ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ

ಚೆನ್ನಮ್ಮ ಸಮಾಧಿಗೆ ಹಾಲು-ತುಪ್ಪ ಸಮರ್ಪಿಸಿದ ದೇವೇಗೌಡರ ಕುಟುಂಬ

ಜುಲೈ 18ರ ಸಂಜೆ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದ ಚನ್ನಮ ಅವರ ಪಾರ್ಥಿವ ಶರೀರವನ್ನು ಸೋಮವಾರ ಮಾವಿಕೆರೆ ರಂಗನಾಥಸ್ವಾಮಿ ಬೆಟ್ಟದ ತಪ್ಪಲಿನಲ್ಲಿ ಅಂತ್ಯಕ್ರಿಯೆಯನ್ನು ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿಸಲಾಗಿತ್ತು. ಇಂದು ಸಮಾಧಿಗೆ ಹಾಲು-ತುಪ್ಪ ಸಮರ್ಪಣೆ ಮಾಡಲಾಗಿದೆ.

ಹಾಸನ: ಜಿಲ್ಲೆಯ ಹೊಳೆನರಸೀಪುರ ತಾಲೂಕಿನ ಮಾವಿಕೆರೆ ರಂಗನಾಥಸ್ವಾಮಿ ಬೆಟ್ಟದ ತಪ್ಪಲಿನಲ್ಲಿರುವ ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡ ಅವರ ಪತ್ನಿ ಚೆನ್ನಮ್ಮ (Chennamma) ಅವರ ಸಮಾಧಿಗೆ ಇಂದು ಕುಟುಂಬಸ್ಥರು ಹಾಲು-ತುಪ್ಪ ಸಮರ್ಪಣೆ ಮಾಡಿದರು.

ಈ ಕಾರ್ಯದಲ್ಲಿ ಮಾಜಿ ಪ್ರಧಾನಿ ದೇವೇಗೌಡರು, ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ, ಮಾಜಿ ಸಚಿವ ಎಚ್‌.ಡಿ.ರೇವಣ್ಣ ಸೇರಿದಂತೆ ಕುಟುಂಬದ ಸದಸ್ಯರು, ಬಂಧುಗಳು, ಹಿತೈಷಿಗಳು ಭಾಗಿಯಾಗಿದ್ದರು.

_ chennamma's post-funeral rituals (1)

ಜುಲೈ 18ರ ಸಂಜೆ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದ ಚನ್ನಮ ಅವರ ಪಾರ್ಥಿವ ಶರೀರವನ್ನು ಸೋಮವಾರ ಮಾವಿಕೆರೆ ರಂಗನಾಥಸ್ವಾಮಿ ಬೆಟ್ಟದ ತಪ್ಪಲಿನಲ್ಲಿ ಅಂತ್ಯಕ್ರಿಯೆಯನ್ನು ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿಸಲಾಗಿತ್ತು.

ದೆಹಲಿ ಪ್ರತಿಭಟನೆಗಳ ಹಿಂದೆ ಕಾಣದ ಶಕ್ತಿಗಳ ಕೈವಾಡ: ಅನುಮಾನ ವ್ಯಕ್ತಪಡಿಸಿದ ಕುಮಾರಸ್ವಾಮಿ

ಗೌಡರ ಕುಟುಂಬದವರು ಸಮಾಧಿಗೆ ವಿಶೇಷ ಪೂಜೆ ಸಲ್ಲಿಸಿ ಅಖಂಡ ದೀಪ ಬೆಳಗಿಸಿದ್ದರು. ದೀಪ ಜು.30ರ ಆರಾಧನಾ ಮಹೋತ್ಸವದವರೆಗೂ ನಿರಂತರವಾಗಿ ಬೆಳಗುವಂತೆ ಮಾಡಬೇಕು ಹಾಗೂ ನಿತ್ಯ ವಿಷ್ಣು ಸಹಸ್ರನಾಮ ಪಾರಾಯಣ ಮಾಡುವಂತೆ ಪುರೋಹಿತರಿಗೆ ದೇವೇಗೌಡರು ನಿರ್ದೇಶನ ನೀಡಿದ್ದಾರೆ.