆಯ ವೇಳೆ ಕ್ಯಾಂಟರ್ ಹರಿದು ಸಂಭವಿಸಿದ ಭೀಕರ ಅಪಘಾತದಲ್ಲಿ (hassan tragedy) ಮಡಿದವರ ಕುಟುಂಬಕ್ಕೆ ಪ್ರದಾನ ಮಂತ್ರಿ ನರೇಂದ್ರ ಮೋದಿ (PM Narendra Modi) ಅವರು ತಲಾ 2 ಲಕ್ಷ ರೂಪಾಯಿ ಪರಿಹಾರ ಘೋಷಣೆ ಮಾಡಿದ್ದಾರೆ. ಗಾಯಾಳುಗಳಿಗೆ 50,000 ಘೋಷಣೆ ಮಾಡಿದ್ದಾರೆ.

ನಿನ್ನೆ ನಡೆದ ಭೀಕರ ಅಪಘಾತದಲ್ಲಿ 9 ಜನರು ಸಾವನ್ನಪ್ಪಿದ್ದರು. 20ಕ್ಕೂ ಹೆಚ್ಚು ಜನರು ಗಂಭೀರವಾಗಿ ಗಾಯಗೊಂಡಿದ್ದರು. ಈ ಘಟನೆಗೆ ಸಂಬಂಧಿಸಿದಂತೆ ಇದೀಗ ಪ್ರಧಾನ ಮಂತ್ರಿ ನರೇಂದ್ರ ಮೋದಿ ಸಹ ಸಂತಾಪ ಸೂಚಿಸಿದ್ದು, ಮೃತರ ಆತ್ಮಕ್ಕೆ ಶಾಂತಿ ಕೋರಿ ಸೋಶಿಯಲ್‌ ಮೀಡಿಯಾ ಎಕ್ಸ್‌ನಲ್ಲಿ ಪೋಸ್ಟ್ ಹಂಚಿಕೊಂಡಿದ್ದಾರೆ. ಪಿಎಂ ರಾಷ್ಟೀಯ ಪರಿಹಾರ ನಿಧಿಯಿಂದ ಪರಿಹಾರ ಘೋಷಣೆ ಮಾಡಲಾಗಿದೆ.

'ಕರ್ನಾಟಕದ ಹಾಸನದಲ್ಲಿ ನಡೆದ ಅಪಘಾತವು ಹೃದಯ ವಿದ್ರಾವಕವಾಗಿದೆ. ಈ ದುರಂತದ ಸಮಯದಲ್ಲಿ, ನನ್ನ ಆಲೋಚನೆಗಳು ಮೃತರ ಕುಟುಂಬಗಳೊಂದಿಗೆ ಇವೆ. ಗಾಯಗೊಂಡವರು ಆದಷ್ಟು ಬೇಗ ಚೇತರಿಸಿಕೊಳ್ಳಬೇಕೆಂದು ನಾನು ಹಾರೈಸುತ್ತೇನೆ. ಮೃತರ ಸಂಬಂಧಿಕರಿಗೆ PMNRF ನಿಂದ 2 ಲಕ್ಷ ರೂ. ಪರಿಹಾರ ನೀಡಲಾಗುವುದು. ಗಾಯಾಳುಗಳಿಗೆ 50,000 ರೂ. ನೀಡಲಾಗುವುದುʼ ಎಂದಿದ್ದಾರೆ.



ಅಪಘಾತದಲ್ಲಿ ಮೃತಪಟ್ಟವರ ಕುಟುಂಬಕ್ಕೆ ಸಿಎಂ ಸಿದ್ದರಾಮಯ್ಯ ಅವರು ನಿನ್ನೆಯೇ 5 ಲಕ್ಷ ರೂಪಾಯಿ ಪರಿಹಾರ ಘೋಷಣೆ ಮಾಡಿದ್ದರು. 'ಘಟನೆಯಲ್ಲಿ ಗಾಯಗೊಂಡವರ ಚಿಕಿತ್ಸೆಯ ವೆಚ್ಚವನ್ನು ಸರ್ಕಾರವೇ ಭರಿಸಲಿದೆ. ಇದು ಅತ್ಯಂತ ನೋವಿನ ಘಳಿಗೆ. ಅಪಘಾತ ಸಂತ್ರಸ್ತ ಕುಟುಂಬಗಳ ಜೊತೆ ನಾವೆಲ್ಲರೂ ನಿಲ್ಲೋಣ' ಎಂದು ಹೇಳಿದ್ದರು.

ಹರೀಶ್‌ ಕೇರ

View all posts by this author