Expensive watch row: ನನ್ನ ದುಡ್ಡಲ್ಲಿ ನಾನು ಎಷ್ಟು ವಾಚ್ ಬೇಕಾದ್ರೂ ಖರೀದಿ ಮಾಡ್ತೇನೆ ಎಂದ ಡಿಕೆಶಿ
ನಾನು 1 ಸಾವಿರ ರೂಪಾಯಿ ವಾಚನ್ನೂ ಕಟ್ಟುವೆ, 10 ಲಕ್ಷ ರೂಪಾಯಿ ವಾಚನ್ನೂ ಕಟ್ಟುವೆ. ಅದು ನನಗೆ ಬಿಟ್ಟ ವಿಚಾರ. ನನ್ನ ಶ್ರಮ, ನನ್ನ ಸಂಪಾದನೆ, ನನ್ನ ಆಸ್ತಿ. ಪಾಪ, ವಿರೋಧ ಪಕ್ಷದ ನಾಯಕರಿಗೆ ಅನುಭವದ ಕೊರತೆ ಇದೆ. ಅವರಿಗೆ ಚುನಾವಣೆ ನಿಂತ ಅನುಭವವೂ ಇಲ್ಲ. ಹೀಗಾಗಿ ಗೊತ್ತಿಲ್ಲದೆ ಮಾತನಾಡಿದ್ದಾರೆ. ಅವರು ವಿರೋಧ ಪಕ್ಷದ ನಾಯಕ ಸ್ಥಾನದಲ್ಲಿರುವುದರಿಂದ ಪ್ರತಿಕ್ರಿಯೆ ನೀಡಿದ್ದೇನೆ. ಬೇರೆಯವರಾಗಿದ್ದರೆ ಪ್ರತಿಕ್ರಿಯೆ ನೀಡುತ್ತಿರಲಿಲ್ಲ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.
ಡಿಸಿಎಂ ಡಿ.ಕೆ. ಶಿವಕುಮಾರ್ (ಸಂಗ್ರಹ ಚಿತ್ರ) -
ಹಾಸನ, ಡಿ.6: ನನ್ನ ಶ್ರಮ, ನನ್ನ ಸಂಪಾದನೆ, ನನ್ನ ಆಸ್ತಿ, ನನಗೆ ಇಷ್ಟವಾದ ಶೂ, ವಾಚ್ ಧರಿಸುವೆ. ನಾನು ನನ್ನ ದುಡ್ಡಲ್ಲಿ ಎಷ್ಟು ವಾಚ್ ಬೇಕಾದರೂ ಖರೀದಿ ಮಾಡುತ್ತೇನೆ. ಖರೀದಿ ಮಾಡುವ ಶಕ್ತಿ ನನಗಿದೆ. ಯಾರು ಯಾವ ಪ್ಯಾಂಟ್ ಹಾಕುತ್ತಾರೆ, ಯಾವ ವಾಚ್ ಹಾಕುತ್ತಾರೆ, ಯಾವ ಕನ್ನಡಕ ಹಾಕುತ್ತಾರೆ ಎಂದು ನಾನು ಪ್ರಶ್ನೆ ಮಾಡುವುದಿಲ್ಲ. ಇದು ವೈಯಕ್ತಿಕ ವಿಚಾರ, ಅವರವರ ಆಸೆಗಳು ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (DK Shivakumar) ಹೇಳಿದ್ದಾರೆ. ವಿರೋಧ ಪಕ್ಷದ ನಾಯಕರು ನಿಮ್ಮ ವಾಚ್ ವಿಚಾರವಾಗಿ ಹೆಚ್ಚು ಟೀಕೆ ಮಾಡುತ್ತಿದ್ದಾರೆ ಎಂಬ ಪ್ರಶ್ನೆಗೆ ಹಾಸನದಲ್ಲಿ ಅವರು ಶನಿವಾರ ಪ್ರತಿಕ್ರಿಯೆ ನೀಡಿದರು.
ಕೆಲವರು ಒಂದು ಸಾವಿರದ ಶೂ ಧರಿಸಿದರೆ ಮತ್ತೆ ಕೆಲವರು 1 ಲಕ್ಷದ ಶೂ ಧರಿಸುತ್ತಾರೆ. ನಾನು 1 ಸಾವಿರ ರೂಪಾಯಿ ವಾಚನ್ನೂ ಕಟ್ಟುವೆ, 10 ಲಕ್ಷ ರೂಪಾಯಿ ವಾಚನ್ನೂ ಕಟ್ಟುವೆ. ಅದು ನನಗೆ ಬಿಟ್ಟ ವಿಚಾರ. ನನ್ನ ಶ್ರಮ, ನನ್ನ ಸಂಪಾದನೆ, ನನ್ನ ಆಸ್ತಿ. ಪಾಪ, ವಿರೋಧ ಪಕ್ಷದ ನಾಯಕರಿಗೆ ಅನುಭವದ ಕೊರತೆ ಇದೆ. ಅವರಿಗೆ ಚುನಾವಣೆ ನಿಂತ ಅನುಭವವೂ ಇಲ್ಲ. ಹೀಗಾಗಿ ಗೊತ್ತಿಲ್ಲದೆ ಮಾತನಾಡಿದ್ದಾರೆ. ಅವರು ವಿರೋಧ ಪಕ್ಷದ ನಾಯಕ ಸ್ಥಾನದಲ್ಲಿರುವುದರಿಂದ ಪ್ರತಿಕ್ರಿಯೆ ನೀಡಿದ್ದೇನೆ. ಬೇರೆಯವರಾಗಿದ್ದರೆ ಪ್ರತಿಕ್ರಿಯೆ ನೀಡುತ್ತಿರಲಿಲ್ಲ. ನನ್ನ ವ್ಯವಹಾರ, ನನ್ನ ಬದುಕು ಏನು ಎಂದು ಬಿಜೆಪಿಯ ಶೇಕಡಾ 90ರಷ್ಟು ನಾಯಕರಿಗೆ ಗೊತ್ತಿದೆʼ ಎಂದು ತಿಳಿಸಿದರು.
ಜನಪರ ಕೆಲಸ ಮಾಡಿ ಗುರಿ ಮುಟ್ಟುತ್ತೇವೆ
ಭಾಷಣದ ವೇಳೆ ಮುಂದಿನ ದಿನಗಳಲ್ಲಿ ಹೊಸ ಪರ್ವ ಆರಂಭವಾಗಲಿದೆ, ಹೊಸ ಗುರಿ ಮುಟ್ಟೋಣ ಎಂದು ಹೇಳಿದಿರಿ, ಯಾವಾಗ ಗುರಿ ಮುಟ್ಟುತ್ತೀರಿ ಎಂದು ಕೇಳಿದಾಗ, ʼನಾವು ಜನರ ಪರವಾಗಿ ಕೆಲಸ ಮಾಡಿದಾಗ ಮಾತ್ರವಲ್ಲವೇ ಗುರಿ ಮುಟ್ಟುವುದು. ನಮ್ಮ ಸಾಧನೆಗಳು ಜನರನ್ನು ತಲುಪುತ್ತಿದೆ. ಗ್ಯಾರಂಟಿ ಯೋಜನೆಯಿಂದ ಜನರಿಗೆ 1.11 ಲಕ್ಷ ಕೋಟಿಯಷ್ಟು ಹಣ ಜನರಿಗೆ ತಲುಪುತ್ತಿದ್ದಂತೆ ಗ್ಯಾರಂಟಿ ಸಮಾವೇಶ ಮಾಡಬೇಕು ಎಂದು ನಾನು ಹಾಗೂ ಕೃಷ್ಣ ಭೈರೇಗೌಡ ಅವರು ಚರ್ಚೆ ಮಾಡುತ್ತಿದ್ದೆವು. ಹೀಗೆ ನಮ್ಮ ಹೊಸ ಆಲೋಚನೆಗಳಿವೆ. ಅವುಗಳನ್ನು ಮುಂದಿನ ದಿನಗಳಲ್ಲಿ ತಿಳಿಸುತ್ತೇನೆʼ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಹೇಳಿದರು.
ನಿಗದಿತ ಸಮಯದೊಳಗೆ ನೀಲಿ ಮೆಟ್ರೋ ಮಾರ್ಗ ಪೂರ್ಣಗೊಳಿಸಿ: ಡಿ.ಕೆ. ಶಿವಕುಮಾರ್ ಸೂಚನೆ
ಇಡಿಯಿಂದ ಸೋನಿಯಾ, ರಾಹುಲ್ ಗಾಂಧಿ ಬೆಂಬಲಿಗರಿಗೆ ಕಿರುಕುಳ: ಡಿ.ಕೆ. ಶಿವಕುಮಾರ್
ಬೆಂಗಳೂರು: ನ್ಯಾಷನಲ್ ಹೆರಾಲ್ಡ್ ಹಾಗೂ ಯಂಗ್ ಇಂಡಿಯಾ ಸಂಸ್ಥೆಗಳಿಗೆ ದೇಣಿಗೆ ನೀಡಿದ್ದಕ್ಕೆ ಇಡಿ ಸಮನ್ಸ್ (ED Summons) ನೀಡಿದೆ. ಆ ಮೂಲಕ ನಮಗೆ ಕಿರುಕುಳ ನೀಡಲಾಗುತ್ತಿದೆ. ಇದು ಸರಿಯಲ್ಲ. ಇದನ್ನು ನಾನು ಖಂಡಿಸುತ್ತೇನೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (DK Shivakumar) ಹೇಳಿದರು. ಇಡಿ ಸಮನ್ಸ್ ನೀಡಿರುವ ಬಗ್ಗೆ ಸದಾಶಿವನಗರದ ನಿವಾಸದ ಬಳಿ ಮಾಧ್ಯಮಗಳಿಗೆ ಶನಿವಾರ ಡಿಸಿಎಂ ಅವರು ಪ್ರತಿಕ್ರಿಯೆ ನೀಡಿದರು.
ʼನಾವು ಮೊದಲಿನಿಂದಲೂ ತನಿಖೆಗೆ ಸಹಕರಿಸುತ್ತಲೇ ಬಂದಿದ್ದೇವೆ. ಇಲ್ಲಿ ಯಾವುದೇ ಮುಚ್ಚುಮರೆಯಿಲ್ಲ. ಇಷ್ಟೆಲ್ಲಾ ಆದರೂ ಇಡಿ ಚಾರ್ಜ್ ಶೀಟ್ ಹಾಕಿರೋದು ಏಕೆ ಎಂಬುದೇ ಗೊತ್ತಿಲ್ಲ. ಇದರಲ್ಲಿ ಪೊಲೀಸರು ಪ್ರಕರಣ ದಾಖಲಿಸುವ ಅಗತ್ಯ ಇರಲಿಲ್ಲ. ನಾವು ಕಾನೂನಾತ್ಮಕವಾಗಿ ನ್ಯಾಯಲಯದಲ್ಲಿ ಹೋರಾಟ ಮಾಡುತ್ತೇವೆʼ ಎಂದರು.
ಡಿ.19ರ ಒಳಗೆ ಪೊಲೀಸರಿಗೆ ಮಾಹಿತಿ ನೀಡಬೇಕು
ನನಗೆ ಹಾಗೂ ನನ್ನ ತಮ್ಮ ಡಿ.ಕೆ.ಸುರೇಶ್‌ಗೆ ಇಡಿ ಸಮನ್ಸ್ ನೀಡಿದೆ. ಈಗಾಗಲೇ ನಾವು ಇದಕ್ಕೆ ಹಿಂದೆಯೇ ಉತ್ತರ ಕೊಟ್ಟಿದ್ದೆವು. ಆದರೂ ನಮಗೆ ಸಮನ್ಸ್ ನೀಡಿರುವುದು ಆಘಾತಕಾರಿ. ದೆಹಲಿ ಪೊಲೀಸರು ಡಿಸೆಂಬರ್ 19 ನೇ ತಾರೀಕಿನ ಒಳಗೆ ಮಾಹಿತಿ ನೀಡಬೇಕು ಎಂದು ತಿಳಿಸಿದ್ದಾರೆ ಎಂದು ಹೇಳಿದರು.
ನಾವು ತೆರಿಗೆ ಪಾವತಿ ಮಾಡುತ್ತಿದ್ದೇವೆ. ನಮ್ಮ ಹಣವನ್ನು ನಮಗೆ ಬೇಕಾದವರಿಗೆ ನೀಡುತ್ತೇವೆ. ಕಿರುಕುಳ ನೀಡಲು ಪಿಎಂಎಲ್‌ಎ ಪ್ರಕರಣ ಕೂಡ ದಾಖಲಿಸಿದ್ದರು. ಆನಂತರ ಏನಾಯಿತು? ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಬೆಂಬಲಿಗರಿಗೆ ಕಿರುಕುಳ ನೀಡುವುದು, ಜತೆಗೆ ಗೊಂದಲ ಮೂಡಿಸುವುದು ಇದರ ಉದ್ದೇಶ ಎಂದರು.
ನ್ಯಾಷನಲ್ ಹೆರಾಲ್ಡ್ ಹಾಗೂ ಯಂಗ್ ಇಂಡಿಯಾ ಸಂಸ್ಥೆಗಳಿಗೆ ದೇಣಿಗೆ ನೀಡಿದ್ದಕ್ಕೆ ಇಡಿ ನೋಟಿಸ್ ನೀಡಿದೆ. ನ್ಯಾಷನಲ್ ಹೆರಾಲ್ಡ್, ಯಂಗ್ ಇಂಡಿಯಾ ಇವು ನಮ್ಮ ಕಾಂಗ್ರೆಸ್ ಪಕ್ಷದ ಸಂಸ್ಥೆಗಳು. ನಾವು ಕಾಂಗ್ರೆಸ್ಸಿಗರಾದ ಕಾರಣಕ್ಕೆ ಈ ಸಂಸ್ಥೆಗಳು ಕಷ್ಟ ಕಾಲದಲ್ಲಿದ್ದಾಗ ನಮ್ಮ ಟ್ರಸ್ಟ್‌ಗಳಿಂದ ದೇಣಿಗೆ ನೀಡಿದ್ದೇವೆ. ನಮ್ಮಂತೆ ಅನೇಕ ಜನರು ಸಹಾಯ ಮಾಡಿದ್ದಾರೆ ಎಂದರು.
ನನಗೆ ಹಾಗೂ ಸುರೇಶ್ ಅವರಿಗೆ ನೋಟಿಸ್ ಬಂದಿದೆ
ಶುಕ್ರವಾರ ನನಗೆ ಹಾಗೂ ಸುರೇಶ್ ಅವರಿಗೆ ನೋಟಿಸ್ ಬಂದಿದೆ. ಆತ ಸಂಸದನಾದ ಸಮಯದಲ್ಲಿ ಒಂದಷ್ಟು ಹಣ ದೇಣಿಗೆ ನೀಡಿದ್ದ. ನೋಟಿಸ್ ಅನ್ನು ವಿವರವಾಗಿ ತಿಳಿದುಕೊಂಡು ಕಾನೂನಾತ್ಮಕವಾಗಿ ಏನು ಮಾಡಬೇಕೋ ಅದನ್ನು ಮಾಡುತ್ತೇವೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು.